ಕರ್ನಾಟಕ ಎಲೆಕ್ಷನ್
Zameer Ahmed Khan : ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್; ಕನ್ನಡ ಹೋರಾಟಗಾರರ ಆಕ್ರೋಶ
ಶನಿವಾರ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ (Zameer Ahmed Khan) ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದನ್ನು ಕನ್ನಡ ಹೋರಾಟಗಾರರು ಖಂಡಿಸಿದ್ದಾರೆ.
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಕನ್ನಡ ಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡುತ್ತಿರುವ ಕನ್ನಡ ಹೋರಾಟಗಾರರು, ಜಮೀರ್ ಅಹ್ಮದ್ ಖಾನ್ ಅವರಿಗೆ ಕನ್ನಡದಲ್ಲಿಯೇ ಮಾತನಾಡಲು ಬರುತ್ತಿದ್ದರೂ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇಕೆ ಎಂದು ಪ್ರಶ್ನಿಸುತ್ತಿದ್ದಾರೆ.
ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಖಾನ್ (Zameer Ahmed Khan) ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಇವರೊಬ್ಬರು ಮಾತ್ರ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಗಮನ ಸೆಳೆದಿತ್ತು.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ, ಜಮೀರ್ ಅಹ್ಮದ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು ಎಂದು ಟೀಕಿಸಿದ್ದಾರೆ. ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ? ಎಂದು ಅವರು ಪ್ರಶ್ನಿಸಿದ್ದಾರೆ.
ಬಿಗ್‌ಬಾಸ್ ಖ್ಯಾತಿಯ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಜಮೀರ್ ಅಹ್ಮದ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ʻʻ ಕರ್ನಾಟಕಕ್ಕೆ ಬರುವ ರಾಷ್ಟ್ರೀಯ ನಾಯಕರೇ ಕನ್ನಡದಲ್ಲಿ ಮಾತನಾಡಲು ಪ್ರಯತ್ನ ಮಾಡುತ್ತಿರುವಾಗ ಈ ನಾಡಿನಲ್ಲೇ ಹುಟ್ಟಿರೋ ಜಮೀರ್ ಅಹ್ಮದ್ ಖಾನ್ ಅವರೇ ಇಷ್ಟು ವರ್ಷದಿಂದ ಇಲ್ಲೇ ಇದ್ದು ಕರ್ನಾಟಕದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡೋಲ್ಲ ಅಂದ್ರೆ ನಿಮಗೇನು ಹೇಳೋದುʼʼ ಎಂದು ಪ್ರಶ್ನಿಸಿದ್ದಾರೆ.
ಅಷ್ಟೆಲ್ಲಾ ಕನ್ನಡ ಮಾತಾಡೋ ಜಮೀರ್ ಅಹ್ಮದ್ ರಿಗೆ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಏನು ಬೇನೆ? ಕನ್ನಡ ಓದಲು ಬರುವುದಿಲ್ಲವೇ? ಎಂದು ರಾಮಚಂದ್ರ ಎಮ್ ಎನ್ನುವವರು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : Karnataka CM: … ಎಂಬ ಹೆಸರಿನವನಾದ ನಾನು…: ರಾಜ್ಯದ ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರ ಪ್ರಮಾಣ
ಕರ್ನಾಟಕ
MLC Election: ಕಾಂಗ್ರೆಸ್ ಸರ್ಕಾರಕ್ಕೆ 3ನೇ ಸವಾಲು: 3 ಪರಿಷತ್ ಸ್ಥಾನಕ್ಕೆ 19 ಆಕಾಂಕ್ಷಿಗಳು, ನಾಲ್ಕೈದು ಬಣಗಳು!
