T20 World Cup | ಸ್ಕಾಟ್ಲೆಂಡ್ ವಿರುದ್ಧ 5 ವಿಕೆಟ್​ ಗೆಲುವು; ಸೂಪರ್ 12 ಹಂತಕ್ಕೆ ಜಿಂಬಾಬ್ವೆ - Vistara News

T20 ವಿಶ್ವಕಪ್

T20 World Cup | ಸ್ಕಾಟ್ಲೆಂಡ್ ವಿರುದ್ಧ 5 ವಿಕೆಟ್​ ಗೆಲುವು; ಸೂಪರ್ 12 ಹಂತಕ್ಕೆ ಜಿಂಬಾಬ್ವೆ

ಟಿ20 ವಿಶ್ವ ಕಪ್​ನ ಅಂತಿಮ ಅರ್ಹತಾ ಸುತ್ತಿನ ಪಂದ್ಯದಲ್ಲಿ ಜಿಂಬಾಬ್ಬೆ ತಂಡ ಸ್ಕಾಟ್ಲೆಂಡ್ ವಿರುದ್ಧ ಐದು ವಿಕೆಟ್ ಅಂತರದ ಗೆಲುವು ಸಾಧಿಸಿ ಸೂಪರ್​-12 ಪ್ರವೇಶ ಪಡೆದಿದೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೋಬರ್ಟ್​: ಐಸಿಸಿ ಟಿ20 ವಿಶ್ವ ಕಪ್ (T20 World Cup) 2022 ಕೂಟದ ಮೊದಲ ಸುತ್ತಿನ ಪಂದ್ಯಗಳು ಮುಗಿದಿದ್ದು, ಜಿಂಬಾಬ್ವೆ ತಂಡ ಸ್ಕಾಟ್ಲೆಂಡ್ ವಿರುದ್ಧ ಐದು ವಿಕೆಟ್ ಅಂತರದ ಗೆಲುವು ಸಾಧಿಸಿ ಕೊನೆಯ ತಂಡವಾಗಿ ಸೂಪರ್ 12 ಹಂತಕ್ಕೆ ಅರ್ಹತೆ ಪಡೆದಿದೆ.

ಬೆಲ್ಲೆರಿವ್ ಓವಲ್ ಮೈದಾನದಲ್ಲಿ ಶುಕ್ರವಾರ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​​ ನಡೆಸಿದ ಸ್ಕಾಟ್ಲೆಂಡ್ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 132 ರನ್​ ಗಳಿಸಿತು. ಬಳಿಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ 18.3 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 133 ರನ್​ ಗಳಿಸಿ ಗೆಲುವಿನ ನಗೆ ಬೀರಿತು. ಚೇಸಿಂಗ್​ ವೇಳೆ ಜಿಂಬಾಬ್ವೆ ಆರಂಭದಲ್ಲೇ 7ರನ್​ಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ನಾಯಕ ಇರ್ವಿನ್ ಮತ್ತು ಸಿಕಂದರ್ ರಾಜ ತಾಳ್ಮೆಯ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಕ್ರೇಗ್ ಇರ್ವಿನ್ 58 ರನ್ ಗಳಿಸಿದರೆ, ರಾಜ ಕೇವಲ 23 ಎಸೆತಗಳಲ್ಲಿ 40 ರನ್ ಬಾರಿಸಿದರು.

ಸ್ಕಾಟ್ಲೆಂಟ್​ ಪರ ಆರಂಭಿಕ ಆಟಗಾರ ಮುನ್ಸೆ 54 ರನ್, ಮೆಕ್ ಲಾಯ್ಡ್ 25 ರನ್ ಗಳಿಸಿದರು. ಜಿಂಬಾಬ್ವೆ ಪರ ಚತಾರ ಮತ್ತು ರಿಚರ್ಡ್​ ನಗರ್ವಾ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರು.

