ವಿಸ್ತಾರ ಸಂಪಾದಕೀಯ: ರಾಜಕೀಯ ವಾಗ್ಯುದ್ಧ ಅಂಕೆ ಮೀರದಿರಲಿ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರಾಜಕೀಯ ವಾಗ್ಯುದ್ಧ ಅಂಕೆ ಮೀರದಿರಲಿ

ಅವಹೇಳನ, ದ್ವೇಷ, ರೋಷಾವೇಷವಿಲ್ಲದೆಯೂ ರಾಜಕೀಯ ಪಕ್ಷಗಳು ಪರಸ್ಪರ ಪರಿಣಾಮಕಾರಿಯಾಗಿ ಆರೋಪ ಪ್ರತ್ಯಾರೋಪ ಮಾಡಲು ಸಾಧ್ಯವಿದೆ. ಎದುರಾಳಿಯನ್ನು ಎದುರಿಸುವುದರಲ್ಲೂ ಇಂಥ ಘನತೆ ಇರಬೇಕು.

VISTARANEWS.COM


on

Fight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇತ್ತೀಚೆಗೆ ರಾಜಕಾರಣಿಗಳ ಪರಸ್ಪರ ದೋಷಾರೋಪ, ವಾಕ್‌ ಪ್ರಹಾರಗಳು ಹೆಚ್ಚಿವೆ. ಇದಕ್ಕೆ ಇನ್ನು ಕೆಲವೇ ತಿಂಗಳಲ್ಲಿ ಬರಲಿರುವ ಲೋಕಸಭೆ ಚುನಾವಣೆ ಹಾಗೂ ಸದ್ಯದಲ್ಲೇ ಇರುವ ವಿಧಾನಸಭೆ ಚುನಾವಣೆ. ರಾಜ್ಯ ಸರ್ಕಾರದ ಮಂತ್ರಿಯೊಬ್ಬರು ಮಾಜಿ ಮುಖ್ಯಮಂತ್ರಿಯವರ ವಿರುದ್ಧ ನಾಲಿಗೆ ಸಡಿಲ ಬಿಟ್ಟು ದ್ವೇಷವನ್ನು ಪ್ರಚೋದಿಸುವಂತೆ ಮಾತಾಡಿರುವುದು ವರದಿಯಾಗಿದೆ. ಅದೇ ಪಕ್ಷದ ಇನ್ನೊಬ್ಬ ಶಾಸಕರು ಕೂಡ ಹೀಗೇ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್‌ ವಿಚಾರದಲ್ಲಿ ಈ ಮಾತಿನ ಕೂರಂಬುಗಳು ಹಾರಾಡಿವೆ. ಕೆಲವೇ ದಿನಗಳ ಮುನ್ನ ಇನ್ನೊಂದು ಪಕ್ಷದವರೂ ಈ ಪಕ್ಷದ ಮುಖಂಡರನ್ನು ಪಿಂಪ್‌ಗಳಿಗೆ ಹೋಲಿಸಿದ್ದೂ ವರದಿಯಾಗಿತ್ತು. ಟೀಕೆ, ವಾಕ್‌ಪ್ರಹಾರಗಳು ಲಕ್ಷ್ಮಣರೇಖೆ ದಾಟಿ ಹೋಗದಂತೆ ನೋಡಿಕೊಳ್ಳುವುದು ಖಂಡಿತವಾಗಿಯೂ ಅಗತ್ಯವಿದೆ.

