Assembly Session: ಅಧಿವೇಶನಕ್ಕೆ ಬೇಗ ಬಂದವರಿಗೆ ಟೀ ಕಪ್‌; ತಡವಾಗಿ ಬಂದವರಿಗೂ ಪ್ರಶಸ್ತಿ: ಯು.ಟಿ. ಖಾದರ್‌ - Vistara News

ಕರ್ನಾಟಕ

Assembly Session: ಅಧಿವೇಶನಕ್ಕೆ ಬೇಗ ಬಂದವರಿಗೆ ಟೀ ಕಪ್‌; ತಡವಾಗಿ ಬಂದವರಿಗೂ ಪ್ರಶಸ್ತಿ: ಯು.ಟಿ. ಖಾದರ್‌

Assembly Session: ಪ್ರತಿ ನಿತ್ಯ ಅಧಿವೇಶನಕ್ಕೆ ಬೇಗ ಹಾಜರಾಗುವ ಸದಸ್ಯರಿಗೆ ಟೀ ಕಪ್‌ಗಳನ್ನು ನೀಡಲಾಗುತ್ತಿದ್ದು, ಇದರಲ್ಲಿ ರಾಷ್ಟ್ರ ಹಾಗೂ ರಾಜ್ಯದ ಲಾಂಛನಗಳು ಇರುತ್ತವೆ. ಹೆಚ್ಚು ಬಾರಿ ಬೇಗ ಬಂದವರಿಗೆ ಅಷ್ಟೇ ಸಂಖ್ಯೆಯ ಟೀ ಕಪ್‌ಗಳನ್ನು ವಿತರಣೆ ಮಾಡಲಾಗುವುದು ಯು.ಟಿ. ಖಾದರ್‌ ತಿಳಿಸಿದ್ದಾರೆ.

VISTARANEWS.COM


on

Speaker UT Khadar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ (Belagavi Assembly Session) ಈ ಬಾರಿ ಶಾಸಕರು, ಸಚಿವರ ಹಾಜರಾತಿಗಾಗಿ ಸ್ಪೀಕರ್‌ ಯು.ಟಿ. ಖಾದರ್‌ (Speaker UT Khader) ವಿಶೇಷ ಕಾರ್ಯಯೋಜನೆಯೊಂದನ್ನು ರೂಪಿಸಿದ್ದಾರೆ. ಪ್ರತಿ ದಿನ ಸದನಕ್ಕೆ ಬೇಗ ಬರುವ ಸದಸ್ಯರಿಗೆ ಬಹುಮಾನ ಕೊಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಅತಿ ಹೆಚ್ಚು ಗೈರು ಹಾಜರಾಗುವ ಸದಸ್ಯರಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಮುಂದೆ ಅವರು ಗೈರಾಗದಂತೆ ಮಾಡಲು ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಯು.ಟಿ. ಖಾದರ್‌ ತಿಳಿಸಿದ್ದಾರೆ.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹಾಗೂ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಪ್ರತಿ ನಿತ್ಯ ಅಧಿವೇಶನಕ್ಕೆ ಬೇಗ ಹಾಜರಾಗುವ ಸದಸ್ಯರಿಗೆ ಟೀ ಕಪ್‌ಗಳನ್ನು ನೀಡಲಾಗುತ್ತಿದ್ದು, ಇದರಲ್ಲಿ ರಾಷ್ಟ್ರ ಹಾಗೂ ರಾಜ್ಯದ ಲಾಂಛನಗಳು ಇರುತ್ತವೆ. ಹೆಚ್ಚು ಬಾರಿ ಬೇಗ ಬಂದವರಿಗೆ ಅಷ್ಟೇ ಸಂಖ್ಯೆಯ ಟೀ ಕಪ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Assembly Elections 2023 : ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿಕೆಯ ಸಂಕೇತ: ಡಿಕೆಶಿ

