ಕಿರುತೆರೆ
Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ
ಹಿಂದಿ ಕಿರುತೆರೆ ನಟಿ ಚಾರು ಅಸೋಪಾ ಮತ್ತು ಮಾಡೆಲ್ ರಾಜೀವ್ ಸೇನ್ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ (celebrity divorce) ಹಾಡಿದ್ದಾರೆ.
ಮುಂಬೈ: ಬಾಲಿವುಡ್‌ನ ಕಿರುತೆರೆ ನಟಿ ಚಾರು ಅಸೋಪಾ ಮತ್ತು ನಟಿ ಸುಶ್ಮಿತಾ ಸೇನ್ ಅವರ ಸಹೋದರ ರಾಜೀವ್ ಸೇನ್ ನಡುವಿನ ದಾಂಪತ್ಯದಲ್ಲಿ ಬಿರುಗಾಳಿ ಎದ್ದು ಹಲವು ವರ್ಷಗಳೇ ಕಳೆದಿವೆ. ಇಷ್ಟು ದಿನ ಸಹಿಸಿಕೊಂಡಿದ್ದ ಈ ಜೋಡಿ ಇದೀಗ ಪರಸ್ಪರ ವಿಚ್ಛೇದನ ಪಡೆದುಕೊಂಡಿದ್ದು, ದೂರವಾಗಿರುವುದಾಗಿ (celebrity divorce) ಘೋಷಿಸಿಕೊಂಡಿದ್ದಾರೆ.
ಈ ಕುರಿತಾಗಿ ರಾಜೀವ್ ಸೇನ್ ಅವರೇ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ಪತ್ನಿ ಚಾರು ಅವರೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿರುವ ರಾಜೀವ್, “ಗುಡ್ ಬೈ ಇಲ್ಲ. ಇಬ್ಬರು ಪರಸ್ಪರ ಜತೆ ಬದುಕಲಾರೆವು ಅಷ್ಟೇ. ಪ್ರೀತಿ ಇದ್ದೇ ಇರುತ್ತದೆ. ನಾವು ಯಾವಾಗಲೂ ನಮ್ಮ ಮಗಳಿಗೆ ಅಪ್ಪ ಅಮ್ಮನಾಗಿ ಇರುತ್ತೇವೆ” ಎಂದು ಬರೆದುಕೊಂಡಿದ್ದಾರೆ. ಅವರ ಈ ಸ್ಟೋರಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ಚಾರು ಮತ್ತು ರಾಜೀವ್ ಅವರು 2019ರಲ್ಲಿ ಗೋವಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆಯಾದಾಗಿನಿಂದಲೂ ಅವರಿಬ್ಬರ ಮಧ್ಯೆ ಒಂದಿಲ್ಲೊಂದು ರೀತಿಯ ಸಮಸ್ಯೆಗಳಿತ್ತು. ಹಲವಾರು ಬಾರಿ ಅವರಿಬ್ಬರು ದೂರವಾಗಿದ್ದರು ಕೂಡ. ಮದುವೆಯಾಗಿ ಎರಡು ವರ್ಷಗಳಿಗೆ ಅವರಿಗೆ ಹೆಣ್ಣು ಮಗುವೊಂದು ಜನಿಸಿತು. ಕಳೆದ ವರ್ಷದೊಂದು ಅವರಿಬ್ಬರು ದೊಡ್ಡ ನಿರ್ಧಾರ ತೆಗೆದುಕೊಂಡು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಅವರ ವಿಚ್ಛೇದನವಾಗಿದೆ.
ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
ಚಾರು ಅವರು ʼದೇವೋ ಕೆ ದೇವ್ ಮಹಾದೇವ್ʼ, ʼಬಾಲವೀರ್ʼ, ʼಮೆರೆ ಆಂಗನೆ ಮೇʼ, ʼಜೀಜಿ ಮಾʼ ಸೇರಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಚಾರು ಮೊದಲಿಗೆ ಉದ್ಯಮಿಯೊಬ್ಬರನ್ನು ರಾಜಸ್ಥಾನದಲ್ಲಿ ವರಿಸಿದ್ದರು. ಅದನ್ನು ಮುರಿದುಕೊಂಡ ಅವರು ನೀರಜ್ ಮಾಳ್ವಿಯಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಅದನ್ನೂ ಮುರಿದುಕೊಂಡು ನಂತರ ರಾಜೀವ್ ಸೇನ್‌ರನ್ನು ಮದುವೆಯಾಗಿದ್ದರು.
ಕಿರುತೆರೆ
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
BBK Season 10 : ಬಿಗ್ ಬಾಸ್ ಮನೆಯಲ್ಲಿ ದೊಡ್ಡವರ ಆಟ ಶುರುವಾಗಲು ಮುಹೂರ್ತ ಫಿಕ್ಸ್ ಆಗಿದೆ. ಅ.8 ರಿಂದ ಬಿಗ್ ಬಾಸ್ ʻಹತ್ತನೇ’ ಸೀಸನ್‌ಗೆ ಗ್ರ್ಯಾಂಡ್ ಪ್ರೀಮಿಯರ್ ಮೂಲಕ ಶುಭಾರಂಭವಾಗಲಿದೆ.
ಬೆಂಗಳೂರು: ಬಿಗ್ ಬಾಸ್ ಹತ್ತನೇ (BBK Season 10) ಸೀಸನ್ ಗ್ರ್ಯಾಂಡ್ ಪ್ರೀಮಿಯರ್ ಅಕ್ಟೋಬರ್ 8ರ ಸಂಜೆ 6ಕ್ಕೆ ನಡೆಯಲಿದೆ. 100 ದಿನದ ಬಿಗ್ ಬಾಸ್ ಹತ್ತನೇ ಸೀಸನ್ ಆಟವು ಅ.9 ರಿಂದ ಪ್ರತಿ ರಾತ್ರಿ 9:30ಕ್ಕೆ ನಡೆಯಲಿದೆ. ಈ ಸಂಬಂಧ ಮಂಗಳವಾರ ಬಿಗ್ ಬಾಸ್ (Bigg Boss Kannada) ಟೀಂ ಸುದ್ದಿಗೋಷ್ಠಿ ನಡೆಸಿತು.
ಇತ್ತ ಪ್ರಸಾರದ ದಿನಾಂಕ ಫಿಕ್ಸ್ ಆದ ಬೆನ್ನಲ್ಲೇ ಸ್ಪರ್ಧಿಗಳು ಯಾರೆಲ್ಲ ಇರಬಹುದೆಂಬ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಆಗುತ್ತಿವೆ. ಬೆಸ್ಟ್ ರೇಟೆಡ್ ಚಲನಚಿತ್ರ 777 ಚಾರ್ಲಿ, ಬಿಗ್ ಬಾಸ್ ಕನ್ನಡ ಸೀಸನ್ 10ರ ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡುತ್ತಿದೆ.
100 ದಿನದ ಆಟ ಆಡುವವರು ಯಾರ್ಯಾರು?