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ವಾಕ್ಸಮರ ಜೋರಾಗುವುದು ಸಹಜ. ಆದರೆ ಅದು ಮಿತಿಯನ್ನು ಮೀರಿ ಅಶ್ಲೀಲವಾಗಿ ಬೈದಾಡಿಕೊಳ್ಳುತ್ತಿರುವುದು, ಎದುರಿನವರ ಮೇಲೆ ದ್ವೇಷ ಸೃಷ್ಟಿಸುವಂತಿರುವುದು ವಿಷಾದಕರ. ವಾಗ್ದಾಳಿಗಳು ಸಭ್ಯತೆಯ ಎಲ್ಲೆ ಮೀರದಂತಿರಬೇಕು, ಆರೋಗ್ಯಕರವಾಗಿರಬೇಕು. ವಾಚಾಮಗೋಚರವಾಗಿ ಬೈದಾಡಿಕೊಳ್ಳುವುದು ರಾಜಕೀಯ ಪಕ್ಷಗಳ ಮುಖಂಡರಿಗೆ ಖಂಡಿತ ಶೋಭೆ ತರದು. ಎಲ್ಲೆ ಮೀರಿದಾಗ ಇವು ಕೋರ್ಟ್‌ ಅಂಗಳವನ್ನೂ ಪ್ರವೇಶಿಸಬಹುದು. ಆಗ ನ್ಯಾಯಾಂಗದಿಂದ ಪಾಠ ಹೇಳಿಸಿಕೊಳ್ಳಬೇಕಾಗುತ್ತದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಕೂಡ ಒಂದು ಪ್ರಕರಣದಲ್ಲಿ, ದ್ವೇಷ ಭಾಷಣ ಮಾಡುವವರು ಯಾರೇ ಆಗಿದ್ದರೂ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರಿಗೆ ಆದೇಶಿಸಿತ್ತು. ಕಳೆದ ವರ್ಷ ನವೆಂಬರ್‌ನಲ್ಲಿ ಇನ್ನೊಂದು ಪ್ರಕರಣದಲ್ಲಿ, ಕೇರಳದ ಮಾಜಿ ಸಚಿವ ಎಂ.ಎನ್‌. ಮಾಣಿ ಅವರಿಗೆ ಕೋರ್ಟ್‌ ಛೀಮಾರಿಯನ್ನೂ ಹಾಕಿತ್ತು. ರಾಜಕಾರಣಿಗಳು ಹಾಗೂ ಉನ್ನತ ಸ್ಥಾನದಲ್ಲಿರುವವರು ಅನ್ಯರ ಬಗ್ಗೆ ಮಾನಹಾನಿಕರವಾದ ಮಾತುಗಳನ್ನು ಆಡಬಾರದು ಎಂದು ನಿರ್ದೇಶಿಸಿತ್ತು. ಇದು ಕೋರ್ಟ್‌ ಹೇಳದೆಯೂ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಅರ್ಥ ಮಾಡಿಕೊಳ್ಳಬೇಕಾದ ಮಾತು.

ರಾಜ್ಯದಲ್ಲಿ ಮಾತ್ರವೇ ಅಲ್ಲ, ರಾಷ್ಟ್ರ ಮಟ್ಟದಲ್ಲೂ ಎದುರಾಳಿಯ ಕೀಳು ನಿಂದನೆ, ಅವಾಚ್ಯ ಪದಗಳ ಬಳಕೆ ಎದ್ದು ಕಾಣಿಸುತ್ತಿದೆ. ಮಧ್ಯಪ್ರದೇಶದ ಕಾಂಗ್ರೆಸ್‌ ಮುಖಂಡನೊಬ್ಬ, ಸಂವಿಧಾನವನ್ನು ಉಳಿಸಲು ನರೇಂದ್ರ ಮೋದಿಯವರನ್ನು ಕೊಲ್ಲುವ ಅಗತ್ಯವಿದೆ ಎಂದು ಹೇಳಿದ್ದ. ಇಂಥ ಮಾತುಗಳು ಅಪರಾಧವೆನಿಸುತ್ತವೆ. 2007ರಲ್ಲಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ʼಸಾವಿನ ಸರದಾರʼ ಎಂದು ಕರೆದಿದ್ದರು. 2017ರಲ್ಲಿ ಮಣಿಶಂಕರ ಅಯ್ಯರ್‌ ಅವರು ಮೋದಿಯವರನ್ನು ʼನೀಚʼ ಎಂದು ಕರೆದಿದ್ದರು. ಇತ್ತೀಚೆಗೆ ಗುಜರಾತ್‌ ಚುನಾವಣೆ ಸಂದರ್ಭ ಮೋದಿಯವರಿಗೆ ಮಲ್ಲಿಕಾರ್ಜುನ ಖರ್ಗೆಯವರು ʼರಾವಣʼ ಎಂದಿದ್ದರು. ಆದರೆ ಇಂಥ ಹೇಳಿಕೆಗಳೆಲ್ಲ ಹೇಳಿದವರಿಗೇ ತಿರುಮಂತ್ರವಾಗಿವೆ. ಮತದಾರರ ಮನಶ್ಶಾಸ್ತ್ರ ಅರ್ಥ ಮಾಡಿಕೊಳ್ಳುವ ಜನನಾಯಕರು ಇಂಥ ಬೈಗುಳಗಳನ್ನು ತಮ್ಮ ಎದುರಾಳಿಗೆ ಬಳಸಲಾರರು. ಇದು ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವುದಲ್ಲದೆ, ಅವರ ಚಾರಿತ್ರ್ಯವನ್ನೂ ಹರಾಜಿಗಿಡುತ್ತದೆ.

