Vistara News Polling Booth: ಚಾಮರಾಜನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಟಫ್‌ ಫೈಟ್; ಯಾರಿಗೆಷ್ಟು ಮತ? - Vistara News

ರಾಜಕೀಯ

Vistara News Polling Booth: ಚಾಮರಾಜನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಟಫ್‌ ಫೈಟ್; ಯಾರಿಗೆಷ್ಟು ಮತ?

Vistara News Polling Booth: ವಿಸ್ತಾರ ಪೋಲಿಂಗ್ ಬೂತ್‌ಗೆ ಸಾವಿರಾರು ಕರೆಗಳು ಬಂದಿದ್ದು, ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇರುವುದು ಕಂಡುಬಂದಿದೆ. ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಮತಗಳು ಬಂದಿವೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Tough fight between BJP and Congress in Chamarajanagar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಮಂಗಳವಾರ (ಮಾ.19) ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ ಸಮೀಕ್ಷೆಯಲ್ಲಿ (Vistara news polling booth) ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಕಠಿಣ ಸ್ಪರ್ಧೆ ಇರುವುದು ಕಂಡು ಬಂದಿದೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಅವುಗಳಲ್ಲಿ ಒಟ್ಟು 5777 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ. 54ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇಕಡಾ 45ರಷ್ಟು ಜನರು ಕಾಂಗ್ರೆಸ್‌ ಪರ ಒಲವು ತೋರಿದ್ದಾರೆ. ಉಳಿದಂತೆ ಶೇ. 1ರಷ್ಟು ಜನ ಇತರ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ.

ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ಸಂಗ್ರಹಿಸಿದ ಜನಾಭಿಪ್ರಾಯದ ಪ್ರಕಾರ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಬಿಜೆಪಿ-ಕಾಂಗ್ರೆಸ್ ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ. ಬಿಜೆಪಿಗೆ 3127 ಮತದಾರರು ಮತ ನೀಡಿದ್ದು, ಕಾಂಗ್ರೆಸ್‌ ಪಕ್ಷಕ್ಕೆ 2594 ಮತಗಳು ಬಂದಿವೆ. ಇತರ ಪಕ್ಷಗಳ ಅಭ್ಯರ್ಥಿಗಳಿಗೆ 56 ಮತಗಳು ಸಿಕ್ಕಿವೆ.

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು: 5777
ಬಿಜೆಪಿ: 3127 (ಶೇ.54)
ಕಾಂಗ್ರೆಸ್: 2594 (ಶೇ.45)
ಇತರೆ: 56 (ಶೇ.1)

ಇದನ್ನೂ ಓದಿ | Vistara News Polling Booth: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯೇ ದೊಡ್ಡಣ್ಣ!

ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್‌. ಬಾಲರಾಜ್‌ ಕಣಕ್ಕಿಳಿಯುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನಲ್ಲಿ ದರ್ಶನ್‌ ಧ್ರುವನಾರಾಯಣ್, ಸುನೀಲ್‌ ಬೋಸ್‌, ಜಿ.ಎನ್.ನಂಜುಂಡಸ್ವಾಮಿ ಹಾಗೂ ಡಿ.ಎನ್‌.ನಟರಾಜು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಈ ಮೀಸಲು ಕ್ಷೇತ್ರದಲ್ಲಿ 2004ರಲ್ಲಿ ಜೆಡಿಎಸ್‌ನ ಎಂ. ಶಿವಣ್ಣ, 2009 ಮತ್ತು 2014ರಲ್ಲಿ ಕಾಂಗ್ರೆಸ್‌ನ ಧ್ರುವನಾರಾಯಣ, 2019ರಲ್ಲಿ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್‌ಪ್ರಸಾದ್‌ ಅವರು ಗೆಲುವು ಸಾಧಿಸಿದ್ದರು.

ಕ್ಷೇತ್ರದಲ್ಲಿ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಹಾಲಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ಹೀಗಾಗಿ ಈ ಬಾರಿ ಅವರ ಬದಲಿಗೆ ಕ್ಷೇತ್ರದಿಂದ ಮಾಜಿ ಶಾಸಕ ಎಸ್. ಬಾಲರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದೀಗ ವಿಸ್ತಾರ ಪೋಲಿಂಗ್‌ ಬೂತ್‌ ಸಮೀಕ್ಷೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಕಠಿಣ ಸ್ಪರ್ಧೆ ಇರುವುದು ಕಂಡು ಬಂದಿದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ | Vistara News Polling Booth: ತುಮಕೂರು ಕ್ಷೇತ್ರದಲ್ಲಿ ಮತ್ತೆ ಬಿಜೆಪಿಗೆ ಜೈ ಎಂದ ಮತದಾರರು!

