IPL Auction | ಹೊಸಬರು, ಹಳಬರು ಸೇರಿ ಹೊಸ ಬಳಗ; ಐಪಿಎಲ್​ನ 10 ತಂಡಗಳ ಸದಸ್ಯರ ಬಲ ಈಗ ರೀತಿ ಇದೆ - Vistara News

ಐಪಿಎಲ್ 2024

IPL Auction | ಹೊಸಬರು, ಹಳಬರು ಸೇರಿ ಹೊಸ ಬಳಗ; ಐಪಿಎಲ್​ನ 10 ತಂಡಗಳ ಸದಸ್ಯರ ಬಲ ಈಗ ರೀತಿ ಇದೆ

ಡಿಸೆಂಬರ್​ 23ರಂದು ಮಿನಿ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ 10 ತಂಡಗಳ ಸದಸ್ಯರ ಪಟ್ಟಿ ಇಂತಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಚ್ಚಿ : ಐಪಿಎಲ್ 16ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದ್ದು, ಒಟ್ಟು 80 ಆಟಗಾರರು ನಾನಾ ತಂಡಗಳನ್ನು ಸೇರಿಕೊಂಡಿದ್ದಾರೆ. ಇವರಲ್ಲಿ 29 ವಿದೇಶಿ ಆಟಗಾರರು. ಒಟ್ಟಾರೆ 167 ಕೋಟಿ ರೂಪಾಯಿ ಮೊತ್ತವನ್ನು ಫ್ರಾಂಚೈಸಿಗಳು ಆಟಗಾರರಿಗೆ ಹೂಡಿಕೆ ಮಾಡಿವೆ. ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ 10 ಫ್ರಾಂಚೈಸಿಗಳ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಫಾಫ್ ಡು ಪ್ಲೆಸಿಸ್ (ನಾಯಕ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಡೇವಿಡ್ ವಿಲ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಹರ್ಷಲ್ ಪಟೇಲ್, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹಮದ್, ಸುಯಶ್ ಎಸ್ ಪ್ರಭುದೇಸಾಯಿ, ವನಿಂದು ಹಸರಂಗ, ಆಕಾಶ್ ದೀಪ್, ಜೋಶ್ ದೀಪ್,
ಜೋಶ್ ದೀಪ್ ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ,
ವಿಲ್ ಜಾಕ್ಸ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಹಿಮಾಂಶು ಶರ್ಮಾ

ಚೆನ್ನೈ ಸೂಪರ್​ ಕಿಂಗ್ಸ್​

ಭಗತ್ ವರ್ಮ. ಅಜಯ್ ಮಂಡಲ್,
ಕೈಲ್ ಜೇಮಿಸನ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್, ಅಜಿಂಕ್ಯ ರಹಾನೆ, ಎಂಎಸ್ ಧೋನಿ (ನಾಯಕ), ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ,
ಮೊಯೀನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್​ಗೇಕರ್, ಡ್ವೇನ್​ ಪ್ರಿಟೋರಿಯಸ್​, ಮಿಚೆಲ್​ ಸ್ಯಾಂಟ್ನರ್​, ರವೀಂದ್ರ ಜಡೇಜಾ, ತುಷಾರ್
ದೇಶಪಾಂಡೆ, ಮುಖೇಶ್ ಚೌಧರಿ, ಮಥೀಶ ಪಥಿರಾಣ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

ಡೆಲ್ಲಿ ಕ್ಯಾಪಿಟಲ್ಸ್​

ರಿಷಭ್​ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ರೋವ್ಮನ್​ ಪೊವೆಲ್, ಅಕ್ಷರ್ ಪಟೇಲ್, ಕಮಲೇಶ್ ನಾಗರಕೋಟಿ, ಲಲಿತ್ ಯಾದವ್, ಮಿಚೆಲ್ ಮಾರ್ಷ್, ಪ್ರವೀಣ್ ದುಬೆ, ರಿಪಾಲ್ ಪಟೇಲ್, ಸರ್ಫರಾಜ್ ಖಾನ್, ವಿಕ್ಕಿ ಓಸ್ತ್ವಾಲ್, ಯಶ್ ಧುಲ್, ಅಮನ್ ಖಾನ್, ಅನ್ರಿಚ್ ನಾರ್ಜೆ, ಚೇತನ್ ಸಕರಿಯಾ , ಕುಲದೀಪ್ ಯಾದವ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್, ಫಿಲ್ ಸಾಲ್ಟ್, ಇಶಾಂತ್ ಶರ್ಮಾ, ಮನೀಶ್ ಪಾಂಡೆ, ಮುಖೇಶ್ ಕುಮಾರ್, ರಿಲೀ ರೊಸೌವ್