ಅವಹೇಳನ, ದ್ವೇಷ, ರೋಷಾವೇಷವಿಲ್ಲದೆಯೂ ರಾಜಕೀಯ ಪಕ್ಷಗಳು ಪರಸ್ಪರ ಪರಿಣಾಮಕಾರಿಯಾಗಿ ಆರೋಪ ಪ್ರತ್ಯಾರೋಪ ಮಾಡಲು ಸಾಧ್ಯವಿದೆ. ಎದುರಾಳಿಯನ್ನು ಎದುರಿಸುವುದರಲ್ಲೂ ಇಂಥ ಘನತೆ ಇರಬೇಕು. ಚುನಾವಣೆ ಸಂದರ್ಭದಲ್ಲಿ ಎಂಥ ಮಾತುಕತೆ, ವಾಗ್ವಾದ ನಡೆಯಬೇಕು? ಸರ್ಕಾರದ ಪ್ರಗತಿ, ಭ್ರಷ್ಟಾಚಾರ, ಸಾಧನೆ, ವೈಫಲ್ಯಗಳ ಬಗ್ಗೆ ಅರ್ಥಪೂರ್ಣ ಚರ್ಚೆ ಆಗಬೇಕು. ಆಡಳಿತ ಪಕ್ಷ ಸರಿಯಾಗಿ ಕೆಲಸ ಮಾಡಿದೆಯೇ ಇಲ್ಲವೇ ಎಂದು ಪ್ರತಿಪಕ್ಷ ವಿಮರ್ಶಿಸಬೇಕು. ತಾನು ಮಾಡಿರುವ ಕೆಲಸಗಳಿಗೆ ಆಡಳಿತ ಪಕ್ಷ ಕನ್ನಡಿ ಹಿಡಿಯಬೇಕು, ಪ್ರತಿಪಕ್ಷದ ವೈಫಲ್ಯಗಳನ್ನು ಸಾಣೆಗೆ ಹಿಡಿಯಬೇಕು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಟ್ರಾಫಿಕ್ ದಂಡ ವಿನಾಯಿತಿ ಕ್ರಾಂತಿಕಾರಕ ನಿರ್ಧಾರ

ಎದುರಾಳಿಯನ್ನು ವೈಯಕ್ತಿಕವಾಗಿ ದೂರುವ, ಅವಹೇಳನ ಮಾಡುವ, ಪಾಠ ಕಲಿಸಲು ಕರೆ ಕೊಡುವ ಅಗತ್ಯವೇ ಇಲ್ಲ. ಆಗ ಮಾತ್ರ ರಾಜಕೀಯ ವಾಗ್ವಾದಗಳು ಅರ್ಥಪೂರ್ಣವಾಗುತ್ತವೆ. ಕರ್ನಾಟಕಕ್ಕೆ ಒಂದು ಸಭ್ಯ ರಾಜಕೀಯ ಪರಂಪರೆಯಿದೆ. ಇಲ್ಲಿನ ರಾಜಕೀಯ ವಾಗ್ಯುದ್ಧಗಳು ಸಭ್ಯತೆಯ ಆವರಣದೊಳಗಿವೆ. ಈ ಪರಂಪರೆಗೆ ಧಕ್ಕೆ ಆಗದಿರಲಿ. ಕರ್ನಾಟಕದ ರಾಜಕೀಯವು ಬಿಹಾರ, ಉತ್ತರ ಪ್ರದೇಶದ ರಾಜಕಾರಣದಂತೆ ಆಗುವುದು ಬೇಡ. ಹೊಸ ತಲೆಮಾರಿನ ರಾಜಕಾರಣಿಗಳಿಗೆ ನಕಾರಾತ್ಮಕ ರಾಜಕಾರಣದ ಶೈಲಿಯ ಸಂದೇಶ ರವಾನೆ ಆಗದಿರಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Lockup Death: ಮೊದಲಿಗೆ ಮಗ ಲೋ ಬಿಪಿಯಿಂದ ಮೃತಪಟ್ಟಿದ್ದಾನೆ ಎಂದು ಹೇಳಿದ್ದ ಮೃತ ಯುವಕ ಆದಿಲ್‌ ತಂದೆ, ಇದೀಗ ಲಾಕಪ್‌ ಡೆತ್‌ ಆಗಿದೆ ಎಂದು ಹೇಳಿದ್ದಾರೆ. ಅದೇ ರೀತಿ ಆದಿಲ್‌ ಪತ್ನಿ ಕೂಡ, ತನ್ನ ಪತಿಯನ್ನು ಪೊಲೀಸರೇ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Koo