ಸ್ಕೋರ್​ ವಿವರ:

ಸ್ಕಾಟ್ಲೆಂಡ್: 20 ಓವರ್​ಗಳಲ್ಲಿ 6 ವಿಕೆಟ್​ಗೆ 132 (ಮುನ್ಸೆ 54, ಮೆಕ್ ಲಾಯ್ಡ್ 25, ಚತಾರ 14ಕ್ಕೆ2, ಎನ್​ ನಗರ್ವಾ 28ಕ್ಕೆ 2).

ಜಿಂಬಾಬ್ಬೆ: 18.3 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 133 ( ಕ್ರೇಗ್ ಇರ್ವಿನ್ 58, ಸಿಕಂದರ್ ರಜಾ 40, ಜೋಶ್ ಡೇವಿ 16ಕ್ಕೆ2). ಪಂದ್ಯಶ್ರೇಷ್ಠ: ಸಿಕಂದರ್ ರಜಾ

ಇದನ್ನೂ ಓದಿ | T20 World Cup | ಪಾಕ್​ ಆಟಗಾರ ಶಾನ್​ ಮಸೂದ್​ ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲು; ವಿಶ್ವ ಕಪ್​ಗೆ ಅನುಮಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Jasprit Bumrah: ವಿಶ್ವಕಪ್​ ಗೆದ್ದ ಖುಷಿಯಲ್ಲಿ ಜಸ್​ಪ್ರೀತ್​ ಬುಮ್ರಾಗೆ ಟ್ರೀಟ್​ ಕೊಡಿಸಿದ ಪತ್ನಿ

Jasprit Bumrah:ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಮತ್ತು ಬುಮ್ರಾ ಅವರು 2021 ಮಾರ್ಚ್​ 15ರಂದು ಗೋವಾದಲ್ಲಿ ಮದುವೆಯಾಗಿದ್ದರು. ಮಹಾರಾಷ್ಟ್ರದವರಾದ ಸಂಜನಾ 2014ರ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ತಲುಪಿದ್ದರು.

VISTARANEWS.COM


on

Jasprit Bumrah
Koo

ಬಾರ್ಬಡೋಸ್​: ಟಿ20 ವಿಶ್ವಕಪ್​(T20 World Cup) ಟೂರ್ನಿಯಲ್ಲಿ ಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡದ ವಿಶ್ವಕಪ್(India’s T20 World Cup win)​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ ಜಸ್​ಪ್ರೀತ್​ ಬುಮ್ರಾ(Jasprit Bumrah) ಅವರಿಗೆ ಪತ್ನಿ, ಕ್ರೀಡಾ ನಿರೂಪಕಿಯೂ ಆಗಿರುವ ಸಂಜನಾ ಗಣೇಶನ್(Sanjana Ganesan) ಐಸ್‌ ಕ್ರೀಂ ಪಾರ್ಟಿ ಕೊಡಿಸಿದ್ದಾರೆ. ಪತ್ನಿ ಐಸ್‌ ಕ್ರೀಂ ಟ್ರೀಟ್​ ಕೊಟ್ಟ ಫೋಟೊವನ್ನು ಬುಮ್ರಾ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಾಕಿದ್ದಾರೆ.

ಫೈನಲ್​ ಪಂದ್ಯದ ಬಳಿಕ ಸಂಜನಾ ಅವರು ಪತಿ ಬುಮ್ರಾರನ್ನು ಇಲ್ಲಿನ ಸ್ಥಳೀಯ ರೆಸ್ಟೋರೆಂಟ್​ಗೆ ಕರೆದುಕೊಂಡು ಹೋಗಿ ಐಸ್ ಕ್ರೀಂ ತಿನ್ನಿಸಿದ್ದಾರೆ. ‘ವಿಶ್ವ ಚಾಂಪಿಯನ್ ಜತೆಗೆ ಐಸ್ ಕ್ರೀಂ ತಿನ್ನುವ ಖುಷಿ’ ಎಂದು ಸಂಜನಾ ತಮ್ಮ ಇನ್​ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಐಸ್‌ ಕ್ರೀಂ ಟ್ರೀಟ್​ ಕೊಟ್ಟ ಪತ್ನಿಗೆ ಧನ್ಯವಾದಗಳು ಮೈ ಡಿಯರ್..ಎಂದು ಬುಮ್ರಾ ಹೇಳಿದ್ದಾರೆ.

ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಮತ್ತು ಬುಮ್ರಾ ಅವರು 2021 ಮಾರ್ಚ್​ 15ರಂದು ಗೋವಾದಲ್ಲಿ ಮದುವೆಯಾಗಿದ್ದರು. ಮಹಾರಾಷ್ಟ್ರದವರಾದ ಸಂಜನಾ 2014ರ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ತಲುಪಿದ್ದರು. ಬುಮ್ರಾ ಅವರು ಕಳೆದ ವರ್ಷ ಗಂಡು ಮಗುವಿನ ತಂದೆಯಾಗಿದ್ದರು. ಮಗುವಿಗೆ ‘ಅಂಗದ್(Angad) ಜಸ್​ಪ್ರೀತ್​ ಬುಮ್ರಾ’ ಎಂದು ಹೆಸರಿಡಲಾಗಿದೆ. ಅಂಗದ್​ ಎಂದರೆ ಯೋಧ ಎಂದರ್ಥ. ರಾಮಾಯಣದಲ್ಲಿ ಬರುವ ವಾಲಿಯ ಪುತ್ರನ ಹೆಸರು ಕೂಡ ಅಂಗದ್​. ಇದೇ ಹೆಸರನ್ನು ಬುಮ್ರಾ ಅವರು ತಮ್ಮ ಮಗನಿಗೆ ಇಟ್ಟಿದ್ದಾರೆ.

ಭಾರತದ ಸ್ಟಾರ್ ವೇಗಿ ಬುಮ್ರಾ ಈ ಬಾರಿಯ ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಯಾವುದೇ ಬೌಲರ್​​ಗೆ ಕಡಿಮೆ ಇಲ್ಲದ ಎಕಾನಮಿ ರೇಟ್ ಪ್ರದರ್ಶಿಸಿದರು. ಅವರು 8.26 ಸರಾಸರಿ ಮತ್ತು 4.17 ಎಕಾನಮಿ ರೇಟ್​​​ನಲ್ಲಿ 15 ವಿಕೆಟ್​ ಉರುಳಿಸಿ ಭಾರತದ ಗೆಲುವಿನ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ


ಕೆರಿಬಿಯನ್‌ ರಾಷ್ಟ್ರದಲ್ಲಿ(Caribbean country) ಬೀಸುತ್ತಿರುವ ಭಾರೀ ಚಂಡಮಾರುತದಿಂದಾಗಿ ಬಾರ್ಬಡೋಸ್​ನಲ್ಲಿಯೇ ಉಳಿದಿರುವ ಟೀಮ್​ ಇಂಡಿಯಾ(Team India stuck in Barbados), ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಚಂಡಮಾರುತದ ಅಬ್ಬರ ಮತ್ತೆ ಹೆಚ್ಚಾಗಿರುವ ಕಾರಣ ಬಾರ್ಬಡೋಸ್​ನಲ್ಲಿ ವಿದ್ಯುತ್ ಮತ್ತು ನೀರು ಪೂರೈಕೆಗೆ ತೊಂದರೆಯಾಗಿದೆ. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿವೆ. ಹೀಗಾಗಿ ಆಟಗಾರರು ಭಾರತಕ್ಕೆ ಬರುವುದು ಇನ್ನೂ 2 ದಿನ ತಡವಾಗುವ ಸಾಧ್ಯತೆ ಕಂಡುಬಂದಿದೆ.

ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು, ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.

