PM Narendra Modi: ಎಲ್ಲಿಯ 20 ಕೋಟಿ ಉದ್ಯೋಗ? ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆ! - Vistara News

ರಾಜಕೀಯ

PM Narendra Modi: ಎಲ್ಲಿಯ 20 ಕೋಟಿ ಉದ್ಯೋಗ? ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆ!

PM Narendra Modi: ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ Narendra Modi ಅವರೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Where are20 crore jobs Siddaramaiah series of questions to PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಟೀಕಾ ಪ್ರಹಾರ ಮುಂದುವರಿದಿದೆ. ಈಗಾಗಲೇ ಅನುದಾನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಇದಾದ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ಪದೇ ಪದೆ ಪ್ರಶ್ನೆ ಮಾಡುತ್ತಿರುವ ಸಿಎಂ, ಈಗ ಉದ್ಯೋಗ ಸೃಷ್ಟಿಯ ಬಗ್ಗೆ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ Narendra Modi ಅವರೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು? ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು?

ಇದನ್ನೂ ಓದಿ: Karnataka Budget Session 2024: ಆಪರೇಷನ್‌ ಹಸ್ತಕ್ಕೆ ಒಳಗಾಗಿದ್ದ ಜ್ಯೋತಿ ಗಣೇಶ್‌! ಸದನದಲ್ಲಿ ಬಾಯಿಬಿಟ್ಟ ಡಿಕೆಶಿ

ನರೇಂದ್ರ ಮೋದಿಯವರೇ, ನಿಮ್ಮದೇ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು 2022ರ ಜುಲೈನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “2014-15 ಮತ್ತು 2021 -22ರ ಅವಧಿಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ ಇದೇ ಇರಬಹುದಾ?
ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಧಾನಿ ನರೇಂದ್ರ ಮೋದಿಯವರು ಈಗ ತರಾತುರಿಯಿಂದ ಉದ್ಯೋಗ ಮೇಳಗಳನ್ನು ಆಯೋಜಿಸಲು ಕಾರಣ ಯುವಜನರ ಮೇಲಿನ ಕಾಳಜಿಯೇ? ಇಲ್ಲವೇ ಉದ್ಯೋಗ ಇಲ್ಲದೆ ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ?
ಪ್ರಧಾನಿಯವರೇ, ಈಗ ನಿಮ್ಮದೇ Bharatiya Janata Party (BJP) ಸರ್ಕಾರದ ಅಧಿಕೃತ ಅಂಕಿ-ಅಂಶಗಳನ್ನು ಮುಂದಿಟ್ಟುಕೊಂಡು ಮಾತಾಡೋಣ. 2017-18ರ ಎನ್.ಎಸ್.ಎಸ್.ಒ ವರದಿಯ ಪ್ರಕಾರ ಕಳೆದ 45 ವರ್ಷಗಳಲ್ಲೇ ದೇಶದ ನಿರುದ್ಯೋಗ ಪ್ರಮಾಣ ಅತಿ ಗರಿಷ್ಠ ಮಟ್ಟಕ್ಕೆ, ಅಂದರೆ ಶೇ. 6.1 ಗೆ ತಲುಪಿದೆ. 2011-12ರಲ್ಲಿ ಈ ಪ್ರಮಾಣ ಶೇ. 2.2 ಆಗಿತ್ತು.

ನೋಟು ಅಮಾನ್ಯೀಕರಣದಿಂದ ಹೆಚ್ಚಿದ ನಿರುದ್ಯೋಗ

ನೆನಪಿರಲಿ, ಕೋವಿಡ್ ಕಾಲದಲ್ಲಿ ನಿರುದ್ಯೋಗದ ಪ್ರಮಾಣ ಜಗತ್ತಿನಾದ್ಯಂತ ಹೆಚ್ಚಾಗಿದ್ದು ನಿಜ. ಆದರೆ, ನಮ್ಮಲ್ಲಿ ಇದು 2014-15ರಿಂದಲೇ ಇದು ಪ್ರಾರಂಭವಾಗಿತ್ತು. 2016ರಲ್ಲಿ ನಡೆದ ನೋಟು ಅಮಾನ್ಯೀಕರಣದಿಂದ ಕೈಗಾರಿಕೆಗಳೆಲ್ಲ ಮುಚ್ಚಿಹೋಗಿ ನಿರುದ್ಯೋಗ ಪ್ರಮಾಣ ಮಿತಿ ಮೀರತೊಡಗಿದ್ದನ್ನು ಹಲವಾರು ಆರ್ಥಿಕ ತಜ್ಞರೇ ವಿವರಿಸಿ ಹೇಳಿದ್ದಾರೆ. ಈ ಕಾರಣಕ್ಕಾಗಿಯೇ, 2017-18ರ ಎನ್.ಎಸ್.ಎಸ್.ಒ ಸರ್ವೇಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ವಿಳಂಬ ಮಾಡಿತ್ತೇ?

ನಿರುದ್ಯೋಗದ ಪ್ರಮಾಣದಲ್ಲಿ ಭಾರತದ ಸ್ಥಾನ ಯಾವುದು?

