ಹುಬ್ಬಳ್ಳಿ: ದೆಹಲಿ ಮುಖ್ಯಮಂತ್ರಿ ಆಗಿರಲು ಅರವಿಂದ ಕೇಜ್ರಿವಾಲ್ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟೀಕಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಹಿನ್ನೆಲೆಯಲ್ಲಾದರೂ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ
ತತ್ವಗಳಿಲ್ಲದ ಆಪ್
ಎಎಪಿ ಯಾವುದೇ ತತ್ವಗಳಿಲ್ಲದ ಪಕ್ಷವಾಗಿದೆ. ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಬಂಡಾಯವೆದ್ದು ಅಸ್ತಿತ್ವಕ್ಕೆ ಬಂದ ಪಕ್ಷ ಇಂದು ತಾನೇ ಆ ಹಾದಿ ತುಳಿದಿದೆ ಎಂದು ಜೋಶಿ ಆರೋಪಿಸಿದರು.
ಆಪ್ ಇಂದು ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ಪರ ನಿಲ್ಲುವ ಪಕ್ಷವಾಗಿ ಮಾರ್ಪಟ್ಟಿದ್ದು, ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಆಪ್ ನಾಯಕಿ ಸ್ವಾತಿ ಮಲಿವಾಲ್ ಅವರನ್ನು ಬಾಯಿ ಮುಚ್ಚಿಸುವ ಪ್ರಯತ್ನ ಫಲಿಸದ ಕಾರಣ ಆಕೆಯ ಚಾರಿತ್ರ್ಯದ ಮೇಲೆ ಉಳಿದ ಆಪ್ ನಾಯಕರು ಈಗ ಮಸಿ ಬಳಿಯುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ: koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ
ಕೇಜ್ರಿವಾಲ್ ಮನೆಯಲ್ಲಿದ್ದಾಗಲೇ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆದಿರುವುದು ನಾಚಿಕೆಗೇಡಿನ ಸಂಗತಿ. ಸಿಎಂ ಕೇಜ್ರಿವಾಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಚಿವ ಪ್ರಲ್ಹಾದ್ ಜೋಶಿ ಒತ್ತಾಯಿಸಿದರು.