ಸದ್ಯ ಟೀಮ್​ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್‌ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

Continue Reading

ಕ್ರಿಕೆಟ್

Virat Kohli: ನನ್ನ ​ಅಹಂಕಾರವೇ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣ ಎಂದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಕೊಹ್ಲಿ ಅಹಂ ಬಗ್ಗೆ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಆಟಗಾರ ಅಂಬಾಟಿ ರಾಯುಡು ಹೇಳಿಕೆ ನೀಡಿದ್ದರು. ಕೊಹ್ಲಿ ತನ್ನ ತಂಡದಲ್ಲಿರುವ ಸಹ ಆಟಗಾರರಂತೆ ಪ್ರದರ್ಶನ ನೀಡಬೇಕು. ಕೊಂಚ ಸ್ಟಾಂಡರ್ಡ್​ ಕಮ್ಮಿ ಮಾಡುಕೊಳ್ಳುವುದು ಸೂಕ್ತ ಎಂದಿದ್ದರು.

VISTARANEWS.COM


on

Virat Kohli
Koo

ಬಾರ್ಬಡೋಸ್​: ಈ ಬಾರಿಯಾ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿ(Virat Kohli) ತಾವು ಬ್ಯಾಟಿಂಗ್ ವೈಫಲ್ಯ ಕಾಣಲು ಕಾರಣ ಏನೆಂಬುದನ್ನು ತಿಳಿಸಿದ್ದಾರೆ. ಕೊಹ್ಲಿ ಈ ಮಾತು ಕೇಳಿ ಕೆಲವರಿಗೆ ಅಚ್ಚರಿಯಾಗಿದೆ. ಹೌದು, ಫೈನಲ್​ ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ, ನನ್ನ ​ಅಹಂಕಾರವೇ ಈ ವೈಫಲ್ಯಕ್ಕೆ ಕಾರಣ ಎಂದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಕಳೆದ ಶನಿವಾರ ನಡೆದ ಫೈನಲ್​ ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಫೈನಲ್​ ಪಂದ್ಯಕ್ಕೂ ಮುನ್ನ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದರು. ಇದುವರೆಗೂ ವಿಶ್ವಕಪ್​ ಟೂರ್ನಿಯಲ್ಲಿ ಶೂನ್ಯಕ್ಕೆ ಔಟಾಗದೆ ಇದ್ದ ಕೊಹ್ಲಿ ಈ ಬಾರಿ 2 ಸಲ ಶೂನ್ಯಕ್ಕೆ ಔಟಾಗುವ ಮೂಲಕ ಅವಮಾನ ಎದುರಿಸಿದ್ದರು.

ಫೈನಲ್​ ಪಂದ್ಯ ಬಳಿಕ ಮಾತನಾಡಿದ ಕೊಹ್ಲಿ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಈ ಟೂರ್ನಿಯಿಂದ ಜೀವನದಲ್ಲಿ ಹಲವು ಪಾಠ ಕಲಿತಿದ್ದೇನೆ. ನನ್ನ ಅಹಂ ಅನ್ನು ಬದಿಗೆ ಇಟ್ಟು ಹೇಳುವುದಾದರೆ, ನಾನೇ ಎಲ್ಲ, ನಾನೇ ಶ್ರೇಷ್ಠ ಎನ್ನುವ ಅಹಂ ಬಿಡಬೇಕು. ಅಹಂಕಾರದಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎನ್ನುವುದು ನನಗೆ ಈಗ ಅರ್ಥವಾಗಿದೆ. ಒಂದು ಕ್ಷಣದಲ್ಲಿ ಎದುರಾದ ಪರಿಸ್ಥಿತಿಗೆ ಗೌರವಿಸಿ, ತಲೆಬಾಗಲೇ ಬೇಕು. ಇದನ್ನು ಬಿಟ್ಟು ಅಹಂ ತೋರಿದರೆ ದೇವರು ಕೂಡ ಮೆಚ್ಚುವುದಿಲ್ಲ. ನನ್ನ ವಿಚಾರದಲ್ಲೂ ಕೂಡ ಅದೇ ಆಯಿತು” ಎಂದು ಕೊಹ್ಲಿ ಮುಕ್ತವಾಗಿ ಹೇಳಿಕೊಂಡರು.