ವಿಶ್ವಬ್ಯಾಂಕ್ 2022ರಲ್ಲಿ ನೀಡಿದ್ದ ವರದಿ ಪ್ರಕಾರ ನಿರುದ್ಯೋಗದ ಪ್ರಮಾಣ ಪಾಕಿಸ್ತಾನದಲ್ಲಿ ಶೇ. 11.3ರಷ್ಟಿದ್ದರೆ, ಬಾಂಗ್ಲಾದೇಶದಲ್ಲಿ 12.9 ರಷ್ಟಿತ್ತು. ಭೂತಾನ್‌ನಲ್ಲಿ ಶೇ. 14.4 ರಷ್ಟಿದ್ದರೆ, ಚೀನಾದಲ್ಲಿ ಶೇ. 13.2 ರಷ್ಟಿತ್ತು. ಆದರೆ, ಅದೇ ಅವಧಿಯಲ್ಲಿ ನಮ್ಮ ಭಾರತದಲ್ಲಿ ನಿರುದ್ಯೋಗ ದರ ಶೇ 23.22 ರಷ್ಟಿತ್ತು. ಇತ್ತೀಚೆಗೆ ಅಂತಾರಾಷ್ಟ್ರೀಯ ಲೇಬರ್ ಆರ್ಗನೈಸೆಷನ್ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ನಿರುದ್ಯೋಗದ ಪ್ರಮಾಣದಲ್ಲಿ ನಮ್ಮ ದೇಶ, ನೆರೆಯ ದೇಶಗಳಾದ ಮ್ಯಾನ್ಮರ್, ಬಾಂಗ್ಲಾ, ಮಾರಿಷಸ್‌ಗಿಂತಲೂ ಕೆಳಗಿನ ಸ್ಥಾನದಲ್ಲಿರುವುದು ನಿಜವಲ್ಲವೇ?

ದೇಶದ ನಿರುದ್ಯೋಗ ಪ್ರಮಾಣ ಶೇ. 22.9ಕ್ಕೆ ಏರಿಕೆಯಾಗಿದೆ

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್‌ ಎಕಾನಮಿ ವರದಿ ಪ್ರಕಾರ ದೇಶದ ನಿರುದ್ಯೋಗ ಪ್ರಮಾಣ 2014ರಲ್ಲಿ 5.44% ಇದ್ದದ್ದು 2023ರ ಅಕ್ಟೋಬರ್‌ನಲ್ಲಿ 10.05% ತಲುಪಿದೆ. ಇನ್ನು ವಯಸ್ಸಿನ ಆಧಾರದಲ್ಲಿ ನೋಡುವುದಾದರೆ 20 ರಿಂದ 24ರ ವಯೋಮಾನ – 43.65% ನಿರುದ್ಯೋಗಿಗಳಿದ್ದರೆ; 25 ರಿಂದ 29 ವಯೋಮಾನದವರಲ್ಲಿ -14.33% ಆಗಿದೆ. 30 ರಿಂದ 34 ವಯೋಮಾನದವರಲ್ಲಿ -2.49% ನಿರುದ್ಯೋಗಿಗಳಿದ್ದಾರೆ. ಕೇಂದ್ರ ಸರ್ಕಾರವೇ ಪ್ರತಿ ಮೂರು ತಿಂಗಳಿಗೊಮ್ಮೆ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (ಪಿಎಲ್ಎಫ್ ಎಸ್) ಪ್ರಕಾರ 2019 ರಿಂದ 2022ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ ಶೇ. 22.9ಕ್ಕೆ ಏರಿಕೆಯಾಗಿದೆ. ಏರಿಕೆಯಾಗಿರುವುದು ಉದ್ಯೋಗಗಳ ಸಂಖ್ಯೆ ಅಲ್ಲ, ಸುಳ್ಳುಗಳ ಸಂಖ್ಯೆ ಅಷ್ಟೆ ಅಲ್ಲವೇ?

ಇವರಿಗೆಲ್ಲಿಯ ರೋಜಗಾರ್ ಮೇಳ?

2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿ ವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ, ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ! ಕರ್ನಾಟಕವೊಂದರಲ್ಲೇ 2021ರಲ್ಲಿ 1,129 ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆಲ್ಲಿಯ ರೋಜಗಾರ್ ಮೇಳ?

ವಿದೇಶಕ್ಕೆ ವಲಸೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ

ಉದ್ಯೋಗ ಅರಸಿ, ದೇಶದಿಂದ ವಿದೇಶಕ್ಕೆ ವಲಸೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಫ್ರಾನ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ ಈ ವಿಮಾನದಲ್ಲಿ 66 ಮಂದಿ ಗುಜರಾತಿಗಳಿದ್ದರು. ತಮ್ಮನ್ನು ಗುಜರಾತಿನಿಂದ ಅಮೆರಿಕಕ್ಕೆ ಅಕ್ರಮವಾಗಿ ಕರೆದೊಯ್ಯಲು ಏಜೆಂಟ್‌ಗಳಿಗೆ ತಲಾ 60 – 80 ಲಕ್ಷ ರೂಪಾಯಿಗಳನ್ನು ನೀಡಿದ್ದರು ಎಂಬ ಅಂಶ ವಿಚಾರಣೆಯಲ್ಲಿ ಬಹಿರಂಗವಾಗಿತ್ತು. 2018 ರಿಂದ 2019ರ ವರೆಗೆ 8,027 ಮಂದಿ, 2019 ರಿಂದ 2020ರ ವರೆಗೆ 19,883 ಮಂದಿ, 2020 ರಿಂದ 2021ರ ವರೆಗೆ 30,662 ಮಂದಿ, 2021 ರಿಂದ 2022ರ ವರೆಗೆ 63,927 ಮಂದಿ ಭಾರತೀಯರು ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ. ಈ ಅಕ್ರಮ ವಲಸಿಗರ ಪೈಕಿ ಬಹುಪಾಲು ಜನರು ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಿಗೆ ಸೇರಿದವರು ಎಂಬುದು ಗಮನಿಸಬೇಕಾದ ಅಂಶ ಅಲ್ಲವೇ?

