ಬೆಂಗಳೂರು: ರಾಜ್ಯದ ನಿಗಮ-ಮಂಡಳಿಗಳಿಗೆ (corporation board) ಅಧ್ಯಕ್ಷರನ್ನಾಗಿ 34 ಶಾಸಕರನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ಎರಡು ವರ್ಷ ಮಾತ್ರ ಅಧಿಕಾರದ ಅವಧಿ ನೀಡಲಾಗಿದೆ. ಏಕೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಕಾರಣ ನೀಡಿದ್ದಾರೆ. “ಪಕ್ಷಕ್ಕೆ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ (congress High Command) ಮಾಡಿದೆ” ಎಂದು ಹೇಳಿದ್ದಾರೆ. ನಿಗಮ ಮಂಡಳಿ ಅಧಿಕಾರಾವಧಿಯನ್ನು ಎರಡು ವರ್ಷ ನಿಗದಿ ಮಾಡಿದ್ದರ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರದ ಅವಧಿ ಎಂದು ಹೇಳಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: ಇಂದು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಪರೀಕ್ಷೆ; ಉದ್ದ ತೋಳಿನ ಅಂಗಿಗೆ ಕತ್ತರಿ
ಎಲ್ಲರಿಗೂ ಅವಕಾಶ ನೀಡಬೇಕು ಎಂದು ಹೈಕಮಾಂಡ್ ಹೇಳಿದೆ
ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರದ್ದು ಏನೂ ಇಲ್ಲ, ಡಿ.ಕೆ. ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು ಎಂದು ಹೈಕಮಾಂಡ್ ಹೇಳಿದೆ. ಅದರಂತೆ ನಾವು ಪಾಲನೆ ಮಾಡುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಕೊನೆಗೆ ಬಿಜೆಪಿ ಏನಾಯಿತು?
ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಕೇಳಿದಾಗ, “ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು? ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ. ಬೇಡ ಎಂದವರು ಯಾರು? ವಿಧಾನಸಭಾ ಚುನಾವಣೆಯಲ್ಲಿ ನಾವು 136- 140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು”? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.
ಇದನ್ನೂ ಓದಿ: Durga Mandir : ದುರ್ಗಾ ಪೂಜೆ ವೇಳೆ ಮಂಟಪ ಕುಸಿದು ಮಹಿಳೆ ಸಾವು; 17 ಮಂದಿಗೆ ಗಾಯ
ಇಂಡಿಯಾ ಒಕ್ಕೂಟದಿಂದ ಜೆಡಿಯು ಔಟ್; ಡಿಕೆಶಿ ಹೇಳಿದ್ದೇನು?
ಇಂಡಿಯಾ ಒಕ್ಕೂಟದಿಂದ ಬಿಹಾರದಲ್ಲಿ ಜೆಡಿಯು ಹೊರಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ನೀವೇ ಈ ವಿಚಾರವಾಗಿ ಹೇಳುತ್ತಿದ್ದೀರಿ. ಮುಂದೆ ಏನಾಗುತ್ತದೆ ನೋಡೋಣ” ಎಂದು ಹೇಳಿದರು.