ಇದನ್ನೂ ಓದಿ Virat Kohli : ಶುಭಾಶಯ ಕೋರಿದ ನರೇಂದ್ರ ಮೋದಿಗೆ ಪ್ರತಿಕ್ರಿಯೆ ಕೊಟ್ಟ ಕೊಹ್ಲಿ; ಇಲ್ಲಿದೆ ಅದರ ವಿವರ

ಕೊಹ್ಲಿ ಅಹಂ ಬಗ್ಗೆ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಆಟಗಾರ ಅಂಬಾಟಿ ರಾಯುಡು ಹೇಳಿಕೆ ನೀಡಿದ್ದರು. ಕೊಹ್ಲಿ ತನ್ನ ತಂಡದಲ್ಲಿರುವ ಸಹ ಆಟಗಾರರಂತೆ ಪ್ರದರ್ಶನ ನೀಡಬೇಕು. ಕೊಂಚ ಸ್ಟಾಂಡರ್ಡ್​ ಕಮ್ಮಿ ಮಾಡುಕೊಳ್ಳುವುದು ಸೂಕ್ತ ಎಂದಿದ್ದರು. ಆದರೆ ಈ ವೇಳೆ ಕೊಹ್ಲಿ ಅಭಿಮಾನಿಗಳು ರಾಯುಡು ವಿರುದ್ಧ ಕಿಡಿ ಕಾರಿದ್ದರು. ಇದೀಗ ಕೊಹ್ಲಿಯೇ ತಮ್ಮ ಅಹಂ ಬಗ್ಗೆ ಒಪ್ಪಿಕೊಂಡಿದ್ದಾರೆ.

ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದರು.

ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ. ಈ ಟಿ 20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ 59 ಎಸೆತಗಳಲ್ಲಿ 76 ರನ್ ಮಾಡುವ ಮೊದಲು ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 75 ರನ್ ಮಾತ್ರ ಗಳಿಸಿದ್ದರು.

Continue Reading

ಕ್ರೀಡೆ

IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

IND vs SA Final: ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

IND vs SA Final
Koo

ಲಂಡನ್​: ಭಾರತ ತಂಡ 17 ವರ್ಷಗಳ ಬಳಿಕ ಟಿ20 ವಿಶ್ವಕಪ್(​T20 World Cup 2024) ಗೆಲ್ಲುವ ಮೂಲಕ ಭಾರತೀಯ(IND vs SA Final) ಕ್ರಿಕೆಟ್​ ಅಭಿಮಾನಿಗಳು 13 ವರ್ಷಗಳಿಂದ ಕಾಯುತ್ತಿದ್ದ ಐಸಿಸಿ ಟ್ರೋಫಿಯೊಂದರ ಕನಸು ನನಸಾಯಿತು. ಈ ಗೆಲುವಿನ ಸಂಭ್ರಮವನ್ನು ದೇಶ-ವಿದೇಶದಲ್ಲಿರುವ ಭಾರತೀಯರು ಸಂಭ್ರಮಿಸಿದ್ದಾರೆ. ಇದೀಗ ಸಮುದ್ರ ಮಟ್ಟದಿಂದ 40ಸಾವಿರ ಅಡಿ ಎತ್ತರದಲ್ಲಿಯೂ ಈ ಗೆಲುವಿನ ಸಂಭ್ರಮಾಚರಣೆ ನಡೆದಿದೆ.

