Vande Bharat Train: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ​; ಒಂದೇ ದಿನ 2 ಟ್ರೈನ್‌ ಮೇಲೆ 3 ಕಡೆ ದಾಳಿ! - Vistara News

ರಾಜಕೀಯ

Vande Bharat Train: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ​; ಒಂದೇ ದಿನ 2 ಟ್ರೈನ್‌ ಮೇಲೆ 3 ಕಡೆ ದಾಳಿ!

Vande Bharat Train: ಈ ವರ್ಷವೊಂದರಲ್ಲೇ ವಂದೇ ಭಾರತ್​ ರೈಲಿನ ಮೇಲೆ 10 ಬಾರಿ ಕಲ್ಲು ತೂರಾಟ ನಡೆಸಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಕಳೆದ ವರ್ಷ 40 ಕಲ್ಲು ತೂರಾಟ ಪ್ರಕರಣಗಳು ನಡೆದಿದ್ದವು. ಅದೃಷ್ಟವಶಾತ್‌ ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ. ಆದರೆ, ರೈಲುಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿವೆ.

VISTARANEWS.COM


on

Stones pelted at 3 Vande Bharat train in a single day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ನೈಋತ್ಯ ರೈಲ್ವೆ ವಲಯದ (South Western Railway Zone) ಮೂಲಕ ಹಾದುಹೋಗುವ 2 ವಂದೇ ಭಾರತ್ ರೈಲುಗಳ (Vande Bharat Train) ಮೇಲೆ ಇತ್ತೀಚೆಗೆ ಮೂರು ಕಡೆ ಪ್ರತ್ಯೇಕವಾಗಿ ಕಲ್ಲು ತೂರಾಟದ ಪ್ರಕರಣಗಳು ನಡೆದಿವೆ. ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾನುವಾರ (ಮಾ.03) ರಂದು ದುಷ್ಕರ್ಮಿಗಳು ಕಲ್ಲು ತೂರಿದ್ದು, ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣಗಳನ್ನು ರೈಲ್ವೆ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ವರ್ಷವೊಂದರಲ್ಲೇ ವಂದೇ ಭಾರತ್​ ರೈಲಿನ ಮೇಲೆ 10 ಬಾರಿ ಕಲ್ಲು ತೂರಾಟ ನಡೆಸಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಕಳೆದ ವರ್ಷ 40 ಕಲ್ಲು ತೂರಾಟ ಪ್ರಕರಣಗಳು ನಡೆದಿದ್ದವು. ಅದೃಷ್ಟವಶಾತ್‌ ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ. ಆದರೆ, ರೈಲುಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿವೆ.

ಕೆಎಸ್​ಆರ್​ ಬೆಂಗಳೂರು-ಧಾರವಾಡ (20661/20662) ಮಧ್ಯೆ ಸಂಚರಿಸುವ ವಂದೇ ಭಾರತ್​ ರೈಲಿನ ಮೇಲೆ ಎರಡು ಬಾರಿ ಮತ್ತು ಮೈಸೂರು-ಚೆನ್ನೈ ಸೆಂಟ್ರಲ್ ​​ವಂದೇ ಭಾರತ್​ (20608) ರೈಲಿನ ಮೇಲೆ ಕಲ್ಲು ತೂರಲಾಗಿದೆ. ಭಾನುವಾರ (ಮಾ.03) ರಂದು ಬೆಂಗಳೂರಿನಿಂದ ಧಾರವಾಡದ ಕಡೆ ಹೊರಟಿದ್ದ ವಂದೇ ಭಾರತ್​ ರೈಲಿನ ಮೇಲೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ಮುಂಜಾನೆ 6.15ಕ್ಕೆ ಕಲ್ಲು ತೂರಲಾಗಿದೆ. ಇದೇ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುವಾಗ ಮಾರ್ಗ ಮಧ್ಯೆ ಹಾವೇರಿ ಮತ್ತು ಹರಿಹರ ರೈಲು ನಿಲ್ದಾಣಗಳ ಸಮೀಪ ಮಧ್ಯಾಹ್ನ 3.30ರ ಸುಮಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ.

Stones pelted at 3 Vande Bharat train in a single day

ಬೆಂಗಳೂರು ಮುಖಾಂತರ ಹಾದು ಚೈನ್ನೈ ತಲುಪುವ ಮೈಸೂರು-ಚೆನ್ನೈ ಸೆಂಟ್ರಲ್​ ವಂದೇ ಭಾರತ್​​ ರೈಲು ಮಾರ್ಗ ಮಧ್ಯೆ ಆಂಧ್ರಪ್ರದೇಶದ ಮೂಲಕ ಹಾದು ಹೋಗುತ್ತದೆ. ಈ ರೈಲು ಕುಪ್ಪಂ ನಿಲ್ದಾಣದ ಬಳಿ ಬಂದಾಗ ಸಂಜೆ 4.30ರ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಎರಡು ಕಲ್ಲು ತೂರಾಟಗಳು ಬೆಂಗಳೂರು ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ಸಂಭವಿಸಿದರೆ (ಚಿಕ್ಕಬಾಣಾವವಾರ ಮತ್ತು ಹಾವೇರಿ-ಹರಿಹರ) ಮೂರನೇ ಕಲ್ಲು ತೂರಾಟ ಪ್ರಕರಣು ಮೈಸೂರು ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಗಳ ಪತ್ತೆ ಸುಲಭವೇ?

ಪದೆ ಪದೇ ಕಲ್ಲು ತೂರಾಟ ಪ್ರಕರಣಗಳು ಸಂಭವಿಸುತ್ತಿರುವುದರಿಂದ ರೈಲ್ವೆ ಇಲಾಖೆಗೆ ನಷ್ಟ ಉಂಟಾಗುತ್ತದೆ. ಅಲ್ಲದೆ, ಆರೋಪಿಗಳ ಪತ್ತೆ, ಬಂಧನ ಕಾರ್ಯವೂ ಅಷ್ಟು ಸುಲಭವಲ್ಲ. ಕೆಲವು ಸಂದರ್ಭದಲ್ಲಿ ಮಕ್ಕಳು, ಮದ್ಯವ್ಯಸನಿಗಳು ಇಲ್ಲವೇ ಮಾದಕ ವ್ಯಸನಿಗಳು ಎಸಗಿರುವುದು ಗೊತ್ತಾಗಿದೆ. ಈಗ ರೈಲಿನ ಒಳಗೆ ಇರುವ ಹಾಗೂ ಹೊರಗಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುವುದು. ಆದರೆ, ರೈಲು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವುದರಿಂದ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಸ್ವಲ್ಪ ಕಷ್ಟವಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: JP Nadda: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಜೆ.ಪಿ. ನಡ್ಡಾ ರಾಜೀನಾಮೆ; ಚುನಾವಣೆ ಸ್ಪರ್ಧೆ ಫಿಕ್ಸ್?

