FIFA World Cup | ಕಾಲ್ಚೆಂಡಿನ ಕಾಲ್ಚಳಕ, ರೋಚಕ ಆಟದ ಫೋಟೊಗಳನ್ನು ನೋಡುವುದೇ ಪುಳಕ - Vistara News

ಕ್ರೀಡೆ

FIFA World Cup | ಕಾಲ್ಚೆಂಡಿನ ಕಾಲ್ಚಳಕ, ರೋಚಕ ಆಟದ ಫೋಟೊಗಳನ್ನು ನೋಡುವುದೇ ಪುಳಕ

ಕಾಲ್ಚೆಂಡಿನ ಆಟದ ರೋಚಕತೆಯ ಪರಾಕಾಷ್ಠೆಗೆ ಭಾನುವಾರ ಸಾಕ್ಷಿಯಾಯಿತು. ಇಡೀ ಮೈದಾನವೇ ಭಾವನೆಗಳ ಮನೆಯಾಗಿತ್ತು. ಫುಟ್ಬಾಲ್‌ ವಿಶ್ವಕಪ್‌ನ (FIFA World Cup) ಭಾವನಾತ್ಮಕ ಫೋಟೊಗಳು ಇಲ್ಲಿವೆ.

VISTARANEWS.COM


on

Messi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ: ಜಗತ್ತೇ ಒಂದು ಕ್ಷಣ ತುದಿಗಾಲ ಮೇಲೆ ನಿಂತು ನೋಡಿದ ಫಿಫಾ ವಿಶ್ವಕಪ್‌ಗೆ (FIFA World Cup) ರೋಚಕ ತೆರೆಬಿದ್ದಿದೆ. ಅರ್ಜೆಂಟೀನಾದ ಲಿಯೋನೆಲ್‌ ಮೆಸ್ಸಿಗೆ ಗೆಲುವಿನ ವಿದಾಯ ಸಿಕ್ಕರೆ, ಫ್ರಾನ್ಸ್‌ ತಂಡದ ನಿರಾಸೆಗೆ ಎಣೆಯೇ ಇಲ್ಲದಂತಾಗಿದೆ. ಇದರ ಮಧ್ಯೆ, ಫುಟ್ಬಾಲ್‌ನ ರೋಚಕತೆ, ಸ್ಪರ್ಧಾ ಮನೋಭಾವ, ತಿರುವು, ಹಟ, ಹೋರಾಟ, ಆಟಕ್ಕೆ ಎಂದಿನಂತೆ ಗೆಲುವು ಸಿಕ್ಕಿದೆ. ಫುಟ್ಬಾಲ್‌ ವಿಶ್ವಕಪ್‌ ಫೈನಲ್‌ ಪಂದ್ಯದ ರೋಚಕ ಕ್ಷಣಗಳು ಫೋಟೊಗಳಲ್ಲಿ ಸೆರೆಯಾಗಿವೆ. ಸಾವಿರ ಪದಗಳನ್ನು ಸಾರುವ ಫೋಟೊಗಳು ಇಲ್ಲಿವೆ.

ಅರ್ಜೆಂಟೀನಾ ಗೆದ್ದ ಖುಷಿಗೆ ಪಾರವೆಲ್ಲಿ?
ಕಾಲಲ್ಲಿ ತೋರಿದ ಪ್ರದರ್ಶನ, ಕೈಯಲ್ಲಿ ಕಪ್ಪಿನ ನರ್ತನ.
ಫ್ರಾನ್ಸ್‌ನ ಎಂಬಾಪೆ, ಕಲಾಕೃತಿ ಅಲ್ಲ ಇದು, ‘ಗೋಲಾ’ಕೃತಿ.
ಸೋಲಿಗೂ ಮುನ್ನ ಸ್ಪರ್ಧೆಯೊಡ್ಡಿದ ನಲಿವು.
ಮಾರ್ಟಿನೆಜ್‌, ತಡೆದಿದ್ದು ಕೇವಲ ಗೋಲನ್ನಲ್ಲ, ಫ್ರಾನ್ಸ್‌ನ ಗೆಲುವನ್ನು.
ಮೆಸ್ಸಿಗೆ ಮೈದಾನ ‘ಜಾರು’ಬಂಡೆ ಅಲ್ಲ, ‘ಜೋರು’ಬಂಡೆ.
ಸೋಲುಂಡರೇನು, ಸ್ಪರ್ಧೆಯೊಡ್ಡಲಿಲ್ಲವೇನು..?
ಫ್ರಾನ್ಸ್‌ನ ‘ಗೋಲು’ಗಪ್ಪ ತಿಂದುಹಾಕಿದ ಮಾರ್ಟಿನೆಜ್.
ನೋವು, ನಲಿವು… ಒಂದೇ ಪಂದ್ಯದ ಎರಡು ಮುಖಗಳು.
ಫ್ರಾನ್ಸ್‌ಗೆ ನೋವಿನ ವಿದಾಯ, ಉತ್ತಮ ಆಟದ ನೆನಪೇ ಆದಾಯ.

