Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್! - Vistara News

ರಾಜಕೀಯ

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Diplomatic passport: ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಈ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ನೀಡಲಾಗುತ್ತದೆ.

VISTARANEWS.COM


on

Prajwal Revanna case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ:

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ; ಸರ್ವಪಕ್ಷ‌ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Cauvery Dispute: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ ಮಧ್ಯೆ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಅಡಿ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇಂದು (ಜುಲೈ 14) ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸರ್ವಪಕ್ಷ‌ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ.

VISTARANEWS.COM


on

Cauvery Dispute
Koo

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery water regulation commitee-CWRC) ತಮಿಳುನಾಡಿಗೆ (Tamil Nadu) ಪ್ರತಿದಿನ 1 ಟಿಎಂಸಿ (TMC) ಅಡಿ ನೀರು ಬಿಡಲು ಕರ್ನಾಟಕಕ್ಕೆ (Karnataka) ಸೂಚಿಸಿದೆ. ಕಾವೇರಿ ಬಿಕ್ಕಟ್ಟು (Cauvery Dispute) ಮತ್ತೆ ತಲೆದೋರಿರುವ ಹಿನ್ನೆಲೆಯಲ್ಲಿ ಇಂದು (ಜುಲೈ 14) ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸರ್ವಪಕ್ಷ‌ ಸಭೆ ಕರೆದಿದ್ದಾರೆ.

ವಿಧಾನಸೌಧದಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ, ಜೆಡಿಎಸ್, ಸರ್ವೋದಯ ಪಕ್ಷದ ನಾಯಕರು ಸೇರಿದಂತೆ ರಾಜ್ಯದ ಕೇಂದ್ರ ಸಚಿವರು, ಕಾವೇರಿ ಕಣಿವೆಯ ಸಂಸದರು, ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.

ಕಾವೇರಿ ನೀರಾವರಿ ನಿಯಂತ್ರಣ ಸಮಿತಿಯು ಪ್ರತಿದಿನ ತಮಿಳುನಾಡಿಗೆ 1 ಟಿಎಂಸಿ ನೀರು ಬಿಡುಗಡೆಗೆ ಆದೇಶ ನೀಡಿದ್ದು, ಇದಕ್ಕೆ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಂದಿನ ನಡೆಯನ್ನು ಚರ್ಚಿಸುವ ನಿಟ್ಟಿನಲ್ಲಿ ಈ ಸಭೆ ಕರೆಯಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಮಳೆ ಕೊರತೆ

ಸದ್ಯಕ್ಕೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಜೂನ್ – ಜುಲೈ ತಿಂಗಳಲ್ಲಿ ಆಗಬೇಕಿದ್ದ ಮಳೆ ಸರಿಯಾಗಿ ಆಗಿಲ್ಲ. ಶೇ. 28ರಷ್ಟು ಮಳೆ ಕೊರತೆ ಎದುರಾಗಿದೆ. ಹೀಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಸಿಡಬ್ಲ್ಯುಆರ್‌ಸಿ ಆದೇಶದ ವಿರುದ್ಧ ಸಿಡಬ್ಲ್ಯುಎಂಎಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಇದೀಗ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಜತೆ ಕೈ ಜೋಡಿಸುವಂತೆ ಪ್ರತಿಪಕ್ಷಗಳಲ್ಲಿ ಮುಖ್ಯಮಂತ್ರಿ ಮನವಿ ಮಾಡಲಿದ್ದಾರೆ. ದೆಹಲಿಯಲ್ಲಿ ನಡೆದಿದ್ದ ನೂತನ ಸಂಸದರ ಸಭೆಯ ವೇಳೆ ಕರ್ನಾಟಕದ ಕಷ್ಟದ ಸಮಯದಲ್ಲಿ ರಾಜ್ಯದ ಹಿತ ಕಾಪಾಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದರು.

ಸದ್ಯ ಮುಂಗಾರು ಆರಂಭದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಕಾರಣ ಮುಂದೆ‌ ಹೀಗೆ ಮಳೆ ಕೈ ಕೊಟ್ಟರೆ ಸಮಸ್ಯೆ ಆಗಬಹುದು ಎಂದು ರಾಜ್ಯ ಸರ್ಕಾರ ಲೆಕ್ಕಾಚಾರ ಹಾಕಿಕೊಂಡಿದೆ. ಈಗಿನ ಪರಿಸ್ಥಿತಿಯಲ್ಲಿ ನಿರಂತರವಾಗಿ ತಮಿಳುನಾಡಿಗೆ ನೀರು ಬಿಟ್ಟರೆ ಮುಂದೆ ಸಮಸ್ಯೆ ಆಗಲಿದೆ. ಹೀಗಾಗಿ ನಾವು ನೀರು ಬಿಡಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನ ತಗೆದುಕೊಂಡಿದ್ದೇವೆ. ಪ್ರತಿಪಕ್ಷಗಳೆಲ್ಲ ಸರ್ಕಾರದ ಪರವಾಗಿ ನಿಲ್ಲಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

ಜತೆಗೆ ಕೇಂದ್ರದ ಬಳಿಗೆ ನಿಯೋಗ ಕೊಂಡೊಯ್ಯುವ ಬಗ್ಗೆಯೂ ಪ್ರತಿಪಕ್ಷಗಳ ಸಲಹೆ ಕೇಳಲಿದ್ದಾರೆ. ನೀರು ಬೀಡಲು ಸದ್ಯಕ್ಕೆ ಸಾಧ್ಯವಿಲ್ಲ. ಇದರ ಬಗ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಇನ್ನೊಂದು ಕಡೆ ಕೇಂದ್ರ ನೀರಾವರಿ ಸಚಿವರ ಬಳಿಗೂ ನಿಯೋಗ ಕೊಂಡೊಯ್ದು ರಾಜ್ಯದ ವಾಸ್ತವ ಪರಿಸ್ಥಿತಿ ಸಲ್ಲಿಸೋಣ ಎಂದು ಮುಖ್ಯಮಂತ್ರಿ ಪ್ರತಿಪಕ್ಷಗಳ ಬಳಿ ಹೇಳುವ ಸಾಧ್ಯತೆ ಇದೆ. ಮಾತ್ರವಲ್ಲ ಕೇಂದ್ರ ಸಚಿವರು ಸಹ ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಂಡಬೇಕು ಎಂದು ಸಿದ್ದರಾಮಯ್ಯ ವಿನಂತಿಸಲಿದ್ದಾರೆ ಎನ್ನಲಾಗಿದೆ.