ದಾವಣಗೆರೆ: ಆದಿಲ್ ಲಾಕಪ್ ಡೆತ್ ಪ್ರಕರಣಕ್ಕೆ (Lockup Death) ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ವಿಚಾರಣೆ ವೇಳೆ ಪೊಲೀಸರ ಹಲ್ಲೆಯಿಂದ ಯುವಕ ಮೃತಪಟ್ಟಿದ್ದ ಎಂಬ ಆರೋಪಗಳು ಕೇಳಿಬಂದಿದ್ದರಿಂದ ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು ಆಗಿತ್ತು. ಆದರೆ, ಮೊದಲಿಗೆ ಮಗನದ್ದು ಲಾಕಪ್‌ ಡೆತ್‌ ಅಲ್ಲ, ಲೋ ಬಿಪಿಯಿಂದ ಮೃತಪಟ್ಟಿದ್ದಾನೆ ಎಂದು ಹೇಳಿದ್ದ ಮೃತ ಯುವಕ ಆದಿಲ್‌ ತಂದೆ ಖಲೀಮುಲ್ಲಾ, ಇದೀಗ ಮತ್ತೆ ಉಲ್ಟಾ ಹೊಡೆದಿದ್ದಾರೆ.

ಆದಿಲ್ ಸಾವು ಪ್ರಕರಣದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ್ದ ಖಲೀಮುಲ್ಲಾ ಅವರು, ಮೊದಲಿಗೆ ಮಗ ಕಡಿಮೆ ರಕ್ತದೊತ್ತಡದಿಂದ (Low Blood Pressure) ಮೃತಪಟ್ಟಿದ್ದಾನೆ. ಅವನಿಗೆ ಯಾವುದೇ ರೀತಿಯಾದ ಮೂರ್ಛೆ ರೋಗ ಇರಲಿಲ್ಲ. ಆತನ ಸಾವಿನ ಬಗ್ಗೆ ನಮಗೆ ಯಾವುದೇ ರೀತಿ ಅನುಮಾನ ಇಲ್ಲ. ನನ್ನ ಮಗ ಕಾರ್ಪೇಂಟರ್ ಕೆಲಸ ಮಾಡಿಕೊಂಡಿದ್ದ. ಯಾವುದೇ ಮಟ್ಕಾ ದಂಧೆ ಮಾಡುತ್ತಿರಲಿಲ್ಲ. ನೆನ್ನೆ ಮಗ ಸಾವನ್ನಪ್ಪಿದ್ದಕ್ಕೆ ನ್ಯಾಯ ಕೇಳಲು ಪೊಲೀಸ್‌ ಠಾಣೆಗೆ ಹೋಗಿದ್ದೆವು. ಆದರೆ, ಯಾರು ಕಲ್ಲು ಹೊಡೆದಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದ್ದರು.

ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಈ ವಯಸ್ಸಲ್ಲಿ ನನಗೆ ದುಡಿಯೋಕೆ ಆಗುತ್ತಾ? ಸರ್ಕಾರ ನನಗೆ ಪರಿಹಾರ ಕೊಡಬೇಕು ಎಂದ ಮೃತ ಆದಿಲ್ ತಂದೆ ಖಲೀಮುಲ್ಲಾ ಮನವಿ ಮಾಡಿದ್ದರು. ಆದರೆ, ಇದೀಗ ತಾವು ಗಾಬರಿಯಲ್ಲಿ ಬೆಳಗ್ಗೆ ಏನೇನೋ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ನಾನು ಗಾಬರಿಗೊಂಡು ಆ ರೀತಿ ಹೇಳಿದ್ದೆ, ಉಲ್ಟಾ ಹೊಡೆದ ತಂದೆ

ಮೊದಲಿಗೆ ಮಗನದ್ದು ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಆದಿಲ್‌ ತಂದೆ ಖಲೀಮುಲ್ಲಾ, ಮತ್ತೆ ಉಲ್ಟಾ ಹೊಡೆದಿದ್ದಾರೆ. ಇದೀಗ ನನ್ನ ಮಗ ಲೋ ಬಿಪಿಯಿಂದ ಸಾವನ್ನಪ್ಪಿಲ್ಲ, ನಾನು ಗಾಬರಿಗೊಂಡು ಆ ರೀತಿ ಬೆಳಗ್ಗೆ ಹೇಳಿದ್ದೆ. ನನ್ನ ಮಗ ಲಾಕಪ್ ಡೆತ್‌ನಿಂದ ಸಾವನ್ನಪ್ಪಿರುವ ಬಗ್ಗೆ ಅನುಮಾನ ಇದೆ. ನನ್ನ ಬಿಪಿಯನ್ನು ನನ್ನ ಮಗನಿಗೆ ಇದೆ ಎಂದು ಹೇಳಿದೆ. ಮಗನ ಸಾವಿನಿಂದ ದಿಗ್ಭ್ರಮೆ ಆಗಿದೆ. ನನ್ನ ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿದರು.