ಇದನ್ನೂ ಓದಿ | FIFA World Cup | ಮೆಸ್ಸಿಗೆ ವಿಜಯದ ವಿದಾಯ; ಅರ್ಜೆಂಟೀನಾ ತಂಡ ಚಾಂಪಿಯನ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

IPL 2024: ರಾಜಸ್ಥಾನ್​ ರಾಯಲ್ಸ್​ ವಿರುದ್ಧ 2 ಓವರ್​ ಬೌಲಿಂಗ್​ ನಡೆಸಿದ ವಿಶ್ರಾ, 20 ರನ್​ ನೀಡಿ 1 ವಿಕೆಟ್​ ಕೀತ್ತು ಮಿಂಚಿದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿಕೆಟ್ ಪಡೆದ ಅತ್ಯಂತ ಹಿರಿಯ ಬೌಲರ್ ಮತ್ತು ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ.

VISTARANEWS.COM


on

IPL 2024
Koo

ಲಕ್ನೋ: ಶನಿವಾರ ರಾತ್ರಿ ನಡೆದ ಐಪಿಎಲ್(IPL 2024)​ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants) ತಂಡದ ಹಿರಿಯ ಸ್ಪಿನ್ನರ್​ ಅಮಿತ್ ಮಿಶ್ರಾ(Amit Mishra) ಅವರು ಐಪಿಎಲ್​ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ರಾಜಸ್ಥಾನ್​ ರಾಯಲ್ಸ್​(Rajasthan Royals) ವಿರುದ್ಧ 1 ವಿಕೆಟ್​ ಕೀಳುವ ಮೂಲಕ ಐಪಿಎಲ್​ನಲ್ಲಿ ವಿಕೆಟ್​ ಕಿತ್ತ ಅತಿ ಹಿರಿಯ ಆಟಗಾರ ಎನಿಸಿಕೊಂಡರು. 41ನೇ ವಯಸ್ಸಿನಲ್ಲಿ ಅಮಿತ್​ ಮಿಶ್ರಾ ಈ ಸಾಧನೆ ಮಾಡಿದ್ದಾರೆ.

2 ಓವರ್​ ಬೌಲಿಂಗ್​ ನಡೆಸಿದ ವಿಶ್ರಾ, 20 ರನ್​ ನೀಡಿ 1 ವಿಕೆಟ್​ ಕೀತ್ತು ಮಿಂಚಿದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿಕೆಟ್ ಪಡೆದ ಅತ್ಯಂತ ಹಿರಿಯ ಬೌಲರ್ ಮತ್ತು ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಇದೇ ವೇಳೆ ಲಸಿತ್ ಮಾಲಿಂಗ (173) ಅವರನ್ನು ಹಿಂದಿಕ್ಕಿದ್ದಾರೆ. ಇದುವರೆಗೆ ಐಪಿಎಲ್​ನಲ್ಲಿ 162 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅಮಿತ್ ಮಿಶ್ರಾ 174 ವಿಕೆಟ್ ಕಬಳಿಸಿದ್ದಾರೆ. ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆಯೂ ಮಾಡಿದ್ದಾರೆ. ಯಜುವೇಂದ್ರ ಚಹಲ್​ 200 ವಿಕೆಟ್​ ಕಿತ್ತು ಅಗ್ರಸ್ಥಾನದಲ್ಲಿದ್ದಾರೆ.