Continue Reading

ಕರ್ನಾಟಕ

Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

Wakf Board Scam: ರಾಜ್ಯ ವಕ್ಫ್ ಬೋರ್ಡ್ ಖಾತೆಯಿಂದ ಹಂತ ಹಂತವಾಗಿ 8 ಕೋಟಿ ರೂ.ಗಳನ್ನು ಅಕ್ರಮ ವರ್ಗಾವಣೆ ಮಾಡಿದ ಆರೋಪದಲ್ಲಿ ಮಾಜಿ ಸಿಇಒ ಝುಲ್ಫಿಕಾರುಲ್‌ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Koo

ಬೆಂಗಳೂರು: ವಾಲ್ಮೀಕಿ ಹಗರಣ, ಅಪೆಕ್ಸ್ ಬ್ಯಾಂಕ್ ಹಗರಣದ ಬಳಿಕ ಇದೀಗ ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ನಡೆದ ಕೋಟ್ಯಂತರ ರೂ. ಹಗರಣ ಬೆಳಕಿಗೆ ಬಂದಿದೆ. ವಕ್ಫ್ ಬೋರ್ಡ್‌ನ ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ಕೋಟಿ ಕೋಟಿ ಡೀಲ್ ಆರೋಪ ಕೇಳಿಬಂದಿದೆ. ವಕ್ಫ್ ಬೋರ್ಡ್ (Wakf Board Scam) ಖಾತೆಯಿಂದ ಹಂತ ಹಂತವಾಗಿ 8 ಕೋಟಿ ರೂ.ಗಳನ್ನು ಅಕ್ರಮ ವರ್ಗಾವಣೆ (Money laundering) ಮಾಡಿದ ಆರೋಪದಲ್ಲಿ ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಅಕ್ರಮ ಸಂಬಂಧ ವಕ್ಫ್ ಬೋರ್ಡ್ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮ್ಮದ್‌ ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂನಿಂದ ಚಿಂತಾಮಣಿ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಏನಿದೆ?

ಕರ್ನಾಟಕ ವಕ್ಸ್ ಮಂಡಳಿಯ ಕಲಬುರಗಿ ದರ್ಗಾಕ್ಕೆ ಸೇರಿದ ಆಸ್ತಿಯನ್ನು ಸರ್ಕಾರವು ಒತ್ತುವರಿ ಮಾಡಿಕೊಂಡು ಮಂಡಳಿಗೆ 2.29 ಕೋಟಿ ಹಣವನ್ನು ನೀಡಿತ್ತು. ಜತೆಗೆ ವಕ್ಸ್ ಮಂಡಳಿಯಲ್ಲಿ ಮುಜರಾಯಿ ಕಡೆಯಿಂದ 1.79 ಕೋಟಿ ಹಣವು ಬಂದಿತ್ತು. ಈ ಒಟ್ಟು 4,00,45,465 ರೂ. ಹಣವು ಬೆನ್ಸೆನ್‌ ಟೌನ್‌ನ ಇಂಡಿಯನ್ ಬ್ಯಾಂಕ್‌ನ ಎಸ್.ಬಿ ಖಾತೆ ಸಂಖ್ಯೆ: 412204112 ರಲ್ಲಿ ಜಮೆ ಮಾಡಲಾಗಿತ್ತು. ಆದರೆ, 2016ರ ನವೆಂಬರ್‌ 26ರಂದು ವಕ್ಸ್ ಮಂಡಳಿಯ ಬ್ಯಾಂಕ್‌ ಖಾತೆಯಲ್ಲಿ ಜಮೆಯಾಗಿರುವ 4,00,45,465 ರೂ. ಹಣವನ್ನು ಅಂದಿನ ಸಿಇಒ ಝುಲ್ಫಿಕಾರುಲ್ಲಾರವರು ವಕ್ಸ್ ಸಂಸ್ಥೆಯ ಗಮನಕ್ಕೆ ತರದೆ ಚಿಂತಾಮಣಿಯ ವಿಜಯ ಬ್ಯಾಂಕ್‌ಗೆ ವಕ್ಸ್ ಮಂಡಳಿ ಹೆಸರಿನ ಖಾತೆಗೆ ಎರಡು ಚೆಕ್‌ಗಳ ಮುಖಾಂತರ ಫಿಕ್ಸ್ಡ್‌ ಡೆಪಾಸಿಟ್ ಮಾಡಲು ವರ್ಗಾವಣೆ ಮಾಡಿದ್ದರು. ಇದರಿಂದ ಸಂಸ್ಥೆಗೆ 8,03,56,713.64 ರೂ.ಗಳಷ್ಟು ನಷ್ಟವಾಗಿದೆ. ಈ ರೀತಿ ಸಂಸ್ಥೆಗೆ ನಂಬಿಕೆ ದ್ರೋಹ ಮಾಡಿ ಆರ್ಥಿಕ ನಷ್ಟವನ್ನುಂಟು ಮಾಡಿರುವ ಮಾಜಿ ಸಿಇಒ ಝುಲ್ಫಿಕಾರುಲ್ಲಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರುದಾರ ಮೀರ್ ಅಹಮ್ಮದ್ ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರಗೆ ಮುಂದುವರೆದ ಇಡಿ ಡ್ರಿಲ್