5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು!

ಸೆಕ್ಷನ್ 147 (ರೈಲ್ವೆ ಹಳಿಯಲ್ಲಿ ಅತಿಕ್ರಮಣ) ಮತ್ತು ಸೆಕ್ಷನ್ 153 (ಉದ್ದೇಶ ಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದು) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವುದು ಕ್ರಿಮಿನಲ್ ಅಪರಾಧವಾಗಿದೆ. ರೈಲ್ವೇ ಕಾಯ್ದೆ ಸೆಕ್ಷನ್ 153ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ; ಇವರ ಆಸ್ತಿ ಎಷ್ಟು?

Lok Sabha Election 2024: ಕಾರವಾರದಲ್ಲಿ ಶುಕ್ರವಾರ ಭವ್ಯ ಮೆರವಣಿಗೆಯೊಂದಿಗೆ ತೆರಳಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಮಪತ್ರ ಸಲ್ಲಿಸಿದರು. ಈ ವೇಳೆ ಒಟ್ಟು 16.76 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕಾರವಾರದಲ್ಲಿ ಭವ್ಯ ಮೆರವಣಿಗೆಯೊಂದಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, ರಾಜ್ಯ ಪ್ರಧಾ‌ನಕಾರ್ಯದರ್ಶಿ ಸುನೀಲ್‌ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ರೂಪಾಲಿ ಎಸ್ ನಾಯ್ಕ್ , ಕುಮಟಾ ಶಾಸಕರಾದ ದಿನಕರ ಶೆಟ್ಟಿ ಖಾನಾಪುರ ಶಾಸಕರಾದ ವಿಠ್ಠಲ ಹಲಗೇಕರ ಉಪಸ್ಥಿತಿರಿದ್ದರು.

ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರು ನಾಮಪತ್ರ ಸಲ್ಲಿಕೆ ವೇಳೆ ಒಟ್ಟು 16.76 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ವಾರ್ಷಿಕ ಆದಾಯ ವೈಯಕ್ತಿಕ- 36,31,300 ರೂಪಾಯಿ, ಅವಿಭಕ್ತ ಕುಟುಂಬದ ಆದಾಯ 45,18,753 ರೂ, ಮೊದಲ ಪುತ್ರಿ ರಾಜಲಕ್ಷ್ಮೀ ಆದಾಯ- 5,51,540 ರೂ, ಕೈಯಲ್ಲಿರುವ ಹಣ- 5 ಲಕ್ಷ ರೂ, ಅವಿಭಕ್ತ ಕುಟುಂಬದ ಬಳಿ 1 ಲಕ್ಷ ರೂ, ವಿವಿಧ ಬ್ಯಾಂಕುಗಳಲ್ಲಿರುವ ಒಟ್ಟು ಎಫ್‌ಡಿ- 1,11,48,727 ರೂ, ಪತ್ನಿ ಬಳಿ – 4,72,053 ರೂ, ಅವಿಭಕ್ತ ಕುಟುಂಬಕ್ಕೆ ಸೇರಿದ್ದು 1,08,69,516 ರೂ, ಎರಡನೇ ಪುತ್ರಿ ರಾಜಲಕ್ಷ್ಮೀ- 8,53,776 ರೂ. ಇದೆ ಎಂದು ಮಾಹಿತಿ ನೀಡಿದ್ದಾರೆ.

ಉಳಿತಾಯ ಖಾತೆಯಲ್ಲಿ 3,04,81,874 ರೂ., ಪತ್ನಿ ಖಾತೆಯಲ್ಲಿ 8,07,552, ಅವಿಭಕ್ತ ಕುಟುಂಬದ್ದು 2,15,34,528, ಅವಿಭಕ್ತ ಕುಟುಂಬದ ಚಾಲ್ತಿ ಖಾತೆಯಲ್ಲಿ 23,50,458 ಇರುವುದಾಗಿ ತಿಳಿಸಿದ್ದಾರೆ. ವಿವಿಧ ಬಾಂಡ್‌ಗಳಲ್ಲಿನ ಹೂಡಿಕೆ 5 ಲಕ್ಷ, ಪೋಸ್ಟ್ ಹೂಡಿಕೆ- 27,400 ರೂಪಾಯಿ, ಇನ್ಶುರೆನ್ಸ್ ಪಾಲಿಸಿ 21,25,219, ನೀಡಿರುವ ಸಾಲ(ದೀನದಯಾಳ್ ಟ್ರಸ್ಟ್ ಶಿರಸಿ)- 24,50,000 ರೂ. ಇದೆ.

29,44,698 ಮೌಲ್ಯದ ಇನ್ನೋವಾ ಕಾರು, 79,303 ರೂ. ಸ್ಕೂಟಿ ಹೊಂದಿದ್ದು, 72,69,500 ರೂ. ಮೌಲ್ಯದ ಆಭರಣ ಹೊಂದಿದ್ದು, ಪತ್ನಿ ಬಳಿ- 61,60,000 ರೂ. ಮೌಲ್ಯದ ಆಭರಣ ಹೊಂದಿರುವುದಾಗಿ ತಿಳಿಸಿದ್ದಾರೆ.

ಚರಾಸ್ತಿಯ ಒಟ್ಟು ಮೌಲ್ಯ

ವೈಯಕ್ತಿಕ 5,78,77,221 ರೂ.
ಪತ್ನಿ- 79,32,605 ರೂ.
ಅವಿಭಕ್ತ ಕುಟುಂಬದ್ದು- 3,48,54,502 ರೂ.
ಎರಡನೇ ಪುತ್ರಿ ರಾಜಲಕ್ಷ್ಮೀ- 12,54,676 ರೂ.
ಮೂರನೇ ಪುತ್ರಿ ಶ್ರೀಲಕ್ಷ್ಮೀ- 4,90,000 ರೂ.

ಸ್ಥಿರಾಸ್ತಿಯ ಮೌಲ್ಯ

ವೈಯಕ್ತಿಕ- 4,45,00000
ಪತ್ನಿ- 2,05,00,000

ಇದನ್ನೂ ಓದಿ | Lok Sabha Election 2024: ಕೆ.ಎಸ್‌.ಈಶ್ವರಪ್ಪ 35.86 ಕೋಟಿ ರೂ. ಒಡೆಯ; ಪತ್ನಿಗೆ ಕೊಟ್ಟ ಸಾಲ ಎಷ್ಟು?

ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ 15.53 ಕೋಟಿ ರೂಪಾಯಿ ಒಡೆಯ

ಕೊಪ್ಪಳ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಕುಟುಂಬವು 15.53 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಅವರ ಬಳಿ 14.17 ಕೋಟಿ ರೂಪಾಯಿ ಸ್ಥಿರ ಹಾಗೂ ಚರಾಸ್ತಿ ಇದೆ. ಅವರ ಪತ್ನಿ ರಶ್ಮಿ ಬಳಿ 1.30 ಕೋಟಿ ರೂಪಾಯಿ ಸ್ಥಿರ ಹಾಗೂ ಚರಾಸ್ತಿ ಇದೆ.

ಇನ್ನು ರಾಜಶೇಖರ ಹಿಟ್ನಾಳ ಬಳಿ 5 ಕಾರು ಸೇರಿ 22 ವಾಹನಗಳಿವೆ. ಅವರ ಪತ್ನಿ ಬಳಿಯಲ್ಲಿ ಒಂದು ಸ್ಕೂಟಿ ಇದೆ. ರಾಜಶೇಖರ ಬಳಿ 305 ಗ್ರಾಂ ಚಿನ್ನ, ಅವರ ಪತ್ನಿ ಬಳಿಯಲ್ಲಿ 970 ಗ್ರಾಂ ಚಿನ್ನ ಹಾಗೂ
2.50 ಕೆಜಿ ಬೆಳ್ಳಿ ಇದೆ. 9 ಎಕರೆ ಕೃಷಿ, ಕೃಷಿಯೇತರ ಭೂಮಿ ಇದೆ. ರಾಜಶೇಖರ ಅವರು 10.88 ಕೋಟಿ ರೂಪಾಯಿ ಸಾಲಗಾರ ಆಗಿದ್ದು, ಪತ್ನಿ ಹೆಸರಿನಲ್ಲಿ 1.73 ಕೋಟಿ ರೂಪಾಯಿ ಸಾಲವಿದೆ.

ರಾಜಶೇಖರ ಹಾಗೂ ಅವರ ಪತ್ನಿ ಗಣಿ ನಿಯಮ ಉಲ್ಲಂಘನೆ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ರಾಜಶೇಖರ 2019 ರಲ್ಲಿ 3.06 ಕೋಟಿ ಒಡೆಯರಾಗಿದ್ದರು, ಅವರ ಪತ್ನಿ ಆಗ 3.5 ಕೋಟಿ ಮೌಲ್ಯ ಒಡತಿಯಾಗಿದ್ದರು. ಐದು ವರ್ಷದಲ್ಲಿ ಅವರ ಆಸ್ತಿಯು 12 ಕೋಟಿ ರೂಪಾಯಿಯಷ್ಟು ಹೆಚ್ಚಳವಾಗಿದೆ. ಆಗ ರಾಜಶೇಖರ 2.35 ಕೋಟಿ ರೂಪಾಯಿ, ಪತ್ನಿ ರಶ್ಮಿಗೆ 1.48 ಕೋಟಿ ಸಾಲವಿತ್ತು.

ಇದನ್ನೂ ಓದಿ | First Time Voters: ಮೊದಲ ಬಾರಿ ಮತದಾನ ಮಾಡುತ್ತಿದ್ದೀರಾ? ಈ ಸಂಗತಿಗಳನ್ನು ಗಮನಿಸಿ

ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಫಿಡವಿಟ್ ವಿವರ

ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ 10.26 ಕೋಟಿ ರೂಪಾಯಿ ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಹೊಂದಿದ್ದಾರೆ. ಡಾ. ಬಸವರಾಜ ಬಳಿ 19.34 ಲಕ್ಷ ರೂಪಾಯಿ ನಗದು, 65 ಲಕ್ಷ ರೂಪಾಯಿ ಮೌಲ್ಯದ ಕಾರು, 200 ಗ್ರಾಂ ಚಿನ್ನ ಇದೆ. 66 ಲಕ್ಷ ರೂಪಾಯಿ ಮೌಲ್ಯದ 6 ಕೃಷಿ ಹಾಗೂ ಕೃಷಿಯೇತರ ಭೂಮಿ ಇದೆ. ಡಾ. ಬಸವರಾಜರಿಗೆ 5.08 ಕೋಟಿ ರೂಪಾಯಿ ಸಾಲವಿದೆ.

Continue Reading

Lok Sabha Election 2024

Lok Sabha Election 2024: ಬಿಜೆಪಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ, ಘನತೆ ಬರುತ್ತಾ? ಸಿಎಂ ಪ್ರಶ್ನೆ

Lok Sabha Election 2024: ನರೇಂದ್ರ ಮೋದಿಯವರು ಹೇಳಿದ್ದರಲ್ಲಿ ಒಂದೇ ಒಂದನ್ನೂ ಜಾರಿ ಮಾಡಿಲ್ಲ. ಬದಲಿಗೆ ಜನರ ಮುಂದೆ ಆಶ್ವಾಸನೆ ಕೊಟ್ಟು ಅದಕ್ಕೆ ಉಲ್ಟಾ ನಡೆದುಕೊಂಡಿದ್ದಾರೆ. ವಿದೇಶದಿಂದ ಕಪ್ಪು ಹಣ ತರಲಿಲ್ಲ, ಭಾರತೀಯರ ಖಾತೆಗೆ 15 ಲಕ್ಷ ರೂಪಾಯಿ ಹಾಕಲಿಲ್ಲ, ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದರು. ಆದರೆ, ಹೊಸ ಉದ್ಯೋಗ ಸೃಷ್ಟಿ ಮಾಡೋದಿರಲಿ, ಇರೋ ಕೆಲಸಗಳೂ ಬಂದ್ ಆದ್ವು. ಇಂಥವರಿಗೆ ನಿಮ್ಮ ಕೇಳುವ ಮುಖ ಇದೆಯಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

VISTARANEWS.COM


on

Lok Sabha Election 2024 Will your vote get respect and dignity if you vote for BJP CM Siddaramaiah question
Koo