ಗುಜರಾತ್​ ಟೈಟನ್ಸ್​

ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ಶುಬ್ಮನ್​ ಗಿಲ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ರಾಹುಲ್ ತೆವಾಟಿಯಾ, ಶಿವಂ ಮಾವಿ, ವಿಜಯ್ ಶಂಕರ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಸಾಯಿ ಕಿಶೋರ್, ರಶೀದ್ ಖಾನ್, ಯಶ್ ದಯಾಳ್, ಕೇನ್ ವಿಲಿಯಮ್ಸನ್, ಜೋಶುವಾ ಲಿಟಲ್, ಓಡಿಯನ್ ಸ್ಮಿತ್, ಉರ್ವಿಲ್ ಪಟೇಲ್, ಕೆಎಸ್ ಭರತ್, ಮೋಹಿತ್ ಶರ್ಮಾ

ಕೋಲ್ಕತ್ತಾ ನೈಟ್ ರೈಡರ್ಸ್

ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಜ್, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಸುಯಶ್ ಶರ್ಮಾ, ನಿತೀಶ್ ರಾಣಾ, ಅನುಕುಲ್ ರಾಯ್, ಲಾಕಿ ಫರ್ಗುಸನ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಉಮೇಶ್ ಯಾದವ್, ಹರ್ಷಿತ್ ರಾಣಾ, ತಿಮಿರ್ ಥೀಮಿ , ವೈಭವ್ ಅರೋರಾ, ವರುಣ್ ಚಕ್ರವರ್ತಿ, ಎನ್ ಜಗದೀಸನ್, ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್, ಮನ್ದೀಪ್ ಸಿಂಗ್

ಲಕ್ನೋ ಸೂಪರ್ ಜಯಂಟ್ಸ್​

ಕೆಎಲ್ ರಾಹುಲ್ (ನಾಯಕ), ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃಷ್ಣಪ್ಪ ಗೌತಮ್, ಕರಣ್ ಶರ್ಮಾ, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೋನಿಸ್, ಅವೇಶ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ಜಯದೇವ್ ಉನದ್ಕತ್, ನಿಕೋಲಸ್ ಪೂರನ್, ಯಶ್ ಠಾಕೂರ್, ರೊಮಾರಿಯೋ ಶೆಫರ್ಡ್, ಅಮಿತ್ ಮಿಶ್ರಾ, ಸ್ವಪ್ನಿಲ್ ಸಿಂಗ್, ಪ್ರೇರಕ್ ಮಂಕಡ್, ಯುದ್ವೀರ್ ಚರಕ್, ನವೀನ್ ಉಲ್ ಹಕ್, ಡೇನಿಯಲ್ ಸಾಮ್ಸ್

ಮುಂಬೈ ಇಂಡಿಯನ್ಸ್

ರೋಹಿತ್ ಶರ್ಮಾ (ನಾಯಕ), ಡೀವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಜಸ್ಪ್ರೀತ್ ಬುಮ್ರಾ, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ವಿಷ್ಣು ವಿನೋದ್, ಕ್ಯಾಮೆರಾನ್ ಗ್ರೀನ್ , ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಟ್ರಿಸ್ಟಾನ್ ಸ್ಟಬ್ಸ್, ಡುವಾನ್ ಜಾನ್ಸೆನ್, ಪಿಯೂಷ್ ಚಾವ್ಲಾ, ಜ್ಯೆ ರಿಚರ್ಡ್ಸನ್, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ

ಪಂಜಾಬ್ ಕಿಂಗ್ಸ್

ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಜಾನಿ ಬೈರ್‌ಸ್ಟೋ, ಪ್ರಭಾಸಿಮ್ರಾನ್ ಸಿಂಗ್, ಅಥರ್ವ ಟೈಡೆ, ಹರ್‌ಪ್ರೀತ್ ಬ್ರಾರ್, ಲಿಯಾಮ್ ಲಿವಿಂಗ್‌ಸ್ಟೋನ್, ರಾಜ್ ಅಂಗದ್ ಬಾವಾ, ರಿಷಿ ಧವನ್, ಶಾರುಖ್ ಖಾನ್, ಅರ್ಶ್‌ದೀಪ್ ಸಿಂಗ್, ಬಲ್ತೇಜ್ ಧಂಡಾ, ರಾಹುಲ್ ಎಲ್ಲಿ ರಬಾಡ, ನಾಥನ್ ಎಲ್ಲಿಸ್ ಚಹಾರ್, ಸ್ಯಾಮ್ ಕುರ್ರಾನ್, ಸಿಕಂದರ್ ರಜಾ, ಹರ್‌ಪ್ರೀತ್ ಭಾಟಿಯಾ, ವಿದ್ವತ್ ಕಾವೇರಪ್ಪ, ಮೋಹಿತ್ ರಥಿ, ಶಿವಂ ಸಿಂಗ್

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಆರ್ ಅಶ್ವಿನ್, ರಿಯಾನ್ ಪರಾಗ್, ಕೆಸಿ ಕರಿಯಪ್ಪ, ಕುಲದೀಪ್ ಸೇನ್, ಕುಲದೀಪ್ ಯಾದವ್, ನವದೀಪ್ ಸೈನಿ, ಓಬೇದ್ ಮೆಕಾಯ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚೌಲ್, ಯುಜ್ವೇಂದ್ರ ಚೌಲ್ , ಜೋ ರೂಟ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಕುನಾಲ್ ರಾಥೋರ್, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಆಕಾಶ್ ವಶಿಷ್ಟ್, ಅಬ್ದುಲ್ ಪಿಎ

ಸನ್ ರೈಸರ್ಸ್ ಹೈದರಾಬಾದ್

ಅಬ್ದುಲ್ ಸಮದ್, ಐಡೆನ್ ಮಾರ್ಕ್ರಮ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ಹೇನ್ರಿಚ್ ಮರ್ಕಂದೆನ್, ಮೇಯ್ನ್‌ರಿಚ್ ಕ್ಲಾಸೆಡ್ನ್ , ವಿವ್ರಾಂತ್ ಶರ್ಮಾ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ಉಪೇಂದ್ರ ಯಾದವ್, ಮಯಾಂಕ್ ದಾಗರ್, ಅಕೇಲ್ ಹೊಸೈನ್, ಅನ್ಮೋಲ್ಪ್ರೀತ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Self Harming: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಪತಿಯೊಬ್ಬ ಸಾಲಗಾರರ ಕಾಟಕ್ಕೆ ಪತ್ನಿ ಹಾಗೂ ಮಕ್ಕಳಿಬ್ಬರಿಗೆ ವಿಷವಿಕ್ಕಿ ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥನಾಗಿದ್ದು, ಆಸ್ಪತ್ರೆಪಾಲಾಗಿದ್ದಾನೆ.

VISTARANEWS.COM


on

By

IPL Betting
Koo

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರಿಕೆಟ್

Ruturaj Gaikwad: ಅಬ್ಬರದ ಫಿಫ್ಟಿ ಜತೆಗೆ ಕನ್ನಡಿಗನ ದಾಖಲೆ ಮುರಿದ ಋತುರಾಜ್‌ ಗಾಯಕ್ವಾಡ್!