ನಟ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಗ್ ಸೀಸನ್ 10ರಲ್ಲಿ ಕೆಜಿಎಫ್ ಖ್ಯಾತಿಯ ರೂಪ ರಾಯಪ್ಪ, ನಾಗಿಣಿ ಸೀರಿಯಲ್ ಮೂಲಕ ಜನಪ್ರಿಯತೆ ಪಡೆದ ನಟಿ ನಮ್ರತಾ ಗೌಡ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತ ಜನಪ್ರಿಯತೆ ಪಡೆದ ಭೂಮಿಕಾ ಬಸವರಾಜ್ ಹೆಸರು ಬಿಗ್ ಬಾಸ್ ಲಿಸ್ಟ್‌ನಲ್ಲಿದೆ. ಜತೆಗೆ ಕಿರುತೆರೆ ನಟಿ ರಂಜನಿ ರಾಘವನ್, ನಟಿ ಅದ್ವಿತಿ ಶೆಟ್ಟಿ, ರಾಬರ್ಟ್ ನಟಿ ಆಶಾ ಭಟ್ ಹೆಸರು ಕೂಡ ಇದೆ.
ಹೊಡಿಬಡಿ ಇಲ್ಲದಿದ್ದರೆ ಸಾಕಪ್ಪ- ನಟ ಕಿಚ್ಚ ಸುದೀಪ್
ಸುದ್ದಿಗೋಷ್ಠಿಗೆ ತಡವಾಗಿ ಬಂದಿದ್ದಕ್ಕೆ ಕ್ಷಮೆ ಕೇಳಿ ಮಾತು ಶುರು ಮಾಡಿದ ನಟ ಕಿಚ್ಚ ಸುದೀಪ್, ಬಿಗ್ ಬಾಸ್ ಹೇಗೆ ಸ್ಕ್ರಿಪ್ಟ್ ಅಲ್ಲವೋ ಹಾಗೇ ನನ್ನ ಎಮೋಷನ್ಸ್ ಕೂಡ ಸ್ಕ್ರಿಪ್ಟ್ ಅಲ್ಲ. ಪ್ರತಿ ಸೀಸನ್‌ನಲ್ಲೂ 18 ವೈವಿಧ್ಯಮಯ ಕಂಟೆಸ್ಟೆಂಟ್ಸ್ ಇರುತ್ತಾರೆ. ಕೆಲವೊಮ್ಮೆ ನಾನು ಸೀರಿಯಸ್ ಆಗಿ ಇರಲು ಆಗುವುದಿಲ್ಲ.
ಮೊದಲಿಗೆ ಬಿಗ್‌ಬಾಸ್‌ಗೆ ಶುರು ಮಾಡುವಾಗ ರೂಲ್ಸ್ ಬೇರೆಯೇ ಇತ್ತು. ಸ್ಪರ್ಧಿಗಳ ಜಗಳ ಬಿಡಿಸುವಂತಿರಲಿಲ್ಲ. ಜತೆಗೆ ಅವರನ್ನು ಒಂದುಗೂಡಿಸುವ ಪ್ರಮೇಯವು ಇರಲಿಲ್ಲ. ಆದರೆ ಅದೆಲ್ಲವನ್ನು ಬ್ರೇಕ್ ಮಾಡಬೇಕಾಯಿತು. ಈ ಬಾರಿ ಯಾರೂ ಕಿತ್ತಾಡಿಕೊಳ್ಳದೆ, ಬಡಿದಾಡಿಕೊಳ್ಳದಿದ್ದರೆ ಸಾಕಪ್ಪಾ ಎಂದರು.
ಜನರ ನಿರೀಕ್ಷೆಗಳನ್ನು ನಾವು ರೀಚ್ ಮಾಡಬೇಕು. ಇದಕ್ಕಾಗಿ ಪ್ರಕಾಶ್ ಹಾಗೂ ತಂಡ ಒಳ್ಳೆಯ ಶ್ರಮ ಹಾಕಿ ಪ್ರೋಮೋ ಮಾಡಿದ್ದಾರೆ. ಬಿಗ್ ಬಾಸ್ ಸೀಸನ್ 10ರ ಪ್ರೋಮೊ ಮಾಡುವಾಗ ನನಗೆ ಡೈಲಾಗ್ ಇರಲಿಲ್ಲ. ಶೂಟಿಂಗ್ ವೇಳೆ ಇವರೆಲ್ಲಾ ತುಂಬಾ ಹೆದರಿದ್ದರು. ಪ್ರೋಮೊಗೆ ಡೈಲಾಗ್ ಇರಲೇಬೇಕು ಅಂತಿಲ್ಲ. ಡೈಲಾಗ್ ಇಲ್ಲದೇ ಇರುವುದು ಒಳ್ಳೆಯದು ಆಯಿತು. ಯಾಕೆಂದರೆ ಅನಾರೋಗ್ಯದ ನಡುವೆ ಆ ಪ್ರೋಮೊವನ್ನು ಮಾಡಬೇಕಾಯಿತು ಎಂದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕಿರುತೆರೆ
VISTARA TOP 10 NEWS : ಸ್ತಬ್ಧವಾಗಲಿದೆ ಕರುನಾಡು, ಕೇಸರಿ ಶಾಲಲ್ಲಿ ಪಾಕ್ ಕ್ರಿಕೆಟಿಗರ ನೋಡು!
VISTARA TOP 10 NEWS : ರಾಜ್ಯವು ಕಾವೇರಿ ನ್ಯಾಯಕ್ಕಾಗಿ ಬಂದ್‌ಗೆ ರೆಡಿಯಾಗಿದೆ. ಅತ್ತ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಕೇಸರಿ ಶಾಲ್ ಹಾಕಿ ಸ್ವಾಗತಿಸಲಾಗಿದೆ. ಇನ್ನೂ ಹಲವು ಕುತೂಹಲಕಾರಿ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್ 10 ನ್ಯೂಸ್.
1 ಕಾವೇರಿ ನ್ಯಾಯಕ್ಕಾಗಿ ನಾಳೆ ಸಂಪೂರ್ಣ ಬಂದ್; ಸ್ತಬ್ಧವಾಗಲಿದೆ ಕರುನಾಡು; ಏನಿದೆ? ಏನಿಲ್ಲ?
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್‌ಗೆ (Karnataka Bandh) ವೇದಿಕೆ ಸಜ್ಜಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕಾವೇರಿ ನ್ಯಾಯದ ಕೂಗೆದ್ದಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ನಡೆಯುವ ಬಂದ್‌ನ್ನು ಸಂಪೂರ್ಣ ಯಶಸ್ವಿಗೊಳಿಸಲು ಸಂಘಟನೆಗಳು ಸಜ್ಜಾಗಿವೆ. ಜತೆಗೆ ಜನರು ಸ್ವಯಂಪ್ರೇರಣೆಯಿಂದ ಬಂದ್‌ಗೆ ಬೆಂಬಲ ನೀಡಲಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ1: ಕರ್ನಾಟಕ ಬಂದ್‌ಗೆ ನೂರಾರು ಸಂಘಟನೆ ಬೆಂಬಲ; ಯಾವ ಸೇವೆ ಲಭ್ಯ? ಯಾವುದು ಅಲಭ್ಯ?