ಹೊಗೆ ಬಾಂಬ್‌ ಸಿಡಿಸಿದ್ದು ಹತಾಶ ಯುವಕರು

ಇದು ಹೊಸ ಉದ್ಯೋಗಗಳ ಸೃಷ್ಟಿಯ ಕಥೆಯಾದರೆ, ಇರುವ ಸರ್ಕಾರಿ ಉದ್ಯೋಗಗಳ ಭರ್ತಿಯಲ್ಲೂ ತೀರಾ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ವಿವಿಧ ಇಲಾಖೆಯ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಸಣ್ಣಪುಟ್ಟ ಹುದ್ದೆಗಳಿಗೂ ಸ್ನಾತಕೋತ್ತರ ಪದವೀಧರ, ಬಿಇ, ಎಂಬಿಬಿಎಸ್ ಪದವಿ ಪಡೆದವರು ಅರ್ಜಿ ಸಲ್ಲಿಸುವ ವಿದ್ಯಮಾನ ಇತ್ತೀಚೆಗೆ ಸಾಮಾನ್ಯವಾಗುತ್ತಿದೆ.
ದೇಶದ ಯುವಜನರು ನಿರುದ್ಯೋಗದ ದಳ್ಳುರಿಯಲ್ಲಿ ಬೇಯುತ್ತಾ ಇದ್ದಾರೆ. ಕಳೆದ ವರ್ಷಾಂತ್ಯದಲ್ಲಿ ಸಂಸತ್ತಿನ ಭದ್ರತೆಯನ್ನು ಭೇದಿಸಿ, ಒಳನುಸುಳಿ ಹೊಗೆಬಾಂಬ್ ಸಿಡಿಸುವ ಮಟ್ಟಿಗೆ ಹತಾಶರಾಗಿದ್ದ ಯುವಕರು ಕೂಡಾ ನಿರುದ್ಯೋಗಕ್ಕೆ ಬಲಿಯಾದವರಲ್ಲವೇ?

ಇದನ್ನೂ ಓದಿ: Karnataka Budget Session 2024: ಎಚ್‌ಡಿಕೆ ಉಪ್ಪು, ಹುಳಿ, ಖಾರಕ್ಕೆ ನರೇಂದ್ರ ಸ್ವಾಮಿ ಒಗ್ಗರಣೆ; ಮೋದಿ ಅಕ್ಕಿ ಸರಿನಾ ಎಂದು ಪ್ರಶ್ನೆ!

ರೋಜ್‌ಗಾರ ಮೇಳದ ಮಾನದಂಡ ಏನು?

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉದ್ಯೋಗ ಭರ್ತಿಗಾಗಿ ಸರ್ಕಾರಗಳು ನಿರ್ದಿಷ್ಟ ನೇಮಕಾತಿ ಪ್ರಕ್ರಿಯೆ ನಡೆಸುತ್ತವೆ. ಇದಕ್ಕಾಗಿಯೇ ಯುಪಿಎಸ್‌ಸಿ, ಎಸ್ಎಸ್‌ಸಿ, ಲೋಕಸೇವಾ ಆಯೋಗಗಳಗಳಿವೆ. ಹೀಗಿರುವಾಗ ಸಾಕ್ಷಾತ್ ಪ್ರಧಾನಿಯವರೇ ವಿಡಿಯೊ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳ ವಿತರಿಸುತ್ತಿರುವುದು ಯಾವ ಉದ್ಯೋಗಗಳಿಗೆ? ರೋಜ್‌ಗಾರ್ ಮೇಳದಲ್ಲಿ ನೀಡಲಾಗುತ್ತಿರುವ ಉದ್ಯೋಗಗಳು ಯಾವುದು? ಇವುಗಳು ಕಾಯಂ ಉದ್ಯೋಗವೇ? ತಾತ್ಕಾಲಿಕವೇ? ಅರೆಕಾಲಿಕವೇ? ಪೂರ್ಣಕಾಲಿಕವೇ? ಈ ಉದ್ಯೋಗಗಳನ್ನು ನೀಡುವಾಗ ಮೀಸಲಾತಿಯನ್ನು ಅನುಸರಿಸಲಾಗಿದೆಯೇ? ಅರ್ಹತೆಗಷ್ಟೇ ಪ್ರಾಮುಖ್ಯ ನೀಡಲಾಗಿದೆಯೇ? ರಾಜಕೀಯ ಒಲವು -ನಿಲುವುಗಳನ್ನು ಪರಿಗಣಿಸಲಾಗಿತ್ತೇ? ಪ್ರಧಾನಮಂತ್ರಿಗಳೇ ಈ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Fraud Case : ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಮಾಜಿ ಶಾಸಕನಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸಹೋದರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಕೊಟ್ಟ ಹಣ ಕೇಳಿದರೆ ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.

VISTARANEWS.COM


on

By

Fraud case Union Minister Pralhad Joshis brother duped of ticket for Lok Sabha polls
ಮಾಜಿ ಶಾಸಕ ದೇವಾನಂದ್ ಚೌಹಾಣ್ ಹಾಗೂ ಗೋಪಾಲ್‌ ಜೋಶಿ
Koo

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸಹೋದರನ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಪ್ರಲ್ಹಾದ ಜೋಶಿ ಸಹೋದರ ಗೋಪಾಲ್‌ ಜೋಶಿ ಎಂಬುವವರು ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 2 ಕೋಟಿ ರೂ. ವಂಚಿಸಿರುವುದಾಗಿ (Fraud Case) ಎಫ್‌ಐಆರ್‌ ದಾಖಲಾಗಿದೆ. ಗೋಪಾಲ್ ಜೋಶಿ ಸೇರಿದಂತೆ ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧವೂ ಕೇಸ್ ದಾಖಲಾಗಿದೆ.