ಚಾಮರಾಜನಗರ (ಎಚ್.ಡಿ.ಕೋಟೆ): ಗೇಯೋ ಎತ್ತಿಗೆ ಹುಲ್ಲು ಹಾಕುತ್ತೀರೋ… ಕಳ್ಳ ಎತ್ತಿಗೆ ಹುಲ್ಲು ಹಾಕುತ್ತೀರೋ ಯೋಚಿಸಿ. ಇಂಥ ಬಿಜೆಪಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ, ಘನತೆ ಬರುತ್ತಾ ಎಂದು ಎಚ್‌.ಡಿ. ಕೋಟೆಯಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮತದಾರರಿಗೆ ಪ್ರಶ್ನೆ ಮಾಡಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಎಚ್.ಡಿ. ಕೋಟೆಯಲ್ಲಿ ನಡೆದ ಬೃಹತ್ ಜನಧ್ವನಿ-2 ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನತೆ ಬರಗಾಲಕ್ಕೆ ತುತ್ತಾಗಿದ್ದಾರೆ. ನಮ್ಮ ಜನ ಕಟ್ಟಿದ ತೆರಿಗೆಯಲ್ಲಿನ ಪಾಲು ನಮಗೆ ವಾಪಸ್ ಕೊಡಿ, ಬರಗಾಲಕ್ಕೆ ನಮ್ಮ ಪಾಲಿನ ಅನುದಾನ ಕೊಡಿ ಅಂತ ನಾವು ಪತ್ರ ಬರೆದು ಹೋರಾಟ ಮಾಡಿದರೂ ಮೋದಿ ಸರ್ಕಾರ ನಮ್ಮ ಪಾಲಿನ ನಯಾಪೈಸೆ ಕೊಡಲಿಲ್ಲ. ಇಂಥವರಿಗೆ ಮತ ಹಾಕಿದರೆ, ಆ ಮತಕ್ಕೆ ಗೌರವ ಬರುತ್ತಾ ಎಂದು ಪ್ರಶ್ನಿಸಿದರು.‌

ರಾಜ್ಯದ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಆಡಿಸ್ತಾರೆ‌. ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಜ್ಯಕ್ಕೆ ಮಾಡಿದ ಅನ್ಯಾಯ ಸರಿ, ಬರಗಾಲ ಬಂದರೂ ಮೋದಿ ಅನುದಾನ ಕೊಡದೇ ಇದ್ದದ್ದೇ ಸರಿ, ಮೋದಿಯವರು ಪೆಟ್ರೋಲ್-ಡೀಸೆಲ್-ಗ್ಯಾಸ್-ರಸಗೊಬ್ಬರ ಬೆಲೆಯನ್ನು ಹೆಚ್ಚಿಸಿದ್ದೇ ಸರಿ… ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇಂಥವರಿಗೆ ನಿಮ್ಮ ಮತ ಹೋಗಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ನರೇಂದ್ರ ಮೋದಿಯವರು ಹೇಳಿದ್ದರಲ್ಲಿ ಒಂದೇ ಒಂದನ್ನೂ ಜಾರಿ ಮಾಡಿಲ್ಲ. ಬದಲಿಗೆ ಜನರ ಮುಂದೆ ಆಶ್ವಾಸನೆ ಕೊಟ್ಟು ಅದಕ್ಕೆ ಉಲ್ಟಾ ನಡೆದುಕೊಂಡಿದ್ದಾರೆ. ವಿದೇಶದಿಂದ ಕಪ್ಪು ಹಣ ತರಲಿಲ್ಲ, ಭಾರತೀಯರ ಖಾತೆಗೆ 15 ಲಕ್ಷ ರೂಪಾಯಿ ಹಾಕಲಿಲ್ಲ, ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದರು. ಆದರೆ, ಹೊಸ ಉದ್ಯೋಗ ಸೃಷ್ಟಿ ಮಾಡೋದಿರಲಿ, ಇರೋ ಕೆಲಸಗಳೂ ಬಂದ್ ಆದ್ವು. ಇಂಥವರಿಗೆ ನಿಮ್ಮ ಕೇಳುವ ಮುಖ ಇದೆಯಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

Lok Sabha Election 2024 Will your vote get respect and dignity if you vote for BJP CM Siddaramaiah question

ಕೊಟ್ಟ ಮಾತು ಈಡೇರಿಸಿದ್ದೇವೆ, ಮುಂದೆಯೂ ಈಡೇರಿಸುತ್ತೇವೆ

ನಮ್ಮ ಕಾಂಗ್ರೆಸ್ ಸರ್ಕಾರ ನಿಮಗೆ ಕೊಟ್ಟ ಮಾತು ಈಡೇರಿಸಿ ನಿಮ್ಮ ಮತಕ್ಕೆ ಗೌರವ ತಂದಿದೆ. ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ. ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನರ ಬದುಕಿನ ಸಂಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ಬೇಗ ಬೇಗ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆವು. ಇದರಿಂದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಸ್ವಪಕ್ಷೀಯರ ವಿರುದ್ಧ ಮತ್ತೆ ಗುಡುಗಿದ ಹರಿಪ್ರಸಾದ್; ಚುನಾವಣೆ ಬಳಿಕ ಪೆನ್‌ಡ್ರೈವ್‌ ರಿಲೀಸ್‌!

ಅನಿಲ್ ಚಿಕ್ಕಮಾದು ಕೇಳಿದ್ದೆಲ್ಲ ಕ್ಷೇತ್ರಕ್ಕೆ ಕೊಡುತ್ತೇನೆ

ನೀವು ಅನಿಲ್ ಚಿಕ್ಕಮಾದು ಅವರಿಗೆ ಶಕ್ತಿ ತುಂಬಿ. ನಮ್ಮ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಅನಿಲ್ ಅವರು ಕೇಳಿದ್ದನ್ನೆಲ್ಲ ಕೊಡಲು ಬದ್ಧವಾಗಿದೆ ಎಂದರು.

ಸಚಿವರಾದ ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ. ವೆಂಕಟೇಶ್, ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಜಿಲ್ಲೆಯ ಶಾಸಕರಾದ ದರ್ಶನ್ ದ್ರುವನಾರಾಯಣ್, ಗಣೇಶ್ ಮಹದೇವ್ ಪ್ರಸಾದ್, ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಮಾಜಿ ಶಾಸಕರಾದ ಕೇಶವಮೂರ್ತಿ, ಡಿಸಿಸಿ ಅಧ್ಯಕ್ಷ ವಿಜಯ್ ಕುಮಾರ್ ಸೇರಿ ಹಲವು ಮಂದಿ ಜಿಲ್ಲಾ, ತಾಲೂಕು, ಬ್ಲಾಕ್ ಮುಖಂಡರು ಉಪಸ್ಥಿತರಿದ್ದರು.