ಸದ್ಯ 34 ಸಚಿವರ ಪೈಕಿ ಬೋಸರಾಜು ಅವರು ವಿಧಾನಸಭೆ ಸದಸ್ಯರೂ ಅಲ್ಲ, ವಿಧಾನ ಪರಿಷತ್ ಸದಸ್ಯರೂ ಅಲ್ಲ. ಹಾಗಾಗಿ ಅವರನ್ನು ಆರು ತಿಂಗಳೊಳಗೆ ಕೆಳಮನೆ ಅಥವಾ ಮೇಲ್ಮನೆ ಸದಸ್ಯರನ್ನಾಗಿಸಬೇಕು.
ಬೆಂಗಳೂರು: ಈಗಷ್ಟೆ ಸಂಪುಟ ಸರ್ಕಸ್ ಮುಗಿಸಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಮೂರನೇ ಸವಾಲು ಎದುರಾಗಿದೆ. ವಿಧಾನಸಭೆಯಿಂದ ಆಯ್ಕೆ ಮಾಡಬೇಕಾದ ಮೂರು ವಿಧಾನ ಪರಿಷತ್ ಸ್ಥಾನಗಳನ್ನು ಭರ್ತಿ ಮಾಡಬೇಕಿದ್ದು, ಉಪಚುನಾವಣೆಗೆ ಈಗಾಗಲೆ ಆಕಾಂಕ್ಷಿಗಳ ಸಂಖ್ಯೆ ಬೆಳೆಯುತ್ತಲೇ ಸಾಗಿದೆ.
ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಅನೇಕ ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡಿದ್ದರು. ಇದರಲ್ಲಿ, ವಿಧಾನ ಸಭೆಯಿಂದ ಆಯ್ಕೆ ಮಾಡಲಾಗಿದ್ದ ಲಕ್ಷ್ಮಣ ಸವದಿ, ಆರ್ ಶಂಕರ್, ಬಾಬುರಾವ್ ಚಿಂಚನಸೂರು ರಾಜೀನಾಮೆ ನೀಡಿದ್ದರು. ಲಕ್ಷ್ಮಣ ಸವದಿ ಹಾಗೂ ಬಾಬುರಾವ್ ಚಿಂಚನಸೂರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದರೆ ಶಂಕರ್ ಪಕ್ಷೇತರರಾಗಿದ್ದರು. ಲಕ್ಷ್ಮಣ ಸವದಿ ಹೊರತುಪಡಿಸಿ ಇಬ್ಬರೂ ಸೋಲುಂಡರು. ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಜೂನ್ 30ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ.
ಮೂರೂ ಚುನಾವಣೆಗಳು ಒಟ್ಟಾಗಿ ನಡೆಯುತ್ತಿದೆಯಾದರೂ ಅವುಗಳು ಬೇರೆಬೇರೆ ಅವಧಿಯಲ್ಲಿ ಮುಕ್ತಾಯವಾಗುವ ಸ್ಥಾನಗಳಾದ್ಧರಿಂದ ಪ್ರತ್ಯೇಕ ಚುನಾವಣೆ ಎಂದೇ ಪರಿಗಣಿಸಲಾಗುತ್ತದೆ. ಹಾಗಾಗಿ ಮೂರಕ್ಕೆ ಮೂರೂ ಸ್ಥಾನಗಳು ಕಾಂಗ್ರೆಸ್‌ಗೇ ಸಿಗಲಿವೆ. ಈ ಮೂರು ಸ್ಥಾನಗಳಿಗೆ ಈಗಾಗಲೆ ಪೈಪೋಟಿ ಆರಂಭವಾಗಿದೆ. ಆದರೆ ಮೂರರಲ್ಲಿ ಒಂದು ಸ್ಥಾನ ಈಗಾಗಲೆ ನಿಗದಿಯಾಗಿರುವುದು ಮತ್ತಷ್ಟು ಒತ್ತಡ ಹೆಚ್ಚಿಸಿದೆ.