Valmiki Corporation Scam

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ (Ex minister B Nagendra) ಸದ್ಯ ಇಡಿ ಅಧಿಕಾರಿಗಳ (ED Officers) ವಶದಲ್ಲಿದ್ದಾರೆ. ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಕೂಡ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ. ಆದರೆ ನಾಗೇಂದ್ರ ಯಾವುದೇ ವಿಚಾರವನ್ನು ಬಾಯಿ ಬಿಡುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ದಾಖಲೆಗಳನ್ನ ಮುಂದಿಟ್ಟುಕೊಂಡು ಇಡಿ ಅಧಿಕಾರಿಗಳು ಪ್ರಶ್ನೆಸುತ್ತಿದ್ದರೂ ನಾಗೇಂದ್ರ ಯಾವುದೇ ರೀತಿಯಲ್ಲಿಯೂ ತನಿಖೆಗೆ ಸಹಕರಿಸುತ್ತಿಲ್ಲ. ಏನು ಕೇಳಿದರೂ ನನಗೇನೂ ಗೊತ್ತಿಲ್ಲ, ನಾನೇನೂ ಮಾಡಿಲ್ಲ ಎಂದೇ ಹೇಳುತ್ತಿದ್ದಾರೆ. ಪ್ರಕರಣ ಸಂಬಂಧ ಬಂಧಿತ ಆರೋಪಿಗಳ ಹೇಳಿಕೆ ಆಧರಿಸಿ ಪ್ರಶ್ನೆ ಮಾಡಿದರೂ ಯಾವುದೇ ವಿಚಾರ ತಿಳಿಸದ ಕಾರಣ ಅಧಿಕಾರಿಗಳು ಹೈರಾಣಾಗಿದ್ದಾರೆ.

ನಾಗೇಂದ್ರ ಹೇಳಿದ್ದೇನು?

ಆಪ್ತ ನೆಕ್ಕುಂಟಿ ನಾಗರಾಜ್, ನಾಗೇಶ್ವರ್ ರಾವ್, ನಿಗಮದ ಎಂ.ಡಿ ಪದ್ಮನಾಭ್ ಜತೆ ಸೇರಿ ಹೋಟೆಲ್‌ನಲ್ಲಿ‌ ಮೀಟಿಂಗ್ ಮಾಡಿದ್ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ನಾಗೇಂದ್ರ ಯಾವುದೇ ಮೀಟಿಂಗ್ ಮಾಡಿಲ್ಲ. ಊಟಕ್ಕೆ ಸೇರಿದ್ವಿ ಅಷ್ಟೇ ಎಂದಿದ್ದಾರೆ. ನಿಮ್ಮ ಸೂಚನೆಯಂತೆ ನಿಗಮದಲ್ಲಿ ಹೊಸ ಅಕೌಂಟ್ ತೆರೆಯಲಾಗಿದೆ ಎಂದು ನಿಗಮದ ಎಂ.ಡಿ. ಪದ್ಮನಾಭ್ ಹೇಳಿಕೆ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದಾಗ ಅವರನ್ನೆ ಕೇಳಿಕೊಳ್ಳಿ ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವರು ಪ್ರತಿಕ್ರಿಯಿಸಿದ್ದಾರೆ.

ನಿಗಮಕ್ಕೆ ಸಂಬಂಧವಿಲ್ಲದ ಆಂಧ್ರದ ಐಟಿ ಕಂಪನಿಗಳಿಗೆ ಹಣ ವರ್ಗಾವಣೆ ಆಗಿದ್ದೇಕೆ? ಎಂಬ ಪ್ರಶ್ನೆಗೆ ಗೊತ್ತಿಲ್ಲ ಎಂದೇ ಉತ್ತರ ಲಭಿಸಿದೆ. ನಿಗಮಕ್ಕೂ ನೆಕ್ಕುಂಟಿ ನಾಗರಾಜ್, ಸತ್ಯನಾರಾಯಣ, ನಾಗೇಶ್ವರ್ ರಾವ್‌ಗೂ ಏನು ಸಂಬಂಧ ? ಎಂದು ಇಡಿ ಅಧಿಕಾರಿಗಳು ಕೇಳಿದಾಗ ನನಗೇನು ಗೊತ್ತು ಸರ್ ? ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಸುಸ್ತಾದ ಅಧಿಕಾರಿಗಳು

ವಿಚಾರಣೆ ವೇಳೆ ಏನೇ ಕೇಳಿದರೂ ನನಗೇನು ಗೊತ್ತಿಲ್ಲ, ನಾನೇನು ಮಾಡಿಲ್ಲ ಎಂಬ ಎರಡು ಮಾತನ್ನ ಬಿಟ್ಟು ಬೇರೆ ಮಾತಾಡದ ಮಾಜಿ ಸಚಿವ ನಾಗೇಂದ್ರ ಅವರಿಂದಾಗಿ ಅಧಿಕಾರಿಗಳು ಸುಸ್ತಾಗಿದ್ದಾರೆ. ಎಸ್.ಐ.ಟಿ. ಹಾಗೂ ಸಿಬಿಐ ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಸೂಚನೆಯಂತೆ ಹೊಸ ಅಕೌಂಟ್ ತೆರೆದಿದ್ದಾಗಿ ಎಂ.ಡಿ ಪದ್ಮನಾಭ್ ಬಾಯ್ಬಿಟ್ಟಿದ್ದರು. ಆದರೆ ಇಡಿ ವಿಚಾರಣೆ ವೇಳೆ ಯಾವುದಕ್ಕೂ ಸರಿಯಾಗಿ ಉತ್ತರಿಸದೇ ತನಗೇನೂ ಗೊತ್ತಿಲ್ಲ ಎಂದು ನಾಗೇಂದ್ರ ಹೇಳುತ್ತಿದ್ದಾರೆ.