ನನ್ನ ಮಗನಿಗೆ ಮಟ್ಕಾ ದಂಧೆ ಜತೆ ಸಂಬಂಧ ಇಲ್ಲ, ಬಡಗಿ ಕೆಲಸ ಮಾಡುತ್ತಿದ್ದ. ನನ್ನ ಸೊಸೆ ಗಾಬರಿಯಿಂದ ಮಟ್ಕಾ ಆಡುತ್ತಿದ್ದ ಎಂದು ಹೇಳಿದ್ದಾಳೆ ಎಂದು ತಂದೆ ಹೇಳಿದ್ದಾರೆ.

ಇದನ್ನೂ ಓದಿ | Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ನನ್ನ ಗಂಡನನ್ನು ಪೊಲೀಸರೇ ಹೊಡೆದು ಕೊಂದಿದ್ದಾರೆ: ಪತ್ನಿ ಆಕ್ರೋಶ

ಮೃತ ಆದಿಲ್ ಪತ್ನಿ ಹೀನಾಬಾನು ಪೊಲೀಸರ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ನನ್ನ ಗಂಡ ಮಟ್ಕಾ ಆಡಿಸುತ್ತಿದ್ದದ್ದು ಸತ್ಯ. ಆದರೆ, ಪೊಲೀಸರು ಪ್ರತಿ ತಿಂಗಳು ಕಮಿಷನ್ ವಸೂಲು ಮಾಡುತ್ತಿದ್ದರು. ಒಂದು ತಿಂಗಳು ಕೊಡದೆ ಇದಿದ್ದಕ್ಕೆ ಸಿವಿಲ್ ಡ್ರೆಸ್‌ನಲ್ಲಿ ಬಂದು ಪೊಲೀಸರು ಕರೆದುಕೊಂಡು ಹೋದರು. ನೆನ್ನೆ ಸಂಜೆ ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀರಾ ಎಂದರೆ ಹೇಳಲಿಲ್ಲ. ನನ್ನ ಗಂಡನನ್ನು ಪೊಲೀಸರೇ ಹೊಡೆದಿದ್ದಾರೆ. ನನ್ನ ಗಂಡನ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದಾರೆ.

ಪೊಲೀಸರಿಂದ ನನ್ನ ಗಂಡ ಸಾಕಷ್ಟು ಕಿರುಕುಳ ಅನುಭವಿಸಿದ್ದಾನೆ. ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಬೇಕಾಬಿಟ್ಟಿ ಹೊಡೆದಿದ್ದಾರೆ. ಹೊಡೆದಾದ ಮೇಲೆ ಮೂರ್ಛೆ ರೋಗ ಎಂದು ಸುಳ್ಳು ಹೇಳಿದ್ದಾರೆ. ಈಗ ನನ್ನ ಮಕ್ಕಳು, ನನಗೆ ಯಾರು ಗತಿ? ಪೊಲೀಸರು ನನ್ನ ಗಂಡನ ಬದುಕಿಸಿ ಕೊಡ್ತಾರಾ? ಇಡೀ ಮನೆ ಹುಡುಕಿದರೂ ಒಂದು ಗುಳಿಗೆ ಸಿಗಲ್ಲ. ನನ್ನ ಗಂಡನಿಗೆ ಯಾವುದೇ ರೋಗ ಇರಲಿಲ್ಲ ಎಂದು ಪತ್ನಿ ಹೀನಾಬಾನು ಹೇಳಿದ್ದಾರೆ.