ಪೂರಕ ಸುದ್ದಿ2: ಬಸ್ ಬಂದ್ ಇಲ್ಲ; ನೌಕರರು ಕಡ್ಡಾಯವಾಗಿ ಡ್ಯೂಟಿಗೆ ಬರಲೇಬೇಕು
ಪೂರಕ ಸುದ್ದಿ3: ನಾಳೆ ರಸ್ತೆಗಿಳಿಯಬೇಡಿ, ಬೆಂಗಳೂರು-ಮೈಸೂರು ಸೇರಿದಂತೆ ಎಲ್ಲ ಹೆದ್ದಾರಿ ಬಂದ್‌ಗೆ ಪ್ಲ್ಯಾನ್
ಪೂರಕ ಸುದ್ದಿ4: ಕರ್ನಾಟಕ ಬಂದ್ ಬಿಸಿ ನಡುವೆ ಈ 8 ನಿಲ್ದಾಣಗಳಲ್ಲಿ ಮೆಟ್ರೊ ರೈಲು ಓಡಾಟವಿಲ್ಲ
2. ನಾಳೆ ಬಂದ್ ಮಾಡಿದ್ರೆ ಹುಷಾರ್ ಎಂದ ಪರಮೇಶ್ವರ್; ಹೋರಾಟ ಹತ್ತಿಕ್ಕಲು ಮುಂದಾಯಿತಾ ಸರ್ಕಾರ?
ಕರ್ನಾಟಕ ಬಂದ್ ಮಾಡುವವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಪ್ರತಿಭಟನೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಬಂದ್‌ಗೆ ಅವಕಾಶ ಇಲ್ಲ ಬಂದ್‌ಗೆ ಕರೆ ಕೊಟ್ಟವರಿಗೆ ತಿಳಿಸುತ್ತಿದ್ದೇನೆ ಎಂದು ವಾರ್ನಿಂಗ್ ನೀಡಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ1. ಪ್ರತಿಭಟನೆ ಮಾಡಬಹುದು, ಬಂದ್ ಮಾಡುವಂತಿಲ್ಲ: ಡಿ ಕೆ ಶಿವಕುಮಾರ್
ಪೂರಕ ಸುದ್ದಿ2: ಇಂದು ರಾತ್ರಿಯಿಂದಲೇ ಸೆಕ್ಷನ್ 144 ಜಾರಿ; ರ‍್ಯಾಲಿ, ಮೆರವಣಿಗೆಗೆ ಅವಕಾಶವಿಲ್ಲ
3. ಶೀಘ್ರದಲ್ಲೇ ಸರ್ಕಾರದಿಂದ ಧನ ಭಾಗ್ಯಕ್ಕೆ ಬ್ರೇಕ್! ಅಕ್ಟೋಬರ್‌ನಿಂದಲೇ 10 ಕೆಜಿ ಅಕ್ಕಿ
ಅನ್ನಭಾಗ್ಯ ಯೋಜನೆಯ ಅಡಿ 10 ಕೆ.ಜಿ. ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿದ್ದ ಕಾಂಗ್ರೆಸ್, 5 ಕೆ.ಜಿ. ಅಕ್ಕಿ ಮಾತ್ರ ನೀಡಿ ಉಳಿದ 5 ಕೆಜಿಯ ಹಣವನ್ನು ವರ್ಗಾವಣೆ ಮಾಡುತ್ತಲಿತ್ತು. ಈಗ ಆ ಧನ ಭಾಗ್ಯಕ್ಕೆ ಬ್ರೇಕ್ ಬೀಳಲಿದೆ. ಅಕ್ಟೋಬರ್ ತಿಂಗಳಿನಿಂದಲೇ 10 ಕೆಜಿ ಅಕ್ಕಿ ನೀಡಲು ಮುಂದಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. ಭಾರತಕ್ಕೆ ಬಂದ ಪಾಕ್ ಕ್ರಿಕೆಟ್ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ!
ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್(ICC World Cup) ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ಕ್ರಿಕೆಟ್ ತಂಡ ಬುಧವಾರ ತಡರಾತ್ರಿ ಹೈದರಾಬಾದ್ಗೆ ಬಂದಿಳಿದಿದೆ. ಆದರೆ ಪಾಕಿಸ್ತಾನಆಟಗಾರರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದು ಇದೀಗ ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಪಾಕ್ ಭಿಕಾರಿ; ವಿಶ್ವಸಂಸ್ಥೆಯಲ್ಲಿ ಬಣ್ಣ ಬಯಲು ಮಾಡಿದ ಕಾಶ್ಮೀರದ ದಿಟ್ಟೆ
ಜಮ್ಮು-ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿದಂತೆ ಜಾಗತಿಕ ವೇದಿಕೆಗಳಲ್ಲಿ ಮೂಗು ತೂರಿಸುವ ಪಾಕಿಸ್ತಾನಕ್ಕೆ ಭಾರತ ಅಲ್ಲಲ್ಲೇ ಏಟು ನೀಡುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಜಮ್ಮು-ಕಾಶ್ಮೀರದ ರಾಜಕೀಯ-ಸಾಮಾಜಿಕ ಕಾರ್ಯಕರ್ತೆಯಾದ ತಸ್ಲೀಮಾ ಅಖ್ತರ್ (Tasleema Akhtar) ಅವರು ವಿಶ್ವಸಂಸ್ಥೆಯಲ್ಲಿಯೇ ಪಾಕಿಸ್ತಾನದ ನಿಜ ಬಣ್ಣವನ್ನು ಬಯಲು ಮಾಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ಚಾಟ್ ಜಿಪಿಟಿಯಲ್ಲೀಗ ಇಂಟರ್ನೆಟ್ ಬ್ರೌಸ್ ಮಾಡಬಹುದು! ಹೊಸ ಫೀಚರ್‌ನ ಲಾಭ ಏನು?
ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ (Artificial Intelligence Technology) ಕ್ರಾಂತಿ ಮಾಡಿರುವ ಚಾಟ್‌ಜಿಪಿಟಿಗೆ (ChatGPT) ಹೊಸ ಫೀಚರ್ ಪರಿಚಯಿಸಲಾಗಿದೆ. ಈಗ ಇದನ್ನೂ ಇಂಟರ್ನೆಟ್ ಬ್ರೌಸ್ ಮಾಡಬಹುದು ಎಂದು ಹೇಳಿದೆ. ಹಾಗಿದ್ದರೆ ಇದರಿಂದ ಏನೇನು ಲಾಭ? ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ಚಂದ್ರಯಾನ 3 ಚಂದ್ರನ ದಕ್ಷಿಣ ಧ್ರುವವನ್ನು ತಲುಪಿಯೇ ಇಲ್ಲ ಎಂದ ಚೀನಾ ವಿಜ್ಞಾನಿ
ಭಾರತ ಮತ್ತು ಚೀನಾಗಳ ನಡುವಿನ ಚಕಮಕಿ ಈಗ ಬಾಹ್ಯಾಕಾಶ ರೇಸ್‌ಗೂ (space race) ತಲುಪಿದೆ. ಚಂದ್ರಯಾನ 3ರ (Chandrayaan 3) ಲ್ಯಾಂಡಿಂಗ್ ಸೈಟ್ ಚಂದ್ರನ ದಕ್ಷಿಣ ಧ್ರುವದಲ್ಲಿಲ್ಲ (South pole) ಎಂದು ಚೀನಾದ ಉನ್ನತ ವಿಜ್ಞಾನಿಯೊಬ್ಬರು ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಒಂದಲ್ಲ ಒಂದಿನ ಸಿಎಂ ಆಗ್ತೀನಿ, ರಾಜ್ಯದಲ್ಲೂ ಜೆಸಿಬಿ ಓಡಿಸ್ತೀನಿ ಅಂದ್ರು ಯತ್ನಾಳ್!
ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ (ಮುಖ್ಯಮಂತ್ರಿ) ಆಗ ಕರ್ನಾಟಕದಲ್ಲೂ ಉತ್ತರ ಪ್ರದೇಶ ಮಾದರಿಯಲ್ಲಿ ಜೆಸಿಬಿ (UP Model JCB Operation) ಓಡಲಿದೆ ಎಂದು ಬಿಜೆಪಿ ಶಾಸಕ, ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. ಕನ್ನಡ ಸೀರಿಯಲ್ ಟಿಆರ್‌ಪಿ: 4ನೇ ಸ್ಥಾನಕ್ಕೆ ಕುಸಿತ ಕಂಡ ʼಸೀತಾರಾಮʼ, ಟಿಆರ್‌ಪಿ ರೇಸ್‌ಗೆ ಭಾಗ್ಯಲಕ್ಷ್ಮಿ ಬ್ಯಾಕ್!
‘ಪುಟ್ಟಕ್ಕನ ಮಕ್ಕಳು’ (Puttakkana Makkalu Serial) ಧಾರಾವಾಹಿಯು ಟಿಆರ್ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಸೀತಾರಾಮ ಧಾರಾವಾಹಿ ಭಾರಿ ಕುಸಿತ ಕಂಡಿದೆ. ಕಲರ್ಸ್ ಕನ್ನಡದ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಟಿಆರ್‌ಪಿ ಹೆಚ್ಚಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. ಪಾಕಿಸ್ತಾನದ ಆರ್ಥಿಕ ಸ್ಥಿತಿ ಇನ್ನಷ್ಟು ಹೀನಾಯ- ಕತ್ತೆಗಳ ಬಳಿಕ ಮುಸ್ಲಿಂ ರಾಷ್ಟ್ರಗಳಿಗೆ ಭಿಕ್ಷುಕರ ರಫ್ತು
ಭಾರತಕ್ಕೆ (Terrorism To India) ‘ಭಯೋತ್ಪಾದನೆ’ ಮತ್ತು ಚೀನಾಗೆ ಕತ್ತೆಗಳ (Donkeys to China) ರಫ್ತು ಮಾಡುವ ಮೂಲಕ ಕುಖ್ಯಾತಿ ಗಳಿಸಿರುವ ಪಾಕಿಸ್ತಾನ ಈಗ ವಿಚಿತ್ರ ‘ರಫ್ತು’ ಮೂಲಕ ಮತ್ತೆ ಸುದ್ದಿ ಮಾಡುತ್ತಿದೆ. ಪಾಕಿಸ್ತಾನದ ರಫ್ತು ಪಟ್ಟಿಯಲ್ಲೀಗ ಭಿಕ್ಷುಕರೂ ಸೇರಿದ್ದಾರೆ! ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಕಿರುತೆರೆ
Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್!
Kannada Serials TRP: ಎರಡನೇ ಸ್ಥಾನದಲ್ಲಿರುವ ಸೀತಾ ರಾಮ ಧಾರಾವಾಹಿ ಈ ಬಾರಿ ನಾಲ್ಕನೇ ಸ್ಥಾನದಲ್ಲಿದೆ. ಅಷ್ಟೇ ಅಲ್ಲದೇ ಕಲರ್ಸ್ ಕನ್ನಡದ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಟಿಆರ್‌ಪಿ ಹೆಚ್ಚಿದೆ. ಈ ವಾರದ ಟಿಆರ್‌ಪಿ ಡಿಟೇಲ್ಸ್ ಇಲ್ಲಿದೆ.
ಬೆಂಗಳೂರು: ‘ಪುಟ್ಟಕ್ಕನ ಮಕ್ಕಳು’ (Puttakkana Makkalu Serial) ಧಾರಾವಾಹಿಯು ಟಿಆರ್ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಸೀತಾರಾಮ ಧಾರಾವಾಹಿ ಭಾರಿ ಕುಸಿತ ಕಂಡಿದೆ. ಯಾವಾಗಲೂ ಎರಡನೇ ಸ್ಥಾನದಲ್ಲಿರುವ ಸೀತಾ ರಾಮ ಧಾರಾವಾಹಿ ಈ ಬಾರಿ ನಾಲ್ಕನೇ ಸ್ಥಾನದಲ್ಲಿದೆ. ಅಷ್ಟೇ ಅಲ್ಲದೇ ಕಲರ್ಸ್ ಕನ್ನಡದ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಟಿಆರ್‌ಪಿ ಹೆಚ್ಚಿದೆ. ಈ ವಾರದ ಟಿಆರ್‌ಪಿ ಡಿಟೇಲ್ಸ್ ಇಲ್ಲಿದೆ.
ಪುಟ್ಟಕ್ಕನ ಮಕ್ಕಳು
ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನವನ್ನು ಉಳಿಸಿಕೊಂಡು ಬರುತ್ತಲೇ ಇದೆ. ಈಗಲೂ ಒಳ್ಳೆಯ ಟಿಆರ್ಪಿಯೊಂದಿಗೆ ಈ ಧಾರಾವಾಹಿ ಮುನ್ನುಗ್ಗುತ್ತಿದೆ. ಪುಟ್ಟಕ್ಕನ ಮೆಸ್‌ಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಬಂಗಾರಮ್ಮ ಇದೀಗ ಆರೋಪಿಗಳನ್ನು ಪುಟ್ಟಕ್ಕನ ಮುಂದೆ ತಂದು ನಿಲ್ಲಿಸಿದ್ದಾಳೆ. ಪುಟ್ಟಕ್ಕನ ಮಗಳು ಹಾಗೂ ಬಂಗಾರಮ್ಮನ ಮಗ ಕಂಠಿ ನಡುವೆ ಆಪ್ತತೆ ಹೆಚ್ಚಾಗುತ್ತಿದೆ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ನಗರ ಭಾಗದಲ್ಲೂ ಮೊದಲ ಸ್ಥಾನದಲ್ಲಿದೆ ಎನ್ನುವುದು ವಿಶೇಷ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.