ಇದನ್ನೂ ಓದಿ: ED Raid: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್‌ ನಿವಾಸದಲ್ಲಿ 24 ಗಂಟೆಗಳಿಂದ ಮುಂದುವರಿದ ಇಡಿ ಅಧಿಕಾರಿಗಳ ತಪಾಸಣೆ

ನಿರಂತರ 40 ಗಂಟೆಗಳ ತಪಾಸಣೆ ಹಾಗೂ ತನಿಖೆಯ ಬಳಿಕ, ವಾಲ್ಮೀಕಿ ನಿಗಮ ಹಗರಣ ಕುರಿತು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜುಲೈ 12ರಂದು ವಶಕ್ಕೆ ಪಡೆದುಕೊಂಡಿದ್ದರು. 40 ಗಂಟೆಗಳ ಕಾಲ ನಾಗೇಂದ್ರ ಹಾಗೂ ಕುಟುಂಬದವರನ್ನು ಮನೆಯಿಂದ ಹೊರಬಿಡದ ಇಡಿ ಅಧಿಕಾರಿಗಳು ನಿರಂತರವಾಗಿ ಪ್ರಶ್ನೆ ಮಾಡಿದ್ದರು. ವಾಲ್ಮೀಕಿ ನಿಗಮದಲ್ಲಿ ನಡೆದ 185 ಕೋಟಿ ರೂಪಾಯಿಗಳ ಹಗರಣದ ಬಗ್ಗೆ ಯಾವುದೇ ಸುಳಿವು ತಮಗಿಲ್ಲ ಎಂದೇ ನಾಗೇಂದ್ರ ಹೇಳಿದ್ದರು. ಆದರೆ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ ಹೇಳಿಕೆಯಿಂದಾಗಿ ನಾಗೇಂದ್ರ ಹೇಳಿಕೆಯ ಬಗ್ಗೆ ಅನುಮಾನ ಮೂಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಕರೆದೊಯ್ಯಲಾಗಿತ್ತು.

Continue Reading

ಕರ್ನಾಟಕ

MUDA site scandal: ಸತ್ತವರ ಹೆಸರಿನಲ್ಲಿ ಮುಡಾ ಜಮೀನು ಡಿ ನೋಟಿಫಿಕೇಷನ್; ಸಿಎಂ ವಿರುದ್ಧ ಎಚ್‌ಡಿಕೆ ಆರೋಪ

MUDA site scandal: ಮುಡಾದಿಂದ ತಮಗೆ ₹62 ಕೋಟಿ ಪರಿಹಾರ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಯಾರಪ್ಪನ ಆಸ್ತಿ ಎಂದು ₹62 ಕೋಟಿ ಕೊಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

VISTARANEWS.COM


on

MUDA site scandal
Koo

ಬೆಂಗಳೂರು: ಮೈಸೂರಿನ ಮುಡಾದಿಂದ (MUDA site scandal) ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಖರೀದಿ ಮಾಡಿರುವ ಮೈಸೂರಿನ ಕೆಸರೆ ಬಳಿಯ ಜಮೀನನ್ನು ಮುಡಾ ಭೂಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. ಹೀಗಿರುವಾಗ ಇದು ಖಂಡಿತವಾಗಿಯೂ ಮುಡಾಗೆ ಸೇರಿದ ಜಮೀನು ಆಗುತ್ತದೆ. ಈ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿ ಖರೀದಿಸಲಾಗಿದೆ. ಇದು ಕಾನೂನುಬಾಹಿರ ಎಂದು ಕೇಂದ್ರ ಸಚಿವರು ದೂರಿದರು.

ಇದೇ ವೇಳೆ ಕೇಂದ್ರ ಸಚಿವರು ಮಾಧ್ಯಮಗಳ ಮುಂದೆ ಹಗರಣಕ್ಕೆ ಸಂಬಂಧಿಸಿದ ಕೆಲ ಮಹತ್ವದ ದಾಖಲೆಗಳನ್ನು ಪ್ರದರ್ಶಿಸಿದರು.

ಇದನ್ನೂ ಓದಿ | CM Siddaramaiah: ಕೆಪಿಸಿಸಿ ಕಚೇರಿ ಸ್ವಚ್ಛತಾ ಸಿಬ್ಬಂದಿಗೆ ಮನೆ ನೀಡಲು ಸಿಎಂ ಸೂಚನೆ

ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು?

ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿಗೆ ದಾನ ಮಾಡಿದಾಗ ಕೃಷಿ ಭೂಮಿ ಎಂದು ತೋರಿಸುತ್ತಾರೆ. ಆದರೆ, ಆ ಜಾಗ ಭೂ ಪರಿವರ್ತನೆ ಆಗಿತ್ತು. ಜಮೀನಿನ ಹಿನ್ನಲೆಯನ್ನು ಯಾರೂ ಪರಿಶೀಲಿಸಲಿಲ್ಲ ಏಕೆ? ಭೂಮಿ ಬದಲಾವಣೆಯಾದಾಗ ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದರು? ಎಂದು ಅವರು ಪ್ರಶ್ನಿಸಿದರು.

