AB De Villiers | ಐಪಿಎಲ್​ 2023 ಸಿದ್ಧತೆಗೆ ಉದ್ಯಾನ ನಗರಿ ಬೆಂಗಳೂರು ತಲುಪಿದ ಎಬಿ ಡಿ ವಿಲಿಯರ್ಸ್‌ - Vistara News

Latest

AB De Villiers | ಐಪಿಎಲ್​ 2023 ಸಿದ್ಧತೆಗೆ ಉದ್ಯಾನ ನಗರಿ ಬೆಂಗಳೂರು ತಲುಪಿದ ಎಬಿ ಡಿ ವಿಲಿಯರ್ಸ್‌

ಐಪಿಎಲ್​ 2023 ಸಿದ್ಧತೆಗೆ ಬೆಂಗಳೂರು ತಲುಪಿದ ಮಿಸ್ಟರ್‌ 360 ಖ್ಯಾತಿಯ ಬ್ಯಾಟರ್‌ ಎಬಿ ಡಿ’ವಿಲಿಯರ್ಸ್‌.

VISTARANEWS.COM


on

abd
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ಆಟಗಾರ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್‌(AB De Villiers) ಗುರುವಾರ (ನವೆಂಬರ್‌ 3) ಬೆಂಗಳೂರಿಗೆ ಬಂದಿಳಿದಿದ್ದಾರೆ. ಈ ವಿಚಾರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಸೀಸನ್​ಗೆ ತಂಡದ ಬಗ್ಗೆ ಮಹತ್ವದ ಚರ್ಚೆ ನಡೆಸಲು ಮತ್ತು ಆಟಗಾರರ ಜತೆ ಮಾತನಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. ಕಳೆದ ವರ್ಷ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಮಿಸ್ಟರ್‌ 360 ಖ್ಯಾತಿಯ ಬ್ಯಾಟರ್‌ ಇದೀಗ ಮರಳಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಬಳಗ ಸೇರಿಕೊಂಡಿದ್ದು ಅಭಿಮಾನಿಗಳಿಗೆ ಸಂತಸ ತಂದಿದೆ.

“ಬೆಂಗಳೂರಿಗೆ ಮತ್ತೆ ಬಂದಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಹಲವು ವರ್ಷಗಳ ಬಳಿಕ ಇಲ್ಲಿನ ಐಟಿಸಿ ಗಾರ್ಡೇನಿಯಾ ಹೋಟೆಲ್‌ಗೆ ಬಂದು ಉಳಿದುಕೊಂಡಿದ್ದೇನೆ. ಇಲ್ಲಿ ಹಲವು ಅದ್ಭುತ ನೆನಪುಗಳಿವೆ” ಎಂದು ಟ್ವಿಟರ್​ನಲ್ಲಿ ವಿಡಿಯೊ ಮೂಲಕ ಎಬಿಡಿ ತಿಳಿಸಿದ್ದಾರೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಕೂಡ ಎಬಿಡಿ ಬೆಂಗಳೂರಿಗೆ ಬಂದಿರುವ ಸುದ್ದಿಯನ್ನು ತನ್ನ ಸಾಮಾಜಿಕ ಜಾಲತಾಣವಾದ ಟ್ವಿಟರ್​, ಇನ್​ಸ್ಟಾಗ್ರಾಂ ಮೂಲಕ ಹಂಚಿಕೊಂಡಿದೆ. ಅದರಂತೆ ಎಬಿ ಡಿ ವಿಲಿಯರ್ಸ್‌ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಬಂದು ಮಾತನಾಡಿರುವ ವಿಡಿಯೊವನ್ನು ಟ್ವಿಟರ್​ ಮೂಲಕ ಹಂಚಿಕೊಂಡಿದೆ.