ಮಾಜಿ ಶಾಸಕ ದೇವಾನಂದ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಎಂಬುವರಿಂದ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 2018ರಲ್ಲಿ ನಾಗಠಾಣಾ ಕ್ಷೇತ್ರದಿಂದ ಜೆಡಿಎಸ್‌ (JDS)ದೇವಾನಂದ್ ಚೌಹಾಣ್ ಶಾಸಕರಾಗಿದ್ದರು. 2023ರ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ದೇವಾನಂದ್ ಚೌಹಾಣ್ ಸೋತಿದ್ದರು. ಬಳಿಕ ಪರಿಚಯಸ್ಥ ಶೇಖರ್ ನಾಯಕ್ ಮೂಲಕ ಗೋಪಾಲ್ ಜೋಶಿ ಪರಿಚಯವಾಗಿದ್ದರು. ಮಾರ್ಚ್ ಮೊದಲ ವಾರ ಹುಬ್ಬಳ್ಳಿಯಲ್ಲಿ ಗೋಪಾಲ್ ಜೋಶಿ ಚೌಹಾಣ್ ದಂಪತಿಯನ್ನು ಭೇಟಿ ಮಾಡಿದ್ದರು. ಈ ವೇಳೆ 2024ರ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದರು. ನನ್ನ ತಮ್ಮನಿಗೆ ಕೇಂದ್ರ ಸರ್ಕಾರದಲ್ಲಿ ವರ್ಚಸ್ಸು ಚೆನ್ನಾಗಿದೆ. ಪ್ರಹ್ಲಾದ್ ಜೋಶಿ ಹೇಳಿದಂತೆ ಮೋದಿ, ಅಮಿತ್ ಶಾ ಕೇಳುತ್ತಾರೆ. ಹೀಗಾಗಿ ಬಿಜಾಪುರ ಕ್ಷೇತ್ರದಿಂದ ನಿಮಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದರು.

ಗೋಪಾಲ್ ಜೋಶಿ ಟಿಕೆಟ್‌ಗೆ ಬರೋಬ್ಬರಿ 5 ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿಯಲ್ಲಿಯೇ ಡೀಲ್ ನಡೆದಿತ್ತು. ಆದರೆ 5 ಕೋಟಿ ರೂ.‌ಸಾಧ್ಯವಿಲ್ಲ ಎಂದು ಚೌಹಣ್ ದಂಪತಿ ಹೊರಟು ಹೋಗಿದ್ದರು ಎನ್ನಲಾಗಿದೆ. ಬಳಿಕ ಗೋಪಾಲ್ ಜೋಶಿ ಮತ್ತು ಶೇಖರ್ ಇಬ್ಬರು ಚೌಹಣ್ ದಂಪತಿ ಮನವೊಲಿಸಿದ್ದರು. ಸದ್ಯಕ್ಕೆ 25 ಲಕ್ಷ ರೂ. ಕೊಟ್ಟು ಉಳಿದ ಹಣಕ್ಕೆ ಚೆಕ್ ಕೊಡಿ ಎಂದಿದ್ದರಂತೆ. ಹೀಗಾಗಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಗೋಪಾಲ್ ಜೋಶಿ ಸಹೋದರಿ ವಿಜಯಲಕ್ಷ್ಮಿ ಮನೆಗೆ 25 ಲಕ್ಷ ರೂ. ಹಣವನ್ನು ತಂದು ಸುನೀತಾ ಚೌಹಣ್ ನೀಡಿದ್ದರು. ಆದರೆ ದೇವನಾಂದ್‌ಗೆ ಗೋಪಾಲ್ ಜೋಶಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸಲಿಲ್ಲ.

ಸುನೀತಾ ಚೌಹಾಣ್ ತಮ್ಮ 25 ಲಕ್ಷ ರೂ.‌ ಹಣ ನೀಡುವಂತೆ ಕೇಳಿದ್ದಾರೆ. ಹಣ ಕೇಳಿದರೆ 200 ಕೋಟಿ ರೂ. ಪ್ರಾಜೆಕ್ಟ್ ಹಣ ಬರಬೇಕು ಕೊಡುವುದಾಗಿ ಸಬೂಬು ನೀಡಿದ್ದಾರೆ. ಅಷ್ಟಲ್ಲದೇ ಗೋಪಾಲ್ ಜೋಶಿ, ಸುನೀತಾ ಬಳಿ ಮತ್ತೆ 1.75 ಕೋಟಿ ರೂ. ಹಣ ಕೇಳಿದ್ದರು. ಮುಂದಿನ ಚುನಾವಣೆಗೆ ಸಹಾಯ ಮಾಡುವುದಾಗಿ ಹಣ ಕೇಳಿದ್ದರು. ಈ ಮಾತನ್ನು ನಂಬಿ ಮತ್ತೆ 1.75 ಕೋಟಿ ಹಣವನ್ನು ವಿಜಯಲಕ್ಷ್ಮಿಗೆ ಸುನೀತಾ ಚೌಹಣ್ ನೀಡಿದ್ದರು. ಆದರೆ ಹಣ ಕೇಳಿದಾಗ ಸಬೂಬು ಗೋಪಾಲ್, ವಿಜಯಲಕ್ಷ್ಮಿ ಹೇಳುತ್ತಿದ್ದರು.

ಈ ವೇಳೆ ಗೋಪಾಲ್ ಜೋಶಿ ಪುತ್ರ ಅಜಯ್ ಜೋಶಿ ಹಣ ನಾನು ವಾಪಸ್ ಕೊಡುವುದಾಗಿ ಹೇಳಿದ್ದರು. ಆದರೆ ಯಾರು ಕೂಡ ಸುನೀತಾಗೆ ಹಣ ವಾಪಸ್ ನೀಡಿರಲಿಲ್ಲ. ಕಳೆದ ಆ. 1ರಂದು ವಿಜಯಲಕ್ಷ್ಮಿ ಮನೆ ಬಳಿ ಬಂದಿದ್ದ ಸುನೀತಾ, ಹಣ ಕೇಳಿದಾಗ, ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ಮೊರೆ ಹೋಗಿರುವ ಸುನೀತಾ ಚೌಹಣ್ ಬಸವೇಶ್ವರ ನಗರ ಠಾಣೆಯಲ್ಲಿ ವಂಚನೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Continue Reading

ಬೆಂಗಳೂರು

MLA Muniratna: ಮುನಿರತ್ನ ಹನಿಟ್ರ್ಯಾಪ್ ಕೇಸ್‌ಗೆ ಟ್ವಿಸ್ಟ್; ತನಿಖೆಯಲ್ಲಿ ಬಯಲಾಯ್ತು ಪ್ರಭಾವಿ ನಾಯಕರ ಹೆಸರು

MLA Muniratna: ಮುನಿರತ್ನ ಹನಿಟ್ರ್ಯಾಪ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ತನಿಖೆಯಲ್ಲಿ ಪ್ರಭಾವಿ ನಾಯಕರ ಹೆಸರುಗಳು ಬಯಲಾಗಿವೆ.