Continue Reading

ಕ್ರೀಡೆ

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

KKR vs SRH Final 2024: ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

VISTARANEWS.COM


on

KKR vs SRH Final 2024
Koo

ಚೆನ್ನೈ: ಈ ಬಾರಿಯ ಐಪಿಎಲ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ತಂಡಗಳು ಮತ್ತೊಮ್ಮೆ ಸೆಣಸಾಟ ನಡೆಸಲು ಸಜ್ಜಾಗಿದೆ. ನಾಳೆ (ಭಾನುವಾರ) ನಡೆಯುವ ಫೈನಲ್​ ಪಂದ್ಯದಲ್ಲಿ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಲಕ್ಕಿ ಕ್ಯಾಪ್ಟನ್​ ಕಮಿನ್ಸ್​


ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಇದನ್ನೂ ಓದಿ IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಲೀಗ್​ ಹಂತದ ಪಂದ್ಯದಲ್ಲಿ ವಿಫಲರಾಗಿದ್ದರೂ ಕೂಡ ಮಹತ್ವದ ಕ್ವಾಲಿಫೈಯರ್​ ಪಂದ್ಯದಲ್ಲಿ ಘಾತಕ ದಾಳಿ ನಡೆಸಿ ಮಿಂಚಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಆರೋಗ್ಯ

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Life Expectancy: ಕೊರೊನಾ ಸೋಂಕಿನ ಪರಿಣಾಮವು ಜಗತ್ತಿನಾದ್ಯಂತ ಒಂದೇ ರೀತಿಯಾಗಿ ಪರಿಣಾಮ ಬೀರಿಲ್ಲ. ಆಯಾ ದೇಶ, ಖಂಡಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರಿದೆ. ಅಮೆರಿಕ ಹಾಗೂ ಆಗ್ನೇಯ ಏಷ್ಯಾದ ಜನರ ಸರಾಸರಿ ಜೀವಿತಾವಧಿಯು 3 ವರ್ಷ ಕಡಿಮೆಯಾಗಿದೆ. ಆರೋಗ್ಯಯುತ ಜೀವನವು ಎರಡೂವರೆ ವರ್ಷ ಕಡಿಮೆಯಾಗಿದೆ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆಯು ವರದಿ ನೀಡಿದೆ.

VISTARANEWS.COM


on

Life Expectancy
Koo

ನ್ಯೂಯಾರ್ಕ್‌: ಚೀನಾದಲ್ಲಿ ಹರಡಿ, ಜಗತ್ತಿನಾದ್ಯಂತ ಪಸರಿಸಿ, ಕೋಟ್ಯಂತರ ಜನರ ಸಾವಿಗೆ ಕಾರಣವಾದ ಕೊರೊನಾ (Covid 19) ಮಹಾಮಾರಿಯ ಹಾವಳಿ ಕಡಿಮೆಯಾದರೂ ಅದು ಜನರ ಜೀವನದ ಮೇಲೆ ಬೀರುವ ಪರಿಣಾಮವು ಇನ್ನೂ ನಿಂತಿಲ್ಲ. ಕೊರೊನಾ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ, ರೆಮ್ಡಿಸಿವಿರ್‌ ಪಡೆದವರು, ಐಸಿಯುಗೆ ದಾಖಲಾಗಿ ಜೀವಂತವಾಗಿ ಹೊರಬಂದವರು ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಬೆನ್ನಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯು (WHO) ಭೀಕರ ವರದಿ ಬಿಡುಗಡೆ ಮಾಡಿದ್ದು, ಕೊರೊನಾದಿಂದ ಜಾಗತಿಕವಾಗಿ ಜನರ ಜೀವಿತಾವಧಿಯು (Life Expectancy) 2 ವರ್ಷ ಕಡಿಮೆಯಾಗಿದೆ ಎಂದು ತಿಳಿಸಿದೆ.

“2019ರಿಂದ 2021ರ ಅವಧಿಯಲ್ಲಿ ಕೊರೊನಾ ಮಹಾಮಾರಿಯು ಜಗತ್ತಿನಾದ್ಯಂತ ಭೀಕರ ಪರಿಣಾಮ ಉಂಟುಮಾಡಿತು. ಇದರಿಂದಾಗಿ 2019-21ರ ಅವಧಿಯಲ್ಲಿ ಜಗತ್ತಿನಾದ್ಯಂತ ಮನುಷ್ಯರ ಸರಾಸರಿ ಜೀವಿತಾವಧಿಯು 71.4 ವರ್ಷಕ್ಕೆ ಇಳಿದಿದೆ. ಜನರ ಸರಾಸರಿ ಜೀವಿತಾವಧಿಯು 1.8 ವರ್ಷ ಕಡಿಮೆಯಾಗಿದೆ. ಅಷ್ಟೇ ಅಲ್ಲ, ಇದೇ ಅವಧಿಯಲ್ಲಿ ಜನರ ಆರೋಗ್ಯಯುತ ಜೀವನ ಪ್ರಮಾಣದಲ್ಲೂ 1.5 ವರ್ಷ ಕಡಿಮೆಯಾಗಿದ್ದು, 61.9 ವರ್ಷಕ್ಕೆ ಕುಸಿದಿದೆ” ಎಂಬುದಾಗಿ ಡಬ್ಲ್ಯೂಎಚ್‌ಒ ವರದಿಯಿಂದ ತಿಳಿದುಬಂದಿದೆ.