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

PM Narendra Modi Live: ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇಂದು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

PM Narendra modi in Bagalakote for Election Campaign and here is Live telecast
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆಯಲ್ಲಿ ಮೋದಿ ಸಮಾವೇಶದ ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

ಪ್ರಧಾನಿ ನರೇಂದ್ರ ಮೋದಿ ಅವರ ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

Continue Reading

ಕರ್ನಾಟಕ

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Srinivas Prasad:ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Koo

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) (Srinivas Prasad) ಅವರು ತೀವ್ರ ಹೃದಯಾಘಾತದಿಂದ (Heart Aattack) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡರಾತ್ರಿ 1:20ಕ್ಕೆ (Manipal Hospital ) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗತ್ತು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾಹಿತಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ರೀತಿಯಲ್ಲಿ ಪ್ರಯತ್ನ ಮಾಡಿದ್ದರು. ಅವರ ಈ ಅಗಲಿಕೆ ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ, ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದರು. ನನ್ನನ್ನು ಅವರು ತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದ್ದಾರೆ ಯಾವುದೆ ವಿಚಾರ ಆಗಿದ್ದರೂ ಅವರ ಜೊತೆ ಚರ್ಚೆ ಮಾಡಿಯೇ ನಿರ್ಧಾರಕ್ಕೆ ಬರುತ್ತಿದೆ. ಈಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿ ಬಿಟ್ಟಿದೆ ಎಂದು ಭಾವುಕರಾಗಿ ಮಾತನಾಡಿದರು. ಅವರ ಪಾರ್ಥೀವ ಶರೀರವನ್ನು ನೇರವಾಗಿ ಮೈಸೂರಿಗೆ ತೆಗೆದುಕೊಂಡು ಹೋಗುತ್ತೇವೆ. ನಂತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ ಎಂದು ತಿಳಿಸಿದರು.

ಸದ್ಯ ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ಶ್ರೀನಿವಾಸ್‌ ಪ್ರಸಾದ್‌ ಅವರ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಇಂದು ಮೈಸೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೆಚ್ಚಿನ ನಾಯಕನ ಅಗಲಿಕೆ ಬಗ್ಗೆ ತಿಳಿಯುತ್ತಿದ್ದಂತೆ ಅನೇಕ ಬೆಂಬಲಿಗರು ಅವರ ನಿವಾಸದತ್ತ ದೌಡಾಯಿಸಿದ್ದಾರೆ. ಮಧ್ಯಾಹ್ನದ ಬಳಿಕ ಅಂತಿ ವಿಧಿ ವಿಧಾನ ನೆರವೇರು ಸಾಧ್ಯತೆ ಇದೆ.

ಇದನ್ನೂ ಓದಿ:Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.

Continue Reading

Lok Sabha Election 2024

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

Narendra Modi: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ (Lok Sabha Election 2024)ಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ(Congress manifesto)ಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪುನರುಚ್ಚರಿಸಿದ್ದಾರೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

“ಮಾಧ್ಯಮಗಳು ಪ್ರತಿಯೊಂದು ರಾಜಕೀಯ ಪಕ್ಷದ ಪ್ರಣಾಳಿಕೆಗಳನ್ನು ಅಧ್ಯಯನ ನಡೆಸುತ್ತವೆ. ನಾನು ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸುವುದನ್ನು ಕಾಯುತ್ತಿದ್ದೆ. ನಾನು ಮೊದಲ ದಿನವೇ ಪ್ರಣಾಳಿಕೆಯ ಬಗ್ಗೆ ಮಾತನಾಡಿದ್ದೆ. ಪ್ರಣಾಳಿಕೆಯನ್ನು ಗಮನಿಸಿದ ಕೂಡಲೇ ಅದರಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ನಾನು ಕಂಡುಕೊಂಡಿದ್ದೆ. ಮಾಧ್ಯಮಗಳು ಈ ವಿಚಾರ ತಿಳಿದು ಆಘಾತಕ್ಕೊಳಗಾಗಬಹುದು ಎಂದು ಭಾವಿಸಿದ್ದೆʼʼ ಎಂದು ಮೋದಿ ಹೇಳಿದ್ದಾರೆ.