ಸ್ಪೀಕರ್‌ ಯು.ಟಿ ಖಾದರ್ ಮಾತನಾಡಿ, ನಾಳೆಯಿಂದ 16ನೇ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಡಿಸೆಂಬರ್ 4 ರಿಂದ 15ರ ವರೆಗೆ ನಡೆಯಲಿದೆ.‌ ನಾವೆಷ್ಟೇ ಕೆಲಸ ಮಾಡಿದರೂ ಎಲ್ಲರ ಸಹಕಾರ ಅಗತ್ಯವಿದೆ. ವಿಧಾನಮಂಡಲ ಅಧಿವೇಶನಕ್ಕೆ ಬರುವವರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡು ಅಧಿವೇಶನದಲ್ಲಿ ಭಾಗವಹಿಸಲು ಸವಲತ್ತು ಕಲ್ಪಿಸಲಾಗಿದೆ. ಅಧಿಕಾರಿ ವರ್ಗದವರಿಗೆ ಅಗತ್ಯವಿರುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ಬಾರಿ ಅತ್ಯುತ್ತಮ ಊಟ

ಈ ಬಾರಿ ಅತ್ಯುತ್ತಮ ಊಟ, ತಿಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಫುಡ್ ಕೋರ್ಟ್ ಕೂಡ ಮಾಡಲಾಗಿದೆ. ಇದರಿಂದ ಶಾಸಕರು ಯಾರೂ ಹೊರಗೆ ಹೋಗುವ ಅವಶ್ಯಕತೆ ಇರೋದಿಲ್ಲ. ಬರುವ ಜನಸಾಮಾನ್ಯರಿಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿಯಲ್ಲಿ ಎಲ್‌ಇಡಿ ಅಳವಡಿಸಲಾಗಿದೆ. ಇದು ಕಾಯಂ ಆಗಿ ಉಳಿಯಲಿದ್ದು, ಹತ್ತು ವರ್ಷಗಳ ಕಾಲ ಇರಲಿದೆ ಎಂದು ಯು.ಟಿ. ಖಾದರ್‌ ತಿಳಿಸಿದರು.

ಮಕ್ಕಳಿಗೆ ಕಿರುಚಿತ್ರ ಪ್ರದರ್ಶನ ಮತ್ತು ಚಾಕೋಲೆಟ್‌ ವಿತರಣೆ

ಜನ ಸಾಮಾನ್ಯರನ್ನು, ವಿದ್ಯಾರ್ಥಿಗಳನ್ನು ಆಕರ್ಷಿಸಲು, ಪ್ರವಾಸಿ ತಾಣ ಮಾಡಲು ಚರ್ಚೆ ಮಾಡಲಾಗಿದೆ. ಶಾಲಾ ಮಕ್ಕಳು ಸಭೆ ವೀಕ್ಷಣೆಗೆ ಹೊರಗೆ ಕಾಯಬೇಕಿತ್ತು. ಆದರೆ, ಈಗ ಬಂದವರನ್ನು ನೇರವಾಗಿ ಪಾಸ್ ಕೊಟ್ಟು ಒಳಗೆ ಬಿಡಲಾಗುವುದು. ಉಳಿದವರನ್ನು 500 ಜನ ಕೂರುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಲ್ಲಿ ಕೂರಲಿದ್ದಾರೆ. ಅಲ್ಲಿ ಕೂರುವ ಮಕ್ಕಳಿಗೆ ಕಿರುಚಿತ್ರ ಪ್ರದರ್ಶಿಸುವ ವ್ಯವಸ್ಥೆ ಮಾಡಿದ್ದೇವೆ. ಕನಿಷ್ಠ ಅರ್ಧ ಗಂಟೆ ಕೂರಲು ಬಿಡಲಾಗುವುದು. ಮಕ್ಕಳಿಗೆ ಚಾಕೋಲೆಟ್, ತಂಪು ಪಾನೀಯ ವ್ಯವಸ್ಥೆಯನ್ನು ಕೂಡ ಮಾಡಲಾಗುವುದು. ಮಕ್ಕಳು ಈ ದೇಶದ ಮುಂದಿನ ಪ್ರಜೆಗಳು‌. ಬಂದವರು ಬೇಸರದಿಂದ ಹೋಗಬಾರದು ಎಂದು ಯು.ಟಿ. ಖಾದರ್‌ ಹೇಳಿದರು.