ಏಷ್ಯಾ ಭಾಗಕ್ಕೇ ತೀವ್ರ ಪರಿಣಾಮ

“ಕೊರೊನಾ ಸೋಂಕಿನ ಪರಿಣಾಮವು ಜಗತ್ತಿನಾದ್ಯಂತ ಒಂದೇ ರೀತಿಯಾಗಿ ಪರಿಣಾಮ ಬೀರಿಲ್ಲ. ಆಯಾ ದೇಶ, ಖಂಡಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರಿದೆ. ಅಮೆರಿಕ ಹಾಗೂ ಆಗ್ನೇಯ ಏಷ್ಯಾದ ಜನರ ಸರಾಸರಿ ಜೀವಿತಾವಧಿಯು 3 ವರ್ಷ ಕಡಿಮೆಯಾಗಿದೆ. ಆರೋಗ್ಯಯುತ ಜೀವನವು ಎರಡೂವರೆ ವರ್ಷ ಕಡಿಮೆಯಾಗಿದೆ. ಇದು ಜಗತ್ತಿನಲ್ಲೇ ಕೊರೊನಾದಿಂದ ಅತಿ ಹೆಚ್ಚು ಪರಿಣಾಮ ಬೀರಿದ ಭಾಗಗಳಾಗಿವೆ. ವೆಸ್ಟರ್ನ್‌ ಪೆಸಿಫಿಕ್‌ ರೀಜನ್‌ನಲ್ಲಿ ಅತಿ ಕಡಿಮೆ ಪರಿಣಾಮ ಬೀರಿದೆ. ಈ ಭಾಗದಲ್ಲಿ ಜನರ ಸರಾಸರಿ ಜೀವಿತಾವಧಿಯು ಶೇ.0.1ರಷ್ಟು ಕಡಿಮೆಯಾಗಿದೆ” ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

ಮತ್ತೊಂದು ಸೋಂಕು ಸೃಷ್ಟಿಸಿದ ಚೀನಾ

ಕೊರೊನಾ ಮೂಲಕ ಕೋಟ್ಯಂತರ ಜನರ ಪ್ರಾಣಕ್ಕೆ ಕುತ್ತು ತಂದ ಚೀನಾ ಈಗ ಮತ್ತೊಂದು ಜೈವಿಕ ಯುದ್ಧಕ್ಕೆ ಮುಂದಾಗಿದೆ. ಮಾರಣಾಂತಿಕ ಎಬೋಲಾ ರೂಪಾಂತರಿ ಸೋಂಕನ್ನು (Ebola Mutant Virus) ಚೀನಾದ ವಿಜ್ಞಾನಿಗಳು ಸೃಷ್ಟಿಸಿದ್ದು, ಇದರಿಂದ ಜಗತ್ತಿಗೇ ಆತಂಕ ಎದುರಾಗಿದೆ. ಹೆಬೈ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ವಿಜ್ಞಾನಿಗಳು ಎಬೋಲಾ ರೂಪಾಂತರಿ ವೈರಸ್‌ಅನ್ನು ಸೃಷ್ಟಿಸಿದ್ದಾರೆ. ಹ್ಯಾಮ್‌ಸ್ಟರ್‌ಗಳಿಗೆ (ಕಿರುಕಡಿಗ-ಇಲಿಯಂತ ಚಿಕ್ಕ ಪ್ರಾಣಿ) ವೈರಸ್‌ ಇಂಜೆಕ್ಟ್‌ ಮಾಡಿದರೆ, ಮೂರೇ ದಿನಗಳಲ್ಲಿ ಅವರು ಸಾಯುತ್ತವೆ ಎಂದು ಸೈನ್ಸ್‌ ಡೈರೆಕ್ಟ್‌ ಜರ್ನಲ್‌ನಲ್ಲಿ ವರದಿ ಪ್ರಕಟವಾಗಿದೆ.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

Continue Reading

ರಾಜಕೀಯ

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

PM Modi: 2023ರ ಏಪ್ರಿಲ್‌ನಲ್ಲಿ “ಹುಲಿ ಯೋಜನೆ – 50” ಕಾರ್ಯಕ್ರಮವನ್ನು ನಡೆಸಲಾಗಿತ್ತು. ಆದರೆ, ಆ ಸಮಯದಲ್ಲಿ ವಿಧಾನಸಭಾ ಚುನಾವಣೆ ಇದ್ದಿದ್ದರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು. ಅಲ್ಲದೆ, ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದು ಈಶ್ವರ ಖಂಡ್ರೆ ವಿವರಿಸಿದ್ದಾರೆ.