ಈ ಜಮೀನಿನ ಮೂಲದಾರರು ಲಿಂಗ ಅಲಿಯಾಸ್ ಜವರ ಎಂದಿದೆ. ಈ ಜಮೀನನ್ನು 1992ರಲ್ಲಿ ಮುಡಾ ತನ್ನ ವಶಕ್ಕೆ ಪಡೆಯುವ ನೋಟಿಫಿಕೇಷನ್ ಹೊರಡಿಸಿತ್ತು. 1995ರಲ್ಲಿ ಜಮೀನಿನ ಅಂತಿಮ ಭೂಸ್ವಾಧೀನದ ನೋಟಿಫಿಕೇಷನ್ ಆಗಿದೆ. ಆಗ 3 ಎಕರೆ 16 ಗುಂಟೆಗೆ 1992ರಲ್ಲೇ ಈ ಜಮೀನಿಗೆ ಮುಡಾದಿಂದ ಕೋರ್ಟ್‌ಗೆ ಹಣ ಸಂದಾಯ ಆಗಿದೆ. ಜಮೀನಿನ ಪೋತಿಯೂ ಆಗಿದೆ. ಆದರೂ 1998ರಲ್ಲಿ ಲಿಂಗನ ಹೆಸರು ಬರುತ್ತದೆ. ಡಿ ನೋಟಿಫಿಕೇಷನ್ ಆಗುತ್ತದೆ. ಈ ಜಮೀನು ಡಿ ನೋಟಿಫಿಕೇಷನ್ ಆದಾಗ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಆಗಿದ್ದರು ಎಂದು ಮಾಹಿತಿ ನೀಡಿದರು.

1988ರಲ್ಲಿ ಲಿಂಗ ಅಲಿಯಾಸ್ ಜವರ ಹೆಸರಿನಲ್ಲಿ ಡಿ ನೋಟಿಫಿಕೇಷನ್ ಆಗಿದೆ. 2004ರಲ್ಲಿ ಮಲ್ಲಿಕಾರ್ಜುನಸ್ವಾಮಿ ಜಮೀನು ಖರೀದಿ ಮಾಡುತ್ತಾರೆ. 2005ರಲ್ಲಿ ಮಲ್ಲಿಕಾರ್ಜುನಸ್ವಾಮಿ ಭೂಮಿ ಬದಲಾವಣೆಗೆ ಅರ್ಜಿ ಸಲ್ಲಿಸುತ್ತಾರೆ. ಆಗ ಸಿದ್ಧರಾಮಯ್ಯನವರೇ ಉಪ ಮುಖ್ಯಮಂತ್ರಿ ಆಗಿದ್ದರು. ಭೂಮಿ ಬದಲಾವಣೆಗೆ ಅರ್ಜಿ ಸಲ್ಲಿಸಿದಾಗ ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು. ಜಮೀನಿನ ಹಿನ್ನಲೆ ಪರಿಶೀಲಿಸಲಿಲ್ಲವೆ ಏಕೆ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

₹62 ಕೋಟಿ ಯಾರಪ್ಪನ ಆಸ್ತಿ?

ಮುಡಾದಿಂದ ತಮಗೆ ₹62 ಕೋಟಿ ಪರಿಹಾರ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಯಾರಪ್ಪನ ಆಸ್ತಿ ಎಂದು ₹62 ಕೋಟಿ ಕೊಡಬೇಕು. ಇದು ಪಿತಾರ್ಜಿತ ಆಸ್ತಿನಾ? ಯಾರ ಬಳಿ ಖರೀದಿ ಮಾಡಿದ್ದಾರೆ ಎಲ್ಲವೂ ಗೊತ್ತಿದೆ, ನನ್ನ ಬಳಿ ಎಲ್ಲ ದಾಖಲೆ ಇದೆ ಎಂದು ದಾಖಲೆಗಳನ್ನು ಪ್ರದರ್ಶಿಸಿದ ಕುಮಾರಸ್ವಾಮಿ ಅವರು, ಇದು ಹಿಟ್ ಅಂಡ್ ರನ್ ಅಲ್ಲ. ದಾಖಲೆ ಸಮೇತ ಮಾಹಿತಿ ಕೊಡುತ್ತಿದ್ದೇನೆ ಎಂದು ತಿರುಗೇಟು ನೀಡಿದರು.

ವಾಲ್ಮೀಕಿ ಹಗರಣ; ಸರ್ಕಾರದಿಂದಲೇ ಚಂದಶೇಖರ್ ಜೀವ ಹರಣ

ವಾಲ್ಮಿಕಿ ನಿಗಮದ ಹಗರಣದ ಬಗ್ಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ ಅವರು, ಆಡಳಿತದಲ್ಲಿ ಬಿಗಿ ಇದ್ದಿದ್ದರೆ ಇದು ಆಗುತ್ತಿರಲಿಲ್ಲ. ಚುನಾವಣಾ ನೀತಿ ಸಂಹಿತೆ ಇರುವ ಸಂದರ್ಭದಲ್ಲೇ ₹94 ಕೋಟಿ ವರ್ಗಾವಣೆಯಾಗಿದೆ. ಚಂದ್ರಶೇಖರ್ ಅವರ ಡೆತ್ ನೋಟ್ ಇಲ್ಲದಿದ್ದರೆ ಸಿದ್ಧರಾಮಯ್ಯ ಅವರೇ ಈ ಪ್ರಕರಣ ಏನು ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರದ್ದು ಆತ್ಮಹತ್ಯೆ ಅಲ್ಲ. ಅದು ಈ ಸರ್ಕಾರವೇ ಮಾಡಿದ ಕೊಲೆ. ಯಾವ ರೀತಿ ವರ್ಗಾವಣೆ ದಂಧೆಯ ವ್ಯವಸ್ಥೆ ತಂದಿದ್ದೀರಾ? ನನಗೆ ಅನುಭವ ಆಗಿದೆ. ನಾನು ಇದ್ದ 14 ತಿಂಗಳು ನಾನು ಕೆಲಸ ಮಾಡಲು ಬಳಸಿಕೊಂಡಿಲ್ಲ. ಇಲಾಖೆಗೆ ಸಚಿವರು ಹೇಳಿದ್ದವರನ್ನು ಹಾಕಬೇಕು. ವರ್ಗಾವಣೆ ದಂಧೆ ಬೀದಿಯಲ್ಲಿ ಇಟ್ಟಿದ್ದೀರಾ? ಎಂದು ಅವರು ಪ್ರಶ್ನಿಸಿದರು.