“ಇದು ವ್ಯವಸ್ಥೆಯ ದೊಡ್ಡ ಹಗರಣವೆಂದು ನನಗೆ ತಿಳಿಯಿತು. ಪ್ರಣಾಳಿಕೆಯಲ್ಲಿನ ದುಷ್ಕೃತ್ಯಗಳನ್ನು ಯಾರಾದರೂ ಹೊರತರುತ್ತಾರೆ ಎಂದು ನಾನು 10 ದಿನಗಳವರೆಗೆ ಕಾಯುತ್ತಿದ್ದೆ. ಯಾಕೆಂದರೆ ಅದನ್ನು ನಿಷ್ಪಕ್ಷಪಾತವಾಗಿ ಹೊರತಂದರೆ ಉತ್ತಮ. ಅಂತಿಮವಾಗಿ ಈ ಸತ್ಯಗಳನ್ನು ನಾನೇ ಹೊರತರಬೇಕೆಂದು ನಿರ್ಧರಿಸಿದೆʼʼ ಎಂದು ಅವರು ವಿವರಿಸಿದ್ದಾರೆ.

ಸಂಪತ್ತು ಮರುಹಂಚಿಕೆ

ಮುಸ್ಲಿಮರಿಗೆ ಸಂಪತ್ತನ್ನು ಮರುಹಂಚಿಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನುವ ವಿಚಾರ ಅಷ್ಟೊಂದು ಅಪಾಯಕಾರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ತಮ್ಮ ಚುನಾವಣಾ ಪ್ರಚಾರವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಕರೆ ನೀಡಿದರು. “ನನ್ನ ಇಡೀ ಚುನಾವಣಾ ಪ್ರಚಾರವು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ ಎನ್ನುವುದನ್ನು ನೀವು ಗಮನಿಸಿರಬಹುದು. ನಾವು ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇವೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ನಮ್ಮ ಸರ್ಕಾರ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಿದೆ. ನೋಡಿ, ಕೆಟ್ಟದ್ದನ್ನು ಮಾಡಲು ಯಾವುದೇ ಸರ್ಕಾರವನ್ನು ರಚಿಸುವುದಿಲ್ಲ. ಸರ್ಕಾರ ಜನರಿಗೆ ಒಳ್ಳೆಯದನ್ನು ಮಾಡಲು ಬಯಸುತ್ತದೆ. ಕೆಲವು ಜನರಿಗೆ ಇತರರಿಗೆ ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದೆ. ಕೆಲವರು ನಮಗೂ ಒಳಿತಾಗಲಿ ಎಂದು ಕಾಯುತ್ತಾರೆ. ಕಷ್ಟಪಟ್ಟು ಕೆಲಸ ಮಾಡುವುದರಿಂದ ಒಳ್ಳೆಯದಾಗುತ್ತದೆ ಎನ್ನುವುದನ್ನು ನಾನು ನಂಬುತ್ತೇನೆʼʼ ಎಂದು ಮೋದಿ ತಿಳಿಸಿದ್ದಾರೆ.

ಬಡವರಿಗಾಗಿ 4 ಕೋಟಿ ಮನೆ

ತಮ್ಮ ಸರ್ಕಾರ ಜನರಿಗಾಗಿ ಕೈಗೊಂಡ ಉಪಕ್ರಮಗಳನ್ನು ವಿವರಿಸಿದ ಪಿಎಂ ಮೋದಿ, “ನಾವು ಬಡವರಿಗಾಗಿ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ನೀವು ಚುನಾವಣಾ ಪ್ರಚಾರಕ್ಕೆ ಹೋದಾಗ ಇನ್ನೂ ವಸತಿ ರಹಿತರಾಗಿರುವ ಜನರ ಪಟ್ಟಿಯನ್ನು ಸಿದ್ಧಪಡಿಸಿ ನನಗೆ ನೀಡಿ ಎಂದು ನಾನು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದೇನೆ. ನನ್ನ ಮೂರನೇ ಅವಧಿ ಪ್ರಾರಂಭವಾದ ಕೂಡಲೇ ಆದ್ಯತೆ ಮೇರೆಗೆ ನಾನು ಈ ಕೆಲಸ ಮುಂದುವರಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ʼʼನಾನು ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದೇನೆ. ಈಗ ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿಕೊಂಡಿದೆ. ಇದು ಜನರಿಗೆ ಆರೋಗ್ಯದ ಭರವಸೆ ನೀಡುತ್ತದೆ. ಸುಮಾರು 55 ಕೋಟಿ ಮಂದಿಗೆ ಇದು ನೆರವಾಗುತ್ತದೆ. ಮೋದಿ ಸರ್ಕಾರ ನಿಮ್ಮೊಂದಿಗಿದೆ ಎಂಬ ಭರವಸೆ ಇದು. ಯಾವುದೇ ವರ್ಗ, ಸಮಾಜ, ಹಿನ್ನೆಲೆಗೆ ಸೇರಿದ 70 ವರ್ಷಕ್ಕಿಂತ ಮೇಲಿನ ಪುರುಷ ಅಥವಾ ಮಹಿಳೆಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಜತೆಗೆ ನಾವು ಈ ಪ್ರಯೋಜನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ತೃತೀಯ ಲಿಂಗಿಗಳಿಗೆ ಅವರ ವಯಸ್ಸು ಯಾವುದೇ ಇರಲಿ ನಾವು ನೆರವು ನೀಡಲು ಬದ್ಧʼʼ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: BJP Manifesto: ಬಿಜೆಪಿ ಪ್ರಣಾಳಿಕೆ; ರೈತನಿಗೆ ಮೊದಲ ಪ್ರತಿ ನೀಡಿದ ಮೋದಿ, 14 ಗ್ಯಾರಂಟಿ ಘೋಷಣೆ

