Site icon Vistara News

ರೌಡಿ ಸುನಿಲ್‌ BJP ಸೇರ್ಪಡೆ ಇಲ್ಲ ಎಂದ ನಳಿನ್‌ ಕುಮಾರ್‌ ಕಟೀಲ್‌; ಈಗಾಗಲೆ ಸೇರಿರುವ ಫೈಟರ್‌ ರವಿ ಬಗ್ಗೆ ʼಸೈಲೆಂಟ್‌ʼ

state bjp president nalin kumar kateel clarifies about silent sunil issue

ಬೆಂಗಳೂರು: ರೌಡಿ ಹಿನ್ನೆಲೆಯವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಸೈಲೆಂಟ್‌ ಸುನಿಲನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

ಸೈಲೆಂಟ್ ಸುನಿಲ್‌ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ನಗರದಲ್ಲಿ ಸೈಲೆಂಟ್ ಸುನಿಲ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು.

ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನೂ ಪಕ್ಷದ ಗಮನಕ್ಕೆ ತರಬೇಕು. ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸೈಲೆಂಟ್‌ ಸುನಿಲ್‌ ಜತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡದ್ದರ ಜತೆಗೆ, ರೌಡಿ ಹಿನ್ನೆಲೆ ಹೊಂದಿರುವ ಮಂಡ್ಯ ಜಿಲ್ಲೆಯ ಫೈಟರ್‌ ರವಿ ಬಿಜೆಪಿ ಸೇರ್ಪಡೆ ಆಗಿದ್ದರ ಕುರಿತೂ ವಿವಾದವಾಗಿತ್ತು. ಆದರೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌, ಈ ವಿಚಾರವನ್ನು ತಮ್ಮ ಸ್ಪಷ್ಟೀಕರಣದಲ್ಲಿ ಉಲ್ಲೇಖ ಮಾಡಿಲ್ಲ.

ಇದನ್ನೂ ಓದಿ | Rowdy politics | ಸೈಲೆಂಟ್‌ ಸುನಿಲ್‌ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರ ಉಪಸ್ಥಿತಿ, ಕಾಂಗ್ರೆಸ್‌ನಿಂದ ಸಖತ್‌ ಸೌಂಡ್‌

Exit mobile version