Yuva Nidi Scheme: 5ನೇ ಗ್ಯಾರಂಟಿ ಯುವನಿಧಿ ನೋಂದಣಿ ಡಿ. 21ಕ್ಕೆ ಇಲ್ಲ! ರಾಜ್ಯ ಸರ್ಕಾರದ ಶಾಕಿಂಗ್‌ ನ್ಯೂಸ್‌ - Vistara News

ಕರ್ನಾಟಕ

Yuva Nidi Scheme: 5ನೇ ಗ್ಯಾರಂಟಿ ಯುವನಿಧಿ ನೋಂದಣಿ ಡಿ. 21ಕ್ಕೆ ಇಲ್ಲ! ರಾಜ್ಯ ಸರ್ಕಾರದ ಶಾಕಿಂಗ್‌ ನ್ಯೂಸ್‌

Yuva Nidi Scheme: ವಿಧಾನ ಮಂಡಲ ಅಧಿವೇಶನದಲ್ಲಿ ಯುವ ನಿಧಿ ಕುರಿತು ಮಾಹಿತಿ ನೀಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್‌, ಜನವರಿಯಿಂದ ಯುವ ನಿಧಿ ಗ್ಯಾರಂಟಿ ಯೋಜನೆಯನ್ನು ಪ್ರಾರಂಭ ಮಾಡುತ್ತೇವೆ. ಆದರೆ, ಡಿಸೆಂಬರ್ 21ಕ್ಕೆ ಯುವ ನಿಧಿ ನೋಂದಣಿಯನ್ನು ಪ್ರಾರಂಭ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Yuva Nidi Scheme and vidhana soudha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ (Congress Guarantee) ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Yuva Nidhi Scheme) ಚಾಲನೆ ನೀಡಲು ಮುಹೂರ್ತ ಫಿಕ್ಸ್‌ ಆಗಿದ್ದು, ಡಿ. 21ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭ ಎಂದು ಹೇಳಿದ್ದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಖಾತೆ ಸಚಿವ ಶರಣ ಪ್ರಕಾಶ್‌ ಪಾಟೀಲ್‌ (Sharana prakash Pateel) ಈಗ ಉಲ್ಟಾ ಹೊಡೆದಿದ್ದಾರೆ. ಡಿಸೆಂಬರ್ 21ಕ್ಕೆ ಯುವ ನಿಧಿ ನೋಂದಣಿಯಿಲ್ಲ ಎಂದು ಹೇಳಿದ್ದಾರೆ.

ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಯುವ ನಿಧಿ ಕುರಿತು ಮಾಹಿತಿ ನೀಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್‌, ಜನವರಿಯಿಂದ ಯುವ ನಿಧಿ ಗ್ಯಾರಂಟಿ ಯೋಜನೆಯನ್ನು ಪ್ರಾರಂಭ ಮಾಡುತ್ತೇವೆ. ಆದರೆ, ಡಿಸೆಂಬರ್ 21ಕ್ಕೆ ಯುವ ನಿಧಿ ನೋಂದಣಿಯನ್ನು ಪ್ರಾರಂಭ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಯುವ ನಿಧಿ ನೋಂದಣಿ ಪ್ರಕ್ರಿಯೆಯನ್ನು ಬಹುಶಃ ಡಿಸೆಂಬರ್ ಕೊನೇ ವಾರದಲ್ಲಿ ಶುರು ಮಾಡಲಾಗುವುದು. ಇಲ್ಲದಿದ್ದರೆ ಸ್ವಲ್ಪ ಮುಂದಕ್ಕೆ ಹೋಗಬಹುದು ಎಂಬರ್ಥದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಮಂಗಳವಾರವಷ್ಟೇ ದಿನಾಂಕ ಘೋಷಣೆ ಮಾಡಿದ್ದ ಸಚಿವ!

ಕಾಂಗ್ರೆಸ್‌ ಚುನಾವಣೆಗೆ ಮೊದಲು ಮತದಾರರಿಗೆ ಪಂಚ ಗ್ಯಾರಂಟಿಗಳನ್ನು ನೀಡಿತ್ತು. ಚುನಾವಣೆಯಲ್ಲಿ ಗೆದ್ದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ, 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ, ಪ್ರತಿ ಮನೆಗೆ 200 ಯೂನಿಟ್‌ಗಳಷ್ಟು ಉಚಿತ ವಿದ್ಯುತ್‌ ನೀಡುವ ಗೃಹ ಜ್ಯೋತಿ ಹಾಗೂ ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2000 ರೂ ಡಿಬಿಟಿ ಮಾಡುವ ಗೃಹಲಕ್ಷ್ಮಿ ಯೋಜನೆಗಳನ್ನು ಆಗಲೇ ಜಾರಿಗೊಳಿಸಲಾಗಿದೆ. ಯುವ ನಿಧಿ ಯೋಜನೆ ಡಿಸೆಂಬರ್‌ನಲ್ಲಿ ಜಾರಿಗೆ ಬರಲಿದೆ ಎಂದು ಹಿಂದೆಯೇ ಘೋಷಿಸಲಾಗಿತ್ತು. ಇದೀಗ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡುವ ದಿನಾಂಕವನ್ನು ಪ್ರಕಟಿಸಲಾಗಿದೆ. ಯುವ ನಿಧಿ ಮೂಲಕ ರಾಜ್ಯದ 5 ಲಕ್ಷ ನವ ನಿರುದ್ಯೋಗಿ ಪದವೀಧರ ಮತ್ತು ಡಿಪ್ಲೊಮಾ ಹೋಲ್ಡರ್‌ಗಳಿಗೆ ನೇರವಾಗಿ ಹಣ ತಲುಪಲಿದೆ ಎಂದು ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಟ್ವೀಟ್‌ ಮೂಲಕ ಮಂಗಳವಾರ ತಿಳಿಸಿದ್ದರು.