ಗಟ್ಟಿಮೇಳ
ಮೂರನೇ ಸ್ಥಾನದಲ್ಲಿದ್ದ ಧಾರಾವಾಹಿ ಎರಡನೇ ಸ್ಥಾನಕ್ಕೆ ಬಂದಿದೆ. ಸಾವಿರ ಎಪಿಸೋಡ್ ಕಳೆದರೂ ಒಂದೇ ರೀತಿಯ ಟಿಆರ್‌ಪಿ ಕಾಯ್ದುಕೊಂಡು ಸಾಗುತ್ತಿದೆ. ಕರ್ನಾಟಕದ ಟಿಆರ್‌ಪಿ ಪರಿಗಣಿಸಿದರೆ ‘ಗಟ್ಟಿಮೇಳ’ ಹಾಗೂ ‘ಸೀತಾ ರಾಮ’ ಧಾರಾವಾಹಿ ಟಿಆರ್‌ಪಿ ಸಮನಾಗಿದೆ. ಆದರೆ, ನಗರ ವಿಭಾಗದಲ್ಲಿ ಸೀತಾ ರಾಮ ಧಾರಾವಾಹಿ ಮೇಲುಗೈ ಸಾಧಿಸಿದೆ. ‘ಸೀತಾ ರಾಮ’ ಬರುವುದಕ್ಕೂ ಮೊದಲು ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.
ಇದನ್ನೂ ಓದಿ: Kannada Serials TRP: ʻಅಮೃತಧಾರೆʼ ಬೀಟ್ ಮಾಡಿದ ʻಗಟ್ಟಿಮೇಳʼ; ಟಿಆರ್‌ಪಿ ರೇಸ್‌ನಲ್ಲಿ ʻಶ್ರೀರಸ್ತು ಶುಭಮಸ್ತುʼ!
ಅಮೃತಧಾರೆ
‘ಅಮೃತಧಾರೆ’ ಧಾರಾವಾಹಿ ಟಿಆರ್ಪಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ‘ಸೀತಾ ರಾಮ’ ಧಾರಾವಾಹಿಯನ್ನು ‘ಅಮೃತಧಾರೆ ಹಿಂದಿಕ್ಕಿದೆ.
ಸೀತಾ ರಾಮ
‘ಸೀತಾ ರಾಮ’ ಧಾರಾವಾಹಿ ಕಳೆದ ವಾರವೂ ಎರಡನೇ ಸ್ಥಾನದಲ್ಲಿ ಇತ್ತು. ಈ ವಾರ ನಾಲ್ಕನೇ ಸ್ಥಾನದಲ್ಲಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ರೀತು ಸಿಂಗ್ ಹೆಸರಿನ ಬಾಲಕಿ ವೈಷ್ಣವಿ ಗೌಡ ಮಗಳಾಗಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾಳೆ. ಈ ಧಾರಾವಾಹಿ 50ನೇ ಎಪಿಸೋಡ್‌ಗಳನ್ನು ಪೂರೈಸಿದೆ. ಸೀತಾ ರಾಮ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.
ಶ್ರೀರಸ್ತು ಶುಭಮಸ್ತು
‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಟಿಆರ್‌ಪಿ ರೇಸ್‌ನಲ್ಲಿ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.
ಭಾಗ್ಯಲಕ್ಷ್ಮಿ
ಹಿಂದಿನ ವಾರ ಸತ್ಯ ಧಾರಾವಾಹಿ ಐದನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಕಲರ್ಸ್‌ಕನ್ನಡದ ಭಾಗ್ಯಲಕ್ಷ್ಮಿ’ ಧಾರಾವಾಹಿ ಆರನೇ ಸ್ಥಾನ ಪಡೆದುಕೊಂಡಿದೆ. ನಗರ ವಿಭಾಗದಲ್ಲಿ ಈ ಧಾರಾವಾಹಿ ‘ಅಮೃತಧಾರೆ’ಗೆ ಸ್ಪರ್ಧೆ ನೀಡಲು ರೆಡಿ ಆಗಿದೆ.
ಅಂಕಣ
Raja Marga Column : ನಿಮ್ಮ ಮಕ್ಕಳನ್ನು ಸೂಪರ್ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!
Raja Marga Column : ಟಿವಿ ವಾಹಿನಿಗಳ ಮಕ್ಕಳ ರಿಯಾಲಿಟಿ ಶೋಗಳಿಗೆ ಸ್ವಲ್ಪ ಬ್ರೇಕ್ ಬೇಕಿದೆ! ಯಾಕೆಂದರೆ ಅವು ಮಕ್ಕಳ ಬಾಲ್ಯವನ್ನು ಕಸಿಯುತ್ತಿವೆ. ದುಡ್ಡಿನ ದಂಧೆಯಾಗುತ್ತಿವೆ. ಈ ಬಗ್ಗೆ ಎಚ್ಚರವಿರಲಿ.
ಪ್ರಣವ್ ಧನವಾಡೇ : ಈ ಹೆಸರನ್ನು ಎಲ್ಲೋ ಕೇಳಿದ ನೆನಪು ನಿಮಗಿದೆಯಾ?
ಹೌದು! 2016ರಲ್ಲಿ ಮುಂಬೈಯ ಈ 16 ವರ್ಷದ ಹುಡುಗ (Pranav Dhanawade) ಒಂದು ಕ್ಲಾಸ್ ಒನ್ ಕ್ರಿಕೆಟ್ ಪಂದ್ಯದಲ್ಲಿ ಬರೋಬ್ಬರಿ 1000+ ರನ್ ಬಾರಿಸಿ ಮಿಂಚಿದ್ದ! ಅವನಿಗೆ ಆ ದಿನಗಳಲ್ಲಿ ಜಾಗತಿಕ ಮಟ್ಟದ ಪ್ರಚಾರ ಸಿಕ್ಕಿತ್ತು. ಸಚಿನ್ ತೆಂಡುಲ್ಕರ್ (Sachin Tendulkar) ಜೊತೆಗೆ ಆತನ ಭರ್ಜರಿ ಹೋಲಿಕೆಯು ಕೂಡ ನಡೆಯಿತು.ನೂರಾರು ಸನ್ಮಾನಗಳು ಮತ್ತು ನಗದು ಬಹುಮಾನಗಳು ಆತನಿಗೆ ದೊರೆತವು!
ಆದರೆ ಅವನು ಅದೇ ವೇಗದಲ್ಲಿ ಮುಂದೆ ಹೋಗಿರುತ್ತಿದ್ದರೆ ಅವನಿಗೆ ಈಗ 23 ವರ್ಷ ಆಗಿರಬೇಕಿತ್ತು! ಅವನು ಕನಿಷ್ಠ ಪಕ್ಷ ರಣಜಿ ಪಂದ್ಯ ಆದರೂ ಆಡಬೇಕಿತ್ತು! ಆದರೆ ಅವನು ಈಗ ಎಲ್ಲಿದ್ದಾನೆ, ಏನು ಮಾಡುತ್ತಿದ್ದಾನೆ ಎನ್ನುವುದು ನಮಗೆ ಯಾರಿಗೂ ಗೊತ್ತಿಲ್ಲ! (Raja Marga Column)
ನಮ್ಮ ಹೆಚ್ಚಿನ ಟಿವಿ ರಿಯಾಲಿಟಿ ಶೋ (Reality Show) ಹೀರೋಗಳ ಕಥೆ ಕೂಡ ಹೀಗೆಯೇ ಇದೆ!