ಮಾರ್ಗದರ್ಶನ ನೀಡುವ ಸಾಧ್ಯತೆ

ಎಬಿಡಿ ತಮ್ಮ ಅಚ್ಚುಮೆಚ್ಚಿನ ಆರ್‌ಸಿಬಿ ತಂಡಕ್ಕೆ ಹಿಂದಿರುಗಿದ ವಿಚಾರ ತಿಳಿಯುತ್ತಿದ್ದಂತೆ ಇದೀಗ ಹಲವಾರು ಸುದ್ದಿಗಳು ಹರಿದಾಡಿದೆ. ಅದರಂತೆ ಎಬಿಡಿ ಅವರು ಆರ್​ಸಿಬಿ ತಂಡಕ್ಕೆ ಮಾರ್ಗದರ್ಶನ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಜತೆಗೆ ಡಿಸೆಂಬರ್‌ನಲ್ಲಿ ಐಪಿಎಲ್‌ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಈ ಸಲುವಾಗಿ ನವೆಂಬರ್‌ ಕೊನೇ ವಾರದ ಒಳಗೆ ಎಲ್ಲ ತಂಡಗಳು ತಾವು ಕಾಯ್ದಿರಿಸಿಕೊಂಡ ಆಟಗಾರರ ಪಟ್ಟಿ ಬಿಡುಗಡೆ ಮಾಡಬೇಕಾಗುತ್ತದೆ. ಇದಕ್ಕೆ ನೆರವಾಗುವ ಸಲುವಾಗಿ ಎಬಿಡಿ ಆರ್‌ಸಿಬಿ ಬಳಗ ಸೇರಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | PAK VS SA | ದಕ್ಷಿಣ ಆಫ್ರಿಕಾ ವಿರುದ್ಧ ಪಾಕ್​ಗೆ 33 ರನ್​ ಗೆಲುವು; ಸೆಮಿಫೈನಲ್​ ಆಸೆ ಜೀವಂತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Mysore News in Kannada: ಬೆಂಗಳೂರು-ಮೈಸೂರು ಸಂಚಾರ ನಿಯಂತ್ರಣ ಜು.1ರಿಂದ ಸಂಪೂರ್ಣ ಹೈಟೆಕ್‌

Mysore News in Kannada: ಜುಲೈ 1ರಿಂದ ಮೈಸೂರು ಜಿಲ್ಲೆ ಮತ್ತು ನಗರ ಸೇರಿದಂತೆ ಇಡೀ ಬೆಂಗಳೂರು-ಮೈಸೂರು ರಸ್ತೆ ಸಂಚಾರವು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ ಆಗಲಿದೆ. ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸುವುದಾಗಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

VISTARANEWS.COM


on

ITMS Corridor
Koo

ಬೆಂಗಳೂರು : ಮೈಸೂರು ಜಿಲ್ಲೆ ಮತ್ತು ನಗರ (Mysore News in Kannada) ಸೇರಿದಂತೆ ಇಡೀ ಬೆಂಗಳೂರು-ಮೈಸೂರು ರಸ್ತೆ ಸಂಚಾರವು ಜುಲೈ 1ರಿಂದ ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಐಟಿಎಂಎಸ್ ಅಥವಾ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್(ಎಎನ್ ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ(ಆರ್ ಎಲ್ ವಿಡಿ)ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂ.4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಅಲ್ಲದೆ ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Viral Video: ಮಕ್ಕಳನ್ನು ಖಾಸಗಿ ವಾಹನದಲ್ಲಿ ಶಾಲೆಗೆ ಕಳುಹಿಸುವ ಪೋಷಕರಲ್ಲಿ ಆತಂಕ ಮೂಡಿಸುವ ವಿಡಿಯೊ ಇದು!

ಹೆಚ್ಚಿನ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್ ಗಳು, ಕ್ಯಾಮೆರಾಗಳ ಹೊರತಾಗಿಯೂ ಪೊಲೀಸರು ಹೆದ್ದಾರಿಗಳಿಗೆ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್ ಗಳನ್ನು ಸಂಗ್ರಹಿಸಲು ಹಣ ಹಂಚಿಕೆ ಮಾಡುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರನ್ನು ತಡೆಯಲು ಸುಮಾರು 800 ಆಲ್ಕೋಮೀಟರ್ ಗಳು ಮತ್ತು 155 ಲೇಸರ್ ಸ್ಪೀಡ್ ಗನ್ ಗಳನ್ನು ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ವಿತರಿಸುತ್ತಿದ್ದಾರೆ.

Continue Reading

Latest

Viral Video: ಮತ್ತೊಂದು ರೀಲ್‌ ಕ್ರೇಜ್‌; ಚಲಿಸುವ ರೈಲಿನಲ್ಲಿ ಯುವತಿಯ ಡೇಂಜರಸ್‌ ಡ್ಯಾನ್ಸ್‌!

