ಟ್ರಬಲ್‌ ಶೂಟರ್‌ in ಟ್ರಬಲ್‌: ಡಿ.ಕೆ. ಶಿವಕುಮಾರ್‌ ವಿರುದ್ಧ ED ಚಾರ್ಜ್‌ಶೀಟ್‌ - Vistara News

ಪ್ರಮುಖ ಸುದ್ದಿ

ಟ್ರಬಲ್‌ ಶೂಟರ್‌ in ಟ್ರಬಲ್‌: ಡಿ.ಕೆ. ಶಿವಕುಮಾರ್‌ ವಿರುದ್ಧ ED ಚಾರ್ಜ್‌ಶೀಟ್‌

ಜಾರಿ ನಿರ್ದೇಶನಾಲಯದಿಂದ ದೆಹಲಿ ನ್ಯಾಯಾಲಯದಲ್ಲಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಶಿವಕುಮಾರ್‌ ವಿರುದ್ಧ ಅನೇಕ ಆರೋಪಗಳನ್ನು ಮಾಡಲಾಗಿದ್ದು, ಇನ್ನೂ ಅನೇಕರ ಹೆಸರುಗಳು ಇದರಲ್ಲಿ ಇವೆ ಎನ್ನಲಾಗಿದೆ.

VISTARANEWS.COM


on

dk shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ₹800 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಹಾಗೂ 300ಕ್ಕೂ ಹೆಚ್ಚು ಬ್ಯಾಂಕ್‌ ಖಾತೆಗಳನ್ನು ಹೊಂದಿರುವ ಆರೋಪ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಎರಡೂವರೆ ವರ್ಷದ ನಂತರ ಮತ್ತೆ ಇಡಿ ಸಂಕಷ್ಟ ಎದುರಾಗಿದೆ. ಅಂದಿನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಡಿ.ಕೆ. ಶಿವಕುಮಾರ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಇನ್ನೇನು ವಿಧಾನಸಭೆ ಚುನಾವಣೆಗೆ ಒಂದು ವರ್ಷಕ್ಕಿಂದಲೂ ಕಡಿಮೆ ಅವಧಿ ಇರುವಾಗ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆಶಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆ ಆಗಿದೆ.

2019ರಲ್ಲಿ ಬಂಧನವಾಗಿದ್ದ ಪ್ರಕರಣದಲ್ಲಿ ಇಡಿಯಿಂದ ದೆಹಲಿ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಶಿವಕುಮಾರ್‌ ವಿರುದ್ಧ ಅನೇಕ ಆರೋಪಗಳನ್ನು ಮಾಡಲಾಗಿದ್ದು, ಅನೇಕರ ಹೆಸರುಗಳು ಇವೆ ಎನ್ನಲಾಗಿದೆ. ಕಾಂಗ್ರೆಸ್‌ನ ಅಖಿಲ ಭಾರತ ಮಟ್ಟದಲ್ಲಿ ಉಂಟಾಗಿದ್ದ ಸಮಸ್ಯೆಗಳಿಂದ ಹೊರಬರಲೂ ಸಹಾಯ ಮಾಡಿ ಟ್ರಬಲ್‌ ಶೂಟರ್‌ ಎನ್ನಿಸಿಕೊಂಡಿದ್ದ ಡಿ.ಕೆ. ಶಿವಕುಮಾರ್‌ ಅವರಿಗೇ ಈಗ ಟ್ರಬಲ್‌ ಎದುರಾಗಿದೆ.

ಇದನ್ನೂ ಓದಿ | ಕರಪ್ಷನ್ನು, ಕೆಮ್ಮು ಎಲ್ಲ ಯಾವತ್ತಿದ್ದರೂ ಹೊರಗೆ ಬರಲೇಬೇಕು ಎಂದ ಡಿ.ಕೆ. ಶಿವಕುಮಾರ್‌