ಖಾಸಗಿ ಟಿವಿಯ ವಾಹಿನಿಗಳಲ್ಲಿ (Private TV Channels) ಇಂದು ಪ್ರಸಾರ ಆಗುತ್ತಿರುವ ನೂರಾರು ರಿಯಾಲಿಟಿ ಶೋಗಳು ಮತ್ತು ಸ್ಪರ್ಧೆಗಳು ಹೆಚ್ಚು ಪ್ರಚಾರದಲ್ಲಿವೆ. ಅಂತ ಹಲವು ಟಿವಿ ಶೋಗಳು ಹಿಂದೆ ಕೂಡ ನಡೆದಿವೆ. ಅದರ ಎಲ್ಲ ವಿಜೇತರ ಪ್ರತಿಭೆಯ ಮೇಲೆ ಗೌರವ ಇರಿಸಿಕೊಂಡು ನಾನು ಕೇಳುವ ಒಂದೇ ಪ್ರಶ್ನೆ — ಅದರ ಸಾವಿರಾರು ವಿಜೇತರು ಮುಂದೆ ಎಲ್ಲಿಗೆ ಹೋಗುತ್ತಾರೆ? ಅವರ ಅನನ್ಯ ಪ್ರತಿಭೆಗಳನ್ನು ಅವರು ಎಷ್ಟು ಬೆಳೆಸಿದ್ದಾರೆ? ಅದರಿಂದ ನಾಡಿನ ಸಂಸ್ಕೃತಿಗೆ ಎಷ್ಟು ಲಾಭ ಆಗಿದೆ?
ಶಾಲಾ ಮಟ್ಟದಲ್ಲಿ ನೂರಾರು ಸಾಂಸ್ಕೃತಿಕ ಸ್ಪರ್ಧೆಗಳು, ಪ್ರತಿಭಾ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲಿ ವಿಜೇತರ ಘೋಷಣೆ ಆಗುತ್ತದೆ. ಅದರಲ್ಲಿ ಎಷ್ಟು ಜನರು ಮುಂದೆ ಅವರ ಪ್ರತಿಭೆಯನ್ನು ತಮ್ಮ ಹೊಟ್ಟೆಪಾಡಾಗಿ ಮಾಡಿಕೊಳ್ಳುತ್ತಾರೆ? ಎಷ್ಟು ಮಂದಿ ತಮ್ಮ ಕಲೆಯನ್ನು ಪ್ರೀತಿಸುತ್ತಾರೆ? ತಮ್ಮ ಕಲೆಯಿಂದ ಸಮಾಜವನ್ನು ಬೆಳಗುತ್ತಾರೆ? ಕನಿಷ್ಠ ಪಕ್ಷ ಆತ್ಮ ಸಂತೋಷಕ್ಕಾಗಿ ಆದರೂ ಆ ಕಲೆಯನ್ನು ಮುಂದೆ ಕಲಿಯುತ್ತಾರಾ?
ಈ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತ ಹೋದಾಗ ನಮಗೆ ಹಲವು ಕಡೆ ನಿರಾಸೆಯೇ ಆಗುತ್ತದೆ ಮತ್ತು ಕಹಿ ಸತ್ಯಗಳು ಗೋಚರ ಆಗುತ್ತವೆ.
ಹಾಗಾದರೆ ಟಿವಿ ವಾಹಿನಿಗಳಿಂದ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಿಂದ ಪ್ರತಿಭಾ ಶೋಧ ಆಗ್ತಾ ಇಲ್ಲವೇ ಎನ್ನುವ ಪ್ರಶ್ನೆ ನೀವು ಕೇಳಬಹುದು. ಖಂಡಿತ ಆಗುತ್ತಿದೆ! ಆದರೆ ಅದರ ಅಡ್ಡ ಪರಿಣಾಮಗಳ ಬಗ್ಗೆ ಇದುವರೆಗೆ ಯಾರೂ ಯೋಚನೆ ಮಾಡಿದ ಹಾಗಿಲ್ಲ.
ಉದಾಹರಣೆಗೆ ಇಂದು ಬಾಲಿವುಡನ ಹಿನ್ನೆಲೆ ಗಾಯನ ಲೋಕದ ಸೂಪರ್ ಸ್ಟಾರ್‌ಗಳಾದ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಇವರೆಲ್ಲರೂ ಬೇರೆ ಬೇರೆ ರಿಯಾಲಿಟಿ ಶೋಗಳ ಮೂಲಕ ಬೆಳಕಿಗೆ ಬಂದವರು. ಕನ್ನಡದಲ್ಲಿಯೂ ಅಂತವರು ತುಂಬಾ ಮಂದಿ ಇದ್ದಾರೆ. ಆದರೆ ಅವರಲ್ಲಿ ಹೆಚ್ಚಿನ ಸ್ಟಾರ್‌ಗಳು ಒಳ್ಳೆಯ ನಿರ್ಣಾಯಕರ ಮೂಲಕ ಆಯ್ಕೆ ಆದವರು. ಇನ್ನೂ ವಿವರವಾಗಿ ಹೇಳಬೇಕೆಂದರೆ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಆಯ್ಕೆ ಆಗುವಾಗ ಲತಾ ಮಂಗೇಶ್ಕರ್ ಅಂತವರು ನಿರ್ಣಾಯಕರಾಗಿದ್ದರು!
ಪ್ರತಿಭೆಗಳಿಗೆ ಆಗ ಒಂದಿಷ್ಟೂ ಅನ್ಯಾಯ ಆಗುತ್ತಾ ಇರಲಿಲ್ಲ.
ಅಪಾಯಕಾರಿ ಆದ ಇಂಟರ್ನೆಟ್ ವೋಟಿಂಗ್!
ಆದರೆ ಮುಂದೆ ಯಾವಾಗ ಇಂಟರ್ನೆಟ್ ಮೆಸೇಜ್‌ಗಳ ಮೂಲಕ ವೋಟಿಂಗ್ ಆರಂಭ ಆಯಿತೋ ಅಲ್ಲಿಗೆ ದುಡ್ಡು, ಪ್ರಭಾವ ಇದ್ದವರು ವೋಟುಗಳನ್ನು ಖರೀದಿ ಮಾಡುವುದು ಆರಂಭ ಆಯಿತು. ನಮಗೆ ವೋಟ್ ಮಾಡಿ ಎಂದು ಕೈ ಮುಗಿದು ಭಿಕ್ಷೆ ಬೇಡುವ ದೈನ್ಯತೆಯು ಆ ಪ್ರತಿಭೆಗಳಿಗೆ ಬರಬಾರದಿತ್ತು.