Ruturaj Gaikwad: ಟಾಸ್‌ ಸೋತು ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಋತುರಾಜ್‌ ಗಾಯಕ್ವಾಡ್‌, ಶಿವಂ ದುಬೆ ಹಾಗೂ ಧೋನಿ ಬ್ಯಾಟಿಂಗ್‌ ನೆರವಿನಿಂದ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

Ruturaj Gaikwad
Koo

ಮುಂಬೈ: ಮಹಾರಾಷ್ಟ್ರದ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್‌ 14) ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆಡಿದ 6 ಪಂದ್ಯಗಳಲ್ಲಿ 4 ಪಂದ್ಯ ಗೆಲ್ಲುವ ಮೂಲಕ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ನೇತೃತ್ವದಲ್ಲಿ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದೆ. ಇನ್ನು, ಮುಂಬೈ ವಿರುದ್ಧದ ಪಂದ್ಯದಲ್ಲಿ ಅಮೋಘ 69 ರನ್‌ ಬಾರಿಸಿದ ಋತುರಾಜ್‌ ಗಾಯಕ್ವಾಡ್‌, ಐಪಿಎಲ್‌ನಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ಭಾರತದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾದರು.

ಋತುರಾಜ್‌ ಗಾಯಕ್ವಾಡ್‌ ಅವರು 57 ಇನ್ನಿಂಗ್ಸ್‌ಗಳಲ್ಲಿಯೇ 2 ಸಾವಿರ ರನ್‌ ಪೂರೈಸಿದ್ದು, ಭಾರತದಲ್ಲಿಯೇ ವೇಗವಾಗಿ ಇಷ್ಟು ರನ್‌ ಗಳಿಸಿದ ಮೊದಲ ಆಟಗಾರ ಎನಿಸಿದ್ದಾರೆ. ಇದುವರೆಗೆ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ದಾಖಲೆಯು ಕನ್ನಡಿಗ, ಲಕ್ನೋ ಸೂಪರ್‌ ಜೈಂಟ್ಸ್‌ ಕ್ಯಾಪ್ಟನ್‌ ಕೆ.ಎಲ್.ರಾಹುಲ್‌ ಹೆಸರಲ್ಲಿತ್ತು. ರಾಹುಲ್‌ ಅವರು 60 ಇನ್ನಿಂಗ್ಸ್‌ಗಳಲ್ಲಿ 2 ಸಾವಿರ ರನ್‌ ಗಳಿಸಿದ ಸಾಧನೆ ಮಾಡಿದ್ದರು.

ಮುಂಬೈ ವಿರುದ್ಧ ಋತುರಾಜ್‌ ಗಾಯಕ್ವಾಡ್‌ 40 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್‌ ಸಮೇತ 69 ರನ್‌ ಗಳಿಸಿದರು. ಶಿವಂ ದುಬೆ ಕೂಡ 38 ಎಸೆತಗಳಲ್ಲಿ 66 ರನ್‌ ಗಳಿಸಿದ್ದು ಸಿಎಸ್‌ಕೆ 206 ರನ್‌ಗಳ ಬೃಹತ್‌ ಮೊತ್ತ ದಾಖಲಿಸಲು ಸಾಧ್ಯವಾಯಿತು. ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 186 ರನ್‌ ಅಷ್ಟೇ ಕಲೆಹಾಕಲು ಸಾಧ್ಯವಾಯಿತು.

Ruturaj Gaikwad becomes fastest Indian to 2000 IPL runs during 69-run knock vs MI

ರೋಹಿತ್‌ ಶರ್ಮಾ ರೆಕಾರ್ಡ್

ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ ತಂಡದ ರೋಹಿತ್‌ ಶರ್ಮಾ ಕೂಡ ಮತ್ತೊಂದು ದಾಖಲೆ ಬರೆದರು. ಟಿ20 ಕ್ರಿಕೆಟ್​​ನಲ್ಲಿ 500 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಇನಿಂಗ್ಸ್​ನಲ್ಲಿ ಐದು ಸಿಕ್ಸರ್ ಬಾರಿಸುವ ಮೂಲಕ ಈ ಗಡಿಯನ್ನು ದಾಟಿದ್ದಾರೆ. ರವೀಂದ್ರ ಜಡೇಜಾ ಅವರ ಬೌಲಿಂಗ್​ನಲ್ಲಿ ಬಂದ ಮೂರನೇ ಸಿಕ್ಸರ್​ಗಳೊಂದಿಗೆ ರೋಹಿತ್ 500 ಟಿ 20 ಸಿಕ್ಸರ್​​ ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.‌

ಅತಿ ಹೆಚ್ಚು ಪಂದ್ಯ; ಧೋನಿ 2ನೇ ಆಟಗಾರ ಎಂಬ ಹೆಗ್ಗಳಿಕೆ

ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್‌ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್‌ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.