Continue Reading

Lok Sabha Election 2024

First Time Voters: ಮೊದಲ ಬಾರಿ ಮತದಾನ ಮಾಡುತ್ತಿದ್ದೀರಾ? ಈ ಸಂಗತಿಗಳನ್ನು ಗಮನಿಸಿ

First Time Voters: ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ. ಮತದಾರರೆಲ್ಲರೂ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕಿದೆ. ರಾಷ್ಟ್ರದಾದ್ಯಂತ ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುವ ಮತದಾರರಲ್ಲಿ ಉತ್ಸಾಹ ಹೆಚ್ಚಾಗಿದೆ. ಭಾರತದ ಭವಿಷ್ಯವನ್ನು ರೂಪಿಸುವ ಯುವ ಶಕ್ತಿಗೆ ಮತ ಚಲಾಯಿಸುವುದು ಕೇವಲ ಕರ್ತವ್ಯವಲ್ಲ. ಅದು ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದು ಪ್ರಮುಖ ಹೆಜ್ಜೆ ಎಂಬುದನ್ನು ಅರ್ಥ ಮಾಡಿಸಬೇಕಿದೆ.

VISTARANEWS.COM


on

By

lok sabha election
Koo

ದೇಶಾದ್ಯಂತ ಲೋಕಸಭಾ ಚುನಾವಣೆ (loksabha election-2024) ತಯಾರಿ ಕಾರ್ಯಗಳು ಜೋರಾಗಿಯೇ ನಡೆಯುತ್ತಿದೆ. ಒಂದೆಡೆ (First Time Voters)ವಿವಿಧ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರೆ, ಚುನಾವಣಾ ಆಯೋಗವು (election commission) ಹೆಚ್ಚಿನ ಮತದಾರರನ್ನು ಮತಗಟ್ಟೆಗೆ (Election booth) ಸೆಳೆಯುವ ಪ್ರಯತ್ನ ಮಾಡುತ್ತಿದೆ. ಇನ್ನು ಮತದಾರರು ಯಾರಿಗೆ ಈ ಬಾರಿ ಮತ ನೀಡಬಹುದು ಎಂಬ ಲೆಕ್ಕಾಚಾರದಲ್ಲಿದ್ದರೆ, ಹೊಸ ಮತದಾರರು (voters) ತಮ್ಮ ಮೊದಲ ಮತದಾನದ ಅನುಭವ ಹೇಗಿರಬಹುದು ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ.

ಭಾರತವು (india) ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಲೋಕಸಭಾ ಚುನಾವಣಾ ದಿನಾಂಕವನ್ನು ಭಾರತದ ಮುಖ್ಯ ಚುನಾವಣಾ ಅಧಿಕಾರಿಯು 2024ರ ಏಪ್ರಿಲ್ 16ರಂದು ಘೋಷಿಸಿದ್ದಾರೆ. 18 ವರ್ಷ ಮೇಲ್ಪಟ್ಟ ಭಾರತದ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಹಕ್ಕಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಯುವಕರು ದೇಶದ ಉಜ್ವಲ ಭವಿಷ್ಯಕ್ಕಾಗಿ ಹೆಚ್ಚು ಒಳ್ಳಗೊಳ್ಳಬೇಕು ಮಾತ್ರವಲ್ಲ ಮೊದಲ ಬಾರಿ ಮತದಾನ ಮಾಡುವ ಯುವ ಶಕ್ತಿ ಮತದಾನದ ಪ್ರಾಮುಖ್ಯವನ್ನು ಅರಿತು ತಿಳುವಳಿಕೆಯಿಂದ ಭಾಗವಹಿಸಬೇಕು ಎನ್ನುವ ಎನ್ನುವ ಆಶಯದೊಂದಿಗೆ ಈ ಬಾರಿ ಮೊದಲ ಬಾರಿಗೆ ಮತದಾನ ಮಾಡುವವರಿಗಾಗಿ ಕೆಲವು ಸಲಹೆಗಳು ಇಲ್ಲಿವೆ.

ಇದನ್ನೂ ಓದಿ: Hema Malini: ಪ್ರಚಾರದ ಮಧ್ಯೆಯೇ ಗದ್ದೆಗೆ ಇಳಿದು ಗೋಧಿ ಕಟಾವು ಮಾಡಿದ ಹೇಮಾಮಾಲಿನಿ!

1. ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ?

ಮತಗಟ್ಟೆಗೆ ತೆರಳುವ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ. ಭಾರತದ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಇದರ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಅರ್ಹತೆ ಮತ್ತು ನೋಂದಣಿ ಸ್ಥಿತಿಯನ್ನು ಇದರಲ್ಲಿ ತಿಳಿದುಕೊಳ್ಳಬಹುದು.


2. ಎಲ್ಲಿ, ಹೇಗೆ ?

ಮತದಾನ ಪ್ರಕ್ರಿಯೆ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಇದಕ್ಕಾಗಿ ಮತದಾನ ಕೇಂದ್ರದ ಸ್ಥಳ, ಮತದಾರರ ಗುರುತಿನ ಅವಶ್ಯಕತೆಗಳು ಮತ್ತು ನಿಮ್ಮ ಮತವನ್ನು ಹೇಗೆ ಚಲಾಯಿಸುವುದು ಸೇರಿದಂತೆ ಮತದಾನ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ತಿಳಿದವರಿಂದ ಕೇಳಿ ಪಡೆಯಿರಿ.

3. ಮಾಹಿತಿ ಪರಿಶೀಲಿಸಿ

ಮತದಾನ ಮಾಡುವ ಬಗ್ಗೆ ಯಾವುದೇ ಅಭಿಪ್ರಾಯವನ್ನು ತೆಗೆದುಕೊಳ್ಳುವ ಮೊದಲು ಬಹು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿಯನ್ನು ಪರಿಶೀಲಿಸಿಕೊಳ್ಳಿ. ವಿಭಿನ್ನ ದೃಷ್ಟಿಕೋನಗಳಿಗೆ ತೆರೆದುಕೊಳ್ಳಿ. ಸ್ನೇಹಿತರು, ಕುಟುಂಬ ಮತ್ತು ಸಮುದಾಯದ ಸದಸ್ಯರೊಂದಿಗೆ ಗೌರವಯುತವಾಗಿ ರಾಜಕೀಯದ ಬಗ್ಗೆ ಚರ್ಚೆ ನಡೆಸಿ.

4. ಸುಳ್ಳು ಮಾಹಿತಿ ಬಗ್ಗೆ ಎಚ್ಚರ

ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಸುಳ್ಳು ಮಾಹಿತಿ ಗಳು ಪ್ರಚಾರವಾಗುತ್ತಿರುತ್ತದೆ. ಮತಗಟ್ಟೆಗಳ ಬಳಿ ಸುಳ್ಳು ಮಾಹಿತಿಗಳಿಗೆ ಅವಕಾಶ ನೀಡಬೇಡಿ. ಯಾವುದೇ ರೀತಿಯ ಸುಳ್ಳು ಮಾಹಿತಿ ಹರಡದಂತೆ ಎಚ್ಚರಿಕೆ ವಹಿಸಬೇಕು. ಅಧಿಕೃತಭಾರತೀಯ ಚುನಾವಣಾ ಆಯೋಗ ನೀಡುವ ಮಾಹಿತಿ ಮತ್ತು ಮತಗಟ್ಟೆ ಅಧಿಕಾರಿಗಳು ನೀಡುವ ಮಾಹಿತಿಯನ್ನು ಮಾತ್ರ ನಂಬಿ.


