ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗಡಿಯಲ್ಲಿನ ಸ್ಥಿತಿಗತಿ ಬಗ್ಗೆ ಹಾಗೂ ಯುದ್ಧದ ಸನ್ನಿವೇಶ ಸೃಷ್ಟಿಯಾದ ಕುರಿತು ಪ್ರಧಾನಿ ಮೋದಿ ಅವರಿಗೆ ವಿವರಿಸಿದರು ಎಂದು ತಿಳಿದುಬಂದಿದೆ. ಆಗ ಪ್ರಧಾನಿ ಮೋದಿ ಅವರು ಉಕ್ರೇನ್ ಹಾಗೂ ನ್ಯಾಟೋ ಜೊತೆಗಿನ ಸಂಘರ್ಷವು ಕೇವಲ ರಾಜತಾಂತ್ರಿಕ ಮಾತುಕತೆ ಮೂಲಕವೇ ಬಗೆಹರಿಯಬೇಕು, ಅದೇ ಸೂಕ್ತ ಮಾರ್ಗ ಎಂದು ಪ್ರತಿಪಾದಿಸಿದರು ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ ಈ ಕೂಡಲೇ ಹಿಂಸಾಚಾರ ನಿಲ್ಲಿಸಿ ಎಂದು ಪ್ರಧಾನಿ ಮೋದಿ ಆಗ್ರಹಿಸಿದ್ದಾರೆ.
ಹೊಸ ದಿಲ್ಲಿ: ಉಕ್ರೇನ್ ವಿರುದ್ಧ ಸಮರ ನಡೆಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜೊತೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಸಂಧಾನ, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಅವರು ಪುಟಿನ್‌ಗೆ ಸಲಹೆ ನೀಡಿದ್ದಾರೆ.
ರಷ್ಯಾ ದೇಶವು ಉಕ್ರೇನ್ ಜೊತೆಗೆ ಮಾತ್ರವಲ್ಲ ನ್ಯಾಟೋ ಒಕ್ಕೂಟದ ಜೊತೆಗೂ ಮಾತುಕತೆ ನಡೆಸಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ಧಾರೆ. ಪ್ರಾಮಾಣಿಕವಾಗಿ ಹಾಗೂ ಸ್ಪಷ್ಟವಾಗಿ ಮಾತುಕತೆ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲ, ಈ ಕೂಡಲೇ ಉಕ್ರೇನ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಕೊನೆಗೊಳಿಸುವಂತೆಯೂ ಪ್ರಧಾನಿ ಮೋದಿ ಪುಟಿನ್ ಅವರಿಗೆ ಮನವಿ ಮಾಡಿದ್ಧಾರೆ.
ರಾಜತಾಂತ್ರಿಕ ಮಾತುಕತೆ ಹಾಗೂ ಸಂಧಾನದ ಮಹತ್ವವನ್ನು ಪ್ರಧಾನಿ ಮೋದಿ ಅವರು ದೂರವಾಣಿ ಸಂಭಾಷಣೆ ವೇಳೆ ಪುಟಿನ್ ಅವರಿಗೆ ಪ್ರತಿಪಾದಿಸಿದರು ಎಂದು ತಿಳಿದುಬಂದಿದೆ. ಜೊತೆಯಲ್ಲೇ ಉಕ್ರೇನ್‌ನಲ್ಲಿ ಇರುವ ಭಾರತೀಯರ ಸುರಕ್ಷತೆ ಬಗ್ಗೆಯೂ ದೂರವಾಣಿ ಮಾತುಕತೆ ವೇಳೆ ಪ್ರಧಾನಿ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗಡಿಯಲ್ಲಿನ ಸ್ಥಿತಿಗತಿ ಬಗ್ಗೆ ಹಾಗೂ ಯುದ್ಧದ ಸನ್ನಿವೇಶ ಸೃಷ್ಟಿಯಾದ ಕುರಿತು ಪ್ರಧಾನಿ ಮೋದಿ ಅವರಿಗೆ ವಿವರಿಸಿದರು ಎಂದು ತಿಳಿದುಬಂದಿದೆ. ಆಗ ಪ್ರಧಾನಿ ಮೋದಿ ಅವರು ಉಕ್ರೇನ್ ಹಾಗೂ ನ್ಯಾಟೋ ಜೊತೆಗಿನ ಸಂಘರ್ಷವು ಕೇವಲ ರಾಜತಾಂತ್ರಿಕ ಮಾತುಕತೆ ಮೂಲಕವೇ ಬಗೆಹರಿಯಬೇಕು, ಅದೇ ಸೂಕ್ತ ಮಾರ್ಗ ಎಂದು ಪ್ರತಿಪಾದಿಸಿದರು ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ ಈ ಕೂಡಲೇ ಹಿಂಸಾಚಾರ ನಿಲ್ಲಿಸಿ ಎಂದು ಪ್ರಧಾನಿ ಮೋದಿ ಆಗ್ರಹಿಸಿದ್ದಾರೆ.