ಪ್ರಕರಣಕ್ಕೆ ಸಂಬಂಧಿಸಿ ಡಿ.ಕೆ. ಶಿವಕುಮಾರ್‌ ಅವರನ್ನು ಇಡಿ ಬಂಧಿಸಿ 45 ದಿನ ವಿಚಾರಣೆ ನಡೆಸಿತ್ತು. ತಮ್ಮ ಮೇಲೆ ಅಕ್ರಮ ಆಸ್ತಿ ಸಂಪಾದನೆ ಆರೋಪದ ಜತೆಗೆ ಡಿಕೆಶಿ ಪುತ್ರಿಯ ಮೇಲೂ ಆರೋಪವಿದೆ. ಪುತ್ರಿ ₹108 ಕೋಟಿ ಆಸ್ತಿ ಹೊಂದಿದ್ದು, ಇದರ ಮೂಲದ ಬಗ್ಗೆ ಇಡಿ ಅನುಮಾನ ವ್ಯಪ್ತಪಡಿಸಿತ್ತು. ಡಿಕೆಶಿ ಹೆಸರಿನಲ್ಲಿ 24, ಸಹೋದರ ಸುರೇಶ್‌ ಹೆಸರಿನಲ್ಲಿ 27 ಆಸ್ತಿ ಜತೆಗೆ ತಾಯಿಯ ಹೆಸರಿನಲ್ಲೂ 38 ಆಸ್ತಿಗಳಿದ್ದದ್ದನ್ನು ಪತ್ತೆ ಹಚ್ಚಲಾಗಿತ್ತು. ಈ ಆಸ್ತಿಗಳಿಗೆ ಮೂಲ ಇಲ್ಲ ಎಂದು ತಿಳಿಸಲಾಗಿತ್ತು. ಈ ಕುರಿತು ಶಿವಕುಮಾರ್‌ ಅವರ ತಾಯಿಯನ್ನೂ ವಿಚಾರಣೆ ನಡೆಸಲಾಗಿತ್ತು.

ತಿಹಾರ್‌ ಜೈಲಿನಲ್ಲಿ ಬಂಧನದಲ್ಲಿದ್ದಾಗ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಖುದ್ದು ಭೇಟಿ ನೀಡಿ ಧೈರ್ಯ ತುಂಬಿದ್ದರು. ಅನೇಕ ದಿನ ವಿಚಾರಣೆ ನಂತರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಇದೀಗ ದೆಹಲಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿರುವ ಆರೋಪ ಪಟ್ಟಿಯ ಸಂಪೂರ್ಣ ವಿವರ ಇನ್ನೂ ಲಭ್ಯವಾಗಿಲ್ಲ. ವಿಚಾರಣೆ ಆರಂಬವಾದ ಕೂಡಲೆ ಅನೇಕ ಬಾರಿ ಡಿಕೆಶಿ ನವದೆಹಲಿಗೆ ತೆರಳಬೇಕಾಗುತ್ತದೆ. ಇಡಿ ಹೊರಿಸಿರುವ ಆರೋಪಗಳ ಕುರಿತು ಉತ್ತರ ನೀಡಬೇಕು ಹಾಗೂ ತಾವು ನಿರಪರಾಧಿ ಎಂದು ಸಾಬೀತಪಡಿಸಬೇಕು. ಈ ಹಂತದಲ್ಲಿ ನೀಡಲಾಗುವ ನೋಟಿಸ್‌, ವಾರಂಟ್‌ಗಳು ಚುನಾವಣೆ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ | ನಮ್ಮದು ಡಿ.ಕೆ. ಶಿವಕುಮಾರ್‌ ಕುಟುಂಬ ಕೆಟ್ಟೋಯ್ತ?: ಆರೋಪಕ್ಕೆ ಅಶ್ವತ್ಥನಾರಾಯಣ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

SSLC Exam Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ. ಗುರುವಾರ ಫಲಿತಾಂಶ ಪ್ರಕಟವಾಗಲಿದೆ.

VISTARANEWS.COM


on

SSLC Exam Result 2024 to be declared tomorrow Here are the details
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶ ಇಂದು ಪ್ರಕಟವಾಗಲಿದೆ. ಮೇ 9ರ ಬೆಳಗ್ಗೆ 10.30ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30ಕ್ಕೆ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದೆ.

SSLC Exam Result 2024 to be declared tomorrow Here are the details

ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮೇ 9ರ ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿದೆ.