VISTARANEWS.COM


on

Tiger Project PM Modi hotel bill in Karnataka dues Rs 6 crore and Centre vs state departments clash
Koo

ಬೆಂಗಳೂರು: ಕಳೆದ ವರ್ಷ ಏಪ್ರಿಲ್‌ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 (Tiger Project 50) ಕಾರ್ಯಕ್ರಮಕ್ಕಾಗಿ ಕಳೆದ ವರ್ಷ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಆತಿಥ್ಯಕ್ಕೆ ಸಂಬಂಧಪಟ್ಟಂತೆ 6.33 ಕೋಟಿ ರೂಪಾಯಿ ವೆಚ್ಚವಾಗಿತ್ತು. ಇದರಲ್ಲಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ. ಇದರಲ್ಲಿ ಖಾಸಗಿ ಹೋಟೆಲ್‌ ಬಿಲ್‌ (Hotel Bill) ಕೂಡಾ ಇದೆ. ಆದರೆ, ಇದರ ವೆಚ್ಚವನ್ನು ಯಾರು ಹೊರುವುದು? ಎಂಬುದೇ ಈಗ ಜಟಾಪಟಿಗೆ ಕಾರಣವಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ್ದೇ (National Tiger Conservation Authority) ಹೊಣೆ ಎಂದು ರಾಜ್ಯ ಅರಣ್ಯ ಇಲಾಖೆ (Karnataka State Forest Department) ಹೇಳುತ್ತಿದೆ. ಈಗ ಈ ಬಿಲ್ ಬಾಕಿ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ (Ishwar Khandre) ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿ (PM Modi) ಆತಿಥ್ಯ ವೆಚ್ಚಕ್ಕೆ ಸಂಬಂಧಪಟ್ಟಂತೆ ಇರುವ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Rs 6 crore spent on hosting PM Modi visit to Bandipur Centre and state departments tussle over bill arrears

ಬೆಂಗಳೂರಿನಲ್ಲಿ ಶನಿವಾರ (ಮೇ 25) ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, 2023ರ ಏಪ್ರಿಲ್‌ನಲ್ಲಿ “ಹುಲಿ ಯೋಜನೆ – 50” ಕಾರ್ಯಕ್ರಮವನ್ನು ನಡೆಸಲಾಗಿತ್ತು. ಆದರೆ, ಆ ಸಮಯದಲ್ಲಿ ವಿಧಾನಸಭಾ ಚುನಾವಣೆ ಇದ್ದಿದ್ದರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದು ವಿವರಿಸಿದರು.

ಎನ್.ಟಿ.ಸಿ.ಎ. ಖರ್ಚಿನ ಹೊಣೆ ಹೊತ್ತಿತ್ತು

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದು ಈಶ್ವರ ಖಂಡ್ರೆ ವಿವರಿಸಿದರು.

Rs 6 crore spent on hosting PM Modi visit to Bandipur Centre and state departments tussle over bill arrears

ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6.33 ಕೋಟಿ ರೂಪಾಯಿ ಆಗಿದೆ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯ ವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇದನ್ನೂ ಓದಿ: Prajwal Revanna Case: ವಿಡಿಯೊ ವೈರಲ್ ಅಪರಾಧದ ಸೆಕ್ಷನ್ ಹೇಳಿದ ಎಚ್‌ಡಿಕೆ; ಸಿಎಂ ಕುರ್ಚಿಯಲ್ಲಿ ಊಸರವಳ್ಳಿ ಎಂದು ಕಿಡಿ

ಪತ್ರ ಬರೆದರೂ ಬಾಕಿ ಹಣ ನೀಡಿಲ್ಲ

ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಈಶ್ವರ ಖಂಡ್ರೆ ಹೇಳಿದರು.

Continue Reading
Advertisement
ಕರ್ನಾಟಕ9 mins ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್10 mins ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ10 mins ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್12 mins ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ25 mins ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ38 mins ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ47 mins ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ48 mins ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Karnataka Rain
ಮಳೆ51 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Munawar Faruqui hospitalised Bigg Boss 17 winner
ಸಿನಿಮಾ1 hour ago

Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ51 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