ಇದನ್ನೂ ಓದಿ: MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?

Continue Reading

ಐಪಿಎಲ್ 2024

MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?

MS Dhoni: IPL 2024 : ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಇನ್ನು, ಸಿಎಸ್‌ಕೆ ಕೊನೆಯ ಓವರ್‌ನಲ್ಲಿ ಮೂರು ಸಿಕ್ಸ್‌ ಬಾರಿಸಿದ ಮಹೇಂದ್ರ ಸಿಂಗ್‌ ಧೋನಿ ಅವರು ವಿಶೇಷ ದಾಖಲೆಯನ್ನೂ ಬರೆದರು.

VISTARANEWS.COM


on

MS Dhoni
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂದ್ಯವು ಗೆಲುವು (IPL 2024) ಸಾಧಿಸಿದೆ. ಅದರಲ್ಲೂ, ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಮಹೇಂದ್ರ ಸಿಂಗ್‌ ಧೋನಿ (MS Dhoni) ಅವರು ಬಾರಿಸಿದ ಮೂರು ಸಿಕ್ಸರ್‌ಗಳು ತಂಡದ ಗೆಲುವಿಗೆ ಕಾರಣವಾಗುವ ಜತೆಗೆ ಅಭಿಮಾನಿಗಳ ಮನವನ್ನೂ ತಣಿಸಿವೆ. ಧೋನಿ ಅವರು ಮೂರು ಸಿಕ್ಸರ್‌ ಮೂಲಕ ಗಮನ ಸೆಳೆದಿದ್ದಲ್ಲದೆ, ವಿರಾಟ್‌ ಕೊಹ್ಲಿ (Virat Kohli) ನಂತರ ಐಪಿಎಲ್‌ನಲ್ಲಿ ಒಂದೇ ಫ್ರಾಂಚೈಸ್‌ ಪರವಾಗಿ 250 ಪಂದ್ಯಗಳನ್ನು ಆಡಿದ ಎರಡನೇ ಆಟಗಾರ ಎನಿಸಿದ್ದಾರೆ.

ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್‌ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್‌ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.

ಸಿಎಸ್‌ಕೆ ಪರವಾಗಿ 250 ಪಂದ್ಯಗಳನ್ನು ಆಡುವುದಷ್ಟೇ ಕ್ಯಾಪ್ಟನ್‌ ಆಗಿಯೂ 200 ಪಂದ್ಯಗಳಲ್ಲಿ ಧೋನಿ ನಾಯಕರಾಗಿ ಮುನ್ನಡೆಸಿದ್ದಾರೆ. ಧೋನಿ ನಾಯಕತ್ವದಲ್ಲಿ ಸಿಎಸ್‌ಕೆಯು 2010, 2011, 2018, 2021 ಹಾಗೂ 2023ರಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈಗ ಋತುರಾಜ್‌ ಗಾಯಕ್ವಾಡ್‌ ಅವರು ಸಿಎಸ್‌ಕೆಯನ್ನು ಮುನ್ನಡೆಸುತ್ತಿದ್ದು, ಧೋನಿ ಮಾರ್ಗದರ್ಶನವು ಮುಂದುವರಿದಿದೆ.