VISTARANEWS.COM


on

By

Munirathnas honeytrap case gets a twist Names of influential leaders revealed in probe
Koo

ಬೆಂಗಳೂರು: ಶಾಸಕ ಮುನಿರತ್ನ (MLA Muniratna) ಹನಿ ಟ್ರ್ಯಾಪ್ ಕೇಸ್ ದಿನೆದಿನೇ ತಿರುವು ಪಡೆದುಕೊಳ್ಳುತ್ತಾ ಹೋಗುತ್ತಿದೆ. ಮುನಿರತ್ನ ಸದ್ಯ ಎಸ್ಐಟಿ ಕಸ್ಟಡಿಯಲ್ಲಿದ್ದರೆ, ಅತ್ತ ವಿಚಾರಣೆ ವಿಭಿನ್ನ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಸಂತ್ರಸ್ತೆಯ ಹೇಳಿಕೆ ದಾಖಲಿಸಿರುವ ಅಧಿಕಾರಿಗಳು ಆ ಹೇಳಿಕೆ ಮೇರೆಗೆ ಹಲವು ಗಣ್ಯರಿಗೆ ನೋಟಿಸ್ ನೀಡಲಿದ್ದಾರೆ. ಹಾಗಾದರೆ ಈ ಪ್ರಕರಣದಲ್ಲಿ ಮುನಿರತ್ನ ಜತೆ ಕೈಜೋಡಿಸಿದ ಆ ರಾಜಕಾರಣಿಗಳು ಯಾರು?

ಎಸ್ಐಟಿ ಅಧಿಕಾರಿಗಳಿಂದ ಹನಿಟ್ರ್ಯಾಪ್ ಕೇಸ್ ತನಿಖೆ ಚುರುಕುಗೊಂಡಿದೆ. ಪ್ರಕರಣ ಸಂಬಂಧ ಶಾಸಕ ಮುನಿರತ್ನ ವಿಚಾರಣೆ ಅನುಭವಿಸುತ್ತಿದ್ದರೆ, ಅತ್ತ ಸಂತ್ರಸ್ತೆ ವಿಚಾರಣೆಯಲ್ಲಿ ಕುತೂಹಲಕಾರಿ ಸಂಗತಿಯನ್ನು ಬಹಿರಂಗ ಪಡಿಸಿದ್ದು, ಪ್ರಕರಣದಲ್ಲಿ ಮುನಿರತ್ನ ಜತೆಗೆ ಇನ್ನು ಹಲವರು ಭಾಗಿಯಾಗಿದ್ದರು. ಅದರಲ್ಲಿ ಹಲವು ಅಧಿಕಾರಿಗಳು, ಮಾಜಿ ಕಾರ್ಪೋರೇಟರ್‌ಗಳು, ರಾಜಕಾರಣಿಗಳು ಈ ಹನಿ ಟ್ರ್ಯಾಪ್‌ನಲ್ಲಿ ಶಾಮಿಲಾಗಿದ್ದಾರೆ ಎಂದಿದ್ದಾಳೆ. ಸದ್ಯ ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ತನಿಖೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಆ ಪ್ರಬಲ ವ್ಯಕ್ತಿಗಳಿಗೆ ನೋಟಿಸ್ ನೀಡಲಿದ್ದಾರೆ.

ಇನ್ನು ಮುನಿರತ್ನ ಸಂಬಂಧ ಹೇಳಿಕೆ ದಾಖಲಿಸುವಾಗ ಖುದ್ದು ಸಂತ್ರಸ್ಥ ಮಹಿಳೆಯಿಂದಲೇ ಹೆಸರು ಉಲ್ಲೇಖ ಆಗಿದೆ. ಈ ಟ್ರ್ಯಾಪ್‌ನಲ್ಲಿ ಯಾರೆಲ್ಲ ಭಾಗಿಯಾಗಿದ್ದರು ಎಂದು ಪ್ರಭಾವಿಗಳ ಹೆಸರನ್ನು ಹೇಳಿದ್ದಾರೆ. ಸದ್ಯ ಈ ಬಗ್ಗೆ ಎಸ್ಐಟಿ ಕೆಲ ಮಾಜಿ ಕಾರ್ಪೋರೇಟರ್‌ಗಳಿಗೆ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗಲು ಸೂಚನೆ ನೀಡುವ ಸಾಧ್ಯತೆ ಇದೆ. ಕಾರ್ಪೋರೇಟರ್‌ ಜತೆಗೆ ಅಧಿಕಾರಿಗಳಲ್ಲದೆ ಪ್ರಭಾವಿ ರಾಜಕಾರಣಿಗಳು ಸಹ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಮಹಿಳೆ ವಿಚಾರಣೆಯಲ್ಲಿ ಹೇಳಿದ್ದು, ಈ ಬಗ್ಗೆ ಎಸ್ಐಟಿ ಆ ರಾಜಕಾರಣಿಗಳಿಗೆ ನೋಟಿಸ್ ನೀಡುವ ಮುನ್ನ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ.