ಪಂದ್ಯ ಸೋತ ಲಕ್ನೋ

ಇಲ್ಲಿನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​​ ನಡೆಸಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 196 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್​ 6 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್​ಗೆ 199 ರನ್ ಬಾರಿಸಿ ಭರ್ಜರಿಗೆ ಗೆಲುವು ತನ್ನದಾಗಿಸಿಕೊಂಡಿತು.

ಇದನ್ನೂ ಓದಿ IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ರಾಜಸ್ಥಾನ್ ತಂಡ ರನ್ ಗಳಿಸುತ್ತಲೇ ಸಾಗಿತು. ಯಶಸ್ವಿ ಜೈಸ್ವಾಲ್​ 24 ರನ್ ಬಾರಿಸಿದರೆ ಜೋಸ್​ ಬಟ್ಲರ್​​ 34 ರನ್​ಗಳ ಕೊಡುಗೆ ಕೊಟ್ಟರು. ಆ ಬಳಿಕ ಬಂದ ಸಂಜು ಸ್ಯಾಮ್ಸನ್ ವಿಕೆಟ್​ ಉರುಳದಂತೆ ನೋಡಿಕೊಂಡ ಜತೆಗೆ 33 ಎಸೆತಗಳಲ್ಲಿ 71 ರನ್ ಬಾರಿಸಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್​ 14 ರನ್​ಗೆ ಸೀಮಿತಗೊಂಡರು. ಆದರೆ ಐದನೇ ಕ್ರಮಾಂಕದಲ್ಲಿ ಆಡಿದ ಧ್ರುವ್ ಜುರೆಲ್​ ಅಮೋಘ ಇನಿಂಗ್ಸ್ ಆಡಿದರು. ಅವರು 34 ಎಸೆತಕ್ಕೆ 52 ರನ್​ ಕೊಡುಗೆ ಕೊಟ್ಟರು. ಇದು ಹಾಲಿ ಅವೃತ್ತಿಯಲ್ಲಿ ಅವರ ಮೊದಲ ಅರ್ಧ ಶತಕವಾಗಿದೆ.

ರಾಹುಲ್​ 31 ಎಸೆತಗಳಲ್ಲಿ ಅರ್ಧಶತಕ ತಲುಪಿದರು. ಈ ವೇಳೆ ಅವರು ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಐದನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಸಾಧನೆಯನ್ನು ಸಾಧಿಸಲು ಅವರು 94 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡರು. ಶಿಖರ್ ಧವನ್ (6362), ಡೇವಿಡ್ ವಾರ್ನರ್ (5909), ಕ್ರಿಸ್ ಗೇಲ್ (4480) ಮತ್ತು ವಿರಾಟ್ ಕೊಹ್ಲಿ (4041) ಎಲೈಟ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Continue Reading

ಕ್ರೀಡೆ

T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

T20 World Cup 2024: ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ, ಅವರು ಆಯ್ಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