5. ಮತದಾರರನ್ನು ಪ್ರೋತ್ಸಾಹಿಸಿ

ವಿಶ್ವಾಸಾರ್ಹ ಮಾಹಿತಿಯನ್ನು ಹಂಚಿಕೊಂಡು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತರರನ್ನು ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಮತದಾನದ ಅಗತ್ಯವನ್ನು ತಿಳಿಸಿ, ಅವರು ಮತದಾನ ಮಾಡಿ, ಇತರರಿಗೂ ಮತದಾನ ಮಾಡಲು ಪ್ರೋತ್ಸಾಹಿಸುವಂತೆ ತಿಳಿಸಿ.

6. ಗುರುತು ಚೀಟಿ ಇರಲಿ

ಮತಗಟ್ಟೆಗೆ ತೆರಳುವಾಗ ನಿಮಗೆ ನೀಡಿರುವ ಮತ ಪತ್ರ, ಮತದಾರರ ಗುರುತು ಚೀಟಿ, ಆಧಾರ್ ಅಥವಾ ಡ್ರೈವಿಂಗ್ ಲೈಸೆನ್ಸ್‌ನಂತಹ ಹೆಚ್ಚುವರಿ ಗುರುತು ಚೀಟಿಯನ್ನು ಇಟ್ಟುಕೊಂಡಿರಿ. ಅವಶ್ಯಕವಿದ್ದಾಗ ಇದನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

7. ಸರತಿ ಪಾಲಿಸಿ

ಮತಗಟ್ಟೆಯಲ್ಲಿ ಸರತಿಯನ್ನು ತಪ್ಪಿಸಬೇಡಿ. ಸರದಿಯನ್ನು ಪಾಲಿಸದೇ ಇರುವುದು ಇತರರಿಗೆ ಕಿರಿಕಿರಿ ಉಂಟು ಮಾಡಬಹುದು. ಅವಶ್ಯಕ ಕಾರ್ಯಗಳಿದ್ದರೆ ಬೇಗನೆ ಮತಗಟ್ಟೆಗೆ ಹೋಗಿ ಮತ ಚಲಾಯಿಸಿ ಬನ್ನಿ.

8. ಮೊಬೈಲ್ ಕೊಂಡೊಯ್ಯಬೇಡಿ

ಮತದಾನ ಮಾಡುವ ಕೇಂದ್ರದೊಳಗೆ ಮುಖ್ಯವಾಗಿ ಎವಿಎಂ ಕೊಠಡಿಯೊಳಗೆ ಮೊಬೈಲ್ ಫೋನ್ ಅನ್ನು ಒಯ್ಯಬೇಡಿ. ಇವಿಎಂ ಬಟನ್ ಒತ್ತಿದಾಗ ಸೆಲ್ಫಿ ಕ್ಲಿಕ್ಕಿಸಬೇಡಿ. ಇಲ್ಲವಾದರೆ ತೊಂದರೆಗೆ ಸಿಕ್ಕಿಹಾಕಿಕೊಳ್ಳಬೇಕಾಗಬಹುದು.


9.ಇವಿಎಂ ಬಳಕೆ ಬಗ್ಗೆ ತಿಳಿಯಿರಿ

ಪ್ರತಿಯೊಂದು ಮತವೂ ಮುಖ್ಯವಾಗಿದೆ ಇದು ರಾಷ್ಟ್ರದ ಕಲ್ಯಾಣಕ್ಕಾಗಿ ಎಂಬುದನ್ನು ಮರೆಯದಿರಿ. ಇವಿಎಂ ನಲ್ಲಿ ಒಂದಕ್ಕಿಂತ ಹೆಚ್ಚು ಬಟನ್‌ಗಳನ್ನು ಒತ್ತಬೇಡಿ. ಯಾರಿಗೆ ಮತ ಚಲಾಯಿಸಬೇಕು ಎಂದುಕೊಂಡಿದ್ದೀರೋ ಆ ಅಭ್ಯರ್ಥಿಗಾಗಿ ಬಟನ್ ಅನ್ನು ಒತ್ತುವ ಸಂದರ್ಭದಲ್ಲಿ ಜಾಗರೂಕರಾಗಿರಿ.

Continue Reading

ಪ್ರಮುಖ ಸುದ್ದಿ

Narendra Modi : ಮೋದಿಯ ‘ಹ್ಯಾಟ್ರಿಕ್​ ಸರ್ಕಾರ’ ಖಚಿತ; ಹೊಸ ಸಮೀಕ್ಷೆಯ ವಿವರ ಇಲ್ಲಿದೆ

Narendra Modi :ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ ನೀಡಿದ ಹೊರತಾಗಿಯೂ ಉದ್ಯೋಗಗಳ ಸೃಷ್ಟಿಯು ಇನ್ನೂ ಒಂದು ಸವಾಲಾಗಿದೆ. ಆದರೆ, ಭಾರತದ 1.4 ಬಿಲಿಯನ್ ಜನರಿಗೆ ಭಾರತದ ಜಾಗತಿಕ ಬೆಳವಣಿಗೆಯ ಪ್ರಯೋಜನಗಳು ಸಂಪೂರ್ಣವಾಗಿ ದೊರೆಯುತ್ತಿವೆ ಎಂದು ಸಮೀಕ್ಷೆ ವಿವರಿಸುತ್ತವೆ.