ಸದ್ಯ 34 ಸಚಿವರ ಪೈಕಿ ಬೋಸರಾಜು ಅವರು ವಿಧಾನಸಭೆ ಸದಸ್ಯರೂ ಅಲ್ಲ, ವಿಧಾನ ಪರಿಷತ್ ಸದಸ್ಯರೂ ಅಲ್ಲ. ಹಾಗಾಗಿ ಅವರನ್ನು ಆರು ತಿಂಗಳೊಳಗೆ ಕೆಳಮನೆ ಅಥವಾ ಮೇಲ್ಮನೆ ಸದಸ್ಯರನ್ನಾಗಿಸಬೇಕು. ಯಾವುದೇ ಸದಸ್ಯರನ್ನು ರಾಜೀನಾಮೆ ಕೊಡಿಸಿ ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಸವಾಲನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುವುದು ಬಹುತೇಕ ಅಸಾಧ್ಯ. ಹಾಗಾಗು ಪರಿಷತ್ ಸದಸ್ಯರನ್ನಾಗಿ ನೇಮಿಸಬೇಕಾಗಿದೆ.
ಇನ್ನು ಎರಡು ಸ್ಥಾನಗಳಿಗೆ ಅನೇಕರು ಪ್ರಯತ್ನ ನಡೆಸಿದ್ದಾರೆ. ಇದರಲ್ಲಿಯೂ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ, ಇನ್ನಿತರರ ಬಣ ಹಾಗೂ ಹೈಕಮಾಂಡ್ ಕೋಟಾ ಹೆಸರುಗಳು ಕೇಳಿಬರುತ್ತಿವೆ.
ಆಕಾಂಕ್ಷಿಗಳು ಹಾಗೂ ಕೋಟ
ಜಗದೀಶ್ ಶೆಟ್ಟರ್ – ಹೈಕಮಾಂಡ್
ಬಾಬುರಾವ್ ಚಿಂಚನಸೂರ – ಮಲ್ಲಿಕಾರ್ಜುನ ಖರ್ಗೆ
ಬಿಎಲ್ ಶಂಕರ್ – ಡಿ.ಕೆ. ಶಿವಕುಮಾರ್
ವಿ.ಆರ್ ಸುದರ್ಶನ್ – ಸಿದ್ದರಾಮಯ್ಯ
ವಿಜಯ್ ಮುಳಗುಂದ್ – ಡಿ.ಕೆ. ಶಿವಕುಮಾರ್
ವಿಶ್ವನಾಥ್ ಕನಕಪುರ – ಡಿ.ಕೆ. ಶಿವಕುಮಾರ್
ಉಮಾಶ್ರೀ – ಸಿದ್ದರಾಮಯ್ಯ
ರಾಮಪ್ಪ – ಸಿದ್ದರಾಮಯ್ಯ
ಕವಿತಾರೆಡ್ಡಿ – ಸಿದ್ದರಾಮಯ್ಯ
ನಾಗಲಕ್ಷ್ಕೀ ಚೌಧರಿ – ಸಿದ್ದರಾಮಯ್ಯ/ಪರಮೇಶ್ವರ್
ಅನಿಲ್ ಕುಮಾರ್ – ಲಿಂಗಾಯತ – ಎಂಬಿ ಪಾಟೀಲ್, ಈಶ್ವರ ಖಂಡ್ರೆ
ಪುಷ್ಪಲತಾ ಅಮರನಾಥ – ಸಿದ್ದರಾಮಯ್ಯ
ನಟರಾಜ ಗೌಡ – ಡಿ.ಕೆ. ಶಿವಕುಮಾರ್
ಐವನ್ ಡಿಸೋಜ – ಸಿದ್ದರಾಮಯ್ಯ
ಮೈಸೂರು ಲಕ್ಷ್ಮಣ್ – ಸಿದ್ದರಾಮಯ್ಯ
ಗಾಯಿತ್ರಿ ಶಾಂತೇಗೌಡ – ಸಿದ್ದರಾಮಯ್ಯ
ಮಂಜುಳ ಮಾನಸ – ಸಿದ್ದರಾಮಯ್ಯ
ಸಾದುಕೋಕಿಲಾ – ಡಿ.ಕೆ. ಶಿವಕುಮಾರ್
ಇದನ್ನೂ ಓದಿ: Congress Guarantee: ಇದು ಸರ್ಕಾರ, ಸರ್ಕಾರ ನಡೆಸೋದು ನಾವು: ಗ್ಯಾರಂಟಿ ಕಂಡೀಷನ್ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ
ಕರ್ನಾಟಕ
Congress Guarantee: ವಿದ್ಯುತ್ ಬಳಕೆ ಸರಾಸರಿ ಮೀರಿದರೆ ಎಷ್ಟು ಕಟ್ಟಬೇಕು? ಇಲ್ಲಿದೆ ಸರ್ಕಾರದ ಹೊಸ ನಿಯಮ
200 ಯುನಿಟ್ ಒಳಗೆ ಇರುವವರಿಗೆ ಎಲ್ಲ ಸೌಲಭ್ಯ ಸಿಗುತ್ತದೆ. ಸರಾಸರಿ ಹಾಗೂ ಶೇ.10ರೊಳಗೆ ಬಂದರೆ ಹಣ ಪಾವತಿ ಮಾಡಬೇಕಿಲ್ಲ. ಆದರೆ ಸರಾಸರಿ ಮೀರಿದರೆ ಏನು ಎಂಬ ಗೊಂದಲ ಇತ್ತು.