VISTARANEWS.COM


on

T20 World Cup 2024
Koo

ನವದೆಹಲಿ: ಕೆಲವು ದಿನಗಳಿಂದ ಕ್ರಿಕೆಟ್​ ವಲಯದಲ್ಲಿ ಕೇಳಿಬರುತ್ತಿದ್ದ ಟಿ20 ವಿಶ್ವಕಪ್​ಗೆ(T20 World Cup 2024) ಟೀಮ್​ ಇಂಡಿಯಾ(Team India) ಪ್ರಕಟಗೊಳ್ಳುವ ವಿಚಾರದಲ್ಲಿ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್(Ajit Agarkar) ಮತ್ತು ಟೀಮ್​ ಇಂಡಿಯಾ ನಾಯಕ ರೋಹಿತ್ ಶರ್ಮಾ(Rohit Sharma) ಅವರು ದೆಹಲಿಯಲ್ಲಿ ಇಂದು ಸಭೆ ಸೇರಿ ಆಟಗಾರರ ಆಯ್ಕೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯದ ಮಾಹಿತಿ ಪ್ರಕಾರ ಆರಂಭಿಕ ಆಟಗಾರನ ಸ್ಥಾನ ಮತ್ತು ವಿಕೆಟ್ ಕೀಪರ್ ಆಯ್ಕೆ ಹಾಗೂ ಆಲ್ ರೌಂಡರ್ ಕುರಿತು ಹೆಚ್ಚಿನ ಚರ್ಚೆಗಳಾಗಲಿದೆ ಎಂದು ತಿಳಿದುಬಂದಿದೆ. ಹಾರ್ದಿಕ್ ಪಾಂಡ್ಯ ಅವರು ಸಂಪೂರ್ಣ ಫಿಟ್​ ಆಗಿದ್ದರೆ ಮಾತ್ರ ಅವರಿಗೆ ಅವಕಾಶ ಎನ್ನಲಾಗಿದೆ. ಮೇ 1ರಂದು ತಂಡ ಅಧಿಕೃತವಾಗಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಇದೇ ಕಾರಣದಿಂದ ಆಯ್ಕೆ ಸಮಿತಿಯು ಭಾರತದ ಮೊದಲ ಸಂಭಾವ್ಯ ತಂಡವನ್ನು ಮೇ 1ರಂದು ಪ್ರಕಟಿಸಲಿದೆ ಎನ್ನಲಾಗಿದೆ. ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

ಚಹಲ್​ಗೆ ಅವಕಾಶ ಅನುಮಾನ


ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ, ಅವರು ಆಯ್ಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕೋಚಿಂಗ್ ಸ್ಟಾಫ್‌ ನ ಪ್ರಭಾವಿ ಸದಸ್ಯರಿಗೆ ಚಾಹಲ್ ಆದ್ಯತೆಯ ಆಯ್ಕೆಯಾಗಿಲ್ಲ ಎಂದು ವರದಿಯಾಗಿದೆ. ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗದಲ್ಲಿ ಮೊದಲ ಆಯ್ಕೆಯಾಗಿದ್ದು, ಮೂರನೇ ಸ್ಪಿನ್ನರ್ ಸ್ಥಾನಕ್ಕೆ ಅಕ್ಷರ್ ಪಟೇಲ್ ಅಥವಾ ರವಿ ಬಿಷ್ಣೋಯಿ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ

ಸದ್ಯಕ್ಕೆ ಆರಂಭಿಕ ಸ್ಥಾನಕ್ಕೆ ಶುಭಮನ್​ ಗಿಲ್​, ಯಶಸ್ವಿ ಜೈಸ್ವಾಲ್​ ಮತ್ತು ಅಭಿಷೇಕ್​ ಶರ್ಮ, ಆಲ್​ರೌಂಡರ್​ ಕೋಟಾದಲ್ಲಿ ಶಿವಂ ದುಬೆ ಮತ್ತು ಹಾರ್ದಿಕ್​ ಪಾಂಡ್ಯ ನಡುವೆ ತೀವ್ರ ಪೈಪೋಟಿ ಇದೆ. ರೋಹಿತ್​ ಶರ್ಮ ಜತೆ ಕೊಹ್ಲಿ ಇನಿಂಗ್ಸ್​ ಆರಂಭಿಸಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ರಿಷಭ್​ ಪಂತ್​ ಅವರು ಮೊದಲ ಆಯ್ಕೆಯ ವಿಕೆಟ್​ ಕೀಪರ್​ ಆಗಿದ್ದರೆ, 2ನೇ ಕೀಪರ್ ಆಯ್ಕೆಗೆ ಒಟ್ಟು 4 ಮಂದಿ ಆಟಗಾರರ ನಡುವೆ ತೀವ್ರ ಸ್ಪರ್ಧೆ ಇದೆ. ರಾಹುಲ್​, ಜಿತೇಶ್​ ಶರ್ಮ, ಇಶಾನ್​ ಕಿಶನ್​ ಮತ್ತು ಸಂಜು ಸ್ಯಾಮ್ಸನ್ ಇವರಲ್ಲಿ ಒಬ್ಬರು ಆಯ್ಕೆಯಾಗಬಹುದು. ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಲಕ್ನೋ ತಂಡದ ಮಾಯಾಂಕ್‌ ಯಾದವ್‌ ಮತ್ತು ಹರ್ಷಿತ್​ ರಾಣಾ ಮೀಸಲು ಬೌಲರ್​ಗಳಾಗಿ ತಂಡದೊಂದಿಗೆ ಪ್ರಯಾಣಿಸಬಹುದು. ರವಿಚಂದ್ರನ್ ಅಶ್ವಿನ್ ಮತ್ತು ಶ್ರೇಯಸ್​ ಅಯ್ಯರ್​ಗೆ ಸ್ಥಾನ ಸಿಗುವುದು ಬಹುತೇಕ ಡೌಟ್​ ಎನ್ನಲಾಗಿದೆ.