Viral Video: ಜನ ಮರುಳೋ ಜಾತ್ರೆ ಮರುಳೋ ಎನ್ನುವ ಮಾತಿನಂತೆ ಈಗ ಸೋಷಿಯಲ್ ಮೀಡಿಯಾ ಸರಿಯಿಲ್ವಾ ಅಥವಾ ನಮ್ಮ ಯುವಪೀಳಿಗೆಯೇ ಸರಿ ಇಲ್ವಾ ಅನ್ನುವ ಗೊಂದಲ ಎಲ್ಲರನ್ನು ಕಾಡುತ್ತಿದೆ. ಯಾಕೆಂದರೆ ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ಇಳಿದು ಯುವತಿಯೊಬ್ಬಳು ರೀಲ್ ಮಾಡಿ ಅರೆಸ್ಟ್ ಆದ ಘಟನೆ ಇನ್ನೂ ಮಾಸಿಲ್ಲ, ಈಗ ಮತ್ತೊಬ್ಬಳು ಹುಡುಗಿ ಚಲಿಸುತ್ತಿರುವ ರೈಲಿನ ಕಂಪಾರ್ಟ್‌ಮೆಂಟ್ ತುದಿಯಲ್ಲಿ ನಿಂತು ಕುಣಿದಿದ್ದಾಳೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಆಕೆಯ ಕೃತ್ಯಕ್ಕೆ ಅನೇಕರು ಟೀಕೆಗಳ ಸುರಿಮಳೆ ಸುರಿಸಿದ್ದಾರೆ. ಆಕೆಗೆ ದಂಡ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

VISTARANEWS.COM


on

Viarl Video
Koo

ಮುಂಬೈ: ಸೋಷಿಯಲ್ ಮೀಡಿಯಾಗಳಿಗಾಗಿ ರೀಲ್ಸ್ ಮಾಡುವ ಚಟ ಯುವಕ ಯುವತಿಗೆ ಎಷ್ಟರ ಮಟ್ಟಿಗೆ ಇದೆ ಎಂಬುದಕ್ಕೆ ಇನ್ನೊಂದು ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗಷ್ಟೇ ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ಇಳಿದು ಯುವತಿಯೊಬ್ಬಳು ರೀಲ್ ಮಾಡಿದ್ದು, ಈಗಾಗಲೇ ಆಕೆ ಹಾಗೂ ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಚಲಿಸುವ ರೈಲಿನ ಕಂಪಾರ್ಟ್‌ಮೆಂಟ್‌ ತುದಿಯಲ್ಲಿ ನಿಂತು ಹುಡುಗಿಯೊಬ್ಬಳು ಉತ್ಸಾಹದಿಂದ ನೃತ್ಯ ಮಾಡುತ್ತಾ ರೀಲ್ಸ್ ಮಾಡಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ. ಇದನ್ನು ನೋಡಿದವರು ಶಾಕ್ ಆಗಿದ್ದಾರೆ.

ಈ ವಿಡಿಯೊವನ್ನು ಮಿಥಿಲಾ ವಾಲಾ ಎಂಬುವವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೇ ಅದಕ್ಕೆ ‘ರೀಲ್ ಮಾಡುವುದು ಜೀವನಕ್ಕಿಂತ ಮುಖ್ಯ’ ಎಂದು ವ್ಯಂಗ್ಯವಾಗಿ ಶೀರ್ಷಿಕೆ ನೀಡಿದ್ದಾರೆ. ಒಂದು ವೇಳೆ ಆಕೆ ರೈಲಿನಿಂದ ಕೆಳಗೆ ಬಿದ್ದು ಸತ್ತರೆ ಆಕೆಯ ಕುಟುಂಬದವರು ರೈಲ್ವೆ ಸಚಿವರನ್ನು ದೂಷಿಸುತ್ತಾರೆ ಮತ್ತು ಸರ್ಕಾರದಿಂದ ಭಾರೀ ಪರಿಹಾರವನ್ನು ಸಹ ತೆಗೆದುಕೊಳ್ಳುತ್ತಾರೆ. ಅಂತವರನ್ನು ಪತ್ತೆ ಹಚ್ಚಿ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಬೇಕು ಎಂದು ಅವರು ಬರೆದಿದ್ದಾರೆ. ಈ ವಿಡಿಯೊ ಪೋಸ್ಟ್ ಮಾಡಿದ 24 ಗಂಟೆಗಳಲ್ಲಿ ಸಾವಿರಾರು ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಈ ವಿಡಿಯೊದಲ್ಲಿ ನೃತ್ಯ ಮಾಡಿದ ಹುಡುಗಿಗೆ ಚಲಿಸುವ ರೈಲಿನಲ್ಲಿ ನೃತ್ಯ ಮಾಡುವಾಗ ಆಕೆಯ ಮುಖದಲ್ಲಿ ಯಾವ ಭಯವೂ ಕಾಣಿಸುತ್ತಿರಲಿಲ್ಲ. ಆಕೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ರೀಲ್ ಮಾಡುವುದರಲ್ಲೇ ತಲ್ಲೀನಳಾಗಿದ್ದಾಳೆ. ಆಕೆ ಈಗ ಸುರಕ್ಷಿತವಾಗಿದ್ದರೂ ಕೂಡ ಸೋಷಿಯಲ್ ಮೀಡಿಯಾಗಳಿಗಾಗಿ ಇಂತಹ ಅಪಾಯಕಾರಿ ಸಾಹಸಗಳನ್ನು ಮಾಡುವುದು ತಪ್ಪು. ಈ ವಿಡಿಯೊ ನೋಡಿದ ವೀಕ್ಷಕರು ಶಾಕ್ ಆಗಿದ್ದು, ಆಕೆಯ ಕೃತ್ಯಕ್ಕೆ ಅನೇಕರು ಆಕೆಯ ಮೇಲೆ ಟೀಕೆಗಳ ಸುರಿಮಳೆ ಸುರಿಸಿದ್ದಾರೆ. ಅನೇಕರು ಆಕೆಗೆ ದಂಡ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡುತ್ತಾ ರೀಲ್ಸ್ ಮಾಡಿದ ಯುವತಿ ಅರೆಸ್ಟ್!