ಸುವರ್ಣ ಸಂಭ್ರಮದ ಕಾಲಘಟದಲ್ಲಿ ಒಂದೊಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಅಧಿವೇಶನ ಮೊದಲು ಮಕ್ಕಳು ಬಂದು ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ. ಸುವರ್ಣ ಸಂಭ್ರಮದ ಕಾರ್ಯಕ್ರಮದಲ್ಲಿ ಹಲವು ತಂಡದವರು ಭಾಗಿಯಾಗಲಿದ್ದಾರೆ. ವಿರಾಸತ್ ಆಳ್ವಾಸ್ ಕಾರ್ಯಕ್ರಮ ಏರ್ಪಡಿಸಿದ್ದು, ಎರಡು ಗಂಟೆಗಳ ಕಾಲ ಕಾರ್ಯಕ್ರಮ ನೀಡಲಿದ್ದಾರೆ ಎಂದು ಯು.ಟಿ. ಖಾದರ್‌ ಮಾಹಿತಿ ನೀಡಿದರು.

ಈ ಬಾರಿ ಅಧಿವೇಶನದಲ್ಲಿ ಏಳರಿಂದ ಎಂಟು ಬಿಲ್ ಬರುವ ಸಾಧ್ಯತೆ ಇದೆ. ಮೂರು ಆರ್ಡಿನೆನ್ಸ್ ಆಗಿರೋ ಬಿಲ್ ಬರಲಿದೆ ಎಂದು ಇದೇ ವೇಳೆ ಯು.ಟಿ. ಖಾದರ್‌ ತಿಳಿಸಿದರು.

ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಈ ಬಾರಿ ಜಾಸ್ತಿ ಪ್ರತಿಭಟನೆ ನಡೆಯುವುದಿಲ್ಲ. ಈಗಾಗಲೇ ಅನೇಕ ಸಚಿವರ ಜತೆ ಮಾತನಾಡಲಾಗಿದೆ. ಹೀಗಾಗಿ ಪ್ರತಿಭಟನೆ ಜಾಸ್ತಿ ಆಗುವುದಿಲ್ಲ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚೆ ಮಾಡುತ್ತೇವೆ. ಈ ಭಾಗದ ಸಮಸ್ಯೆಗೆ ಮೊದಲ ಆದ್ಯತೆ ನೀಡುತ್ತೇವೆ. ಯಾವುದೇ ಶಾಸಕರು ಚರ್ಚೆಗೆ ಭಾಗವಹಿಸಬಹುದು ಮತ್ತು ಪ್ರಶ್ನೆ ಕೇಳಬಹುದು ಎಂದು ಹೇಳಿದರು.

ಬೆಳಗಾವಿ ಕಚೇರಿ ಸ್ಥಳಾಂತರಕ್ಕೆ ಒಪ್ಪದ ಐಎಎಸ್‌ ಅಧಿಕಾರಿಗಳು

ರಾಜ್ಯ ಮಟ್ಟದ ಕಚೇರಿಗಳನ್ನು ಬೆಳಗಾವಿಗೆ ಶಿಫ್ಟ್ ಆಗಬೇಕು ಅಂತ ರಿಪೋರ್ಟ್ ಕೊಡಲಾಗಿದೆ. ಕ್ಯಾಬಿನೆಟ್ ಕೂಡಾ ಒಪ್ಪಿಕೊಂಡಿದೆ. ಆದರೆ ಐಎಎಸ್‌ ಅಧಿಕಾರಿಗಳು ಇಲ್ಲಿಗೆ ಬರಲು ಇಷ್ಟ ಪಡುತ್ತಿಲ್ಲ. ಸರ್ಕಾರ ಈ ಬಗ್ಗೆ ಕ್ರಮವಹಿಸಬೇಕು. ಹೆಚ್ಚು ರಾಜ್ಯ ಕಚೇರಿಗಳು ಬೆಳಗಾವಿ ಸೌಧಕ್ಕೆ ಶಿಫ್ಟ್ ಆಗಬೇಕು. ಸರ್ಕಾರ ಈ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಬಸವರಾಜ ಹೊರಟ್ಟಿ ಹೇಳಿದರು.