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

Continue Reading

ಕ್ರೀಡೆ

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

TCS World 10K: ಹಾಟ್ ಫೇವರಿಟ್ ಆಗಿ ರೇಸ್ ಗೆ ಬಂದ ಮ್ವಾನಿಕಿ ಸಾಮಾನ್ಯ ಆರಂಭ ಪಡೆದರು. 7.5 ಕಿ.ಮೀ ದೂರವನ್ನು ಕ್ರಮಿಸಿದ ಅವರು ಕೀನ್ಯಾದ ಹಿಲರಿ ಚೆಪ್ಕ್ವಾನಿ ಅವರೊಂದಿಗೆ ಸಮಬಲ ಸಾಧಿಸಿದರು. ಅಂತಿಮ ಸುತ್ತಿನಲ್ಲಿ ಮ್ವಾನಿಕಿ 28:15 ಸೆಕೆಂಡುಗಳಲ್ಲಿ ಗುರಿ ತಲುಪಿದರೆ, ಹಿಲರಿ ಚೆಪ್ಕ್ವಾನಿ (28:33) ನಂತರದ ಸ್ಥಾನ ಪಡೆದರು. 17ರ ಹರೆಯದ ಹಗೋಸ್ ಐಯೋಬ್ 28:39 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.

VISTARANEWS.COM


on

TCS World 10K
Koo

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ವರ್ಲ್ಡ್ 10ಕೆ ಬೆಂಗಳೂರು (TCS World 10K) ಟೂರ್ನಿಯ 16ನೇ ಆವೃತ್ತಿಯಲ್ಲಿ ಕೀನ್ಯಾದ ಪೀಟರ್ ಮ್ವಾನಿಕಿ ಪುರುಷರ ಪ್ರಶಸ್ತಿ ಗೆದ್ದರೆ, ಲಿಲಿಯನ್ ಕಸಾಯಿತ್ ಮಹಿಳಾ ಪ್ರಶಸ್ತಿ ಗೆದ್ದಿದ್ದಾರೆ. ಭಾರತದ ಎಲೈಟ್ ಅಥ್ಲೀಟ್​ಗಳ ನಡುವಿನ ಸ್ಪರ್ಧೆಯಲ್ಲಿ ಕಿರಣ್ ಮಾತ್ರೆ ಅವರು 29:32 ನಿಮಿಷದೊಂದಿಗೆ ಮೊದಲ ಸ್ಥಾನ ಗೆದ್ದು ಈವೆಂಟ್ ದಾಖಲೆಯನ್ನು ಮುರಿದರು.

ಪ್ರತಿಷ್ಠಿತ ಮ್ಯಾರಾಥಾನ್​ ನಲ್ಲಿ ಅಥ್ಲೀಟ್​​ಗಳು 1.75 ಕೋಟಿ ರೂಪಾಯಿ (210,000 ಯುಎಸ್​​ ಡಾಲರ್​) ಬಹುಮಾನ ಪಡೆದುಕೊಂಡಿದ್ದಾರೆ. ಪೀಟರ್ ಮ್ವಾನಿಕಿ ಮತ್ತು ಲಿಲಿಯನ್ ಕಸಾಯಿತ್ ತಲಾ 21,68,476 ಲಕ್ಷ ರೂಪಾಯಿ (26,000 ಯುಎಸ್​ ಡಾಲರ್​​) ಸಮಾನ ಬಹುಮಾನದ ಚೆಕ್ ಪಡೆದರು. ಭಾರತೀಯ ಎಲೈಟ್ ವಿಭಾಗದಲ್ಲಿ ಕಿರಣ್ ಮಾತ್ರೆ ಮತ್ತು ಸಂಜೀವನಿ ಜಾಧವ್ ತಲಾ 2,75,000 ರೂ. ಇದಲ್ಲದೆ, ಈವೆಂಟ್ ದಾಖಲೆಯನ್ನು ಮುರಿದಿದ್ದಕ್ಕಾಗಿ ಕಿರಣ್ ಮಾತ್ರೆ 1,00,000 ರೂ.ಗಳ ಬೋನಸ್ ಪಡೆದರು.