ನ್ಯಾ.ನಾಗಮೋಹನ್ ದಾಸ್ ಅವರಿಂದ 40% ತನಿಖೆ ಮಾಡಿಸುತ್ತಿದ್ದೀರಿ. ದಾಖಲೆ ಇಲ್ಲದೆ ಡಂಗೂರ ಹೊಡೆದಿರಿ ಅಲ್ಲವೇ? ಸಾಕ್ಷಿ ಇಲ್ಲದೆ ಈಗ ಹುಡುಕುತ್ತಾ ಇದ್ದೀರಾ? ಕೆಂಪಣ್ಣ ಆಯೋಗದ ವರದಿಯನ್ನು ಏನು ಮಾಡಿದೀರಿ? ನಿಮಗೆ ನನ್ನನ್ನು ಪ್ರಶ್ನೆ ಮಾಡಲು ಆಗಲ್ಲ. ನನ್ನನ್ನು ಕ್ಲರ್ಕ್ ಆಗಿ ಇಟ್ಟುಕೊಂಡಿದ್ದಿರಿ. ಅದಕ್ಕೆ ಕೇಳೋಕೆ ಆಗಲ್ಲ ಎಂದರು ಅವರು.

ಟಿ.ಬಿ. ಜಯಚಂದ್ರಗೆ ಕೊಲೆ ಬೆದರಿಕೆ!

ಹಾಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ನೈಸ್ ಹಗರಣ ವರದಿ ಕೊಟ್ಟರು. ಅದನ್ನು ಏನು ಮಾಡಿದ್ದೀರಿ? ವರದಿ ಕೊಟ್ಟ ಜಯಚಂದ್ರ ಅವರಿಗೆ ಕೊಲೆ ಬೆದರಿಕೆ ಹಾಕಿದರು ನಿಮ್ಮ ಪಕ್ಷದವರು. ರಾಜ್ಯ ಸರ್ಕಾರದ ಹಗರಣಗಳು ದೇಶಾದ್ಯಂತ ಚರ್ಚೆ ಆಗುತ್ತಿವೆ. ನಾನು ಆಂಧ್ರ ಪ್ರದೇಶಕ್ಕೆ ಅಧಿಕೃತ ಪ್ರವಾಸಕ್ಕೆ ಹೋಗಿದ್ದೆ, ಅಲ್ಲೂ ಕೂಡ ಇವರ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.

ನಾನು 2ನೇ ಬಾರಿ ಮುಖ್ಯಮಂತ್ರಿಯಾಗಿದ್ದಕ್ಕೆ ಸಹಿಸಿಕೊಳ್ತಿಲ್ಲವೆಂದು ಸಿಎಂ ಹೇಳುತ್ತಿದ್ದಾರೆ. ಅದಕ್ಕೆ ಅವರ ಪುತ್ರ ತಾಳ ಹಾಕುತ್ತಿದ್ದಾರೆ ಎಂದು ಸಚಿವರು ಟೀಕಿಸಿದರು.

ನಿಖಿಲ್ ಮೇಲೆ ಕೇಸ್ ಹಾಕಲು ಡಿಜಿಪಿ ಚರ್ಚೆ; ಪೇದೆ ಮಟ್ಟಕ್ಕೆ ಇಳಿದ ಡಿಜಿಪಿ!

ಮೊನ್ನೆ ರಾಮನಗರದಲ್ಲಿ ನಡೆದ ಪ್ರತಿಭಟನೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ ಮಾಡಿದ್ದಾರೆ. ಎಚ್.ಡಿ. ದೇವೆಗೌಡರ ಕುಟುಂಬದಲ್ಲಿ ಎಲ್ಲರನ್ನು ಮುಗಿಸಿದ್ದೀವಿ.‌ ನಿಖಿಲ್ ಒಬ್ಬ ಉಳಿದಿದ್ದಾನೆ. ಅವನನ್ನೂ ಎ1 ಆರೋಪಿ ಮಾಡುಲು ಹೊರಟ್ಟಿದ್ದೀರಾ? ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರು ಹೇಳಿದ್ರು ಅಂತ ಡಿಜಿಪಿ ಏನು ಮಾಡಲು ಹೊರಟಿದ್ದೀರಿ? ನಮ್ಮ ರಾಜ್ಯದ ಡಿಜಿಪಿ ಒಬ್ಬ ಕಾನ್ಸ್ ಟೇಬಲ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಒಂದೂವರೆ ವರ್ಷದಿಂದ ಮಾಡಿರುವ ಕೆಲಸ ಬಿಡಿ. ಇನ್ನು ಮುಂದಾದರೂ ಜನರ ಪರವಾಗಿ ಕೆಲಸ ಮಾಡಿ. ಹಿಂದುಳಿದ ವರ್ಗಗಳು ಮೆಚ್ಚುವ ಕೆಲಸ ಮಾಡಿ. ನಿಮ್ಮ ಆರ್ಥಿಕ ಸಲಹೆಗಾರರು ಏನು ಹೇಳಿದ್ದಾರೆ. ಅಭಿವೃದ್ಧಿಗೆ ಹಣವಿಲ್ಲ ಅಂತ ಹೇಳಿದ್ದಾರೆ. ನಾನು ಆರ್ಥಿಕ ಸಲಹೆಗಾರನಾಗಿದ್ದಕ್ಕೆ ಕ್ಷೇತ್ರದ ಅಭಿವೃದ್ಧಿಗೆ ಹಣ ತಂದಿದ್ದೀನಿ ಎಂದಿದ್ದಾರೆ. ಇನ್ನುಳಿದ ಶಾಸಕರು ಏನು ಮಾಡಬೇಕು. ಇದು ನಾವು ಹೇಳಿಲ್ಲ, ನಿಮ್ಮ ಆರ್ಥಿಕ ಸಲಹೆಗಾರರೇ ಹೇಳಿದ್ದಾರೆ ಎಂದು ಅವರು ಟೀಕಿಸಿದರು.