ಸುವರ್ಣಸೌಧದಲ್ಲಿ ನೆಹರು ಭಾವಚಿತ್ರ ಹಾಕುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಯು.ಟಿ ಖಾದರ್, ದೇಶದ ಮೊದಲ ಪ್ರಧಾನಿಯಾಗಿರುವ ಜವಾಹರ್‌ ಲಾಲ್‌ ನೆಹರೂ ಅವರು ಭಾವಚಿತ್ರ ಹಾಕುವಂತೆ ಒತ್ತಾಯ ಇದೆ. ನೋಡೋಣ ಅದರ ಬಗ್ಗೆ ಚರ್ಚೆ ಮಾಡಿ ತೀರ್ಮಾನಿಸೋಣ ಎಂದು ತಿಳಿಸಿದರು.

ಈ ಬಾರಿ ಅಧಿವೇಶನದಲ್ಲಿ 2,512 ಪ್ರಶ್ನೆಗಳು ಬರಲಿದೆ. ದಿನಕ್ಕೆ 15 ಚುಕ್ಕೆ ಗುರುತಿನ ಪ್ರಶ್ನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಇದನ್ನೂ ಓದಿ: Assembly Elections 2023 : ನಮ್ಮ ಗ್ಯಾರಂಟಿ ಯಶಸ್ಸಿನಿಂದ ತೆಲಂಗಾಣದಲ್ಲಿ ಗೆಲುವು: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಿಂದ ಮುಸ್ಲಿಂ ಸಮುದಾಯದ ಸ್ಪೀಕರ್‌ ಒಬ್ಬರನ್ನು ಆಯ್ಕೆ ಮಾಡಿದೆ. ಈ ಮೂಲಕ ಬಿಜೆಪಿಯವರು ಸದನದಲ್ಲಿ ಅವರಿಗೆ ನಮಸ್ಕರಿಸಿ ಕೂರುವಂತೆ ಮಾಡಿದ್ದು ಕಾಂಗ್ರೆಸ್‌ ಎಂದು ಸಚಿವ ಜಮೀರ್ ಅಹ್ಮದ್‌ ಖಾನ್‌ ನೀಡಿದ್ದ ಹೇಳಿಕೆ ಸಂಬಂಧ ಬಿಜೆಪಿ ಸದನದಲ್ಲಿ ಪ್ರತಿಭಟನೆ ಮಾಡುವುದಾಗಿ ಹೇಳಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯು.ಟಿ. ಖಾದರ್‌, ಜಮೀರ್‌ ಅಹ್ಮದ್‌ ಖಾನ್‌ ಅವರು ಚುನಾವಣೆ ಸಂದರ್ಭದಲ್ಲಿ ಸಭೆಯ ಹೊರಗೆ ಹೇಳಿಕೆ ನೀಡಿದ್ದಾರೆ. ಈಗ ನಮಗೆ ಅಧಿವೇಶನದಲ್ಲಿ ಹತ್ತು ದಿನ ಮಾತ್ರ ಅವಕಾಶ ಇದೆ. ಉತ್ತರ ಕರ್ನಾಟಕದ ಸಮಸ್ಯೆ ಹೆಚ್ಚಿದೆ. ಅದರ ಬಗ್ಗೆ ಹೆಚ್ಚು ಚರ್ಚೆ ಆಗಬೇಕು. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಚರ್ಚೆ ಬೇಡ ಅನ್ನೋದು ನಮ್ಮ ಅಭಿಪ್ರಾಯ. ಆದರೆ, ಈವರೆಗೂ ಬಿಜೆಪಿಯಿಂದ ಇದರ ಬಗ್ಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

DK Shivakumar: 2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

VISTARANEWS.COM


on

dk shivakumar hd kumarswamy
Koo

ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದೇ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ನಿತ್ಯದ ಆಲೋಚನೆಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆ ವಿಧಾನಸೌಧದ (Vidhana Soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.

ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಅವರು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು.

ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ತಿಳಿಸಿದರು.

ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಳೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಯಾಕೆ ಕಳೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.

ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ಈ ಜಿಲ್ಲೆಯ ಜನಕ್ಕೆ ಹೊಸ ದಿಕ್ಕನ್ನು ನೀಡಬೇಕು, ಹೊಸ ಆಲೋಚನೆ, ಅಭಿವೃದ್ಧಿ ನೀಡಬೇಕು, ಮುಂದಿನ ಪೀಳಿಗೆ ದೃಷ್ಟಿಯಿಂದ ನಾವು ಆಲೋಚನೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ನಮ್ಮ ಈ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಹಣೆಯಲ್ಲಿ ಬರೆದಿಲ್ಲ

2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

ಬೃಂದಾವನ ಮೇಲ್ದರ್ಜೆಗೆ ಏರಿಕೆ

ಕೆಆರ್‌ಎಸ್ ಬೃಂದಾವನ ಉದ್ಯಾನವನಕ್ಕೆ ಹೊಸ ರೂಪ ನೀಡಲು ಮುಂದಾಗಿರುವ ಯೋಜನೆಯಿಂದ ಸರ್ಕಾರದ ಹಣ ವ್ಯರ್ಥವಾಗಲಿದೆ ಎಂಬ ವಿಪಕ್ಷ ಟೀಕೆಯ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಅವರ ಆರೋಪ ಬೋಗಸ್ ಆಗಿದೆ. ಇದು ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರದಲ್ಲಿ ಪ್ರಸ್ತಾವನೆಯಾದ ಯೋಜನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ, ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆ ಮಟ್ಟಕ್ಕೆ ಹೆಚ್ಚಿಸಲು ಮುಂದಾಗಿದ್ದೇವೆ. ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದು, ಪ್ರವಾಸೋದ್ಯಮ ಉದ್ದೇಶದಿಂದ ಈ ಯೋಜನೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು

ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ, ಎಲ್ಲಾ ಪಕ್ಷದ ಶಾಸಕರು ಈ ವಿಚಾರವಾಗಿ ವಿಸ್ತೃತ ಚರ್ಚೆಯಾಗಬೇಕು ಎಂದು ತಿಳಿಸಿದರು. ಇದಕ್ಕೆ ನಾನು ಮುಕ್ತವಾಗಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕೇಳಬೇಕು. ಇದರಲ್ಲಿ ಯಾವುದೇ ತಪ್ಪು ಆಗಬಾರದು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಬೇಕು. ಬೆಂಗಳೂರಿಗೆ ಪರಿಣಾಮಕಾರಿ ಆಡಳಿತ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯನ್ನು ಸಧ್ಯದಲ್ಲೇ ರಚಿಸಲಾಗುವುದು. ವಿರೋಧ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ನಾವು ಸ್ವೀಕರಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

Continue Reading

ಪ್ರಮುಖ ಸುದ್ದಿ

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Karnataka High Court: ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

VISTARANEWS.COM


on

karnataka high court
Koo

ಬೆಂಗಳೂರು: ʼಇಡೀ ಜಗತ್ತು ಯುಪಿಐ (UPI) ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿದೆ. ದಿನಸಿ ಅಂಗಡಿಯವರಲ್ಲೂ ಅದು ಇದೆ. ಆದರೆ ನಿಮ್ಮಲ್ಲಿ ಇಲ್ಲ ಎಂಬುದು ವಿಚಿತ್ರವಾದ ಸಂಗತಿʼ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ- BESCOM) ಅನ್ನು ಕರ್ನಾಟಕ ಹೈಕೋರ್ಟ್ (Karnataka High Court) ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 47(5)ರ ಪ್ರಕಾರ ಪೂರ್ವಪಾವತಿ ಮೀಟರ್ ಒದಗಿಸುವಂತೆ ಮತ್ತು ಯುಪಿಐ ಮೋಡ್‌ನಲ್ಲಿ ಪಾವತಿಯನ್ನು ಸ್ವೀಕರಿಸಲು ಬೆಸ್ಕಾಂಗೆ ನಿರ್ದೇಶನ ನೀಡಬೇಕೆಂದು ಕೋರಿ ಹಿರಿಯ ನಾಗರಿಕರಾದ ಸೀತಾಲಕ್ಷ್ಮಿ ಎಂಬವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಈ ನಿರ್ದೇಶನ ನೀಡಲಾಗಿದೆ.