ಇದೆಲ್ಲ ಒಂದು ಕಡೆಯಾದರೆ ಅತ್ಯಾಚಾರ ಕೇಸ್‌ನ ತನಿಖೆ ಜತೆಗೆ ಹನಿಟ್ರ್ಯಾಪ್ ಕೇಸ್‌ನ ಮೂಲಕ್ಕೆ ಕೈ ಹಾಕಿರುವ ಎಸ್ಐಟಿ ಅಧಿಕಾರಿಗಳು ಮುನಿರತ್ನರ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಸಂತ್ರಸ್ತೆ ಹೇಳಿಕೆ‌ ಸಂಚಲನಕ್ಕೆ ಕಾರಣವಾಗಿದ್ದು, ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಯುತ್ತಿದೆ.

Continue Reading

ದೇಶ

Jammu-Kashmir Election: ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯ ಕಮಾಲ್, ಚೇತರಿಸಿಕೊಂಡ ಕಮಲ ಪಡೆ; ತಲೆಕೆಳಗಾಯ್ತು ಹರಿಯಾಣ ಚುನಾವಣೆ ಸಮೀಕ್ಷೆ ಲೆಕ್ಕಾಚಾರ

ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬಂದಿದ್ದು, ಹ್ಯಾಟ್ರಿಕ್ ಗೆಲವು ಸಾಧಿಸಿದೆ. ಇತ್ತ ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯು ಕಮಾಲ್ ಮಾಡಿದೆ.

VISTARANEWS.COM


on

By

Congress alliance wins in Kashmir Haryana poll survey Calculations turned upside down
Koo

ಲೋಕಸಭಾ ಚುನಾವಣೆ ಬಳಿಕ ನಡೆದ 2 ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ (Jammu-Kashmir Election) ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮೈತ್ರಿ ಸಕ್ಸಸ್ ಆಗಿದ್ದರೆ ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ಬರಲಿದೆ ಎಂಬ ಲೆಕ್ಕಾಚಾರ ಉಲ್ಟಾ ಆಗಿದೆ. ಕಾಶ್ಮೀರದಲ್ಲಿ 3 ಹಂತದಲ್ಲಿ ಚುನಾವಣೆ ನಡೆದಿದ್ರೆ, ಹರಿಯಾಣದ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. ಎಲ್ಲಾ ಚುನಾವನೋತ್ತರ ಸಮೀಕ್ಷೆಗಳು ಸಹ ಕಾಶ್ಮೀರದಲ್ಲಿ ಅತಂತ್ರವಾಗಿದೆ. ಹರ್ಯಾಣದಲ್ಲಿ ಈ ಬಾರಿ ಕಾಂಗ್ರೆಸ್ ಗೆ ಅಧಿಕಾರ ಫಿಕ್ಸ್ ಎಂದು ಭವಿಷ್ಯ ನುಡಿದಿದ್ವು. ಅದರಂತೆ ಫಲಿತಾಂಶದ ದಿನವಾದ ಗುರುವಾರ, ಹರ್ಯಾಣದಲ್ಲಿ ಕಾಂಗ್ರೆಸ್ ಪ್ರಾರಂಭದಲ್ಲಿ ಗೆಲ್ಲುವ ಹುಮ್ಮಸ್ಸಿದ್ದರೂ, 10.30 ಆಗುತ್ತಿದ್ದಂತೆ ಲೆಕ್ಕಾಚಾರವೇ ಬೇರೆ ಆಗೋಗಿತ್ತು.

ಆಡಳಿತ ವಿರೋಧಿ ಅಲೆ, 2 ಬಾರಿ ಬಿಜೆಪಿ ಅಧಿಕಾರ ನಡೆಸಿದೆ. ಈ ಬಾರಿ ಹರಿಯಾಣ ಜನ ಬದಲಾವಣೆ ಬಯಸಿದ್ದಾರೆ ಅನ್ನುವಷ್ಟರಲ್ಲಿ ಮತ್ತೆ ಬಿಜೆಪಿ ಮುನ್ನಡೆ ಸಾಧಿಸಿತ್ತು. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ NC ಮೈತ್ರಿ ವರ್ಕೌಟ್ ಆಗಿ ಅಧಿಕಾರ ದೊರೆತಿದ್ರೆ, ಬಿಜೆಪಿ ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡಿದೆ. ಆದರೆ ಮೆಹಬೂಬ ಮಫ್ತಿರ ಪಿಡಿಪಿ ಪಕ್ಷ ಮಾತ್ರ ಎರಡಂಕಿ ದಾಟುವಲ್ಲೂ ಸಹ ಯಶಸ್ವಿಯಾಗಿಲ್ಲ.

 Congress alliance wins in Kashmir Haryana poll survey Calculations turned upside down
Congress alliance wins in Kashmir Haryana poll survey Calculations turned upside down

ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಕಾರಣಗಳೇನು?

-ಪ್ರಬಲ ಆಡಳಿತ ವಿರೋಧಿ ಅಲೆಯನ್ನ ಚುನಾವಣಾ ಸಂಧರ್ಭದಲ್ಲಿ ಎದುರುಸಿರುವುದು
-ಕಳೆದ ಸರ್ಕಾರದಲ್ಲಿ ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ನಯಾಬ್ ಸಿಂಗ್ ಸೈನಿ ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು
-ಸೈನರನ್ನ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಮೂಲಕ ಬಿಜೆಪಿ ಒಬಿಸಿ ಪರವಾಗಿ ಇದೇ ಎಂಬ ಸಂದೇಶ ರವಾನೆ
-ಒಬಿಸಿ ಸಮುದಾಯದ ಮೊದಲ ಮುಖ್ಯಮಂತ್ರಿಯಾಗಿ ಹರ್ಯಾಣದಲ್ಲಿ ಸೈನಿ ನೇಮಕ
-ಜಾಟ್ ಸಮುದಾಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಿದ್ದರು ಸಹ, ಜಾಟ್ ಸಮುದಾಯ ಹೊರತುಪಡಿಸಿ ಬೇರೆ ಸಮುದಾಯದ ವೋಟ್ ಬ್ಯಾಂಕ್ ಭದ್ರಪಡಿಸಿಕೊಂಡಿದ್ದು
-ಹರಿಯಾಣದಲ್ಲಿ 30% ಜಾಟ್‌, 34% ಒಬಿಸಿ, ದಲಿತರು 16%, ಮತ್ತು 23% ಪಂಜಾಬಿಗಳು ಹಾಗೂ ಬ್ರಾಹ್ಮಣರು, ರಜಪೂತರು, ಅಗರ್‌ವಾಲ್‌ಗಳು, ಅಹಿರ್, ಗುಜ್ಜರ್ ಮತ್ತು ಸೈನಿಗಳು ಹರಿಯಾಣದಲ್ಲಿ ಸುಮಾರು 11% ಜನಸಂಖ್ಯೆ ಹೊಂದಿದೆ.
-ಜಾತಿ ಲೆಕ್ಕಾಚಾರ ಬಿಜೆಪಿಯ ಕೈ ಹಿಡಿದಿರುವುದು
-ಜಾಟ್ ಸಮುದಾಯ ಹೊರತುಪಡಿಸಿ, ಒಬಿಸಿ ಹಾಗೂ ದಲಿತ ವೋಟ್ ಗಳನ್ನ ಭದ್ರಪಡಿಸಿಕೊಂಡಿದ್ದು
-ಮುಖ್ಯಮಂತ್ರಿಯಾಗಿ ಸೈನಿ 70 ದಿನಗಳ ಅಧಿಕಾರಾವಧಿಯಲ್ಲಿ ತೆಗೆದುಕೊಂಡ ನಿರ್ಧಾರಗಳು ಹಾಗೂ ಆಡಳಿತ ಶೈಲಿ
-ಪ್ರಧಾನಿ ಮೋದಿ ಭಾಷಣ ಹಾಗೂ ಅಮಿತ್ ಶಾ ಮತ್ತು ಮೋದಿ ಒಟ್ಟಾರೆ ನಡೆಸಿದ್ದ 14 ರೋಡ್ ಶೋಗಳು
-ರೈತಾಪಿ ವರ್ಗದಿಂದ ಬಿಜೆಪಿ ಮೇಲಿದ್ದ ಕೋಪ ಹಾಗೂ ಅಗ್ನಿವೀರ್ ಯೋಜನೆ ಬಗ್ಗೆ ಇದ್ದ ಕಳವಳ ನಿವಾರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳೇನು?

-ಬಿಜೆಪಿಗಿದ್ದ ಆಡಳಿತ ವಿರೋಧಿ ಅಲೆಯನ್ನ ಸದುಪಯೋಗಪಡಿಸಿಕೊಳ್ಳದಿರುವುದು
-ಜಾಟ್ ಸಮುದಾಯದ ಮೇಲಿನ ಅತಿಯಾದ ನಂಬಿಕೆ ಹಾಗೂ ಜಾಟ್ ವೋಟ್ ಗಳ ಮೇಲೆಯೇ ಹೆಚ್ಚು ನಿಗಾ ವಹಿಸಿದ್ದು
-ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ ದಲಿತ ಮತಗಳ ಕ್ರೂಡಿಕರಣಕ್ಕೆ ಪ್ರಯತ್ನಿಸಿದ್ದಾದರೂ, ಸ್ಥಳೀಯ ನಾಯಕರು ಈ ಬಗ್ಗೆ ಗಮನ ಹರಿಸದಿರುವುದು
-ಜಾಟ್ ಮತಗಳ ಮೇಲಿನ ಅವಲಂಬನೆ, ಒಳಜಗಳ, ಹೂಡಾಗಳ ಮೇಲಿನ ಅತಿಯಾದ ಅವಲಂಬನೆ
-ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಲಹ ಜನರಿಗೆ ಬೇಸರ ತರಿಸಿತ್ತು
-ದಲಿತ ನಾಯಕಿ ಮತ್ತು ಸಿರ್ಸಾ ಸಂಸದೆ ಕುಮಾರಿ ಸೆಲ್ಜಾ ಮತ್ತು ಮಾಜಿ ಸಿಎಂ ಮತ್ತು ಜಾಟ್ ನಾಯಕ ಭೂಪಿಂದರ್ ಸಿಂಗ್ ಹೂಡಾ ನಡುವಿನ ಕಲಹವು ಸೋಲಿಗೆ ಪ್ರಮುಖ ಕಾರಣ
-ಕಾಂಗ್ರೆಸ್ ದಲಿತ ವಿರೋಧಿ ಎಂದು ಆರೋಪಿಸಿದಾಗ, ಸರಿಯಾಗಿ ರಾಜ್ಯ ನಾಯಕರು ಬಿಜೆಪಿಗೆ ಕೌಂಟರ್ ನೀಡದಿರುವುದು
-ಅಭ್ಯರ್ಥಿ ಆಯ್ಕೆ ಬಳಿಕ ಬಂಡಾಯವನ್ನ ಶಮನ ಮಾಡಲು ವಿಫಲ ಆಗಿರುವುದು
-ಲೋಕಸಭೆ ಚುನಾವಣೆಯಲ್ಲಿ 10 ಕ್ಷೇತ್ರದ ಪೈಕಿ ಕಾಂಗ್ರೆಸ್ 5 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು, ಈ ಅತಿಯಾದ ಆತ್ಮವಿಶ್ವಾಸ ಸಹ ಸೋಲಿಗೆ ಕಾರಣ
-ಪರಿಣಾಮಕಾರಿಯಲ್ಲದ ಪ್ರಚಾರ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ನೀಡದಿರುವುದು