ಏನಿದು ಯುವನಿಧಿ ಯೋಜನೆ? ಯಾರಿಗೆ ಸಿಗುತ್ತದೆ ಹಣ?

  1. ಯುವ ನಿಧಿ ಯೋಜನೆಯ ಫಲಾನುಭವಿಯಾಗುವುದಕ್ಕೆ ಇರಬೇಕಾದ ಅರ್ಹತೆ ಮತ್ತು ಸಿಗುವ ಭತ್ಯೆ ವಿವರ ಹೀಗಿದೆ.
  2. 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೆ ಇರುವವರಿಗೆ ಈ ಯೋಜನೆಯ ಲಾಭ ಸಿಗಲಿದೆ.
  3. ವೃತ್ತಿಪರ ಕೋರ್ಸ್‌ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನೀಡಲಾಗುತ್ತದೆ.
  4. ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
  5. ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ.
  6. ಯಾವುದಾದರೂ ಉದ್ಯೋಗ ಸಿಕ್ಕಿದ ಕೂಡಲೇ ಈ ಸವಲತ್ತು ಸ್ಥಗಿತಗೊಳ್ಳಲಿದೆ.

ಯುವ ನಿಧಿ ಯೋಜನೆ ಷರತ್ತುಗಳು ಇವು

  1. ‘ಸೇವಾ ಸಿಂಧು’ ಪೋರ್ಟಲ್‌ ಮೂಲಕವೇ ಅರ್ಜಿ ಸಲ್ಲಿಸಬೇಕು (ಇನ್ನಷ್ಟೇ ಲಿಂಕ್‌ ಜನರೇಟ್‌ ಆಗಬೇಕಾಗಿದೆ.
  2. ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಮಾಡಿದರೆ ಸಾಕಾಗುತ್ತದೆ. ಆದರೆ, ಅಸತ್ಯದ ಪ್ರಮಾಣ ಸಲ್ಲದು.
  3. ಪದವಿ/ ಡಿಪ್ಲೊಮಾ ಮುಗಿಸಿದ ಫ್ರೆಷರ್ಸ್‌ಗೆ 6 ತಿಂಗಳಾದರೂ ಉದ್ಯೋಗ ಸಿಗದೆ ಇದ್ದರೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
  4. ತಿ ಫಲಾನುಭವಿಗೆ 2 ವರ್ಷಗಳಿಗೆ ಮಾತ್ರ ಸೀಮಿತ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತ
  5. ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: Yuva Nidhi Scheme: ಜನವರಿಯಲ್ಲೇ ಯುವನಿಧಿ ಜಾರಿ; ಅರ್ಹತೆ ಯಾರಿಗಿದೆ? ಈ ದಾಖಲೆ ನಿಮ್ಮಲ್ಲಿರಲಿ!

ಯಾರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ?

  1. ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು.
  2. ಯಾವುದೇ ಅಪ್ರೆಂಟೀಸ್‌ ವೇತನ ಪಡೆಯುತ್ತಿರುವವರು.
  3. ಸರಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.
  4. ಸರಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್‌ ಸಾಲ ಪಡೆದು ಸ್ವಯಂ ಉದ್ಯೋಗ ಶುರು ಮಾಡಿದವರಿಗೂ ಇಲ್ಲ

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

  1. ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
  2. ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ ತೆಗೆದಿಟ್ಟುಕೊಳ್ಳಿ.
  3. ನಿಮ್ಮ ಬ್ಯಾಂಕ್‌ ಖಾತೆ ಮಾಹಿತಿ‌ ಸ್ಪಷ್ಟವಾಗಿಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, ಕೆವೈಸಿ ಕೂಡಾ ಮಾಡಿ ಇಡಿ.
  4. ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
  5. ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು).

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

  1. ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಇನ್ನೂ ಅಧಿಕೃತವಾಗಿ ಹೇಳಿಲ್ಲ. ನಾವೇ ಮೊಬೈಲ್‌ನಲ್ಲಿ, ಕಂಪ್ಯೂಟರ್‌ಗಳಲ್ಲಿ ಅರ್ಜಿ ತುಂಬಬಹುದು. ಬೇರೆ ಕೇಂದ್ರಗಳ ಸಹಕಾರವನ್ನು ಕೂಡಾ ನೀಡಲಾಗುತ್ತದೆ ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Live News1 hour ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest6 hours ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest9 hours ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ1 day ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ1 day ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ1 day ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