ಹೌದು, ಲಂಡನ್‌ಗೆ ಹೋಗುವ ವಿಮಾನದಲ್ಲಿ ಪ್ರಯಾಣಿಕರು ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಣ ಫೈನಲ್​ ಪಂದ್ಯವನ್ನು ತಮ್ಮ ಲ್ಯಾಪ್​ಟಾಪ್​ಗಳಲ್ಲಿ ವೀಕ್ಷಿಸಿದ್ದಾರೆ. ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

ವಿಮಾನದಲ್ಲಿ ಪ್ರಯಾಣಿಸಿದ ಹರ್ದೀಪ್ ಸಿಂಗ್ ಎನ್ನುವವರು ಪಂದ್ಯವನ್ನು ವೀಕ್ಷಿಸಲು ತಡೆರಹಿತ ವೈ-ಫೈ ಸೇವೆಯನ್ನು ಒದಗಿಸಿದ ಏರ್‌ಲೈನ್‌ಗೆ ಧನ್ಯವಾದ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ


17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

ಇದನ್ನೂ ಓದಿ Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ ಅಂತರದಿಂದ ಗೆದ್ದು 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಎತ್ತಿ ಹಿಡಿಯಿತು.

ದ್ರಾವಿಡ್​ಗೆ ಸ್ಮರಣೀಯ ಬೀಳ್ಕೊಡುಗೆ


ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ. 2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿದ್ದಾರೆ.

Continue Reading

ಕ್ರೀಡೆ

Team India: ವಿಶ್ವಕಪ್​ ಗೆದ್ದು ಟೀಮ್​ ಇಂಡಿಯಾ ನಿರ್ಮಿಸಿದ ದಾಖಲೆಗಳ ಪಟ್ಟಿ ಹೀಗಿದೆ

Team India: ರೋಹಿತ್​ ಕಪ್​ ಗೆಲ್ಲುವ ಮೂಲಕ ಐಸಿಸಿ ಟ್ರೋಫಿ ಗೆದ್ದ 4ನೇ ಭಾರತೀಯ ನಾಯಕ ಎನಿಸಿಕೊಂಡರು. ಕಪಿಲ್ ದೇವ್​, ಸೌರವ್​ ಗಂಗೂಲಿ, ಧೋನಿ ಉಳಿದ ನಾಯಕರು.

VISTARANEWS.COM


on

Koo

ಬಾರ್ಬಡೋಸ್​: ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ರಾತ್ರಿ ನಡೆದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತು. ಈ ಪಂದ್ಯದಲ್ಲಿ ಭಾರತ ಮತ್ತು ತಂಡದ ಆಟಗಾರರು ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಟ್ಟಿ ಇಂತಿದೆ.

ದಾಖಲೆಗಳ ಪಟ್ಟಿ ಹೀಗಿದೆ

1. ನೀಗಿದ ಪ್ರಶಸ್ತಿ ಬರ: ಕಪ್​ ಗೆಲ್ಲುವ ಮೂಲಕ 11 ವರ್ಷಗಳ ಐಸಿಸಿ ಟ್ರೋಫಿ, 13 ವರ್ಷಗಳ ಐಸಿಸಿ ವಿಶ್ವಕಪ್​ ಬರ ನೀಗಿತು.


2. ದ್ವಿತೀಯ ಟಿ20 ವಿಶ್ವಕಪ್​: ಭಾರತ ತಂಡ 2ನೇ ಎರಡನೇ ಬಾರಿ ಮತ್ತು 17 ವರ್ಷಗಳ ಬಳಿಕ ಟಿ20 ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿತು.

3. ಮೂರನೇ ತಂಡ: ಭಾರತ 2 ಟಿ20 ವಿಶ್ವಕಪ್​ ಗೆದ್ದ ಮೂರನೇ ತಂಡ ಎನಿಸಿಕೊಂಡಿತು. ಇದಕ್ಕೂ ಮುನ್ನ ವೆಸ್ಟ್​ ಇಂಡೀಸ್​ ಮತ್ತು ಇಂಗ್ಲೆಂಡ್​ ಈ ಸಾಧನೆ ಮಾಡಿತ್ತು.