ಒಂದು ತಿಂಗಳ ಹಿಂದೆ ರಾಜಸ್ಥಾನದ ಕೋಟಾದಲ್ಲಿ ಇದೇರೀತಿಯ ಸೋಷಿಯಲ್ ಮೀಡಿಯಾದ ರೀಲ್ಸ್ ಅವಾಂತರವೊಂದು ನಡೆದಿದೆ. ಇದರಲ್ಲಿ 22 ವರ್ಷದ ಯುವಕನೊಬ್ಬ ರೀಲ್ಸ್ ಮಾಡಲು ಪಿಸ್ತೂಲನ್ನು ತಲೆಗೆ ಗುರಿಯಾಗಿಟ್ಟುಕೊಂಡು ಆಕಸ್ಮಿಕವಾಗಿ ಗುಂಡು ಹಾರಿ ಸಾವನಪ್ಪಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ.

Continue Reading

ಸಿನಿಮಾ

Sonakshi Sinha Wedding: ಸೋನಾಕ್ಷಿ ಮದುವೆ ಬಗ್ಗೆ ಅಸಮಾಧಾನ ಇತ್ತು, ಆದರೆ…: ಶತ್ರುಘ್ನ ಸಿನ್ಹಾ ವಿವರಣೆ

ಜೂನ್ 23ರಂದು ಸೋನಾಕ್ಷಿ ಸಿನ್ಹಾ ಮದುವೆಯ (Sonakshi Sinha Wedding) ಆರತಕ್ಷತೆಯಲ್ಲಿ ಭಾಗವಹಿಸುತ್ತಿದ್ದೇವೆ. ನನ್ನ ಕುಟುಂಬದ ಯಾರೂ ಮದುವೆಯ ಬಗ್ಗೆ ಏನನ್ನೂ ಹೇಳಲಿಲ್ಲ. ಕೆಲವು ಮಾಧ್ಯಮಗಳು ಕೇವಲ ವಿಷಯಗಳನ್ನು ಊಹಿಸುತ್ತಿವೆ. ಖಾಸಗಿ ಕೌಟುಂಬಿಕ ವಿಷಯದ ಬಗ್ಗೆ ಹೆಚ್ಚಿನ ಗಮನವನ್ನು ನೀಡಲಾಗುತ್ತಿದೆ ಎಂದು ನಟ – ರಾಜಕಾರಣಿ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