ಕನ್ನಡದಲ್ಲಿ ಕೂಡ ಆರಂಭದ ಎದೆ ತುಂಬಿ ಹಾಡುವೆನು, ಕಾಮಿಡಿ ಕಿಲಾಡಿ, ಮಜಾ ಟಾಕೀಸ್, ಡ್ರಾಮಾ ಜೂನಿಯರ್ ರಿಯಾಲಿಟಿ ಶೋನಲ್ಲಿ ಗೆದ್ದವರು ಮುಂದೆ ನೂರಾರು ಅವಕಾಶಗಳನ್ನು ಪಡೆದರು. ಅವರ ಪ್ರತಿಭೆಯನ್ನು ನಾಡು ಗುರುತಿಸಿ ಬೆಳೆಸಿತು.
ಆದರೆ ಇಲ್ಲಿ ಕೂಡ ಇತ್ತೀಚಿನ ವರ್ಷಗಳಲ್ಲಿ ಯಾವಾಗ ಇಂಟರ್ನೆಟ್ ವೋಟಿಂಗ್ ಆರಂಭ ಆಯಿತೋ ಅಲ್ಲಿಂದ ವೋಟ್ ಖರೀದಿಗಳು, ಪ್ರಭಾವಗಳು ಆರಂಭ ಆದವು. ಆ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತು ಕೊಡುವ ಹಲವು ಶಾಲೆಗಳು ಮಹಾನಗರಗಳಲ್ಲಿ ನಾಯಿಕೊಡೆಗಳ ಹಾಗೆ ಆರಂಭ ಆದವು. ಹೆತ್ತವರು ತಮ್ಮ ಮಕ್ಕಳನ್ನು ಸೂಪರ್ ಹೀರೋ ಮಾಡುವ ಜಿದ್ದಿಗೆ ಬಿದ್ದು ಅಂತಹ ಶಾಲೆಗಳಿಗೆ ದುಡ್ಡು ಸುರಿಯಲು ತೊಡಗಿದರು.
ಆದರೆ ಇಲ್ಲಿ ಕೂಡ ಬಡವರ ಮಕ್ಕಳು, ಗ್ರಾಮಾಂತರ ಭಾಗದ ಪ್ರತಿಭೆಗಳು ನಿಜವಾಗಿಯೂ ಅವಕಾಶಗಳಿಂದ ವಂಚಿತರಾದರು!
ಒಂದು ಸಮೀಕ್ಷೆ ಮಾಡಿ ನೋಡಿ. ಇತ್ತೀಚಿನ ರಿಯಾಲಿಟಿ ಶೋಗಳಲ್ಲಿ ಗೆದ್ದವರಲ್ಲಿ ಎಷ್ಟು ಮಂದಿ ಹಳ್ಳಿಯ ಮಕ್ಕಳು ಇದ್ದಾರೆ? ಎಷ್ಟು ಮಂದಿ ಬಡವರ ಮಕ್ಕಳಿದ್ದಾರೆ? ಎಷ್ಟು ಮಂದಿ ಕನ್ನಡ ಮಾಧ್ಯಮದ ಮಕ್ಕಳಿದ್ದಾರೆ?
ಖಂಡಿತ ಇದ್ದಾರೆ. ಆದರೆ ಅವರ ಪ್ರಮಾಣ ತುಂಬಾ ಕಡಿಮೆ ಇದೆ!
ಜಗತ್ತಿನ ಪ್ರತೀ ಮಗುವೂ ಪ್ರತಿಭಾವಂತ ಮಗುವೇ!
ಈ ಜಗತ್ತಿನ ಪ್ರತೀ ಮಕ್ಕಳೂ ಪ್ರತಿಭಾವಂತರೇ ಆಗಿದ್ದಾರೆ. ಅವರಲ್ಲಿ ಒಂದಲ್ಲ ಒಂದು ಪ್ರತಿಭೆಯನ್ನು ಲೋಡ್ ಮಾಡಿ ಭಗವಂತ ಈ ಜಗತ್ತಿಗೆ ಅವರನ್ನು ಕಳುಹಿಸಿರುತ್ತಾನೆ. ನೀವು ಯಾವ ಮಕ್ಕಳನ್ನು ವಿಶೇಷ ಚೇತನ ಮಕ್ಕಳು ಎಂದು ಕರೆಯುತ್ತೀರೋ ಅವರಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯ ಪೋಷಣೆಗೆ ವೇದಿಕೆ ಬೇಕು. ತರಬೇತು ಬೇಕು. ಹೆತ್ತವರ, ಶಿಕ್ಷಕರ, ಸಮಾಜದ ಪ್ರೋತ್ಸಾಹ ಬೇಕು.
ಅವರ ಶಾಪ ಆದರೆ ನಮ್ಮ ಮಕ್ಕಳು ಎಷ್ಟು ಪ್ರತಿಭೆ ಹೊಂದಿದ್ದಾರೆ ಎಂದರೆ ಅವರು ಸ್ಪರ್ಧೆಯ ಸೋಂಕಿಲ್ಲದೆ ಕೂಡ ತಮ್ಮ ಅಗಾಧವಾದ ಪ್ರತಿಭೆಯನ್ನು ಬೆಳೆಸುವ ಸಾಮರ್ಥ್ಯವನ್ನು ಖಂಡಿತವಾಗಿ ಹೊಂದಿರುತ್ತಾರೆ! ಅವರನ್ನು ರೇಸಿನ ಕುದುರೆ ಮಾಡಿ ರೇಸಿಗೆ ನಿಲ್ಲಿಸುವ ಅಗತ್ಯ ಖಂಡಿತ ಇಲ್ಲ!
ಸ್ಪರ್ಧೆಗಳ ಬಗ್ಗೆ ಸಾಹಿತಿ ಶಿವರಾಮ ಕಾರಂತರು ಹೇಳಿದ್ದೇನು?
ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞರಾದ ಕೋಟ ಶಿವರಾಮ ಕಾರಂತರು ಚಿಕ್ಕ ಮಕ್ಕಳನ್ನು ಸ್ಪರ್ಧೆಗೆ ನಿಲ್ಲಿಸಬೇಡಿ ಎಂದು ಹೇಳುತ್ತಿದ್ದರು. 12 ವರ್ಷಗಳವರೆಗೆ ಮಕ್ಕಳಿಗೆ ಯಾವ ಸ್ಪರ್ಧೆಯನ್ನು ಕೂಡ ಮಾಡಬಾರದು ಎನ್ನುವುದು ಅವರ ಖಚಿತ ಅಭಿಪ್ರಾಯ. ಸ್ಪರ್ಧೆ ಮಾಡಿದರೂ ಎಲ್ಲ ಮಕ್ಕಳಿಗೂ ಸಮಾನ ಬಹುಮಾನ ಕೊಡಿ ಎನ್ನುತ್ತಿದ್ದರು ಕಾರಂತರು.
ಆದರೆ ಇಂದು ಆಗುತ್ತಿರುವುದೆನು?
