Site icon Vistara News

Rishab Shetty: ಕಾಂತಾರ ಚಿತ್ರದ ಬಳಿಕ ಬೊಮ್ಮಾಯಿಗೆ ರಿಷಬ್‌ ಶೆಟ್ಟಿ ಮನವಿ ಸಲ್ಲಿಸಿದ್ದೇನು?

What did Rishabh Shetty request to Bommai after Kantara

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty) ಕಾಂತಾರ ಸಿನಿಮಾ ಸಕ್ಸೆಸ್‌ ಬಳಿಕ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಫೋಟೊವನ್ನು ಹಂಚಿಕೊಂಡು, ಇದರ ಹಿಂದೆ ಮಹತ್ವದ ಉದ್ದೇಶವಿತ್ತು ಎನ್ನುವುದನ್ನೂ ಅವರು ಹೇಳಿಕೊಂಡಿದ್ದಾರೆ. ಕಾಡಂಚಿನ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದು, ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ಬಳಿಕ ಕಾಡು ಸುತ್ತಿ, ಅಡವಿ ಅಂಚಿನ ಜನರ ಜತೆ ಮಾತಾಡಿ, ಅರಣ್ಯ ಇಲಾಖೆ ಸಿಬ್ಬಂದಿ ಜತೆ ಚರ್ಚಿಸಿ ಕಲೆಹಾಕಿದ ಅಂಶಗಳನ್ನು ಮುಖ್ಯಮಂತ್ರಿಗಳ ಮುಂದೆ ಇಟ್ಟಿದ್ದು, ಪರಿಹರಿಸುವುದಾಗಿ ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿ ʻʻಕಾಂತಾರ ಚಿತ್ರದ ನಂತರದ ದಿನಗಳಲ್ಲಿ ಕಾಡು ಸುತ್ತಿ, ಅಡವಿ ಅಂಚಿನ ಜನರ ಜತೆ ಮಾತಾಡಿ, ಅರಣ್ಯ ಇಲಾಖೆ ಸಿಬ್ಬಂದಿಗಳ ಜತೆ ಚರ್ಚಿಸಿ ಕಲೆಹಾಕಿದ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿಗಳ ಮುಂದಿಟ್ಟಾಗ ಅವರು ತಕ್ಷಣವೇ ಪರಿಹರಿಸುವುದಾಗಿ ಹೇಳಿದ್ದಾರೆ. ಸಮಸ್ಯೆಗೆ ಸ್ಪಂದಿಸಿದ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದಗಳುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rishab Shetty: ಮಗಳು ರಾದ್ಯಾ ಜನುಮದಿನದಂದು ಸ್ಪೆಷಲ್‌ ವಿಡಿಯೊ ಹಂಚಿಕೊಂಡ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

ರಿಷಬ್‌ ಶೆಟ್ಟಿ ಪೋಸ್ಟ್‌

ಪ್ರಿಕ್ವೆಲ್‌ ಆಗಿ ಬರಲಿದೆ ಕಾಂತಾರ 2

ಕಾಂತಾರ-1 ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಸಿನಿಮಾ ಕಾಂತಾರಕ್ಕಿಂತ ಮೊದಲಿನ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ.

Exit mobile version