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಗೆಲುವು

ಮತೀಶ್​ ಪತಿರಾಣಾ (4 ವಿಕೆಟ್​, 28 ರನ್​​) ಅವರ ಮಾರಕ ಬೌಲಿಂಗ್ ಹಾಗೂ ಋತುರಾಜ್ ಗಾಯಕ್ವಾಡ್​ (69 ರನ್​, 40 ಎಸೆತ, 5 ಫೋರ್, 5 ಸಿಕ್ಸರ್​) , ಶಿವಂ ದುಬೆ (66 ರನ್​, 38 ರನ್​,10 ಫೋರ್​, 2 ಸಿಕ್ಸರ್​ ) ಅವರ ಅರ್ಧ ಶತಕಗಳ ನೆರವಿನಿಂದ ಮಿಂಚಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲುವು ಸಾಧಿಸಿತು. ಅಂದ ಹಾಗೆ ಚೆನ್ನೈ ಪರ ಕೊನೇ ನಾಲ್ಕು ಎಸೆತಗಳನ್ನು ಎದುರಿಸಿದ್ದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ​ 20 ರನ್​ಗಳನ್ನು ಬಾರಿಸಿದ್ದರು. ಅದರಲ್ಲಿ 3 ಸಿಕ್ಸರ್​ಗಳಿದ್ದವು. ಅದೇ ರನ್​ಗಳ ಅಂತರದಿಂದ ಚೆನ್ನೈ ಗೆದ್ದು ಬೀಗಿದ್ದು ವಿಶೇಷ. ಆದರೆ, ಮುಂಬೈ ಪರ ಏಕಾಂಗಿ ಹೋರಾಟ ನಡೆಸಿ ಅಮೋಘ 105 ರನ್ ಬಾರಿಸಿದ ರೋಹಿತ್ ಶರ್ಮಾ ಅವರ ಶತಕದ ಹೋರಾಟ ವ್ಯರ್ಥಗೊಂಡಿತು.

ಈ ಗೆಲುವು ಚೆನ್ನೈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ನಾಲ್ಕನೆಯದ್ದು. ಅದೇ ರೀತಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ನಾಲ್ಕನೇ ಸೋಲು. ಹಾರ್ದಿಕ್ ಪಾಂಡ್ಯ ಬಳಗ ತವರಿನಲ್ಲಿ ನಡೆದ ಈ ಹಿಂದಿನ ಎರಡು ಪಂದ್ಯಗಳನ್ನು ಗೆದಿದ್ದರೆ ಮೂರನೇ ಪಂದ್ಯದಲ್ಲಿ ಸೋಲು ಕಂಡಿತು. ಅಲ್ಲದೆ ಪ್ಲೇ ಆಫ್ ಹಾದಿಯನ್ನು ಕಠಿಣಗೊಳಿಸಿತು. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಚೆನ್ನೈ ಸೂಪರ್ ಕಿಂಗ್ಸ್ ಮೇಲಿನ ಗೆಲುವಿನ ಪಾರಮ್ಯದ ಅಂತರ ಕಡಿಮೆಯಾಯಿತು ಒಟ್ಟು 36 ಪಂದ್ಯಗಳಲ್ಲಿ ಮುಂಬೈ 20 ರಲ್ಲಿ ಗೆದ್ದಿದ್ದರೆ, ಚೆನ್ನೈ 17 ಪಂದ್ಯಗಳಲ್ಲಿ ಗೆದ್ದಂತಾಯಿತು.

ಇದನ್ನೂ ಓದಿ: IPL 2024: ಅಬ್ಬರದ ಫೀಲ್ಡಿಂಗ್‌ ವೇಳೆ ಕಳಚಿದ ರೋಹಿತ್‌ ಶರ್ಮಾ ಪ್ಯಾಂಟ್;‌ ವಿಡಿಯೊ ವೈರಲ್!

Continue Reading

ಐಪಿಎಲ್ 2024

IPL 2024: ಅಬ್ಬರದ ಫೀಲ್ಡಿಂಗ್‌ ವೇಳೆ ಕಳಚಿದ ರೋಹಿತ್‌ ಶರ್ಮಾ ಪ್ಯಾಂಟ್;‌ ವಿಡಿಯೊ ವೈರಲ್!

IPL 2024 : ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಇದರ ಮಧ್ಯೆಯೇ, ಫೀಲ್ಡಿಂಗ್‌ ಮಾಡುವಾಗ ರೋಹಿತ್‌ ಶರ್ಮಾ ಅವರ ಪ್ಯಾಂಟ್‌ ಕಳಚಿಬಿದ್ದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

