ಅಹಮದಾಬಾದ್: ಭಾರತೀಯರು ಹಾಗೂ ಕ್ರಿಕೆಟ್ ಜಗತ್ತು ಅತ್ಯಂತ ಕುತೂಹಲದಿಂದ, ತುದಿಗಾಲಲ್ಲಿ ನಿಂತು ಕಾಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ(India vs Australia, Final) ನಡುವಣ ವಿಶ್ವಕಪ್ ಫೈನಲ್ ಪಂದ್ಯ ಕೆಲವೇ ಕ್ಷಣದಲ್ಲಿ ಆರಂಭಗೊಳ್ಳಲಿದೆ. ಪಂದ್ಯ ಆರಂಭಕ್ಕೂ ಮುನ್ನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ.
“ಆಲ್ ದಿ ಬೆಸ್ಟ್ ಟೀಂ ಇಂಡಿಯಾ! 140 ಕೋಟಿ ಭಾರತೀಯರು ನಿಮಗಾಗಿ ಹುರಿದುಂಬಿಸುತ್ತಿದ್ದಾರೆ. ನೀಮ್ಮ ಪ್ರದರ್ಶನ ಪ್ರಕಾಶಮಾನವಾಗಿ ಹೊಳೆಯಲಿ, ಚೆನ್ನಾಗಿ ಆಡಿ ಮತ್ತು ಕ್ರೀಡಾ ಮನೋಭಾವವನ್ನು ಎತ್ತಿ ಹಿಡಿಯಿರಿ” ಎಂದು ಟ್ವೀಟ್ ಮಾಡುವ ಮೂಲಕ ಮೋದಿ ಶುಭ ಹಾರೈಸಿದ್ದಾರೆ.
All the best Team India!
— Narendra Modi (@narendramodi) November 19, 2023
140 crore Indians are cheering for you.
May you shine bright, play well and uphold the spirit of sportsmanship. https://t.co/NfQDT5ygxk
ಪಂದ್ಯ ವೀಕ್ಷಣೆಗೆ ಗಣ್ಯರ ದಂಡು
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಪಂದ್ಯ ಆರಂಭವಾಗಲಿದ್ದು, ಗಣ್ಯರ ದಂಡೇ ಅಹಮದಾಬಾದ್‌ನಲ್ಲಿ ಬೀಡುಬಿಟ್ಟಿದೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಿಚರ್ಡ್ ಮಾರ್ಲ್ಸ್ ಮತ್ತು ಅನೇಕ ರಾಜಕೀಯ ಗಣ್ಯರು ಈ ಪಂದ್ಯವನ್ನು ವೀಕ್ಷಿಸಲಿದ್ದಾರೆ ಎಂದು ಅಹಮದಾಬಾದ್‌ನ ಪೊಲೀಸ್ ಕಮಿಷನರ್ ಜ್ಞಾನೇಂದ್ರ ಸಿಂಗ್ ಮಲಿಕ್ ತಿಳಿಸಿದ್ದಾರೆ. ಸ್ಟೇಡಿಯಂನ ಸುತ್ತಮುತ್ತ ಈಗಾಗಲೇ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಸ್ ಬಳಿಕ ಏರ್ ಶೋ
ಪಂದ್ಯದ ಟಾಸ್ ಆದ 5 ನಿಮಿಷದಲ್ಲಿ ಅಂದರೆ 1.35ರಿಂದ 1.50ರವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳು ತಮ್ಮ ಚಮಕ್ ತೋರಲಿವೆ. ಈಗಾಗಲೇ ಇದ್ದಕ್ಕೆ ಬೇಕಾದ ಸಿದ್ಧತೆಯನ್ನು ಸೂರ್ಯಕಿರಣ್ ತಂಡ ನಡೆಸಿದೆ. ಕಳೆದ 2 ದಿನಗಳಿಂದ ಇಲ್ಲಿ ಪ್ರಾಯೋಗಿಕ ಹಾರಾಟ ನಡೆಸಿ ಸರ್ವ ಸನ್ನದ್ಧವಾಗಿ ನಿಂತಿದೆ.
ಮೊದಲ ಡ್ರಿಂಕ್ಸ್ ಬ್ರೇಕ್ ವೇಳೆ ಸಂಗೀತ ರಸಮಂಜರಿ
ಪಂದ್ಯದ ಮೊದಲು ಇನ್ನಿಂಗ್ಸ್ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗಧ್ವಿ ಅವರಿಂದ ಗಾಯನ ಪ್ರದರ್ಶನ ನಡೆಯಲಿದೆ. ಇದಾದ ಬಳಿಕ ಅಮದರೆ ಮೊದಲು ಇನ್ನಿಂಗ್ ಮುಗಿದ ಬಳಿಕ ಸಿಗುವ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂಧಿ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಇವರಿಂದ ಸಂಗೀತ ರಸಮಂಜರಿ ಇರಲಿದೆ.
ಇದನ್ನೂ ಓದಿ IND vs AUS Final Live: ಎಲ್ಲೆಡೆ ಇಂಡಿಯಾ, ಇಂಡಿಯಾ ಘೋಷಣೆ; ಕೆಲವೇ ಕ್ಷಣಗಳಲ್ಲಿ ಪಂದ್ಯಾರಂಭ
2ನೇ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಶೋ
ಈ ಬಾರಿಯ ಎಲ್ಲ ಲೀಗ್ ಪಂದ್ಯದ ವೇಳೆಯೂ ಬಿಸಿಸಿಐ ಸ್ಟೇಡಿಯಂಗಳಲ್ಲಿ ವಿನೂತನ ಶೈಲಿಯ ಲಸರ್ ಶೋಗಳ ಮೂಲಕ ನೆರದಿದ್ದ ಪ್ರೇಕ್ಷಕರನ್ನು ರಂಜಿಸಿತ್ತು. ಇದೀಗ ಫೈನಲ್ ಪಂದ್ಯದಲ್ಲೂ ವಿಶಿಷ್ಠ ಶೈಲಿಯ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ. ಇದು ಎರಡನೇ ಇನ್ನಿಂಗ್ಸ್ನ ಡ್ರಿಂಕ್ಸ್ ಬ್ರೇಕ್ ವೇಳೆ ಪ್ರದರ್ಶನಗೊಳ್ಳಲಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.
ಸಂಭಾವ್ಯ ತಂಡಗಳು ಹೀಗಿವೆ…
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್/ ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಜೋಶ್ ಹೇಜಲ್ವುಡ್.