ಪರ್ತ್: ಟಿ20 ವಿಶ್ವ ಕಪ್ನಲ್ಲಿ ಆರಂಭಿಕ ಬ್ಯಾಟರ್ ಕೆ.ಎಲ್. ರಾಹುಲ್ ಅವರ ಸತತ ಬ್ಯಾಟಿಂಗ್ ವೈಫಲ್ಯ ತಂಡಕ್ಕೆ ಹೊಸ ತಲೆನೋವು ತಂದಿದೆ. ಸೂಪರ್ 12 ಸುತ್ತಿನಲ್ಲಿ ಆಡಿರುವ ಎರಡು ಪಂದ್ಯಗಳಲ್ಲೂ ಎರಡಂಕಿ ಮೊತ್ತ ಕಲೆಹಾಕುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ರಾಹುಲ್ ಬದಲು ರಿಷಭ್ ಪಂತ್ಗೆ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಮಾತು ಕೇಳಿಬರುತ್ತಿವೆ. ಆದರೆ ಈ ಪ್ರಶ್ನೆಗಳಿಗೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೋಡ್ ಉತ್ತರ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಮೊದಲು ಶನಿವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾರತ ಕ್ರಿಕಟ್ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೋಡ್, “ಇಲ್ಲ ನಾವು ಅಂತಹ ಯಾವುದೇ ಯೋಚನೆಗಳನ್ನು ಇದುವರೆಗೆ ಮಾಡಿಲ್ಲ. ಎರಡು ಪಂದ್ಯಗಳಲ್ಲಿ ವಿಫಲರಾದ ಮಾತ್ರಕ್ಕೆ ರಾಹುಲ್ ಅವರನ್ನು ತಂಡದಿಂದ ಕೈಬಿಡುವುದು ಸೂಕ್ತವಲ್ಲ. ರಾಹುಲ್ ನಿಜವಾಗಿಯೂ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದನ್ನು ಅಭ್ಯಾಸ ಪಂದ್ಯಗಳಲ್ಲಿ ಅವರು ಸಾಬೀತುಪಡಿಸಿದ್ದಾರೆ. ಹೀಗಾಗಿ ನಾವು ಸದ್ಯಕ್ಕೆ ಅಂತಹ ಯಾವುದೇ ಬದಲಾವಣೆಗಳನ್ನು ಮಾಡುತ್ತಿಲ್ಲ” ಎಂದು ಹೇಳುವ ಮೂಲಕ ಎಲ್ಲ ಅನುಮಾನಗಳಿಗೂ ಉತ್ತರ ನೀಡಿದ್ದಾರೆ.
ಇದನ್ನೂ ಓದಿ | T20 World Cup | ತಂಡದ ಆಯ್ಕೆ ವಿಚಾರದಲ್ಲಿ ಬಾಬರ್ ಅಜಮ್ ಜಾಣರಲ್ಲ; ವಾಸಿಂ ಅಕ್ರಂ ಆರೋಪ