ಬೆಂಗಳೂರು: ಮಾಸಿಕ 200 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸ್ವಂತ ಮನೆಯವರಿಗಷ್ಟೆ ಎಂಬಂತೆ ಇದ್ದ ಸರ್ಕಾರಿ ಆದೇಶದ ಕುರಿತು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. (ಈ ಕುರಿತು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ).
ಆದರೆ 200 ಯುನಿಟ್ ಒಳಗೆ ಸರಾಸರಿ ಇರುವವರು ಸರಾಸರಿ ಮೀರಿದರೆ ಪೂರ್ಣ ವಿದ್ಯುತ್ ಬಿಲ್ ಪಾವತಿ ಮಾಡಬೇಕೆ ಬೇಡವೇ ಎಂಬ ಗೊಂದಲ ಇತ್ತು. ಈಗ ಈ ವಿಚಾರಕ್ಕೂ ಕೆ.ಜೆ. ಜಾರ್ಜ್ ತೆರೆ ಎಳೆದಿದ್ದಾರೆ.
200 ಯುನಿಟ್ ಒಳಗೆ ಇರುವವರಿಗೆ ಎಲ್ಲ ಸೌಲಭ್ಯ ಸಿಗುತ್ತದೆ. ಸರಾಸರಿ ಹಾಗೂ ಶೇ.10ರೊಳಗೆ ಬಂದರೆ ಹಣ ಪಾವತಿ ಮಾಡಬೇಕಿಲ್ಲ. ಆದರೆ 200 ಯುನಿಟ್ ಒಳಗೆ ಸರಾಸರಿಯನ್ನು ಮೀರಿ ಬಳಕೆ ಮಾಡಿದರೆ ಹೆಚ್ಚುವರಿ ವಿದ್ಯುತ್‌ಗೆ ಮಾತ್ರವೇ ಬಿಲ್ ಕಟ್ಟಬೇಕಾಗುತ್ತದೆ. ಆದರೆ ಇದು 200 ಯುನಿಟ್ ದಾಟಿದರೆ ಸಂಪೂರ್ಣ ವಿದ್ಯುತ್ ಬಳಕೆಗೆ ಪಾವತಿ ಮಾಡಬೇಕಾಗುತ್ತದೆ. ಯುನಿಟ್ ಬಿಲ್ ಜತೆಗೆ ಮಾಸಿಕ ಬಾಡಿಗೆ ದರವನ್ನೂ ಮಾಡಲಾಗುತ್ತದೆ. ಆದರೆ ನಿಗದಿತ ಸರಸರಿಗಿಂತ ಹೆಚ್ಚು ಬಳಸಿದ ವಿದ್ಯುತ್‌ಗೆ ಅದರ ಬಳಕೆ ಆಧಾರದಲ್ಲಿ ಬಾಡಿಗೆ ಅಥವಾ ತೆರಿಗೆ ಪಡೆಯಲಾಗುತ್ತದೆ ಎಂದು ತಿಳಿಸಿದರು.