ಮಾ.25ರಿಂದ ಏ.6ರ ವರೆಗೆ ನಡೆದಿದ್ದ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ ಕಾತರ ಹೆಚ್ಚಿದೆ.

ಇದನ್ನೂ ಓದಿ | Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಬಿಡುಗಡೆ ಮಾಡಲಾಗಿತ್ತು. ಘೋಷಿಸಿತ್ತು. ಒಟ್ಟಾರ ಉತ್ತೀರ್ಣ ಪ್ರಮಾಣ ಶೇ 83.89 ದಾಖಲಾಗಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Karnataka Weather: ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧೆಡೆ ಬುಧವಾರ ಭಾರಿ ಮಳೆ ಸುರಿದಿತ್ತು. ಅದೇ ರೀತಿ ಇಂದು(ಮೇ 9) ಕೂಡ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ (30-40 kmph) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅದೇ ರೀತಿ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ (Rain News) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರವಾದ ಮಳೆ/ ಗುಡುಗು ಸಹಿತ ಗಾಳಿ (30-40 kmph) ಉಂಟಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 10ರಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಕೊಡಗು, ಹಾಸನ, ಚಿಕ್ಕಮಗಳೂರು, ವಿಜಯನಗರ, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೇ ರೀತಿ ಮೇ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿರಿ ನೀಡಿದೆ.

ಇದನ್ನೂ ಓದಿ | Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

ತಾಪಮಾನದ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ನಂತರ ರಾಜ್ಯದ ಮೇಲೆ 2-3 ಡಿಗ್ರಿ ಇಳಿಕೆಯಾಗಲಿದೆ.

ಮುಂದಿನ 24 ಗಂಟೆಗಳ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಮಿಂಚು/ಗಾಳಿ (30- 40kmph) ಸಹಿತ ಲಘುವಾಗಿ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಇರುವ ಸಾಧ್ಯತೆ ಇದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು.

VISTARANEWS.COM


on

Sam Pitroda
Koo

ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಮ್ಮ ಹೇಳಿಕೆಗಳ ಮೂಲಕ ಹಾನಿಯೆಸಗುವ ಮಣಿಶಂಕರ ಅಯ್ಯರ್‌ ಮುಂತಾದವರ ಪರಂಪರೆಯನ್ನು ಕಾಂಗ್ರೆಸ್‌ ಪಕ್ಷದ ಭಾರತೀಯ ಸಾಗರೋತ್ತರ ವಿಭಾಗದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಮುಂದುವರಿಸುತ್ತಿರುವಂತಿದೆ. ದೇಶದ ವೈವಿಧ್ಯತೆಯ ಬಗ್ಗೆ ಮಾತನಾಡುವಾಗ ರಾಷ್ಟ್ರದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿ ಸ್ಯಾಮ್‌ ಪಿತ್ರೋಡಾ ವಿವಾದ ಹುಟ್ಟುಹಾಕಿದ್ದಾರೆ. “ಭಾರತದಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು” ಎಂದು ಪಿತ್ರೋಡಾ ಹೇಳಿದ್ದಾರೆ.