IPL 2024
Koo

ಮುಂಬೈ: ಭಾರತ ಕ್ರಿಕೆಟ್‌ ತಂಡದ ನಾಯಕ, ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ಸ್ಟಾರ್‌ ಆಟಗಾರ ರೋಹಿತ್‌ ಶರ್ಮಾ (Rohit Sharma) ಇರುವುದೇ ಹಾಗೆ. ಅವರು ಮೈದಾನದಲ್ಲಿದ್ದಾಗ ಸಹ ಆಟಗಾರರ ಜತೆ ತಮಾಷೆ ಮಾಡುತ್ತಾರೆ, ಕೆಲವೊಮ್ಮೆ ಬೈಯುತ್ತಾರೆ, ಅಂಪೈರ್‌ಗಳನ್ನೂ ಛೇಡಿಸುತ್ತಾರೆ. ಆ ಮೂಲಕ ಅವರು ಎಲ್ಲರನ್ನೂ ನಗಿಸುತ್ತಾರೆ. ಆದರೆ, ಸಿಎಸ್‌ಕೆ ವಿರುದ್ಧ ಭಾನುವಾರ (ಏಪ್ರಿಲ್‌ 14) ನಡೆದ ಪಂದ್ಯದಲ್ಲಿ (CSK vs MI) ರೋಹಿತ್‌ ಶರ್ಮಾ ಅವರೇ ನಗೆಪಾಟಲಿಗೀಡಾಗಿದ್ದಾರೆ. ರೋಹಿತ್‌ ಶರ್ಮಾ ಅವರು ಫೀಲ್ಡಿಂಗ್‌ (IPL 2024) ಮಾಡುವಾಗ ಪ್ಯಾಂಟ್‌ ಕಳಚಿದ್ದೇ ಇದಕ್ಕೆ ಕಾರಣವಾಗಿದೆ. ಈ ವಿಡಿಯೊ ಕೂಡ ವೈರಲ್‌ (Viral Video) ಆಗಿದೆ.

ಟಾಸ್‌ ಸೋತ ಮುಂಬೈ ಇಂಡಿಯನ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮವಾಗಿ ಬ್ಯಾಟಿಂಗ್‌ ಮಾಡಿತು. ಅದರಲ್ಲೂ, ಋತುರಾಜ್‌ ಗಾಯಕ್ವಾಡ್‌ ಮಿಂಚಿದರು. ಋತುರಾಜ್‌ ಗಾಯಕ್ವಾಡ್‌ ಹೊಡೆದ ಚೆಂಡು ಹಿಡಿಯಲು ರೋಹಿತ್‌ ಶರ್ಮಾ ಮುಂದಾದಾಗ ಅವರ ಪ್ಯಾಂಟ್‌ ಕಳಚಿತು. ಡೈವ್‌ ಹೊಡೆದು ಕ್ಯಾಚ್‌ ಹಿಡಿಯಲು ಯತ್ನಿಸಿದರೂ ಅದರಲ್ಲಿ ರೋಹಿತ್‌ ಶರ್ಮಾ ಸಫಲರಾಗಲಿಲ್ಲ. ಇದೇ ವೇಳೆ ಪ್ಯಾಂಟ್‌ ಕೂಡ ಕಳಚಿದ ಕಾರಣ ಆಟಗಾರರು, ಪ್ರೇಕ್ಷಕರು ನಕ್ಕರು. ರೋಹಿತ್‌ ಶರ್ಮಾ ಕೂಡ ನಕ್ಕರು.