Continue Reading

ದಕ್ಷಿಣ ಕನ್ನಡ

Self Harming: ಮಾಜಿ ಶಾಸಕ‌ ಮೊಯ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆ; ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವರ ವಿರುದ್ಧ ಎಫ್‌ಐಆರ್‌

Self Harming: ಮಾಜಿ ಶಾಸಕ‌ ಮೊಯ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆಯಾಗಿದೆ. ಇತ್ತ ಮುಮ್ತಾಜ್‌ ಅಲಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Self harming
Koo

ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ (52) ಎಂಬುವವರು ಸಾಯುವುದಾಗಿ ಕುಟುಂಬಸ್ಥರಿಗೆ ಮಸೇಜ್‌ ಕಳಿಸಿ ಮಂಗಳೂರು ಹೊರವಲಯದ ಕೂಳೂರು ಬ್ರಿಡ್ಜ್‌ನಲ್ಲಿ ಕಾರು ನಿಲ್ಲಿಸಿ ನಾಪತ್ತೆ (Missing Case) ಆಗಿದ್ದರು. ಇದೀಗ ಇಪ್ಪೆತ್ತೆಂಟು ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅವರ ಮೃತದೇಹ (Self Harming) ಸಿಕ್ಕಿದೆ. ತಣ್ಣೀರುಬಾವಿ ಮುಳುಗುಗಾರರು ಮೃತದೇಹ ಪತ್ತೆ ಮಾಡಿ ಹೊರತೆಗೆದಿದ್ದಾರೆ. ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವ ಗೋಳಾಡಿದರು.

ನಿನ್ನೆ ಭಾನುವಾರ ಬೆಳಗಿನ ಜಾವ ಮೂರು ಗಂಟೆಗೆ ಮನೆಯಿಂದ ಹೊರಟ್ಟಿದ್ದ ಮುಮ್ತಾಜ್ ಆಲಿ, ಬೆಳಗ್ಗೆ 5 ಗಂಟೆಗೆ ಕೂಳೂರು ಸೇತುವೆ ಮೇಲೆ ಡ್ಯಾಮೇಜ್‌ ಆದ ಸ್ಥಿತಿಯಲ್ಲಿ ಬಿಎಂಡಬ್ಲ್ಯೂ ಕಾರು ಪತ್ತೆಯಾಗಿತ್ತು. ಬಳಿಕ ನಿನ್ನೆ ದಿನವಿಡೀ ಹುಡುಕಿದರೂ ಮುಮ್ತಾಜ್ ಆಲಿ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಸೋಮವಾರ ಮತ್ತೆ ನದಿಯಲ್ಲಿ ಶೋಧ ಕಾರ್ಯ ಆರಂಭಿಸಲಾಗಿತ್ತು.

ಸಹೋದರನ ನೆನೆದು ಕಣ್ಣೀರು

ಸಹೋದರನನ್ನು ನೆನೆದು ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಕಣ್ಣೀರು ಹಾಕಿದರು. ಬ್ಲ್ಯಾಕ್‌ ಮೇಲ್‌ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನು ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ. ರಾಜಕೀಯ ರಹಿತವಾಗಿ ಕೆಲಸ ಮಾಡಿದ್ದ ಆತನನ್ನು ಪ್ರಚೋದನೆ ನೀಡಿ ಮುಗಿಸಿದ್ದಾರೆ ಎಂದು ಕಣ್ಣೀರು ಹಾಕಿದರು.

Self harming
Self harming

ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಗ್ಯಾಂಗ್‌ ಅರೆಸ್ಟ್‌

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಮ್ತಾಜ್ ಆಲಿ ಸಹೋದರ ಹೈದರ್ ದೂರಿನ ಮೇರೆಗೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆ ಪ್ರಚೋದನೆ ದೂರು ನೀಡಿರುವ ಸಂಬಂಧ ಮಹಿಳೆ ರೆಹಮತ್ ಹಾಗೂ ಅಬ್ದುಲ್ ಸತ್ತಾರ್, ಶಾಫಿ, ಮುಸ್ತಾಫ, ಶೋಯೆಬ್ ಹಾಗೂ ಸಿರಾಜ್ ವಿರುದ್ಧ ದೂರು ದಾಖಲಾಗಿದೆ. ಸಹೋದರ ಮುಮ್ತಾಜ್ ಆಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯ ಬಳಸಿಕೊಂಡು ಷಡ್ಯಂತ್ರ ಮಾಡಿರುವ ಆರೋಪವಿದೆ. ರೆಹಮತ್ ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರದ ಬೆದರಿಕೆ ಹಾಕಿದ್ದಾರೆ.

2024ರ ಜುಲೈನಿಂದ ಈವರೆಗೆ 50 ಲಕ್ಷ ವಸೂಲಿ ಮಾಡಿದ್ದಾರೆ. 25 ಲಕ್ಷ ಹಣವನ್ನು ಚೆಕ್ ಮೂಲಕವೂ ಮಹಿಳೆ ಪಡೆದಿದ್ದಾಳೆ. ಸತ್ತಾರ್ ಎಂಬಾತ ಮುಮ್ತಾಜ್ ಆಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಅಕ್ರಮ ಸಂಬಂಧ ಇದೆ ಎಂದು ಇವರು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದರು. ಜೀವ ಬೆದರಿಕೆ ಜತೆಗೆ ಮುಮ್ತಾಜ್ ಆಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ಸಹೋದರ ಮುಮ್ತಾಜ್ ಆಲಿ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina Bhavishya
ಭವಿಷ್ಯ12 ಗಂಟೆಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ1 ದಿನ ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ2 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು2 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು2 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು2 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ3 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Medical negligence
ಪ್ರಮುಖ ಸುದ್ದಿ3 ದಿನಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

assault case
ಬೆಂಗಳೂರು3 ದಿನಗಳು ago

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