ಇದನ್ನೂ ಓದಿ | Narendra Modi: 3-4 ವರ್ಷದಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ; ಲೆಕ್ಕ ಕೊಟ್ಟ ನರೇಂದ್ರ ಮೋದಿ

ಈಗ ಒಂದು ಇಲಾಖೆ ಮಾತ್ರ ಕಾಣಿಸ್ತಾ ಇದೆ.‌ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದಕ್ಕೆ ಹೊರಗೆ ಬಂದಿದೆ. ಸಿಎಜಿ ವರದಿ ಇಟ್ಟುಕೊಂಡು ಏನು ಮಾಡೋಕೆ ಆಗುತ್ತದೆ. ಈ ರೀತಿಯ ಪ್ರಕರಣದಲ್ಲಿ ಡಿಜಿಪಿಯವರು ಆ ಕಚೇರಿಯನ್ನು ಪೇದೆ ಕಚೇರಿ ಮಾಡಿದ್ದಾರೆ. ಡಿಜಿಪಿ ಕೆಲಸ ಮಾಡ್ತಾ ಇದ್ದೀರಾ ಅಥವಾ ಪೇದೆ ಕೆಲಸ ಮಾಡ್ತಾ ಇದ್ದೀರಾ ಎಂದು ಡಿಜಿಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇಡಿಯವರು ಯಾಕೆ ಬಂದಿದ್ದಾರೆ. ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾರೆ. ಅವರಿಗೆ ತನಿಖೆ ಮಾಡೋಕೆ ಅಧಿಕಾರ ಇದೆ ಅದಕ್ಕೆ ಬಂದಿದ್ದಾರೆ ಎಂದರು.

Continue Reading

ಕರ್ನಾಟಕ

Self Harming: ಬೈಕ್ ಕೊಡಿಸದಿದ್ದಕ್ಕೆ ಯುವಕ ನೇಣಿಗೆ ಶರಣು; ಮಗನ‌ ಸಾವು ನೋಡಿ ರೈಲಿಗೆ ತಲೆಕೊಟ್ಟ ತಾಯಿ!

Self Harming: ಬೈಕ್ ಕೊಡಿಸುವಂತೆ ತಂದೆ ತಾಯಿ ಜೊತೆ ಜಗಳವಾಡಿ ಯುವಕ ನೇಣು ಬಿಗಿದುಕೊಂಡಿದ್ದಾನೆ. ಇದರಿಂದ ಮನನೊಂದು ತಾಯಿಯೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

VISTARANEWS.COM


on

Self Harming
Koo

ಹಾವೇರಿ: ಬೈಕ್ ಕೊಡಿಸದಿದ್ದಕ್ಕೆ ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ. ಬೈಕ್ ಕೊಡಿಸುವಂತೆ ತಂದೆ-ತಾಯಿ ಜತೆ ಜಗಳವಾಡಿದ ಬಳಿಕ ಯುವಕ ನೇಣಿಗೆ ಶರಣಾಗಿದ್ದಾನೆ. ಆದರೆ, ಮಗನ ಸಾವಿನಿಂದ ಮನನೊಂದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಧನರಾಜ ಸುರೇಶ ನಾಯಕ (18) ಹಾಗೂ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆಗೆ ಶರಣಾದವರು. ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಧನರಾಜ ಬೈಕ್ ತೆಗೆದುಕೊಳ್ಳಲು ಹಣ ಬೆಕೆಂದು ತಂದೆ-ತಾಯಿ ಬಳಿ ಬೆಳಗ್ಗೆ ಜಗಳ ತೆಗೆದಿದ್ದ. ಕೂಲಿ ಮಾಡಿಕೊಂಡಿರುವ ತಂದೆ ಸುರೇಶ ಬೈಕ್‌ಗೆ ನೀಡಲು ಹಣ ಇಲ್ಲವೆಂದು ಹೇಳಿದ್ದರಿಂದ ಅಡುಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೀಗಾಗಿ ಮಗನ ಸ್ಥಿತಿ ಕಂಡು ದಂಗಾಗಿದ್ದ ತಾಯಿ, ಕರೂರ ರೈಲು ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ | Car Catches fire: ಮಡಿಕೇರಿ ಬಳಿ ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಸ್ವಿಫ್ಟ್‌ ಕಾರು!

Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

Self Harming

ಬೆಂಗಳೂರು: ಬೆಂಗಳೂರಿನ ಯಲಹಂಕದ ಆರ್‌ಎನ್‌ಜೆಡ್ ಅಪಾರ್ಟ್‌ಮೆಂಟ್‌ನಲ್ಲಿ ತಾಯಿ ಮತ್ತು ಮಗ ಇಬ್ಬರು ಆತ್ಮಹತ್ಯೆ (Self Harming)ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಭಾರ್ಗವ್ ಪುಲಿವರ್ತ (13), ತಾಯಿ ರಮ್ಯಾ (40) ಮೃತ ದುರ್ದೈವಿಗಳು.

ಮೂಲತಃ ಆಂಧ್ರ ಪ್ರದೇಶದ ರಮ್ಯಾ ಶ್ರೀಧರ್ ಎಂಬುವವರನ್ನು ಪ್ರೀತಿಸಿ, ಅಂತರ್ಜಾತಿ ವಿವಾಹವಾಗಿದ್ದರು. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಶ್ರೀಧರ್ ಪುಲಿವರ್ತ ಮೂರು ತಿಂಗಳ ಹಿಂದೆ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು. ಫ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳಿಬ್ಬರ ಶಾಲೆ ಫೀಸ್, ಮನೆ ನಿರ್ವಹಣೆ ಖರ್ಚು ಅಂತ ತಿಂಗಳಿಗೆ ಲಕ್ಷ ಲಕ್ಷ ಹಣ ಬೇಕಿತ್ತು. ಇತ್ತ ಹಣ ಹೊಂದಿಸುವುದು ರಮ್ಯಾಳಿಗೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಖಿನ್ನತೆಗೊಳಗಾಗಿದ್ದರು. ಪತಿ ಸತ್ತ ನಂತರ ತಾವು ಸಾಯೋದಾಗಿ ರಮ್ಯಾ ಹಾಗೂ ಮಗ ಭಾರ್ಗವ್ ಹೇಳಿ ಕೊಂಡಿದ್ದರಂತೆ.