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಗೆಲುವು

ಮತೀಶ್​ ಪತಿರಾಣಾ (4 ವಿಕೆಟ್​, 28 ರನ್​​) ಅವರ ಮಾರಕ ಬೌಲಿಂಗ್ ಹಾಗೂ ಋತುರಾಜ್ ಗಾಯಕ್ವಾಡ್​ (69 ರನ್​, 40 ಎಸೆತ, 5 ಫೋರ್, 5 ಸಿಕ್ಸರ್​) , ಶಿವಂ ದುಬೆ (66 ರನ್​, 38 ರನ್​,10 ಫೋರ್​, 2 ಸಿಕ್ಸರ್​ ) ಅವರ ಅರ್ಧ ಶತಕಗಳ ನೆರವಿನಿಂದ ಮಿಂಚಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲುವು ಸಾಧಿಸಿತು. ಅಂದ ಹಾಗೆ ಚೆನ್ನೈ ಪರ ಕೊನೇ ನಾಲ್ಕು ಎಸೆತಗಳನ್ನು ಎದುರಿಸಿದ್ದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ​ 20 ರನ್​ಗಳನ್ನು ಬಾರಿಸಿದ್ದರು. ಅದರಲ್ಲಿ 3 ಸಿಕ್ಸರ್​ಗಳಿದ್ದವು. ಅದೇ ರನ್​ಗಳ ಅಂತರದಿಂದ ಚೆನ್ನೈ ಗೆದ್ದು ಬೀಗಿದ್ದು ವಿಶೇಷ. ಆದರೆ, ಮುಂಬೈ ಪರ ಏಕಾಂಗಿ ಹೋರಾಟ ನಡೆಸಿ ಅಮೋಘ 105 ರನ್ ಬಾರಿಸಿದ ರೋಹಿತ್ ಶರ್ಮಾ ಅವರ ಶತಕದ ಹೋರಾಟ ವ್ಯರ್ಥಗೊಂಡಿತು.

ಈ ಗೆಲುವು ಚೆನ್ನೈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ನಾಲ್ಕನೆಯದ್ದು. ಅದೇ ರೀತಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ನಾಲ್ಕನೇ ಸೋಲು. ಹಾರ್ದಿಕ್ ಪಾಂಡ್ಯ ಬಳಗ ತವರಿನಲ್ಲಿ ನಡೆದ ಈ ಹಿಂದಿನ ಎರಡು ಪಂದ್ಯಗಳನ್ನು ಗೆದಿದ್ದರೆ ಮೂರನೇ ಪಂದ್ಯದಲ್ಲಿ ಸೋಲು ಕಂಡಿತು. ಅಲ್ಲದೆ ಪ್ಲೇ ಆಫ್ ಹಾದಿಯನ್ನು ಕಠಿಣಗೊಳಿಸಿತು. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಚೆನ್ನೈ ಸೂಪರ್ ಕಿಂಗ್ಸ್ ಮೇಲಿನ ಗೆಲುವಿನ ಪಾರಮ್ಯದ ಅಂತರ ಕಡಿಮೆಯಾಯಿತು ಒಟ್ಟು 36 ಪಂದ್ಯಗಳಲ್ಲಿ ಮುಂಬೈ 20 ರಲ್ಲಿ ಗೆದ್ದಿದ್ದರೆ, ಚೆನ್ನೈ 17 ಪಂದ್ಯಗಳಲ್ಲಿ ಗೆದ್ದಂತಾಯಿತು.

ಇದನ್ನೂ ಓದಿ: Rohit Sharma : ನಾ ಡ್ರೈವರ… ಟೀಮ್​ ಬಸ್​ ಓಡಿಸಿದ ರೋಹಿತ್​ ಶರ್ಮಾ

Continue Reading
Advertisement
Aircraft Crash
ದೇಶ4 mins ago

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Lok Sabha Election 2024 vote for better future and 98 year old woman dies when returning officer arrives at home to cast her vote
ಪ್ರಮುಖ ಸುದ್ದಿ15 mins ago

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Horlicks Label
ದೇಶ18 mins ago

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Salaar Movie In star suvarna
ಕಿರುತೆರೆ19 mins ago

Salaar Movie: ಕಿರುತೆರೆಗೆ ಬಂದೇ ಬಿಡ್ತು ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’!

Ranbir Kapoor trainer shares transformation Of Ranbir
ಬಾಲಿವುಡ್21 mins ago

Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

Road Accident in Chamarajanagar
ಚಾಮರಾಜನಗರ30 mins ago

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

IPL 2024
ಕ್ರೀಡೆ46 mins ago

IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

gold rate today 34
ಚಿನ್ನದ ದರ50 mins ago

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

Lok sabha election 2024
Lok Sabha Election 20241 hour ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

leopard Attack
ಕ್ರೀಡೆ1 hour ago

leopard Attack: ಚಿರತೆ ದಾಳಿ; ಜಿಂಬಾಬ್ವೆ ಮಾಜಿ ಕ್ರಿಕೆಟಿಗನಿಗೆ ತೀವ್ರ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