ಸಹಜವಾಗಿಯೇ ಈ ಮಾತು ವಿವಾದ ಹುಟ್ಟುಹಾಕಿದೆ. ಇಂಥ ಅವಕಾಶವನ್ನು ಎಂದೂ ಕಳೆದುಕೊಳ್ಳದ ಪ್ರಧಾನಮಂತ್ರಿ ನರೇಂದ್ರ ಮೋದಿ, “ಕಪ್ಪು ಚರ್ಮ ಇರುವ ಭಾರತೀಯರು ಆಫ್ರಿಕಾದವರು ಎಂದು ಈ ʼತತ್ವಜ್ಞಾನಿ ಅಂಕಲ್‌ʼ ಹೇಳಿದ್ದಾರೆ. ಇದರರ್ಥ, ನೀವು ದೇಶದ ಹಲವಾರು ಜನರನ್ನು ಅವರ ಚರ್ಮದ ಬಣ್ಣದ ಆಧಾರದ ಮೇಲೆ ನಿಂದಿಸುತ್ತಿದ್ದೀರಿ. ಚರ್ಮದ ಬಣ್ಣದ ಆಧಾರದ ಮೇಲೆ ಭಾರತೀಯರಿಗೆ ಮಾಡುವ ಅವಮಾನವನ್ನು ಈ ದೇಶ ಸಹಿಸುವುದಿಲ್ಲ” ಎಂದು ಪಿತ್ರೋಡಾ ಮೇಲೆ ಹರಿಹಾಯ್ದಿದ್ದಾರೆ. “ಆದಿವಾಸಿ ಕುಟುಂಬದ ಮಗಳಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಪದವಿಯ ಸ್ಪರ್ಧೆಯ ವೇಳೆ ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸಿತು ಎಂದು ನಾನು ತುಂಬಾ ಯೋಚಿಸುತ್ತಿದ್ದೆ. ಇಂದು ನನಗೆ ಅದರ ಕಾರಣ ತಿಳಿಯಿತು. ಅಮೆರಿಕದಲ್ಲಿರುವ ‘ಶೆಹಜಾದಾ’ನ ಅಂಕಲ್‌ ಹಾಗೂ ಫಿಲಾಸಫಿ ಮಾರ್ಗದರ್ಶಕ (ಪಿತ್ರೋಡಾ) ಈ ‘ಶೆಹಜಾದಾ’ಗೆ ಕ್ರಿಕೆಟ್‌ನ ಮೂರನೇ ಅಂಪೈರ್‌ನಂತೆ ಸಲಹೆ ನೀಡುತ್ತಾರೆ” ಎಂದು ಕುಟುಕಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು, “ಸ್ಯಾಮ್ ಭಾಯ್, ನಾನು ಈಶಾನ್ಯದಿಂದ ಬಂದವನು ಮತ್ತು ನಾನು ಭಾರತೀಯನಂತೆ ಕಾಣುತ್ತೇನೆ. ನಮ್ಮ ದೇಶದ ಬಗ್ಗೆ ಸ್ವಲ್ಪ ತಿಳಿವಳಿಕೆ ಬೆಳೆಸಿಕೊಳ್ಳಿ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು. ಕಾಂಗ್ರೆಸ್‌ ಪಕ್ಷ ಈ ಹೇಳಿಕೆಯಿಂದ ಉಂಟಾದ ಕೋಲಾಹಲದಿಂದ ಬೆಚ್ಚಿಬಿದ್ದು, ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು.