VISTARANEWS.COM


on

By

Sonakshi Sinha Wedding
Koo

ಮುಂಬಯಿ: ವಿವಾಹದ ಮೊದಲು ಕೆಲವೊಂದು ಭಿನಾಭಿಪ್ರಾಯಗಳು ಸಾಮಾನ್ಯ. ಈಗ ಎಲ್ಲವೂ ಸರಿಯಾಗಿದೆ. ಒತ್ತಡ ಏನೇ ಇರಲಿ ಅದನ್ನು ಸರಿಪಡಿಸಲಾಗಿದೆ ಎಂದು ನಟ – ರಾಜಕಾರಣಿ (Actor-politician) ಶತ್ರುಘ್ನ ಸಿನ್ಹಾ (Shatrughan Sinha) ಹೇಳಿದ್ದಾರೆ. ಮಗಳು, ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಮದುವೆ (Sonakshi Sinha Wedding) ವಿಚಾರವಾಗಿ ವದಂತಿಗಳ ಕುರಿತು ಅವರು ಪ್ರತಿಕ್ರಿಯಿಸಿದರು.

ಜಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಅವರ ಮದುವೆಯ ಬಗ್ಗೆ ತಮ್ಮ ಕುಟುಂಬದಲ್ಲಿ ಕೆಲವು ಒತ್ತಡಗಳಿವೆ ಎನ್ನುವುದನ್ನು ಶತ್ರುಘ್ನ ಸಿನ್ಹಾ ಒಪ್ಪಿಕೊಂಡಿದ್ದಾರೆ. ಈಗ ಎಲ್ಲಾ ಒತ್ತಡವನ್ನು ಪರಿಹರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಹಲವಾರು ವರದಿಗಳು ಉಲ್ಲೇಖಿಸಿದಂತೆ ಜೂನ್ 23ರಂದು ಸೋನಾಕ್ಷಿಯ ಮದುವೆಯ ದಿನಾಂಕವಲ್ಲ ಎಂದು ಶತ್ರುಘ್ನ ಬಹಿರಂಗಪಡಿಸಿದರು. ವಾಸ್ತವವಾಗಿ, ಇದು ಅವಳ ಆರತಕ್ಷತೆಯ ದಿನಾಂಕವಾಗಿದೆ ಎಂದು ತಿಳಿಸಿದರು.

ಜೂನ್ 23ರಂದು ಸಂಜೆ ನಾವೆಲ್ಲರೂ ಮದುವೆಯ ಆರತಕ್ಷತೆಯಲ್ಲಿ ಭಾಗವಹಿಸುತ್ತಿದ್ದೇವೆ. ನನ್ನ ಕುಟುಂಬದ ಯಾರೂ ಮದುವೆಯ ಬಗ್ಗೆ ಏನನ್ನೂ ಹೇಳಲಿಲ್ಲ. ಕೆಲವು ಮಾಧ್ಯಮಗಳು ಕೇವಲ ವಿಷಯಗಳನ್ನು ಊಹಿಸುತ್ತಿವೆ. ಖಾಸಗಿ ಕೌಟುಂಬಿಕ ವಿಷಯದ ಬಗ್ಗೆ ಹೆಚ್ಚಿನ ಗಮನವನ್ನು ನೀಡಲಾಗುತ್ತಿದೆ ಎಂದು ಅವರು ವಿಷಾದಿಸಿದ್ದಾರೆ. ವಿವಾಹದ ಮೊದಲು ಘರ್ಷಣೆಗಳು ಸಾಮಾನ್ಯವಾಗಿದೆ. ನಾವೆಲ್ಲರೂ ಈಗ ಚೆನ್ನಾಗಿದ್ದೇವೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಅವರು ಹೇಳಿದರು.

ಶತ್ರುಘ್ನ ಸಿನ್ಹಾ ಅವರ ಮಗಳು ಎಂಬ ಕಾರಣಕ್ಕೆ ಸೋನಾಕ್ಷಿ ಜೀವನದಲ್ಲಿ ತನಗೆ ಬೇಕಾದುದನ್ನು ಪಡೆಯದೆ ತ್ಯಾಗ ಮಾಡಬಾರದು ಎಂದೇನಿಲ್ಲ. ನಾವು ಪೋಷಕರು ಏನೇ ಹೇಳಬಹುದು. ಆದರೆ ನಿರ್ಧಾರ ಅವರದ್ದು ಎಂದರು.