4. ರೋಹಿತ್​ ಸಾಧನೆ: ರೋಹಿತ್​ ಶರ್ಮ ಅವರು ಭಾರತ ಪರ 2 ಟಿ0 ವಿಶ್ವಕಪ್​ ಗೆದ್ದ ಮೊದಲ ಆಟಗಾರ. ನಾಯಕನಾಗಿ ಮತ್ತು ಆಟಗಾರನಾಗಿ. ಜತೆಗೆ ಧೋನಿ ನಂತರ ಟಿ20 ವಿಶ್ವಕಪ್​ ಗೆದ್ದ 2ನೇ ನಾಯಕ ಎನಿಸಿಕೊಂಡರು.

5. ದ್ರಾವಿಡ್​ಗೆ ಗೆಲುವಿನ ವಿದಾಯ: ರಾಹುಲ್​ ದ್ರಾವಿಡ್​ ಕೋಚ್​ ಆಗಿ ಜೂನಿಯರ್​ ಮತ್ತು ಸೀನಿಯರ್​ ವಿಭಾಗದಲ್ಲಿ ಐಸಿಸಿ ಟ್ರೋಫಿ ಗೆದ್ದ ಸಾಧನೆ ಮಾಡಿದರು.


6. ಕೊಹ್ಲಿಗೆ ಮೊದಲ ಕಪ್​: ವಿರಾಟ್​ ಕೊಹ್ಲಿ ಅವರು ಮೊದಲ ಟಿ20 ವಿಶ್ವಕಪ್​ ಗೆದ್ದರು. ಈ ಮೂಲಕ ಏಕದಿನ ಮತ್ತು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿದರು.

7. ನಾಲ್ಕನೇ ಐಸಿಸಿ ವಿಶ್ವಕಪ್: ಭಾರತ ಈ ಕಪ್​ ಗೆಲ್ಲುವ ಮೂಲಕ 4 ಐಸಿಸಿ ವಿಶ್ವಕಪ್​ ಗೆದ್ದ ಸಾಧನೆ ಮಾಡಿತು. (2 ಏಕದಿನ, 2 ಟಿ20).

8. 4ನೇ ನಾಯಕ: ರೋಹಿತ್​ ಕಪ್​ ಗೆಲ್ಲುವ ಮೂಲಕ ಐಸಿಸಿ ಟ್ರೋಫಿ ಗೆದ್ದ 4ನೇ ಭಾರತೀಯ ನಾಯಕ ಎನಿಸಿಕೊಂಡರು. ಕಪಿಲ್ ದೇವ್​, ಸೌರವ್​ ಗಂಗೂಲಿ, ಧೋನಿ ಉಳಿದ ನಾಯಕರು.

9. ಐದು ಫೈನಲ್​ ಸೋಲಿನ ಬಳಿಕದ ಗೆಲುವು: ಸತತ 5 ಐಸಿಸಿ ಟೂರ್ನಿಗಳ ಫೈನಲ್​ ಸೋಲಿನ ಬಳಿಕ ಸಾಧಿಸಿದ ಗೆಲುವು ಇದಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading
Advertisement
Shoaib Akhtar
ಕ್ರೀಡೆ12 mins ago

Shoaib Akhtar: ಭಗವದ್ಗೀತೆಯ ಸಂದೇಶ ಹಂಚಿಕೊಂಡ ಪಾಕ್​ ಆಟಗಾರ ಶೋಯೆಬ್ ಅಖ್ತರ್

Gold Rate Today
ಚಿನ್ನದ ದರ22 mins ago

Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Road Accident
ಕ್ರೈಂ38 mins ago

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

Virat Kohli
ಕ್ರೀಡೆ51 mins ago

Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Stock Market
ವಾಣಿಜ್ಯ1 hour ago

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

self harming mysore
ಕ್ರೈಂ1 hour ago

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

police constable commits suicide by jumping into well
ಬೆಂಗಳೂರು1 hour ago

Police constable : ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್!

Euro 2024
ಕ್ರೀಡೆ1 hour ago

Euro 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಪೋರ್ಚುಗಲ್; ಫ್ರಾನ್ಸ್ ಎದುರಾಳಿ

Yogi Adityanath
ದೇಶ2 hours ago

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Good News For Farmers
ದೇಶ2 hours ago

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