ಪಿತ್ರೋಡಾ ಅವರು ತಮ್ಮ ಮಾತನ್ನು ವಿಶ್ಲೇಷಣೆ ಎಂದುಕೊಂಡಿರುವಂತಿದೆ. ಆದರೆ ವಿಶ್ಲೇಷಣೆಗೂ ಜನಾಂಗೀಯ ನಿಂದನೆಗೂ ಅವರು ವ್ಯತ್ಯಾಸ ಗುರುತಿಸಿಕೊಳ್ಳಬೇಕಿದೆ. ದಕ್ಷಿಣ ಭಾರತೀಯರು ತುಸು ಕಪ್ಪಗಿದ್ದಾರೆ ಸರಿ; ಅಷ್ಟಕ್ಕೇ ಅವರು ಆಫ್ರಿಕನ್ನರಿಗೆ ಸಮವೋ? ಭಾರತದಲ್ಲಿ ಅತಿ ಹೆಚ್ಚಿನ ತೆರಿಗೆ ಉತ್ಪತ್ತಿಯಾಗುವುದು, ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡುವವರು ದಕ್ಷಿಣ ಭಾರತೀಯರು. ಇಲ್ಲಿನ ಸಂಸ್ಕೃತಿ ಅಲ್ಲಿಗಿಂತ ವಿಭಿನ್ನ. ಪೂರ್ವಭಾಗದವರು ಚೀನೀಯರಂತೆ ಕಾಣುತ್ತಾರೆ ಎನ್ನುವ ಮೂಲಕ, ʼಅರುಣಾಚಲ ನಮ್ಮದುʼ ಎನ್ನುತ್ತಿರುವ ಚೀನಾಕ್ಕೆ ಪಿತ್ರೋಡಾ ಸಹಾಯ ಮಾಡುತ್ತಿರುವಂತಿದೆ. ಭೌಗೋಳಿಕ ಹಾಗೂ ಸಾಂಸ್ಕೃತಿಕ ಭಿನ್ನತೆಗಳು ಪ್ರತಿ ದೇಶದಲ್ಲೂ ಇದ್ದೇ ಇರುತ್ತವೆ. ಭಾರತ ವಿಶಾಲ ದೇಶವಾದುದರಿಂದ ಇಲ್ಲಿ ಹೆಚ್ಚಿನ ವೈವಿಧ್ಯವಿದೆ. ಆ ಕಾರಣಕ್ಕೇ ಇದು ಸಾಂಸ್ಕೃತಿಕವಾಗಿ ಶ್ರೀಮಂತವೂ ಆಗಿದೆ. ಇದು ಭಾರತದ ಶಕ್ತಿಯೇ ಹೊರತು, ಇನ್ನೊಂದರ ನಕಲು ಅಲ್ಲ. ನಾವು ನಮ್ಮನ್ನು ಬೇರೆ ದೇಶಗಳಿಗೆ ಚರ್ಮದ ಬಣ್ಣದಿಂದ ಹೋಲಿಸಿಕೊಳ್ಳಬೇಕಿಲ್ಲ. ಬೇಕಿದ್ದರೆ ಭೂತಾನಿನ ಆನಂದದ ಸ್ವಭಾವದ ಸೂಚ್ಯಂಕಕ್ಕೆ, ಜಪಾನಿನ ಪರಿಶ್ರಮದ ಗುಣಕ್ಕೆ, ಕೆರಿಬಿಯನ್ನರ ದೈಹಿಕ ಬಲಕ್ಕೆ ಹೋಲಿಸಿಕೊಳ್ಳೋಣ.

ಈ ಹಿಂದೆ ಮಣಿಶಂಕರ ಅಯ್ಯರ್‌ ಮುಂತಾದವರು ಹೀಗೆ ʼಸೆಲ್ಫ್‌ ಗೋಲ್‌ʼ ಅಥವಾ ʼಆತ್ಮಹತ್ಯಾ ದಾಳಿʼ ಮಾಡಿಕೊಳ್ಳುತ್ತಿದ್ದರು. ಇಂಥವರು ಸ್ವತಃ ತಮ್ಮ ಪಕ್ಷಕ್ಕೇ ತಮ್ಮ ಹೇಳಿಕೆಗಳಿಂದ ಗಂಡಾಂತರ ತಂದೊಡ್ಡುತ್ತಿರುತ್ತಾರೆ. 2017ರಲ್ಲಿ ಮಣಿಶಂಕರ ಅಯ್ಯರ್‌ ಅವರು ಮೋದಿಯವರನ್ನು ʼನೀಚʼ ಎಂದು ಕರೆದಿದ್ದರು. ಇತ್ತೀಚೆಗೆ ಅವರು ಪಾಕಿಸ್ತಾನದಲ್ಲಿ ನಿಂತು “ಭಾರತದ ಮೂರನೇ ಎರಡು ಭಾಗ ಜನ ಪಾಕ್‌ನತ್ತ ಬರಲು ಸಿದ್ಧರಿದ್ದಾರೆ” ಎಂದಿದ್ದರು. 2007ರಲ್ಲಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ʼಸಾವಿನ ಸರದಾರʼ ಎಂದು ಕರೆದಿದ್ದರು. ಇತ್ತೀಚೆಗೆ ಗುಜರಾತ್‌ ಚುನಾವಣೆ ಸಂದರ್ಭ ಮೋದಿಯವರಿಗೆ ಮಲ್ಲಿಕಾರ್ಜುನ ಖರ್ಗೆಯವರು ʼರಾವಣʼ ಎಂದಿದ್ದರು. ಆದರೆ ಇಂಥ ಹೇಳಿಕೆಗಳೆಲ್ಲ ಹೇಳಿದವರಿಗೇ ತಿರುಮಂತ್ರವಾಗಿ, ನಿಂದಿಸಲ್ಪಟ್ಟವರು ಭಾರಿ ಬಹುಮತದಿಂದ ಗೆದ್ದಿದ್ದರು. ಮತದಾರರ ಮನಶ್ಶಾಸ್ತ್ರ ಅರ್ಥ ಮಾಡಿಕೊಳ್ಳದ ಜನನಾಯಕರು ಇಂಥ ಮಾತುಗಳನ್ನು ಬಳಸುತ್ತಾರೆ. ನಂತರ ನಾಲಿಗೆ ಕಚ್ಚಿಕೊಳ್ಳುತ್ತಾರೆ. ಇದು ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವುದಲ್ಲದೆ, ಅವರ ಚಾರಿತ್ರ್ಯವನ್ನೂ ಹರಾಜಿಗಿಡುತ್ತದೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading

ಪ್ರಮುಖ ಸುದ್ದಿ

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 09 2024
Koo

ಚಂದ್ರನು ಗುರುವಾರವೂ ಮಿಥುನ ರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರಿಗೆ ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಉಂಟಾಗಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕನ್ಯಾ ರಾಶಿಯವರು ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆ ಆಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (09-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 06:20 / ಬಿದಿಗೆ 28:17 ವಾರ: ಗುರುವಾರ
ನಕ್ಷತ್ರ: ಕೃತ್ತಿಕಾ 11:54 ಯೋಗ: ಶೋಭನ 14:39
ಕರಣ: ಭವ 06:20 ಅಮೃತಕಾಲ: ಬೆಳಗ್ಗೆ 09:41 ರಿಂದ 11:11
ದಿನದ ವಿಶೇಷ: ಬಿದಿಗೆ ಚಂದ್ರದರ್ಶನ, ಬೌದ್ಧ ಹೊಸ ವರ್ಷ

ಸೂರ್ಯೋದಯ : 05:56   ಸೂರ್ಯಾಸ್ತ : 06:36

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ವಹಿಸಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಆರೋಗ್ಯ ಮಧ್ಯಮ ಪ್ರಮಾಣದಲ್ಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕೆಲಸ ಮಾಡಿದಲ್ಲಿ ಖಂಡಿತವಾಗಿಯೂ ಯಶಸ್ಸು ಮತ್ತು ಕೀರ್ತಿ ಸಿಗುತ್ತದೆ. ಹಿರಿಯರ ಬೆಂಬಲ, ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ, ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಉಂಟಾಗಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ನಿಮ್ಮ ಆಕರ್ಷಕ ವ್ಯಕ್ತಿತ್ವವು ಇತರರನ್ನು ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ ಲಭಿಸಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆ ಆಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ . ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ ಇರಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ‌ ಕಾಣುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ – ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡಲಿದ್ದೀರಿ. ಈ ವೇಳೆ ನಿಮಗೆ ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನೂ ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭಫಲ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗಬಹುದು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಸನ್ನಿವೇಶದಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿಯಾಗಲಿದೆ. ಅಗತ್ಯ ವಸ್ತುಗಳ ಖರೀದಿ ಸಹಿತ ಖರ್ಚು ಹೆಚ್ಚಾಗಲಿದೆ. ಅಮೂಲ್ಯ ವಸ್ತುಗಳ ಕುರಿತು ಜಾಗ್ರತೆ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ನಿಮ್ಮದಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
SSLC Exam Result 2024 to be declared tomorrow Here are the details
ಶಿಕ್ಷಣ25 mins ago

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Cooking Oils
ಆಹಾರ/ಅಡುಗೆ26 mins ago

Cooking Oils: ಭಾರತೀಯ ಅಡುಗೆ ಶೈಲಿಗೆ ಯೋಗ್ಯವಾದ 7 ಅಡುಗೆ ಎಣ್ಣೆಗಳಿವು

Karnataka Weather
ಕರ್ನಾಟಕ1 hour ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Sam Pitroda
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

dina bhavishya read your daily horoscope predictions for May 09 2024
ಪ್ರಮುಖ ಸುದ್ದಿ2 hours ago

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Pune
ದೇಶ8 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ8 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ8 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ8 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ9 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