VISTARANEWS.COM


on

Narendra Modi
Koo

ನವದೆಹಲಿ: ನಿರುದ್ಯೋಗ ಹೆಚ್ಚಳ ಮತ್ತು ಹಣದುಬ್ಬರ ಭಾರತೀಯ ಮತದಾರರ ಪ್ರಮುಖ ಕಾಳಜಿಯಾಗಿದೆ. ಆದಾಗ್ಯೂ ಪ್ರಧಾನಿ ನರೇಂದ್ರ ಮೋದಿಯವರ (Narendra Modi ) ಬಲವಾದ ನಾಯಕತ್ವ ಮತ್ತು ಭಾರತದ ಹೆಚ್ಚುತ್ತಿರುವ ಜಾಗತಿಕ ಸ್ಥಾನಮಾನವು ಮೋದಿಯ ಕಡೆಗಿನ ಜನರ ಒಲವನ್ನು ಹಾಗೆಯೇ ಉಳಿಸಿಕೊಂಡಿದೆ ಎಂಬುದಾಗಿ ಸಮೀಕ್ಷೆಯೊಂದು ಹೇಳಿದೆ. ಹೀಗಾಗಿ ನರೇಂದ್ರ ಮೋದಿ ಮೂರನೇ ಬಾರಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧನೆ ಮಾಡುವುದು ಖಚಿತ ಎಂದು ಹೇಳಿದೆ. ಲೋಕನೀತಿ-ಸಿಎಸ್ಡಿಎಸ್ ಸಮೀಕ್ಷೆಯಲ್ಲಿ ಮೋದಿಯ ಮರುಆಯ್ಕೆಯ ವಿವರಗಳು ಬಹಿರಂಗಗೊಂಡಿವೆ.

ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ ನೀಡಿದ ಹೊರತಾಗಿಯೂ ಉದ್ಯೋಗಗಳ ಸೃಷ್ಟಿಯು ಇನ್ನೂ ಒಂದು ಸವಾಲಾಗಿದೆ. ಆದರೆ, ಭಾರತದ 1.4 ಬಿಲಿಯನ್ ಜನರಿಗೆ ಭಾರತದ ಜಾಗತಿಕ ಬೆಳವಣಿಗೆಯ ಪ್ರಯೋಜನಗಳು ಸಂಪೂರ್ಣವಾಗಿ ದೊರೆಯುತ್ತಿವೆ ಎಂದು ಸಮೀಕ್ಷೆ ವಿವರಿಸುತ್ತವೆ.

ಭಾರತವು ಏಪ್ರಿಲ್ 19ರಂದು 7 ಹಂತಗಳ ಸಾರ್ವತ್ರಿಕ ಚುನಾವಣೆಗಾಗಿ ಮತದಾನ ಪ್ರಾರಂಭಿಸುತ್ತದೆ. ಇಲ್ಲಿ ಪ್ರಧಾನಿ ಮೋದಿ ಸುಲಭವಾಗಿ ಗೆಲ್ಲುವ ನಿರೀಕ್ಷೆಯಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಭಾರತದ 28 ರಾಜ್ಯಗಳ ಪೈಕಿ 19 ರಾಜ್ಯಗಳಲ್ಲಿ ಲೋಕನೀತಿ-ಸಿಎಸ್​ಡಿಎಸ್ ಸಮೀಕ್ಷೆ ನಡೆಸಿದ 10,000 ಮತದಾರರಲ್ಲಿ 27% ರಷ್ಟು ನಿರುದ್ಯೋಗವು ಪ್ರಾಥಮಿಕ ಕಾಳಜಿಯಾಗಿ ವ್ಯಕ್ತಗೊಂಡಿದೆ. ಬೆಲೆ ಏರಿಕೆಯು 23% ರಷ್ಟು ಮಂದಿಗೆ ಆತಂಕದ ವಿಚಾರವಾಗಿದೆ ಎಂದು ಹಿಂದೂ ಪತ್ರಿಕೆ ವರದಿ ಮಾಡಿದೆ.

ಕಳೆದ ಐದು ವರ್ಷಗಳಲ್ಲಿ ಉದ್ಯೋಗ ಹುಡುಕುವುದೇ ಹೆಚ್ಚು ಕಷ್ಟಕರವಾಗಿದೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಸುಮಾರು ಮೂರನೇ ಎರಡರಷ್ಟು ಅಥವಾ 62% ಜನರು ಹೇಳಿದ್ದಾರೆ.

ಮೋದಿಗೆ ರಾಮನ ಶ್ರೀರಕ್ಷೆ

ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ಸಮರ್ಪಿತವಾದ ಭವ್ಯ ದೇವಾಲಯವನ್ನು ನಿರ್ಮಿಸಿರುವುದು ಪ್ರಧಾನಿ ಮೋದಿ ಸರ್ಕಾರದ “ಹೆಚ್ಚು ಇಷ್ಟವಾದ ಕ್ರಮ” ಎಂದು ಸಮೀಕ್ಷೆಯಲ್ಲಿ ಭಾಗಿಯಾದ 22% ಜನರು ಹೇಳಿದ್ದಾರೆ. ಅದರಲ್ಲಿ 8% ಜನರು ಇದು ತಮ್ಮ ಪ್ರಾಥಮಿಕ ಕಾಳಜಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Narendra Modi : ಅಂಬೇಡ್ಕರ್ ಮತ್ತೆ ಬಂದರೂ ಸಂವಿಧಾನ ಬದಲಾವಣೆ ಅಸಾಧ್ಯ; ಮೋದಿ ಹೀಗೆ ಹೇಳಲು ಕಾರಣವೇನು?

ಭಾರತವು ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಹಾಗೂ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಆದರೆ ನಿರುದ್ಯೋಗ ಮತ್ತು ಹಣದುಬ್ಬರವು ಇನ್ನೂ ಕಾಡುತ್ತಿದೆ ಎಂಬುದು ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ.

ಪ್ರಧಾನಿ ಮೋದಿ ಅಧಿಕಾರಕ್ಕೆ ಬರುವ ಮೊದಲು 2013/14 ರಲ್ಲಿ 4.9% ರಿಂದ ನಿರುದ್ಯೋಗ ದರವು 2022/23 ರಲ್ಲಿ 5.4% ಕ್ಕೆ ಏರಿದೆ. 15-29 ವರ್ಷ ವಯಸ್ಸಿನ ಸುಮಾರು 16% ನಗರ ಯುವಕರು ಕಳಪೆ ಕೌಶಲ ಮತ್ತು ಗುಣಮಟ್ಟದ ಉದ್ಯೋಗಗಳ ಕೊರತೆಯಿಂದಾಗಿ 2022/23 ರಲ್ಲಿ ನಿರುದ್ಯೋಗಿಗಳಾಗಿ ಉಳಿದಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ತೋರಿಸುತ್ತವೆ.

ಸಮೀಕ್ಷೆಯಲ್ಲಿ ಭಾಗಿಯಾದ ಕನಿಷ್ಠ 48% ಜನರು ದೇವಾಲಯವು ಹಿಂದೂಗಳ ಹೆಗ್ಗುರತನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಭಾರತ ಎಲ್ಲರಿಗೂ ಸೇರಿದ್ದು ಎಂಬ ಅಭಿಪ್ರಾಯವೂ ವ್ಯಕ್ತಗೊಂಡಿದೆ.

