ಬೆಂಗಳೂರು: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರಿಷಭ್ ಪಂತ್(Rishabh Pant) ಅವರ ಕಾರು ಅಪಘಾತವಾಗಿ(rishabh pant car accident) ಇಂದಿಗೆ ಭರ್ತಿ ಒಂದು ವರ್ಷ(rishabh pant car accident 1 year) ತುಂಬಿದೆ. ಕಳೆದ ಡಿಸೆಂಬರ್ 30ರಂದು(rishabh pant accident date) ರಿಷಭ್ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅರ್ಪಆತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು.
ಸುಟ್ಟ ಗಾಯಗಳು ಹಾಗೂ ಮಂಡಿಗೆ ಗಾಯಗೊಂಡಿಗೆ ರಿಷಭ್ ಪಂತ್ಗೆ ಆರಂಭದಲ್ಲಿ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಪಂತ್ ದುಬೈಯಲ್ಲಿ ಕ್ರಿಸ್ಮಸ್ ಪಾರ್ಟಿಯಲ್ಲಿ ಮುಗಿಸಿ ಮರಳಿ ಭಾರತಕ್ಕೆ ಬಂದು ತಾಯಿಗೆ ಹೊಸ ವರ್ಷದ ಸರ್ಪ್ರೈಸ್ ನೀಡಲೆಂದು ದೆಹಲಿಯಿಂದ ಡೆಹ್ರಾಡೂನ್ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು.
ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದ ಪಂತ್ ಕಾರು
ಹರಿಯಾಣ ರಾಜ್ಯ ಸಾರಿಗೆ ನಿಗಮದ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್‌ಜೀತ್ ಅಪಘಾತಕ್ಕೀಡಾಗಿ ನೋವಿನಿಂದ ನರಳುತ್ತಿದ್ದ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪಾಣ ಉಳಿಸುವಂತೆ ಮಾಡಿದ್ದರು. ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿ ಹೊಡೆದದ್ದನ್ನು ನೋಡಿದ ಸುಶೀಲ್ ಕುಮಾರ್ ಕುಮಾರ್ ಮತ್ತು ಪರಮ್‌ಜೀತ್ ತಕ್ಷಣ ಬಸ್ ನಿಲ್ಲಿಸಿ ಪಂತ್ ಅವರಿಗೆ ಆರೈಕೆ ಮಾಡಿದ್ದರು.
ಇದನ್ನೂ ಓದಿ Rishabh Pant: ಮಹೇಂದ್ರ ಸಿಂಗ್ ಧೋನಿ ಜತೆ ಪಾರ್ಟಿ ಮಾಡಿದ ರಿಷಭ್ ಪಂತ್
ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಪಂತ್
ರಿಷಭ್ ಪಂತ್ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್ ಕ್ರಿಕೆಟ್ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್ ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಶಸ್ತ್ರಚಿಕಿತ್ಸೆ ನಡೆದ ಒಂದೆರಡು ದಿನಗಳಿಂದಲೇ ಕಠಿಣ ವ್ಯಾಯಾಮ ನಡೆಸಲು ಆರಂಭಿಸಿದ್ದರು.
ಮೊದಲ ಬಾರಿಗೆ ಪಂತ್ ಅವರು ತಮ್ಮ ಚೇತರಿಕೆ ಅಪ್ಡೇಟ್ ನೀಡಿದ್ದು ಊರುಗೋಲಿನ ಸಹಾಯದಿಂದ ನಡೆದಾಡುವ ಫೋಟೊ ಹಂಚಿಕೊಂಡು. ಬಳಿಕ ಸ್ವಿಮಿಂಗ್ ಪೂಲ್ನಲ್ಲಿ ನಡೆದಾಡುವ ಮೂಲಕ. ಹೀಗೆ ಚೇತರಿಕೆಯ ಎಲ್ಲ ಹಂತವನ್ನು ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಳ್ಳುತ್ತಿದ್ದರು. ಇದೀಗ ಸಂಪೂರ್ಣವಾಗಿ ಗುಣಮುಖರಾಗಿರುವ ಅವರು ಮುಂದಿನ ವರ್ಷ ಐಪಿಎಲ್ ಆಡುವ ಮೂಲಕ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಆದಷ್ಟು ಬೇಗ ಅವರು ಕ್ರಿಕೆಟ್ ಮೈದಾನಕ್ಕೆ(rishabh pant comeback) ಬರಲಿ ಎಂಬುದು ಅವರ ಅಭಿಮಾನಿಗಳ(rishabh pant fans) ಆಶಯಾಗಿದೆ.
ಇದನ್ನೂ ಓದಿ ವಂಚಕನಾದ ಕ್ರಿಕೆಟಿಗ; ರಿಷಬ್ ಪಂತ್‌ಗೇ ₹1.6 ಕೋಟಿ ಮೋಸ; ಡಿಜಿಪಿ ಅಲೋಕ್ ಕುಮಾರ್ ಹೆಸರೂ ದುರ್ಬಳಕೆ!
ಬಹುತೇಕ ಚೇತರಿಕೆ ಕಂಡಿರುವ ಅವರ ಫಿಟ್ನೆಸ್ ಮೇಲೆ ಬಿಸಿಸಿಐ ವೈದ್ಯಕಿಯ ತಂಡ ನಿಗಾ ಇರಿಸಿದೆ. ಪಂತ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳ ಬೇಕಾದರ ದೇಶೀಯ ಕ್ರಿಕೆಟ್ನಲ್ಲಿ ಆಡಿ ತಮ್ಮ ಫಿಟ್ಸೆನ್ ಸಾಬೀತುಪಡಿಸಬೇಕಿದೆ.