ಇದು ಹೇಗೆ ಅನ್ವಯ?
200 ಯುನಿಟ್ ಒಳಗೆ ಬಳಸಿದರೆ ಹೆಚ್ಚುವರಿ ವಿದ್ಯುತ್ ಮಾತ್ರ ಬಿಲ್ ಪಾವತಿ ಮಾಡಬೇಕಾಗುತ್ತದೆ. ಉದಾಹರಣೆಗೆ ಒಂದು ಆರ್‌ಆರ್ ಸಂಖ್ಯೆಗೆ ವಾರ್ಷಿಕ 100 ಯುನಿಟ್ ಸರಾಸರಿ ಎಂದು ನಿಗದಿಯಾಗಿರುತ್ತದೆ. ಅದರ ಮೇಲೆ ಶೇ.10 ಅಂದರೆ 110 ಯುನಿಟ್ ವರೆಗೆ ಮಾಸಿಕ ಬಿಲ್ ಬಂದರೆ ಯಾವುದೇ ಪಾವತಿ ಮಾಡಬೇಕಿಲ್ಲ. ಆದರೆ ಈ ಮೊತ್ತ ಇದ್ದಕ್ಕಿದ್ದಂತೆ ಯಾವುದೋ ಒಂದು ತಿಂಗಳು 150 ಯುನಿಟ್ ಬಂದರೆ ಏನು ಮಾಡುವುದು? ಆ ತಿಂಗಳು ಹೆಚ್ಚುವರಿಯಾಗಿ ಬಳಕೆಯಾದ 40 ಯುನಿಟ್ (ಅಂದರೆ 150- 110= 40) ಯುನಿಟ್‌ಗೆ ಮಾತ್ರ ಬಿಲ್ ಪಾವತಿ ಮಾಡಬೇಕಾಗುತ್ತದೆ. ಈ ರೀತಿ 200 ಯುನಿಟ್‌ವರೆಗೂ ಬಳಸಬಹುದು. ಆಗ ಹೆಚ್ಚುವರಿ ಯುನಿಟ್‌ಗೆ ಮಾತ್ರ ಬಿಲ್ ಪಾವತಿಸಬೇಕು. ಆದರೆ ಈ ಬಳಕೆಯು 200 ಯುನಿಟ್ ದಾಟಿದರೆ ಸಂಪೂರ್ಣ ಬಳಕೆಗೆ ಬಿಲ್ ಪಾವತಿ ಮಾಡಬೇಕಾಗುತ್ತದೆ.
ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ಕರ್ನಾಟಕ
Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್ ಗಿಮಿಕ್ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
N Chaluvarayaswamy: ಎನ್. ಚಲುವರಾಯಸ್ವಾಮಿ ಅವರು ಶಾಸಕ,ಸಚಿವರಾಗುವ ಮೊದಲು ಉಚಿತ ಗ್ಯಾರಂಟಿ ಯೋಜನೆ ಬಗ್ಗೆ ನೀಡಿದ್ದ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲವೂ ಫ್ರೀ ಫ್ರೀ ಅಂತ ಹೋದ್ರೆ ಎಲ್ಲಿ ಹೋಗಿ ನಿಲ್ಲುತ್ತದೆ ಎಂದು ಅವರು ಕಳವಳವನ್ನು ವ್ಯಕ್ತಪಡಿಸಿದ್ದರು. ಚುನಾವಣೆ ಗೆಲ್ಲಬೇಕು ಅಂದರೆ ಇಂತಹ ಚೀಪ್ ಗಿಮಿಕ್ ಅನಿವಾರ್ಯ ಆಗಿದೆ ಎಂದಿದ್ದ ಅವರು ನೀಡಿರುವ ಹೇಳಿಕೆ ಈಗ ವಿವಾದದ ಸ್ವರೂಪವನ್ನು ಪಡೆದುಕೊಂಡಿದೆ.
