Site icon Vistara News

Sowmya Reddy: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

Sowmya Reddy

ಬೆಂಗಳೂರು: ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ನೇಮಕವಾಗಿದ್ದಾರೆ. ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್‌ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಮಹಿಳಾ ಕಾಂಗ್ರೆಸ್‌ಗೆ ಸೌಮ್ಯಾ ರೆಡ್ಡಿ, ಚಂಡೀಗಢಕ್ಕೆ ನಂದಿತಾ ಹೂಡ, ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಚುಕು ನಾಚಿ ನೇಮಕವಾಗಿದ್ದಾರೆ.

ಸೌಮ್ಯಾ ರೆಡ್ಡಿ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 2023ರ ಚುನಾವಣೆಯಲ್ಲಿ ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಎದುರು ಸೋತಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೈ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದರು.

ಇದನ್ನೂ ಓದಿ | Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

ಸಚಿವರು ಬೆಳಗಾವಿಯಲ್ಲಿದ್ದಾಗಲೆಲ್ಲ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡು ಸಚಿವರ ಮನೆಯ ಬಳಿ ಗೃಹ ಕಚೇರಿಗೆ ನೂರಾರು ಜನರು ಆಗಮಿಸುತ್ತಾರೆ. ತಾಳ್ಮೆಯಿಂದ ಎಲ್ಲರ ಅಹವಾಲು ಆಲಿಸಿ, ಸಮಾಧಾನ ಪಡಿಸಿ ಕಳುಹಿಸುತ್ತಾರೆ. ಮಂಗಳವಾರವೂ ದೊಡ್ಡ ಸಂಖ್ಯೆಯಲ್ಲೇ ಜನರು ಆಗಮಿಸಿದ್ದರು.

ಇದನ್ನೂ ಓದಿ: Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

ಕಳದ 4 ದಿನಗಳಿಂದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಸೂರು, ಭದ್ರಾವತಿ, ಗದಗ ಪ್ರವಾಸದಲ್ಲಿದ್ದಾರೆ. ಸೋಮವಾರ ಗದಗ ಜಿಲ್ಲಾ ಪ್ರವಾಸ ಮಾಡಿ ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಬೆಳಗಾವಿ ತಲುಪಿದ್ದಾರೆ. ಮಂಗಳವಾರ ಸಂಜೆ ಬೆಂಗಳೂರಿಗೆ ತೆರಳಿ, ಬುಧವಾರ ಉಡುಪಿಗೆ ಹೋಗುವ ಕಾರ್ಯಕ್ರಮವಿದೆ. ಆದರೂ ಮಂಗಳವಾರ ಬಹು ಹೊತ್ತಿನವರೆಗೂ ಜನರ ಸಮಸ್ಯೆಗಳಿಗೆ ಕಿವಿಯಾದರು. ಬಂದ ಜನರು ಸಚಿವರ ಸ್ಪಂದನೆಗೆ ಧನ್ಯವಾದ ಸಲ್ಲಿಸಿ ಮರಳುತ್ತಿದ್ದರು.


Exit mobile version