ಕಳೆದ ವರ್ಷ ಜಿ 20 ಸಮ್ಮೇಳನದ ಭಾರತದ ಅಧ್ಯಕ್ಷತೆ ಮತ್ತು ಸೆಪ್ಟೆಂಬರ್​ನಲ್ಲಿ ನವದೆಹಲಿ ಜಿ 20 ನಾಯಕರನ್ನು ಆತಿಥ್ಯ ವಹಿಸುವಂತಹ ಹೆಚ್ಚು ಜನಪ್ರಿಯತೆ ಪಡೆದ ಕಾರ್ಯಕ್ರಮಗಳ ಮೂಲಕ ಭಾರತ ಬೆಳೆಯುತ್ತಿದೆ ಎಂದು ಮತದಾರರು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಸುಮಾರು 8 ಪ್ರತಿಶತದಷ್ಟು ಜನರು ಭಾರತದ ಅಂತಾರಾಷ್ಟ್ರೀಯ ಮೌಲ್ಯ ತಂದುಕೊಟ್ಟ ಸರ್ಕಾರದ ಪ್ರಯತ್ನವನ್ನು ಇಷ್ಟಪಟ್ಟಿದ್ದಾರೆ ಎಂದು ಹೇಳಿದ್ದಾರೆ.

Continue Reading
Advertisement
IPL 2024
ಪ್ರಮುಖ ಸುದ್ದಿ1 min ago

IPL 2024 : ಲಕ್ನೊ ಸೂಪರ್​ ಜೈಂಟ್ಸ್ ವಿರುದ್ಧ ಡೆಲ್ಲಿ ತಂಡಕ್ಕೆ 6 ವಿಕೆಟ್​ ವಿಜಯ

NIA Raid
ಕರ್ನಾಟಕ13 mins ago

NIA Raid: ಹುಬ್ಬಳ್ಳಿಯಲ್ಲಿ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದ ಎನ್‌ಐಎ

Khalistan Terrorist
ಪ್ರಮುಖ ಸುದ್ದಿ32 mins ago

Khalistani Terrorist : ದೆಹಲಿ ವಿಮಾನ ನಿಲ್ದಾಣದಲ್ಲಿ ಖಲಿಸ್ತಾನಿ ಉಗ್ರ ಪ್ರಭ್​ಪ್ರೀತ್ ಸಿಂಗ್ ಸೆರೆ

Lok Sabha Election 2024
ಕರ್ನಾಟಕ40 mins ago

Lok Sabha Election 2024: ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ; ಇವರ ಆಸ್ತಿ ಎಷ್ಟು?

Pakistan
ಪ್ರಮುಖ ಸುದ್ದಿ56 mins ago

United Kingdom: ‘ಪ್ರಯಾಣಕ್ಕೆಅಪಾಯಕಾರಿ’ ದೇಶಗಳ ಪಟ್ಟಿಗೆ ಪಾಕಿಸ್ತಾನವನ್ನು ಸೇರಿಸಿದ ಬ್ರಿಟನ್​!

Chikkaballapur Lok Sabha Constituency BJP Candidate Dr K Sudhakar is campaigning in various places today
ಚಿಕ್ಕಬಳ್ಳಾಪುರ1 hour ago

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ರಿಂದ ಏ.13ರಂದು ಪ್ರಚಾರ

Union Minister Pralhad Joshi statement
ಹುಬ್ಬಳ್ಳಿ1 hour ago

Lok Sabha Election 2024: ದೇಶದ್ರೋಹಿ ಕೃತ್ಯ ನಿಗ್ರಹಕ್ಕೆ ಮೋದಿ ಸರ್ಕಾರವೇ ಬೇಕು: ಪ್ರಲ್ಹಾದ್‌ ಜೋಶಿ

Union Minister Pralhad Joshi latest statement in hubli
ಕರ್ನಾಟಕ1 hour ago

Lok Sabha Election 2024: ರಾಜ್ಯದಲ್ಲಿ ಕಾಂಗ್ರೆಸ್ 3ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಲ್ಲ: ಪ್ರಲ್ಹಾದ್‌ ಜೋಶಿ ಸವಾಲು

Rashtrotthana Hospital adopts Dozi technology to provide greater safety to patients
ಕರ್ನಾಟಕ1 hour ago

Rashtrotthana Parishat: ಡೋಝಿ ತಂತ್ರಜ್ಞಾನ ಅಳವಡಿಸಿಕೊಂಡ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ

Iran- israel War
ದೇಶ1 hour ago

Iran- Israel War : ಮುಂದಿನ 48 ಗಂಟೆಗಳೊಳಗೆ ಇರಾನ್-ಇಸ್ರೇಲ್ ಭೀಕರ ಯುದ್ಧ ಶುರು!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameshwaram Cafe Blast Fake IDs created and captured bombers hiding in Kolkata
ಕ್ರೈಂ11 hours ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ19 hours ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 day ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20241 day ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ಅಧಿಕ ಲಾಭ

Ugadi 2024
ಬಾಗಲಕೋಟೆ3 days ago

Ugadi 2024 : ಬೀಳಗಿಯ ಎಕ್ಕೆ ಎಲೆ ಭವಿಷ್ಯ; ಈಶಾನ್ಯ, ಪಶ್ಚಿಮ ಭಾಗದಲ್ಲಿ ಭಾರಿ ಕಂಟಕ!

ugadi 2024
ಧಾರವಾಡ3 days ago

Ugadi 2024 : ಹನುಮನಕೊಪ್ಪದಲ್ಲಿ ಭವಿಷ್ಯ ನುಡಿದ ಬೊಂಬೆ! ಮುಂದಿನ ಪ್ರಧಾನಿ ಯಾರಾಗ್ತಾರೆ?

Dina Bhavishya
ಭವಿಷ್ಯ4 days ago

Dina Bhavishya : ನೂತನ ಸಂವತ್ಸರದಲ್ಲಿ ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ

Dina Bhavishya
ಭವಿಷ್ಯ5 days ago

Dina Bhavishya : ಅತಿರೇಕದ ಮಾತು ಈ ರಾಶಿಯವರಿಗೆ ಒಳ್ಳೆಯದಲ್ಲ

Rockstar Bull of bull festival king fame passes away
ಹಾವೇರಿ5 days ago

Rockstar Bull: ಹೋರಿ ಹಬ್ಬದ ಕಿಂಗ್ ಖ್ಯಾತಿಯ ರಾಕ್‌ ಸ್ಟಾರ್‌ ಬುಲ್‌ ಇನ್ನಿಲ್ಲ; ಬೊಮ್ಮಾಯಿ ಕಂಬನಿ

ಟ್ರೆಂಡಿಂಗ್‌