ಹಾಟ್ ಫೇವರಿಟ್ ಆಗಿ ರೇಸ್ ಗೆ ಬಂದ ಮ್ವಾನಿಕಿ ಸಾಮಾನ್ಯ ಆರಂಭ ಪಡೆದರು. 7.5 ಕಿ.ಮೀ ದೂರವನ್ನು ಕ್ರಮಿಸಿದ ಅವರು ಕೀನ್ಯಾದ ಹಿಲರಿ ಚೆಪ್ಕ್ವಾನಿ ಅವರೊಂದಿಗೆ ಸಮಬಲ ಸಾಧಿಸಿದರು. ಅಂತಿಮ ಸುತ್ತಿನಲ್ಲಿ ಮ್ವಾನಿಕಿ 28:15 ಸೆಕೆಂಡುಗಳಲ್ಲಿ ಗುರಿ ತಲುಪಿದರೆ, ಹಿಲರಿ ಚೆಪ್ಕ್ವಾನಿ (28:33) ನಂತರದ ಸ್ಥಾನ ಪಡೆದರು. 17ರ ಹರೆಯದ ಹಗೋಸ್ ಐಯೋಬ್ 28:39 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.

TCS World 10 K

ತನ್ನ ವಿಜಯದ ಬಗ್ಗೆ ಮಾತನಾಡಿದ ಲಿಲಿಯನ್ ಕಸಾಯಿತ್, “ಇದು ತುಂಬಾ ಆಕ್ರಮಣಕಾರಿ ಓಟವಾಗಿತ್ತು, ನಾವು ಆರಂಭದಿಂದಲೂ ವೇಗವಾಗಿದ್ದೆ ಎಂದು ಹೇಳಿದ್ದಾರೆ. ಆದಾಗ್ಯೂ ದಾಖಲೆ ಮುರಿಯಲು ಸಾಧ್ಯವಾಗದಿರುವುದಕ್ಕೆ ವಿಷಾದಿಸಿದರು. ನಾನು ಇಂದು ಕೋರ್ಸ್ ದಾಖಲೆ ಮುರಿಯಬಹುದಿತ್ತು ಎಂದು ನಾನು ಭಾವಿಸುತ್ತೇನೆ. ಓಟದ ಕೊನೆಯಲ್ಲಿ ನನ್ನಲ್ಲಿ ಇನ್ನೂ ಸಾಕಷ್ಟು ಶಕ್ತಿ ಇದೆ ಎಂದು ನಾನು ಭಾವಿಸಿದೆ ಎಂದು ಹೇಳಿದ್ದಾರೆ.

ಭಾರತೀಯ ಎಲೈಟ್​​ ಪುರುಷರ ರೇಸ್ ನಲ್ಲಿ ಮೊದಲ ನಾಲ್ಕು ಸ್ಥಾನಗಳು ಹಿಂದಿನ ಕೋರ್ಸ್ ದಾಖಲೆಗಿಂತ ಮುಂದಿವೆ. ಸಮಬಲದ ಹೋರಾಟದಲ್ಲಿ ಕಿರಣ್ ಮಾತ್ರೆ 29:32 ಸೆಕೆಂಡುಗಳಲ್ಲಿ ಗುರಿ ತಲುಪಿ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದರು. ರಂಜೀತ್ ಕುಮಾರ್ ಪಟೇಲ್ (29:35) ಮತ್ತು ಧರ್ಮೇಂದ್ರ (29:45) ಗುರಿ ತಲುಪಿದರು.
ಕಿರಣ್ ಮಾತ್ರೆ, ರಂಜೀತ್ ಕುಮಾರ್ ಪಟೇಲ್ ಮತ್ತು ಧರ್ಮೇಂದ್ರ ಅವರನ್ನೊಳಗೊಂಡ ತಂಡ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರಿನ ಹಿಂದಿನ ಆವೃತ್ತಿಯಿಂದ ಕ್ರಮವಾಗಿ 12, 9 ಮತ್ತು 10ನೇ ಸ್ಥಾನ ಗಳಿಸಿತ್ತು.