ಇಡೀ ಜಗತ್ತು ಯುಪಿಐ ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿರುವ ಈ ಯುಗದಲ್ಲಿ ಬೆಸ್ಕಾಂ ಯುಪಿಐ ಮೂಲಕ ಹಣವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಚಿತ್ರವಾಗಿದೆ. ಯಾರಾದರೂ ನಿಮಗೆ ಹಣವನ್ನು ಪಾವತಿಸಲು ಬಯಸಿದರೆ, ಅದು ಈಗ ಸ್ವೀಕರಿಸಲ್ಪಟ್ಟ ವಿಧಾನವಾಗಿದ್ದರೂ, ನೀವು ಅದನ್ನು ಅಳವಡಿಸಿಕೊಳ್ಳಬೇಕಿದ್ದರೆ ಯಾರಾದರೂ ನ್ಯಾಯಾಲಯಕ್ಕೆ ಬಂದು ರಿಟ್ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾರೋ ನಿಮಗೆ ಹಣವನ್ನು ನೀಡಲು ಬಯಸುತ್ತಾರೆ. ಎಲ್ಲರೂ ಡಿಜಿಟಲ್‌ (Digital) ಆಗಿರಿ ಎಂದು ಸರಕಾರ ಘೋಷಿಸುತ್ತದೆ. ಆದರೆ ನೀವು ಕರೆನ್ಸಿ ನೋಟುಗಳನ್ನು ಸಂಗ್ರಹಿಸುವ ಕಾಲಕ್ಕೆ ಹಿಂತಿರುಗಲು ಬಯಸುತ್ತಿದ್ದೀರಿ ಎಂದು ಹೈಕೋರ್ಟ್‌ ಪೀಠ ಬೆಸ್ಕಾಂನ ಕಿವಿ ಹಿಂಡಿತು.

ಪ್ರತಿಯೊಬ್ಬ ದಿನಸಿ ವ್ಯಾಪಾರಿಯೂ ಈಗ ಅವನ ಮುಂದೆ ಯುಪಿಐ ಸ್ಕ್ಯಾನರ್ ಅನ್ನು ಹೊಂದಿದ್ದಾನೆ. ಆದರೆ ನೀವು ಇನ್ನೂ ಅರ್ಜಿದಾರರಿಗೆ ಕ್ಯುಆರ್ ಕೋಡ್ (‌QR Code) ನೀಡಲು ಮೀನಮೇಷ ಎಣಿಸುತ್ತಿದ್ದೀರಿ. ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ನ್ಯಾಯಾಲಯವೇ ಅತ್ಯಂತ ನಿಧಾನವಾಗಿತ್ತು; ನೀವು ನಮಗಿಂತಲೂ ಹಿಂದುಳಿದಿದ್ದೀರಿ ಎಂದು ಕೂಡ ಪೀಠ ಹೇಳಿದೆ.

ವಿಚಾರಣೆಯ ವೇಳೆ ಬೆಸ್ಕಾಂ ಪರ ವಕೀಲರು, ಬೆಸ್ಕಾಂ ಕೌಂಟರ್‌ಗಳಲ್ಲಿ ಯುಪಿಐ ಪಾವತಿ ಮಾಡಲು ಅವಕಾಶವಿಲ್ಲ. ನಗದು ಪಾವತಿಯನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದರು. ಆದರೆ ಗ್ರಾಹಕರು ಬೆಸ್ಕಾಂ ಅಪ್ಲಿಕೇಶನ್ ಮೂಲಕ ಆನ್‌ಲೈನ್/ಯುಪಿಐ ಪಾವತಿಗಳನ್ನು ಮಾಡಬಹುದು. ಹಿರಿಯ ನಾಗರಿಕರು ಮತ್ತು ವಯಸ್ಸಾದವರು ಕೌಂಟರ್‌ಗೆ ಬರುವ ಅಗತ್ಯವಿಲ್ಲದೆ ಮನೆಯಲ್ಲಿ ಕುಳಿತು ಅಪ್ಲಿಕೇಶನ್‌ನಲ್ಲಿ ಇದನ್ನು ಮಾಡಬಹುದು ಎಂದು ಹೇಳಿದರು.