ಬ್ಯಾಂಕಿಂಗ್‌ ವ್ಯವಸ್ಥೆ

“ನಮ್ಮ ದೇಶದಲ್ಲಿ ಬ್ಯಾಂಕುಗಳ ಸ್ಥಿತಿ ಕಳಪೆಯಾಗಿತ್ತು. ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಹಣ ನೀಡಿದ್ದರೂ ಬ್ಯಾಂಕುಗಳಲ್ಲಿ ಅವರ ಹೆಸರಿನಲ್ಲಿ ಖಾತೆ ತೆರೆದಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ 52 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಯಿತು. ಅನೇಕರು ಅದರ ಲಾಭವನ್ನು ಪಡೆದುಕೊಂಡರು. ಹಲವರಿಗೆ ಜನ್ ಧನ್ ಖಾತೆ ಮತ್ತು ನೇರ ಲಾಭ ವರ್ಗಾವಣೆಯ ಮೂಲಕ ಪ್ರಯೋಜನ ಲಭಿಸಿತು. 36 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವು ಜನರ ಖಾತೆಗಳಿಗೆ ನೇರ ವರ್ಗಾವಣೆಯಾಗಿದೆʼʼ ಎಂದು ತಿಳಿಸಿದ್ದಾರೆ.

ತಮ್ಮ ಸರ್ಕಾರದ ಕಾರ್ಯಕ್ಷಮತೆಯನ್ನು 2014ರ ಹಿಂದಿನ ಪರಿಸ್ಥಿತಿಗೆ ಹೋಲಿಸಿದ ಪ್ರಧಾನಿ ಮೋದಿ, “ನೋಡಿ 2014 ಕ್ಕಿಂತ ಮೊದಲು ದೇಶದ ಪರಿಸ್ಥಿತಿ ಹೇಗಿತ್ತು? ಆರ್ಥಿಕತೆ ದುರ್ಬಲವಾಗಿತ್ತು. ಇಂದು ನಾವು ಅದನ್ನು ಬದಲಾಯಿಸಿದ್ದೇವೆ. ಐಎಂಎಫ್‌ನಲ್ಲಿ ಈಗ ಚೀನಾ ಮತ್ತು ಭಾರತ ಸೇರಿದಂತೆ ವಿಶ್ವದ 150 ದೇಶಗಳ ಗುಂಪು ಇದೆ. ಇದನ್ನು ನಾವು ಅಭಿವೃದ್ಧಿಶೀಲ ದೇಶಗಳು ಅಥವಾ ಉದಯೋನ್ಮುಖ ಆರ್ಥಿಕತೆ ಹೊಂದಿರುವ ದೇಶಗಳು ಎಂದು ಕರೆಯಬಹುದುʼʼ ಎಂದು ಪ್ರಧಾನಿ ವಿವರಿಸಿದ್ದಾರೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

ಪಿತ್ರಾರ್ಜಿತ ಆಸ್ತಿ ತೆರಿಗೆ

ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಮೋದಿ ಪ್ರತಿಕ್ರಿಯಿಸಿ, “ಅಮೆರಿಕದಲ್ಲಿ ಸಂದರ್ಶನ ನೀಡಿದ ಅವರು ಪಿತ್ರಾರ್ಜಿತ ತೆರಿಗೆ ಬಗ್ಗೆ ಪ್ರಸ್ತಾವಿಸಿದರು. ನಿಮ್ಮ ಆಸ್ತಿಯ ಮೇಲೆ ಸುಮಾರು 55% ತೆರಿಗೆ ವಿಧಿಸುವ ಬಗ್ಗೆ ಹೇಳಿದರು. ಈಗ ನಾನು ಅಭಿವೃದ್ಧಿ ಮತ್ತು ಉತ್ತರಾಧಿಕಾರದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪಿತ್ರಾರ್ಜಿತ ಆಸ್ತಿಯನ್ನು ಲೂಟಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಸುವುದು ನನ್ನ ಜವಾಬ್ದಾರಿ. ಈಗ ಈ ಬಗ್ಗೆ ನಿರ್ಧರಿಸಬೇಕಾದವರು ನೀವುʼʼ ಎಂದು ಮೋದಿ ಹೇಳಿದ್ದಾರೆ.