ಇದನ್ನೂ ಓದಿ: KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಗೆಲುವಿನ ನಂತರ ಮಾತನಾಡಿದ ಕಿರಣ್ ಮಾತ್ರೆ, “4 ಮತ್ತು 8 ನೇ ಕಿಲೋಮೀಟರ್ ನಡುವೆ, ಓಟವು ನನಗೆ ಸಾಕಷ್ಟು ಸವಾಲಿನದ್ದಾಗಿತ್ತು, ಆದ್ದರಿಂದ ಫಲಿತಾಂಶದಿಂದ ನನಗೆ ತುಂಬಾ ಸಂತೋಷವಾಗಿದೆ. ಕಳೆದ ವರ್ಷ ನಾನು 12 ನೇ ಸ್ಥಾನವನ್ನು ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಸಂಜೀವಿನಿಗೆ ಮೂರನೇ ಗೆಲುವು

ಸಂಜೀವನಿ ಟಿಸಿಎಸ್ ವರ್ಲ್ಡ್ 10 ಕೆ ಬೆಂಗಳೂರಿನಲ್ಲಿ ನಡೆದ ಮಹಿಳಾ ವಿಭಾಗದಲ್ಲಿ ಪ್ರಾಬಲ್ಯ ಸಾಧಿಸಿ ಮೂರನೇ ಗೆಲುವು ಸಾಧಿಸಿದರು. ಅಂತರರಾಷ್ಟ್ರೀಯ ಮಹಿಳಾ ಸ್ಪರ್ಧೆಯಂತೆಯೇ, ಭಾರತೀಯ ಮಹಿಳಾ ಓಟದಲ್ಲಿ ಸೋನಮ್ (36:27) ಆರಂಭಿಕ ಮುನ್ನಡೆ ಸಾಧಿಸಿದರು. ಸಂಜೀವನಿ 34:03 ಸೆಕೆಂಡುಗಳಲ್ಲಿ ಗುರಿ ತಲುಪಿ ಮತ್ತೊಂದು ದಾಖಲೆ ನಿರ್ಮಿಸಿದರು. ಲಿಲ್ಲಿ ದಾಸ್ (34:13) ಎರಡನೇ ಸ್ಥಾನ ಪಡೆದರೆ, ಪ್ರೀತಿ ಯಾದವ್ (34:24) ಮೂರನೇ ಸ್ಥಾನ ಪಡೆದರು.

Continue Reading

ಕ್ರೀಡೆ

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

IPL 2024 Points Table: 17ನೇ ಆವೃತ್ತಿಯ ಐಪಿಎಲ್​ನಲ್ಲಿ ರಾಜಸ್ಥಾನ್​ ರಾಯಲ್ಸ್​ ತಂಡ 16 ಅಂಕ ಗಳಿಸಿ ಪ್ಲೇ ಆಫ್​ ಟಿಕೆಟ್ ಬಹುತೇಕ​ ಖಚಿತಪಡಿಸಿಕೊಂಡಿದೆ.