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್ ಗಿಮಿಕ್‌ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ.
ವಿಡಿಯೊದಲ್ಲಿ ಏನಿದೆ?
ಈ ಹಿಂದೆಯೂ ಸಹ ಹಲವಾರು ಉಚಿತ ಯೋಜನೆಗಳನ್ನು ನಾವೇ ವಿರೋಧ ಮಾಡಿಕೊಂಡು ಬಂದಿದ್ದೇವೆ. ಇದು ದೇಶದಲ್ಲಿಯೇ ಚರ್ಚೆ ಆಗಿರುವ ವಿಚಾರವಾಗಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ, ಮುಂದೆ ಫ್ರೀ.. ಫ್ರೀ.. ಎಂದು ಹೋದರೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ನಾವೂ ಚರ್ಚೆ ಮಾಡಿದ್ದೇವೆ. ಈಗ ನಾವುಗಳೂ ಅದೇ ಲೈನ್‌ನಲ್ಲಿ ಹೊರಟಿದ್ದೇವೆ. ಎಲ್ಲೋ ಒಂದು ಕಡೆ ಚುನಾವಣೆ, ರಿಸಲ್ಟ್ ಎಲ್ಲವೂ ಮುಖ್ಯವಾಗುತ್ತದೆ. ಸರ್ಕಾರ ಬಂದರೆ ತಾನೇ ನಾವೂ ಏನಾದರೂ ಮಾಡುವುದಕ್ಕೆ ಸಾಧ್ಯವಾಗುವುದು? ಅಧಿಕಾರ ಸಿಕ್ಕಿದರೆ ತಾನೇ ಕೆಲಸ ಮಾಡುವುದಕ್ಕೆ ಆಗುವುದು ಎನ್ನುವ ದೃಷ್ಟಿ ಬಂದಾಗ ಅಂದು ಫಲಿತಾಂಶವೇ ಅನಿವಾರ್ಯ ಆಗುತ್ತದೆ. ಹಾಗಾಗಿ ರಿಸಲ್ಟ್ ಬರಬೇಕು ಎಂದಾಗ ಈ ರೀತಿಯ (ಗ್ಯಾರಂಟಿ) ಚೀಪ್ ಪಾಪ್ಯುಲಾರಿಟಿ, ಇಲ್ಲದ್ದು ಪಲ್ಲದ್ದು ಎಲ್ಲವನ್ನೂ ಮಾಡುತ್ತೇವೆ. ಆದರೆ, ನಮ್ಮ ಮನಸ್ಸು ಒಪ್ಪುತ್ತದೆಯೋ ಇಲ್ಲವೋ? ನಮಗೆ, ಸಿದ್ದರಾಮಯ್ಯ ಅವರಿಗೆ ಇಷ್ಟವಾಗುತ್ತದೆಯೋ ಇಲ್ಲವೋ? ಕೆಲವನ್ನು ಮಾಡಿಕೊಂಡು ಹೋಗಬೇಕಾಗುತ್ತದೆ, ಕೆಲವನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಹೇಳಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.
ಸಿದ್ದರಾಮಯ್ಯ ಅವರಿಗೂ ಇಷ್ಟ ಇರಲಿಲ್ಲವೇ?