ಆದರೆ ಸ್ಪರ್ಧೆಯ ಗೆಲುವನ್ನು ತಮ್ಮ ಪ್ರತಿಷ್ಠೆಯನ್ನಾಗಿ ಮಾಡಿಕೊಂಡ ಶಿಕ್ಷಕರು ಮತ್ತು ಹೆತ್ತವರು ಮಕ್ಕಳನ್ನು ರೇಸಿನ ಕುದುರೆ ಮಾಡಿ ಈಗಾಗಲೇ ನಿಲ್ಲಿಸಿ ಆಗಿದೆ! ಈ ಸ್ಪರ್ಧೆಯಲ್ಲಿ ಸೋತವರ ಕಣ್ಣೀರನ್ನು ಮತ್ತು ಗೆದ್ದು ಬೀಗಿದವರ ಆನಂದ ಬಾಷ್ಪವನ್ನು ತಮ್ಮ ಟಿ ಆರ್ ಪಿ ಸರಕನ್ನಾಗಿ ಮಾಡಿಕೊಂಡ ಟಿವಿ ವಾಹಿನಿಗಳಿಗೆ ಈ ಸ್ಪರ್ಧೆಗಳು ಬೇಕೇ ಬೇಕು! ಮಕ್ಕಳ ಗೆಲುವನ್ನು ತಮ್ಮ ಪ್ರತಿಷ್ಠೆ ಎಂದು ಭಾವಿಸುವ ಹೆತ್ತವರು ಇರುವವರೆಗೆ ಈ ಮಕ್ಕಳ ರಿಯಾಲಿಟಿ ಶೋಗಳು ಖಂಡಿತ ನಿಲ್ಲುವುದಿಲ್ಲ. ಈ ಸ್ಪರ್ಧೆಗಳು ಮೆಗಾ ಮನರಂಜನೆಯ ಭಾಗ ಎಂದು ಪರಿಗಣಿಸುವ ವೀಕ್ಷಕರು ಕೂಡ ರಿಯಾಲಿಟಿ ಶೋ ಬೇಕು ಅಂತಾರೆ!
ತಮ್ಮ ಮಕ್ಕಳನ್ನು ಸೂಪರ್ ಹೀರೋ ಅಥವ ಸೂಪರ್ ಹೀರೋಯಿನ್ ಮಾಡಲು ಹೊರಟ ಹೆತ್ತವರು ಮಕ್ಕಳ ಬಾಲ್ಯವನ್ನು ಬರಿದು ಮಾಡುತ್ತಿದ್ದಾರೆ. ತಮ್ಮ ಮಕ್ಕಳು ಒಮ್ಮೆ ಟಿವಿಯಲ್ಲಿ ಕಂಡರೆ ಸಾಕು ಎಂದು ತೆವಲಿಗೆ ಪೋಷಕರು ಬಿದ್ದಿರುವ ಈ ದಿನಗಳಲ್ಲಿ ಅವರು ಬುದ್ಧಿ ಕಲಿಯುವುದು ಯಾವಾಗ?
ಇಲ್ಲೊಬ್ಬರು ತಾಯಿ ತನ್ನ ಎರಡನೇ ಕ್ಲಾಸಿನ ಮುಗ್ಧವಾದ ಮಗಳನ್ನು ದಿನವೂ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಲಘು ಸಂಗೀತ, ಕರಾಟೆ, ಚೆಸ್, ಕ್ರಿಕೆಟ್, ಯಕ್ಷಗಾನ, ಬ್ಯಾಡ್ಮಿಂಟನ್, ಸ್ವಿಮ್ಮಿಂಗ್ ಕೋಚಿಂಗ್ ಎಂದೆಲ್ಲ ಉಸಿರು ಬಿಗಿ ಹಿಡಿದು ಓಡುತ್ತಿರುವಾಗ ಆ ಮುಗ್ಧ ಮಗುವಿನ ಮೇಲಾಗುತ್ತಿರುವ ಒತ್ತಡವನ್ನು ನನಗೆ ಊಹೆ ಮಾಡಲು ಕಷ್ಟ ಆಗುತ್ತಾ ಇದೆ! ಯಾವುದೇ ಕಲಿಕೆಯು ಮಕ್ಕಳಿಗೆ ಹೊರೆ ಆಗಬಾರದು ಎಂಬ ಸಾಮಾನ್ಯ ಪ್ರಜ್ಞೆಯು ಅಂತಹ ಹೆತ್ತವರಿಗೆ ಬೇಡವಾ?
ಇದನ್ನೂ ಓದಿ: Raja Marga Column : ನೀವು ಜ್ಯೂಲಿ ನೋಡಿದ್ದೀರಾ? ಇದು KGFಗೂ ಮೊದಲು ಬಾಲಿವುಡ್‌ನ ಅಹಂ ಮುರಿದ ಸಿನಿಮಾ
ಡ್ಯಾಡಿ ನಂಬರ್ ಒನ್, ಮಮ್ಮಿ ನಂಬರ್ ಒನ್ ಮೊದಲಾದ ನಾನಸೆನ್ಸ್ ಸ್ಪರ್ಧೆಯ ಮೂಲಕ ಅಪ್ಪ, ಅಮ್ಮನ ಪ್ರೀತಿಯು ಅಳೆಯಲ್ಪಡಬೇಕಾ?
ನನ್ನ ಸಲಹೆ ಏನೆಂದರೆ ಮುಂದಿನ ಕೆಲವು ವರ್ಷಗಳ ಕಾಲ ಎಲ್ಲ ಟಿವಿ ವಾಹಿನಿಗಳ ಸ್ಪರ್ಧಾತ್ಮಕವಾದ ರಿಯಾಲಿಟಿ ಶೋಗಳನ್ನು ನಿಲ್ಲಿಸುವುದು ಒಳ್ಳೆಯದು! ಅಥವಾ ಅವುಗಳಿಗೆ ಒಂದು ಸಣ್ಣ ಬ್ರೇಕ್ ಆದರೂ ಬೇಕು. ವರ್ಷಾನುಗಟ್ಟಲೆ ಈ ಸ್ಪರ್ಧೆಗಳು ಮುಂದುವರಿದರೆ ಆ ಮಕ್ಕಳ ಶಿಕ್ಷಣದ ಮೇಲೆ ಆಗುವ ಕರಾಳತೆಯ ಬಗ್ಗೆ ಕೂಡ ನಾವು ಯೋಚನೆ ಮಾಡಬೇಕು ಅಲ್ಲವೇ?
ರಿಯಾಲಿಟಿ ಶೋಗಳ ಹಂಗಿಲ್ಲದೆ ಇಂದು ಸ್ಟಾರ್ ಆಗಿ ಮಿಂಚುತ್ತಿರುವ ನೂರಾರು ಪ್ರತಿಭೆಗಳು ನನ್ನ ಪಟ್ಟಿಯಲ್ಲಿ ಇವೆ. ಅವರೆಲ್ಲರಿಗೂ ನನ್ನ ಅಭಿನಂದನೆಗಳು.
-
ದೇಶ19 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ದೇಶ22 hours ago
Plane Crash: ಜಿಂಬಾಬ್ವೆಯಲ್ಲಿ ವಿಮಾನ ಪತನ, ಭಾರತದ ಉದ್ಯಮಿ ಹಾಗೂ ಅವರ ಪುತ್ರ ದುರ್ಮರಣ
-
ಪ್ರಮುಖ ಸುದ್ದಿ14 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್21 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ20 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್22 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ9 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
South Cinema24 hours ago
Ragini Dwivedi: ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ಸಾಂಗ್ಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!