VISTARANEWS.COM


on

IPL 2024 Points Table
Koo

ಬೆಂಗಳೂರು: ಶನಿವಾರ ನಡೆದ ಐಪಿಎಲ್​ನ ಡಬಲ್​ ಹೆಡರ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​(Delhi Capitals) ಮತ್ತು ರಾಜಸ್ಥಾನ್(Rajasthan Royals)​ ರಾಯಲ್ಸ್​ ತಂಡಗಳು ಗೆಲುವು ಸಾಧಿಸಿದರೆ. ಲಕ್ನೋ ಸೂಪರ್​ ಜೈಂಟ್ಸ್(Lucknow Super Giants )​ ಮತ್ತು ಮುಂಬೈ ಇಂಡಿಯನ್ಸ್(Mumbai Indians)​​ ಸೋಲು ಕಂಡಿತು. ಈ ಸೋಲು ಮತ್ತು ಗೆಲುವಿನಿಂದ ಅಂಕಪಟ್ಟಿಯಲ್ಲಿ(IPL 2024 Points Table) ಮಹತ್ವದ ಬದಲಾವಣೆ ಸಂಭವಿಸಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​85310 (+0.972)
ಹೈದರಾಬಾದ್​​85310 (+0.577)
ಲಕ್ನೋ95410 (+0.059)
ಡೆಲ್ಲಿ105510 (0.276)
ಚೆನ್ನೈ8448 (+0.415)
ಗುಜರಾತ್​9458 (-0.974)
ಪಂಜಾಬ್9366 (-0.187)
ಮುಂಬೈ9366 (-0.261)
ಆರ್​ಸಿಬಿ9274 (-0.721)

ರಾಜಸ್ಥಾನ್​ಗೆ 7 ವಿಕೆಟ್​ ಗೆಲುವು


ಇಲ್ಲಿನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​​ ನಡೆಸಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 196 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್​ 6 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್​ಗೆ 199 ರನ್ ಬಾರಿಸಿ ಭರ್ಜರಿಗೆ ಗೆಲುವು ತನ್ನದಾಗಿಸಿಕೊಂಡಿತು. ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ರಾಜಸ್ಥಾನ್ ತಂಡ ರನ್ ಗಳಿಸುತ್ತಲೇ ಸಾಗಿತು. ಯಶಸ್ವಿ ಜೈಸ್ವಾಲ್​ 24 ರನ್ ಬಾರಿಸಿದರೆ ಜೋಸ್​ ಬಟ್ಲರ್​​ 34 ರನ್​ಗಳ ಕೊಡುಗೆ ಕೊಟ್ಟರು. ಆ ಬಳಿಕ ಬಂದ ಸಂಜು ಸ್ಯಾಮ್ಸನ್ ವಿಕೆಟ್​ ಉರುಳದಂತೆ ನೋಡಿಕೊಂಡ ಜತೆಗೆ 33 ಎಸೆತಗಳಲ್ಲಿ 71 ರನ್ ಬಾರಿಸಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್​ 14 ರನ್​ಗೆ ಸೀಮಿತಗೊಂಡರು. ಆದರೆ ಐದನೇ ಕ್ರಮಾಂಕದಲ್ಲಿ ಆಡಿದ ಧ್ರುವ್ ಜುರೆಲ್​ ಅಮೋಘ ಇನಿಂಗ್ಸ್ ಆಡಿದರು. ಅವರು 34 ಎಸೆತಕ್ಕೆ 52 ರನ್​ ಕೊಡುಗೆ ಕೊಟ್ಟರು. ಇದು ಹಾಲಿ ಅವೃತ್ತಿಯಲ್ಲಿ ಅವರ ಮೊದಲ ಅರ್ಧ ಶತಕವಾಗಿದೆ.

ಇದನ್ನೂ ಓದಿ IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

ಡೆಲ್ಲಿಗೆ 10 ರನ್​ ಗೆಲುವು


ದಿನದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ 10 ರನ್​ ಗೆಲುವು ಸಾಧಿಸಿತು. ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

Continue Reading
Advertisement
Samantha Ruth Prabhu announces new film Bangaram
ಟಾಲಿವುಡ್5 mins ago

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Aamir Khan talks about power of namaste
ಬಾಲಿವುಡ್9 mins ago

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

IPL 2024
ಕ್ರೀಡೆ15 mins ago

IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

Mohan Bhagwat
ದೇಶ39 mins ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Congress instigates bombers We are crushing traitors through NIA PM Narendra Modi
Lok Sabha Election 202443 mins ago

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Election Commission
ದೇಶ43 mins ago

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

T20 World Cup 2024
ಕ್ರೀಡೆ46 mins ago

T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

Foods rich in vitamin D
ದೇಶ52 mins ago

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

TCS World 10K
ಕ್ರೀಡೆ1 hour ago

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

IPL 2024 Points Table
ಕ್ರೀಡೆ1 hour ago

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 20242 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ7 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202424 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