ಅಕ್ಟೋಬರ್ 25, 2023ರಂದು, ಅರ್ಜಿದಾರರು ಮನೆಬಾಡಿಗೆ ಉದ್ದೇಶಗಳಿಂದ ಉಂಟಾಗುವ ಭಾರೀ ಶುಲ್ಕವನ್ನು ಕಟ್ಟಲು ಬೆಸ್ಕಾಂ ಹೊಸಕೋಟೆ ಶಾಖೆಯ ಕ್ಯಾಶ್ ಕೌಂಟರ್‌ಗೆ ಭೇಟಿ ನೀಡಿದ್ದರು. ಯುಪಿಐ ಮೂಲಕ ಪಾವತಿ ಲಭ್ಯವಿಲ್ಲದ ಕಾರಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಅರ್ಜಿದಾರರಿಗೆ ಡಿಡಿ ಮೂಲಕ ಪಾವತಿಸಲು ಸೂಚಿಸಿದ್ದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶ್ರೀಧರ್ ಪ್ರಭು ಅವರು, ವಯಸ್ಸಾದ ಮಹಿಳೆ ದೈನಂದಿನ ಕೆಲಸಗಳನ್ನು ನಿರ್ವಹಿಸುವಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಪಡೆಯಲು ಸರದಿಯಲ್ಲಿ ನಿಂತು ಕಷ್ಟಪಟ್ಟಿದ್ದಾರೆ. ನಂತರ ಪಾವತಿ ಮಾಡಿದ್ದಾರೆ. ಹೀಗಾಗಿ ಅವರು ತಮ್ಮ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಐಡೆಂಟಿಟಿ (ಯುಪಿಐಡಿ) ಅನ್ನು ಒದಗಿಸುವ ಮೂಲಕ ಪ್ರಕ್ರಿಯೆಯನ್ನು ಸುಲಭಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Continue Reading

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading

ಕರ್ನಾಟಕ

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

MB Patil: ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಅನುಮಾನವಿಲ್ಲ. ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

VISTARANEWS.COM


on

2nd International Airport in Bengaluru Another round of discussion was held by Minister MB Patil
Koo

ಬೆಂಗಳೂರು: ರಾಜಧಾನಿಯ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧವಾಗಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ (MB Patil), ವಿಮಾನಯಾನ ವಲಯದ ಪ್ರಮುಖರ ಜತೆ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದ್ದಾರೆ.

ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ‌ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ: Tomato Price: ದಿಢೀರ್‌ ಕುಸಿದ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ತಳಮಳ

ಬಳಿಕ ಮಾತನಾಡಿದ ಸಚಿವರು, ‘ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಅನುಮಾನವಿಲ್ಲ. ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ’ ಎಂದರು.

ಈ ಯೋಜನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಉದ್ಯಮಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಪ್ರಯಾಣಿಕರ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಎರಡನ್ನೂ ಯೋಜನೆಯಲ್ಲಿ ಪರಿಗಣಿಸುವ ಚಿಂತನೆ ಇದೆ. ಜತೆಗೆ ಭೂಮಿಯ ಲಭ್ಯತೆ ಇತ್ಯಾದಿ ತಾಂತ್ರಿಕ ಅಂಶಗಳ ಕಡೆಗೂ ಗಮನಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Womens Asia Cup Final
ಕ್ರೀಡೆ6 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ9 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ36 mins ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ46 mins ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ49 mins ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ58 mins ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ1 hour ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ1 hour ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Shiva Rajkumar played the dupe for saikumar in film
ಸ್ಯಾಂಡಲ್ ವುಡ್1 hour ago

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Paris Olympic
ಕ್ರೀಡೆ2 hours ago

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ1 hour ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ20 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ22 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ23 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