Site icon Vistara News

Vistara News Polling Booth: ಚಿತ್ರದುರ್ಗದಲ್ಲಿ ಮತ್ತೆ ಬಿಜೆಪಿ ಮೇಲುಗೈ; ಕಾಂಗ್ರೆಸ್‌ಗೆ ಹಿನ್ನಡೆ

Chitradurga's Vistara news polling booth

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಶುಕ್ರವಾರ (ಮಾ. 22) ನಡೆಸಿದ ಪೋಲಿಂಗ್‌ ಬೂತ್‌ (Vistara news polling booth) ಜನಮತಗಣನೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಮೇಲುಗೈ ಸಾಧಿಸಿದೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಇವುಗಳ ಪೈಕಿ ಒಟ್ಟು 5534 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ. 66ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇ.33ರಷ್ಟು ಜನರು ಕಾಂಗ್ರೆಸ್‌ ಪರ ಒಲವು ತೋರಿದ್ದು, ಇತರರಿಗೆ 47 ವೋಟ್ ಬಂದಿದೆ.

ವಿಸ್ತಾರ ನ್ಯೂಸ್‌ ನಡೆಸಿದ ಈ ಸಮೀಕ್ಷೆಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾವಿರಾರು ಕರೆಗಳು ಬಂದಿವೆ. ಅದರಲ್ಲಿ ಸ್ವೀಕರಿಸಿದ ಒಟ್ಟು 5534 ಕರೆಗಳ ಪೈಕಿ ಬಿಜೆಪಿಗೆ 3660 ಮತ, ಕಾಂಗ್ರೆಸ್‌ಗೆ 1827 ಮತ ಹಾಗೂ ಇತರರಿಗೆ 47 ಮತ ಬಂದಿವೆ. ಹೀಗಾಗಿ ಇಲ್ಲಿ ಮತ್ತೊಮ್ಮೆ ಬಿಜೆಪಿಯೇ ಮೇಲುಗೈ ಸಾಧಿಸಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು: 5534
ಬಿಜೆಪಿ: 3660 (ಶೇ.66)
ಕಾಂಗ್ರೆಸ್: 1827 (ಶೇ.33)
ಇತರೆ: 47 (ಶೇ.1)

ಕ್ಷೇತ್ರದ ಬಿಜೆಪಿಯಲ್ಲಿ ಹಾಲಿ ಸಂಸದ ಎ.ನಾರಾಯಣಸ್ವಾಮಿ, ಜನಾರ್ದನಸ್ವಾಮಿ, ಮಾದಾರ ಚೆನ್ನಯ್ಯ ಸ್ವಾಮೀಜಿ, ಎಂ.ಸಿ.ರಘುಚಂದನ್‌ ಆಕಾಂಕ್ಷಿಗಳಾಗಿದ್ದಾರೆ. ಅದೇ ರೀತಿ ಕಾಂಗ್ರೆಸ್‌ನಲ್ಲಿ ಬಿ.ಎನ್‌.ಚಂದ್ರಪ್ಪ ಅವರಿಗೆ ಅಧಿಕೃತವಾಗಿ ಟಿಕೆಟ್ ಘೋಷಿಸಲಾಗಿದೆ. ಮಾಜಿ ಸಚಿವ ಎಚ್‌.ಆಂಜನೇಯ, ವಿನಯ್‌ ತಿಮ್ಮಾಪುರ ಹಾಗೂ ಜೆ.ಜೆ.ಹಟ್ಟಿ ಡಾ.ತಿಪ್ಪೇಸ್ವಾಮಿ ಕೈ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು.

ಕೋಟೆನಾಡಿನಲ್ಲಿ 2004ರಲ್ಲಿ ಎನ್‌.ವೈ.ಹನುಮಂತಪ್ಪ (ಕಾಂಗ್ರೆಸ್‌), 2009ರಲ್ಲಿ ಜನಾರ್ದನಸ್ವಾಮಿ (ಬಿಜೆಪಿ), 2014ರಲ್ಲಿ ಬಿ.ಎನ್‌.ಚಂದ್ರಪ್ಪ (ಕಾಂಗ್ರೆಸ್‌), 2019ರಲ್ಲಿ ಎ.ನಾರಾಯಣಸ್ವಾಮಿ(ಬಿಜೆಪಿ) ಗೆಲುವು ಸಾಧಿಸಿದ್ದರು. ಇದೀಗ ಬಿಡುಗಡೆಯಾಗಿರುವ ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ ಫಲಿತಾಂಶದ ಪ್ರಕಾರ, ಎಸ್‌ಸಿ ಮೀಸಲು ಕ್ಷೇತ್ರವಾದ ಚಿತ್ರದುರ್ಗದಲ್ಲಿ ಮತ್ತೊಮ್ಮೆ ಬಿಜೆಪಿ ಪರ ಹೆಚ್ಚಿನ ಜನ ಬೆಂಬಲ ವ್ಯಕ್ತವಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ | Vistara news polling booth : ದಾವಣಗೆರೆಯಲ್ಲಿ ಕೈಗೆ ಜೈ, ಸಿದ್ದೇಶ್ವರ್‌ ಸಾಮ್ರಾಜ್ಯಕ್ಕೆ ಹಿನ್ನಡೆ?

ಮಾರ್ಚ್‌ 23, ಶನಿವಾರ ಯಾವ ಕ್ಷೇತ್ರ?

ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಚಿಕ್ಕೋಡಿ ಮತ್ತು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ವಿಜಯಪುರ ಕ್ಷೇತ್ರದ ಜನ ಫೋನ್‌ ಮಾಡಿ ಓಟ್‌ ಮಾಡಬಹುದು. ಮಧ್ಯಾಹ್ನ 2 ಮತ್ತು ರಾತ್ರಿ 8 ಗಂಟೆಗೆ ಎರಡೂ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth : ಬೀದರ್‌ನಲ್ಲಿ ಹೆಚ್ಚಿದ ಕಾಂಗ್ರೆಸ್‌ ಖದರ್‌; ಹಾಲಿ ಸಂಸದ ಖೂಬಾಗೆ ಹಿನ್ನಡೆ?

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Exit mobile version