Site icon Vistara News

100ನೇ ಟೆಸ್ಟ್​ ಆಡಲಿರುವ ಅಶ್ವಿನ್​ ವಿರುದ್ಧ ಗಂಭೀರ ಆರೋಪ ಮಾಡಿದ ಹಿರಿಯ ಆಟಗಾರ

R Ashwin trains ahead of his 100th Test match

ಧರ್ಮಶಾಲಾ: ಭಾರತ ಮತ್ತು ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್​(IND vs ENG 5th Test) ಪಂದ್ಯ ಇಂದಿನಿಂದ ಧರ್ಮಶಾಲಾದಲ್ಲಿ ಆರಂಭಗೊಳ್ಳಲಿದೆ. ಈ ಪಂದ್ಯ ಆರ್​.ಅಶ್ವಿನ್(Ravichandran Ashwin)​ ಮತ್ತು ಜಾನಿ ಬೇರ್​ಸ್ಟೊಗೆ(Jonny Bairstow) 100ನೇ ಟೆಸ್ಟ್ ಪಂದ್ಯವಾಗಿದೆ. ಈ ಸಂತಸದಲ್ಲಿರುವ ಅಶ್ವಿನ್​ ಬಗ್ಗೆ ಭಾರತ ತಂಡದ ಮಾಜಿ ಆಟಗಾರರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಮತ್ತು ತಮಿಳುನಾಡು ಮೂಲದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್(Laxman Sivaramakrishnan) ಅವರು ಅಶ್ವಿನ್​ ಹಿರಿಯ ಆಟಗಾರರಿಗೆ ಗೌರವ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಕೂಡ ಮಾಡಿದ್ದಾರೆ.

“100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಅಶ್ವಿನ್​ಗೆ ಶುಭ ಕೋರಲು ನಾನು ಹಲವು ಕರೆಗಳನ್ನು ಮಾಡಿದೆ. ಆದರೆ ಅವರು ಈ ಕರೆಗಳನ್ನು ಸ್ವೀಕರಿಸಿಲ್ಲ. ನ್ನನ ಕರೆಗಳನ್ನು ಕಟ್​ ಮಾಡುವ ಮೂಲಕ ಅಗೌರವ ತೋರಿದ್ದಾರೆ ಎಂದು ಲಕ್ಷ್ಮಣ್ ಶಿವರಾಮಕೃಷ್ಣನ್ ಆರೋಪಿಸಿದ್ದಾರೆ. “ನನ್ನ ಕರೆಯನ್ನು ಕಟ್ ಮಾಡಿದ ಬಳಿಕ ನಾನು ಆತನಿಗೆ ಸಂದೇಶ ಕಳುಹಿಸಿದೆ, ಅದಕ್ಕೂ ಯಾವುದೇ ಉತ್ತರವಿಲ್ಲ. ಇದು ನಮ್ಮಂತಹ ಮಾಜಿ ಕ್ರಿಕೆಟಿಗರು ಪಡೆಯುತ್ತಿರುವ ಗೌರವ” ಎಂದು ಪೋಸ್ಟ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ IND vs ENG 5th Test: ಭಾರತವನ್ನು ಮಣಿಸಲು ದಲೈ ಲಾಮಾ ಆಶೀರ್ವಾದ ಪಡೆದ ಇಂಗ್ಲೆಂಡ್​ ಕ್ರಿಕೆಟಿಗರು

ಅಶ್ವಿನ್​ ಅವರು 5ನೇ ಟೆಸ್ಟ್​ನಲ್ಲಿ(India vs England 5th Test) ಕಣಕ್ಕಿಳಿಯುವ ಮೂಲಕ 100ನೇ ಟೆಸ್ಟ್‌ ಪಂದ್ಯವಾಡಿದ 14ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಕಳೆದ 13 ವರ್ಷಗಳಿಂದ ಭಾರತೀಯ ಟೆಸ್ಟ್‌ ತಂಡದ ಭಾಗವಾಗಿರುವ ಅಶ್ವಿ‌ನ್‌ ಸದ್ಯ 99* ಟೆಸ್ಟ್‌ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಮೂರನೇ ಟೆಸ್ಟ್​ ಪಂದ್ಯದಲ್ಲಿ ಅವರು 500 ಟೆಸ್ಟ್​ ವಿಕೆಟ್​ಗಳನ್ನು ಪೂರ್ತಿಗೊಳಿಸಿದ ಸಾಧನೆ ಕೂಡ ಮಾಡಿದ್ದರು. ಸದ್ಯ ಅವರ ಬತ್ತಳಿಕೆಯಲ್ಲಿ 507 ವಿಕೆಟ್​ಗಳಿವೆ. ಅತ್ಯಧಿಕ 35 ಸಲ ಇನ್ನಿಂಗ್ಸ್‌ ಒಂದರಲ್ಲಿ 5 ಪ್ಲಸ್‌ ವಿಕೆಟ್‌ ಉರುಳಿಸಿದ ಭಾರತೀಯ ದಾಖಲೆ ಕೂಡ ಇವರ ಹೆಸರಿನಲ್ಲಿದೆ. 8 ಬಾರಿ 10ಕ್ಕಿಂತ ಅಧಿಕ ವಿಕೆಟ್​ ಕಿತ್ತ ದಾಖಲೆ ಕೂಡ ಇವರದ್ದಾಗಿದೆ. ಬೌಲಿಂಗ್​ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಅಶ್ವಿನ್​ 3 ಸಾವಿರಕ್ಕೂ ಅಧಿಕ ರನ್​ ಬಾರಿಸಿದ್ದಾರೆ. ಇದರಲ್ಲಿ 5 ಶತಕಗಳು ಕೂಡ ಒಳಗೊಂಡಿದೆ. 14 ಅರ್ಧಶತಕ ಸೇರಿದೆ.

Exit mobile version