Continue Reading

ದಾವಣಗೆರೆ

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Lehar Singh Siroya: ಬಿಜೆಪಿ ಹೈಕಮಾಂಡ್​ ಪ್ರತಿನಿಧಿಯಾಗಿ ಲೆಹರ್​ಸಿಂಗ್ ಅವರು ಹಲವು ವಿಚಾರಗಳನ್ನು ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಶ್ರೀಗಳ ಜತೆ ​ ಚರ್ಚಿಸಿದ್ದಾರೆ.

VISTARANEWS.COM


on

lehar singh siroya
Koo

ಹರಿಹರ: ಬಿಜೆಪಿಯ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಅವರು​ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭಾನುವಾರ ಭೇಟಿ ನೀಡಿ ಜಗದ್ಗುರುಗಳಾದ ಶ್ರೀ ವಚನಾನಂದ ಸ್ವಾಮೀಜಿ ಅವರ ಜೊತೆ ಚರ್ಚೆ ನಡೆಸಿದರು. ಬಿಜೆಪಿ ಹೈಕಮಾಂಡ್​ ಪ್ರತಿನಿಧಿಯಾಗಿ ಹಲವಾರು ವಿಚಾರಗಳನ್ನು ಶ್ರೀಗಳ ಜತೆ ಲೆಹರ್​ಸಿಂಗ್ (Lehar Singh Siroya) ಅವರು​ ಚರ್ಚಿಸಿದರು.

ಈ ವೇಳೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್​ ಅಗರವಾಲ್ ಅವರು ಜಗದ್ಗುರುಗಳವರ ಜತೆ ದೂರವಾಣಿಯಲ್ಲಿ ಮಾತನಾಡಿದರು. ಅಲ್ಲದೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಕೂಡ ಜಗದ್ಗುರುಗಳವರ ಜತೆ ಚರ್ಚೆ ನಡೆಸಿದರು.

ರಾಧಾಮೋಹನ್​ ಅಗರವಾಲ್ ಹಾಗೂ ದೇವೇಂದ್ರ ಫಡ್ನವೀಸ್​ ಅವರ ಜೊತೆಗಿನ ದೂರವಾಣಿ ಚರ್ಚೆಯ ವೇಳೆ ಶ್ರೀಗಳು, ಬಿಜೆಪಿ ಪಕ್ಷದಿಂದ ಪಂಚಮಸಾಲಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಲ್ಲಿ ಆಗಿರುವ ಅನ್ಯಾಯವನ್ನು ಪ್ರಬಲವಾಗಿ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಮನಗಂಡಿರುವ ಬಿಜೆಪಿ ವರಿಷ್ಠರು, ಮುಂಬರುವ ದಿನಗಳಲ್ಲಿ ಜನಪ್ರತಿನಿಧಿಗಳ ಆಯ್ಕೆ ಹಾಗೂ ಪಕ್ಷದ ಹುದ್ದೆಗಳನ್ನು ನೀಡುವಲ್ಲಿ ನಮ್ಮ ಪಂಚಮಸಾಲಿ ಸಮುದಾಯವನ್ನು ಪರಿಗಣಿಸುವುದಾಗಿ ಅವರು ಭರವಸೆ ನೀಡಿದರು.

ಇದನ್ನೂ ಓದಿ | Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಹಾಗೂ ಚಂದ್ರಶೇಖರ್ ಪೂಜಾರ್ ಉಪಸ್ಥಿತರಿದ್ದರು.

Continue Reading
Advertisement
Kavya Maran
ಪ್ರಮುಖ ಸುದ್ದಿ6 mins ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್7 mins ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

viral video tn rao
ಪ್ರಮುಖ ಸುದ್ದಿ12 mins ago

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Ramana Avatara trailer out
ಸಿನಿಮಾ13 mins ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 202414 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
ಪ್ರಮುಖ ಸುದ್ದಿ28 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ38 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ53 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ1 hour ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ2 hours ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 202414 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202422 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202424 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