ಇಲ್ಲಿ ಚಲುವರಾಯಸ್ವಾಮಿ ಅವರು ನೀಡಿರುವ ಹೇಳಿಕೆಯಲ್ಲಿ, “ನಮ್ಮ ಮನಸ್ಸು ಒಪ್ಪುತ್ತದೆಯೋ ಇಲ್ಲವೋ? ನಮಗೆ, ಸಿದ್ದರಾಮಯ್ಯ ಅವರಿಗೆ ಇಷ್ಟವಾಗುತ್ತದೆಯೋ ಇಲ್ಲವೋ? ಕೆಲವನ್ನು ಮಾಡಿಕೊಂಡು ಹೋಗಬೇಕಾಗುತ್ತದೆ, ಕೆಲವನ್ನು ಒಪ್ಪಿಕೊಳ್ಳಬೇಕಾಗುತ್ತದೆ ” ಎಂದು ಹೇಳಿರುವುದು ಸಹ ಈಗ ಚರ್ಚೆಯ ಭಾಗವಾಗಿದೆ. ಅಂದರೆ, ಈ ರೀತಿಯ ಉಚಿತ ಗ್ಯಾರಂಟಿ ಘೋಷಣೆಯು ಸಿದ್ದರಾಮಯ್ಯ ಅವರಿಗೂ ಇಷ್ಟ ಇರಲಿಲ್ಲವೇ? ಚುನಾವಣೆ ಗೆಲ್ಲುವುದಕ್ಕೋಸ್ಕರ ಅನಿವಾರ್ಯವಾಗಿ ಘೋಷಣೆ ಮಾಡಿದರೇ? ಅಥವಾ ಹೈಕಮಾಂಡ್ ನಿರ್ಧಾರಕ್ಕೆ ಅವರು ತಲೆ ಬಾಗಬೇಕಾಯಿತೇ? ಎಂಬ ಬಗ್ಗೆಯೂ ಈಗ ಚರ್ಚೆಗಳು ಹುಟ್ಟಿಕೊಂಡಿವೆ.
ಚೀಪ್ ಗಿಮಿಕ್ ಬಗ್ಗೆ ಚಲುವರಾಯಸ್ವಾಮಿ ನೀಡಿರುವ ಹೇಳಿಕೆಯ ವಿಡಿಯೊ ಇಲ್ಲಿದೆ
ಇದನ್ನೂ ಓದಿ: Text Book: ಹೊಸ ಪಠ್ಯಕ್ರಮ ರಚನೆಗೆ ಸಮಿತಿ; ಬಿಜೆಪಿ ಅವಧಿಯ ಅಧ್ಯಾಯಗಳಿಗೆ ಕೊಕ್?
ಚುನಾವಣಾ ಪೂರ್ವ ಹೇಳಿಕೆ?
ಇದು ಚುನಾವಣೆ ನಡೆಯುವುದಕ್ಕಿಂತ ಮೊದಲು ಮಾಡಿದ ವಿಡಿಯೊ ಇರಬಹುದು ಎಂದೂ ಹೇಳಲಾಗುತ್ತಿದ್ದು, ಈ ಬಗ್ಗೆ ಈಗಿನ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.
ಕರ್ನಾಟಕ
JDS Karnataka: ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದ ಪಕ್ಷ ಇದ್ದರೆ ತೋರಿಸಿ: ಬಿಜೆಪಿ ವಿರೋಧಿ ಕೂಟ ಸೇರದ ಬಗ್ಗೆ ಎಚ್.ಡಿ. ದೇವೇಗೌಡ ಸುಳಿವು
ಮುಂದೆ ನಮ್ಮ ಅನೇಕ ಚುನಾವಣೆಗಳಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ತಾಲೂಕು, ಜಿಲ್ಲಾ ಪಂಚಾಯಿತಿ ಸೇರಿ ಹಲವಾರು ಚುನಾವಣೆಗಳಿವೆ. ಈ ಚುನಾವಣೆಗಳಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಎಚ್.ಡಿ. ದೇವೇಗೌಡ ಹೇಳಿದರು.
ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಆಗುವ ಸಾಧ್ಯತೆ ಇದೆಯೇ? ಹಾಗೂ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧ ಸಮಾನಮನಸ್ಕ ಪಕ್ಷಗಳು ಒಂದಾದರೆ, ಆ ಒಕ್ಕೂಟದ ನೇತೃತ್ವ ವಹಿಸುವಿರಾ? ಬಿಜೆಪಿ ವಿರುದ್ಧ ಒಕ್ಕೂಟ ರಚನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಯತ್ನ ನಡೆಸುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ದೇಶದಲ್ಲಿ ಬಿಜೆಪಿ ಜತೆ ಸೇರಿ ರಾಜಕೀಯ ಮಾಡದೆ ಇರುವ ಯವುದರೂ ಪಕ್ಷವನ್ನು ತೋರಿಸಿ. ಮೊದಲು ನನ್ನ ಪ್ರಶ್ನೆಗೆ ಉತ್ತರ ನೀಡಿ. ಆಮೇಲೆ ನಿಮ್ಮ ಪ್ರಶ್ನೆಗೆ ಉತ್ತರ ಕೊಡುತ್ತೇನೆ ಎಂದರು. ಅನೇಕ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಬಿಜೆಪಿ ಪಕ್ಷದ ಜತೆಗೆ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ ಅನೇಕರು ನಾಯಕರು ಬಿಜೆಪಿ ಜತೆ ಶಾಮೀಲಾಗಿದ್ದಾರೆ. ಕರ್ನಾಟಕದಲ್ಲಿಯೂ ಅದನ್ನು ಕಾಣಬಹುದು. ಇದರಲ್ಲಿ ಮುಚ್ಚುಮರೆ ಏನಿದೆ? ಎಂದು ಹೇಳಿದರು.
ಪಕ್ಷವನ್ನು ಸಂಘಟಿಸುತ್ತೇವೆ:
ಈ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಅದರಿಂದ ಕುಗ್ಗಬೇಕಿಲ್ಲ. ಅನೇಕ ಚುನಾವಣೆಗಳಲ್ಲಿ ನಾನು ಸೇರಿದಂತೆ ನಾವೆಲ್ಲರೂ ಗೆದಿದ್ದೇವೆ, ಸೋತಿದ್ದೇವೆ. ಆಮೇಲೆ ಫೀನಿಕ್ಸಿನಂತೆ ಮೇಲೆದ್ದು ಬಂದಿದ್ದೇವೆ. ಈಗಲೂ ಅಷ್ಟೇ, ಸೋತಿದ್ದೇವೆ ಎಂದು ಮನೆಯಲ್ಲಿ ಕೂರಲಾರೆ. ಪಕ್ಷಕ್ಕಾಗಿ ಎಷ್ಟು ಕೆಲಸ ಮಾಡಲಿಕ್ಕೂ ನಾನು ತಯಾರಿದ್ದೇನೆ.
ಮುಂದೆ ನಮ್ಮ ಅನೇಕ ಚುನಾವಣೆಗಳಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ತಾಲೂಕು, ಜಿಲ್ಲಾ ಪಂಚಾಯಿತಿ ಸೇರಿ ಹಲವಾರು ಚುನಾವಣೆಗಳಿವೆ. ಈ ಚುನಾವಣೆಗಳಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕು. ಆ ಬಗ್ಗೆ ಪಕ್ಷದಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ. ಸಂಘಟನೆ ಕಡೆ ಒತ್ತು ನೀಡಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ, ಯಾವ ಯಾವ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆಯೋ ಇಲ್ಲವೋ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ: Loksabha 2024: ಎಚ್.ಡಿ. ದೇವೇಗೌಡರ ಆಶೀರ್ವಾದ ಪಡೆದ ಪ್ರತಾಪ್ ಸಿಂಹ; ಲೋಕಸಭೆ ಚುನಾವಣಾ ಲೆಕ್ಕಾಚಾರವೆಂದ ನೆಟ್ಟಿಗರು!
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ11 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ13 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಉತ್ತರ ಕನ್ನಡ21 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ16 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ23 hours ago
Karwar Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
-
ಪ್ರಮುಖ ಸುದ್ದಿ23 hours ago
ವಿಸ್ತಾರ ಸಂಪಾದಕೀಯ: ಶಾಲಾ ಬಾಲಕಿಯರಿಗೆ ವಿಷ: ಅಫಘಾನಿಸ್ತಾನದಲ್ಲಿ ಮನುಷ್ಯತ್ವ ಮರುಕಳಿಸುವುದು ಯಾವಾಗ?
-
ಕರ್ನಾಟಕ7 hours ago
Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!