ರಮ್ಯಾಳಿಗೆ 19 ವರ್ಷದ ಮಗಳು ಇದ್ದು, ಆಕೆ ಪಿಜಿಯಲ್ಲಿದ್ದುಕೊಂಡು ಓದುತ್ತಿದ್ದಾಳೆ. ಕಳೆದ 9ರ ರಾತ್ರಿ ಮಗಳ ಜತೆಗೆ ಮಾತನಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಸಾವಿನ ನಂತರ ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಕುಟುಂಬವು ಕುಗ್ಗಿ ಹೋಗಿತ್ತು.

ಇದನ್ನೂ ಓದಿ: Murder case : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

ಮೊದಲು ಮಗ ಆತ್ಮಹತ್ಯೆ ಮಾಡಿಕೊಂಡ ಬಳಿಕ ರಮ್ಯಾ ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿದ್ದಾರೆ. ನಂತರ ತಾವು ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸತ್ತು ನಾಲ್ಕು ದಿನದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಪೊಲೀಸ್‌, ಡಾಕ್ಟರ್‌ ಮತ್ತು ಮಗಳಿಗೆ ಪತ್ರ ಬರೆದು ನೇಣಿಗೆ ಶರಣಾಗಿದ್ದಾರೆ.

ಎರಡ್ಮೂರು ದಿನದಿಂದ ಮನೆಯಿಂದ ಫೋನ್‌ ಬಾರದ ಹಿನ್ನೆಲೆಯಲ್ಲಿ ನಿನ್ನೆ ಶುಕ್ರವಾರ ಮಗಳು ಪಿಜಿಯಿಂದ ಮನೆಗೆ ಬಂದಿದ್ದಾಳೆ. ಮನೆ ಬಾಗಿಲು ಎಷ್ಟೇ ತಟ್ಟಿದ್ದರು ತೆರೆಯದೇ ಇದ್ದಾಗ, ತನ್ನ ಬಳಿ ಇದ್ದ ಇನ್ನೊಂದು ಕೀಯಿಂದ ಮನೆಯ ಬಾಗಿಲು ತೆಗೆದಿದ್ದಾಳೆ. ಆಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Udupi News
ಉಡುಪಿ22 seconds ago

Udupi News : ಇವನೆಂಥ ಅಪ್ಪ.. ಮಗಳ ಪ್ರೀತಿಗೆ ವಿರೋಧಿಸಿ ಅಶ್ಲೀಲ ವಿಡಿಯೊ ಹರಿಬಿಟ್ಟ ನೀಚ

Murder Case
ಕರ್ನಾಟಕ7 mins ago

Murder Case: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಲಕಿ ಶವ ಪತ್ತೆ ಕೇಸ್‌; ತಾಯಿಯ ಅಕ್ರಮ ಸಂಬಂಧಕ್ಕೆ ಬಲಿಯಾದಳಾ 5 ವರ್ಷದ ಪುತ್ರಿ?

Ninagagi Kannada Serial entry by Pooja Gandhi
ಕಿರುತೆರೆ47 mins ago

Ninagagi Kannada Serial: ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ!

Cauvery Dispute
ರಾಜಕೀಯ48 mins ago

Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ; ಸರ್ವಪಕ್ಷ‌ ಸಭೆ ಕರೆದ ಸಿಎಂ ಸಿದ್ದರಾಮಯ್ಯ

haveri News
ಹಾವೇರಿ50 mins ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಕರ್ನಾಟಕ1 hour ago

Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

Bhavana Ramanna hoovu foundation Varna Spardhe Bharathanatya Competition
ಸಿನಿಮಾ1 hour ago

Bhavana Ramanna: ನಟಿ ಭಾವನ ಸಂಸ್ಥೆಯಿಂದ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ; ಪ್ರಥಮ ಬಹುಮಾನಕ್ಕಿದೆ ಒಂದು ಲಕ್ಷ ರೂ.

Road Accident
ಬೆಂಗಳೂರು ಗ್ರಾಮಾಂತರ1 hour ago

Road Accident : ಲಾಂಗ್‌ ಡ್ರೈವ್‌ ಹೋದ ಯುವಕರಿಬ್ಬರು ಹಿಟ್ ಆ್ಯಂಡ್ ರನ್‌ಗೆ ಬಲಿ; ನಿಲ್ಲದ ನಿಶಾಚರಿಗಳ ಕಾಟ

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಸ್ಥಿರತೆ ಕಾಯ್ದುಕೊಂಡ ಚಿನ್ನದ ಬೆಲೆ; ಆಭರಣ ಕೊಳ್ಳುವ ಮುನ್ನ ದರ ಗಮನಿಸಿ

Chandan Shetty talk about Nivedita other marriage
ಸ್ಯಾಂಡಲ್ ವುಡ್2 hours ago

Chandan Shetty: ನಿವೇದಿತಾ ಇನ್ನೊಂದು ಮದುವೆ ಆದ್ರೆ ಓಕೆ ನಾ? ಚಂದನ್‌ ಶೆಟ್ಟಿ ಹೇಳಿದ್ದೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ19 hours ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ1 day ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ5 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ5 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ5 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ6 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ6 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

ಟ್ರೆಂಡಿಂಗ್‌