ಮಗಳು ಸೋನಾಕ್ಷಿ ಮದುವೆ ಬಗ್ಗೆ ತನಗೆ ತಿಳಿದಿಲ್ಲ ಎಂದು ನಟ ಹೇಳಿದ ಅನಂತರ ಮೊದಲ ಬಾರಿಗೆ ಸೋನಾಕ್ಷಿ ಮತ್ತು ಶತ್ರುಘ್ನ ನಡುವಿನ ಬಿರುಕುಗಳ ವದಂತಿಗಳು ಪ್ರಾರಂಭವಾದವು. ಆದರೂ ಶತ್ರುಘ್ನ ಇತ್ತೀಚಿನ ಸಂದರ್ಶನವೊಂದರಲ್ಲಿ, ನನ್ನ ಏಕೈಕ ಪುತ್ರಿ ಸೋನಾಕ್ಷಿ ಬಗ್ಗೆ ನಾನು ಹೆಮ್ಮೆಪಡುತ್ತೇನೆ. ಆಕೆಯನ್ನು ಅಪಾರವಾಗಿ ಇಷ್ಟಪಡುತ್ತೇನೆ. ಅವಳು ನನ್ನನ್ನು ತನ್ನ ಶಕ್ತಿಯ ಮೂಲ ಎಂದು ಹೇಳುತ್ತಿರುತ್ತಾಳೆ. ನಾನು ಮದುವೆಗೆ ಖಂಡಿತ ಇರುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

ಸೋನಾಕ್ಷಿಗೆ ತನ್ನ ಸಂಗಾತಿಯನ್ನು ಆಯ್ಕೆ ಮಾಡುವ ಎಲ್ಲಾ ಹಕ್ಕು ಇದೆ ಎಂದು ಹೇಳಿರುವ ಅವರು, ಸೋನಾಕ್ಷಿ ಮತ್ತು ಜಹೀರ್ ತಮ್ಮ ಜೀವನವನ್ನು ಒಟ್ಟಿಗೆ ಬದುಕಬೇಕು. ಅವರು ಒಟ್ಟಿಗೆ ತುಂಬಾ ಚೆನ್ನಾಗಿ ಕಾಣುತ್ತಾರೆ. ಸುಳ್ಳು ಸುದ್ದಿಗಳನ್ನು ಹೊರತರುತ್ತಿರುವವರು ಈ ಸಂತೋಷದಾಯಕ ಸಂದರ್ಭದಿಂದ ತುಂಬಾ ನಿರಾಶೆಗೊಂಡಿದ್ದಾರೆ. ಯಾಕೆಂದರೆ ಅವರು ಸುಳ್ಳನ್ನು ಹೊರತುಪಡಿಸಿ ಏನನ್ನೂ ಹರಡುತ್ತಿಲ್ಲ. ನಾನು ಅವರಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಇದು ನಮ್ಮ‌ ಖಾಸಗಿ ವಿಷಯ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

Continue Reading

ರಾಜಕೀಯ

Rushikonda Palace: 500 ಕೋಟಿಯ ʼಋಷಿಕೊಂಡ ಅರಮನೆʼ ಖರೀದಿಸಲು ಕ್ರಿಮಿನಲ್‌ ಸುಕೇಶ್ ಚಂದ್ರಶೇಖರ್ ರೆಡಿ!

ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಋಷಿಕೊಂಡ ಹಿಲ್‌ಟಾಪ್ ಪ್ಯಾಲೇಸ್ ಬಗ್ಗೆ ಟಿಡಿಪಿ ಆಕ್ಷೇಪ ವ್ಯಕ್ತಪಡಿಸಿ ಸಾಕಷ್ಟು ಆರೋಪಗಳನ್ನು ಮಾಡಿತ್ತು. ಇದೀಗ ಈ ಅರಮನೆಯನ್ನು (Rushikonda Palace) ಖರೀದಿ ಮಾಡಲು ಸದ್ಯ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್ ಸುಕೇಶ್ ಚಂದ್ರಶೇಖರ್‌ ಆಸಕ್ತಿ ತೋರಿಸಿದ್ದಾನೆ.

VISTARANEWS.COM


on

By

Rushikonda Palace
Koo

ನವದೆಹಲಿ: ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದಲ್ಲಿ (Rushikonda Hilltop) ಈ ಹಿಂದಿನ ಜಗನ್ ರೆಡ್ಡಿ ಸರ್ಕಾರ ನಿರ್ಮಿಸಿರುವ ವಿವಾದಾತ್ಮಕ ಅರಮನೆಯನ್ನು (Rushikonda Palace) ಮಾರುಕಟ್ಟೆ ದರಕ್ಕಿಂತ ಶೇ.20ರಷ್ಟು ಹೆಚ್ಚು ಹಣ ಕೊಟ್ಟು ಖರೀದಿಸಲು ತಾನು ಸಿದ್ಧ ಎಂದು ಅಕ್ರಮ ಹಣ ವರ್ಗಾವಣೆ, ವಂಚನೆ ಮತ್ತು ಸುಲಿಗೆ ಪ್ರಕರಣ ಸಂಬಂಧ ದೆಹಲಿಯ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrashekhar) ಹೇಳಿಕೊಂಡಿದ್ದಾನೆ. ಈ ಕುರಿತು ಆತ ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ (Chief Minister) ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರಿಗೆ ಪತ್ರ ಬರೆದಿದ್ದಾನೆ.

ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಋಷಿಕೊಂಡ ಹಿಲ್‌ಟಾಪ್ ಪ್ಯಾಲೇಸ್ ಬಗ್ಗೆ ಟಿಡಿಪಿ ಆಕ್ಷೇಪ ವ್ಯಕ್ತಪಡಿಸಿ ಸಾಕಷ್ಟು ಆರೋಪಗಳನ್ನು ಮಾಡಿತ್ತು. ಇದೀಗ ಈ ಅರಮನೆಯನ್ನು ಖರೀದಿ ಮಾಡಲು ಸದ್ಯ ದೆಹಲಿಯ ಜೈಲಿನಲ್ಲಿರುವ ಸುಕೇಶ್ ಆಸಕ್ತಿ ತೋರಿದ್ದಾನೆ.

ಆಂಧ್ರಪ್ರದೇಶದ ಈಗಿನ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವು ಆ ಆಸ್ತಿಯನ್ನು ಮಾರಾಟ ಮಾಡಲು ಅಥವಾ ಗುತ್ತಿಗೆಗೆ ನೀಡಲು ನಿರ್ಧರಿಸಿದರೆ ಮಾರುಕಟ್ಟೆ ಬೆಲೆಗಿಂತ ಶೇ. 20 ಹೆಚ್ಚಿನ ದರ ನೀಡುವುದಾಗಿ ಆತ ಹೇಳಿದ್ದಾನೆ. ಮಾಜಿ ಮುಖ್ಯಮಂತ್ರಿ ರೆಡ್ಡಿ ವೈಜಾಗ್‌ನಲ್ಲಿ 500 ಕೋಟಿ ರೂಪಾಯಿ ವೆಚ್ಚದ ಬೆಟ್ಟದ ಅರಮನೆಯನ್ನು ತಮ್ಮ ಸ್ವಾರ್ಥಕ್ಕಾಗಿ ನಿರ್ಮಿಸಿದ್ದಾರೆ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಕೆಟ್ಟದಾಗಿದ್ದರೂ ಈ ಅರಮನೆ ಮತ್ತು ಅಲ್ಲಿನ ಐಷಾರಾಮಿ ಸೌಕರ್ಯಗಳಿಗೆ ದುಂದು ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿದೆ.

Rushikonda Palace


ಇದು ನನಗೆ, ನನ್ನ ಕುಟುಂಬಕ್ಕೆ ಮತ್ತು ನನ್ನ ಸಮುದಾಯಕ್ಕೆ ಬಹಳ ವಿಶೇಷವಾಗಿದೆ ಎಂದು ಸುಕೇಶ್ ಆಂಧ್ರಪ್ರದೇಶ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾನೆ ಎಂದು ಅವರ ವಕೀಲ ಅನಂತ್ ಮಲಿಕ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನಾನು ಬಾಲ್ಯದ ರಜಾ ದಿನಗಳಲ್ಲಿ ಅಜ್ಜಿಯ ಬಳಿ ಕರೆದುಕೊಂಡು ಹೋದಾಗ ಆ ಪ್ರದೇಶದ ಸುತ್ತಮುತ್ತ ಆಟವಾಡುತ್ತಿದ್ದೆ. ಆ ಸೆಂಟಿಮೆಂಟ್‌ ನನಗೆ ಅಲ್ಲಿಯ ಆಸ್ತಿ ಖರಿದಿಸುವ ಬಯಕೆ ಹುಟ್ಟಿಸಿದೆ. ಸರ್ಕಾರ ಆ ಆಸ್ತಿ ಮಾರಿದರೆ ಹಣವನ್ನು ಶೇ. 100ರಷ್ಟು ನ್ಯಾಯಸಮ್ಮತ ರೀತಿಯಲ್ಲಿ ಪಾವತಿಸುತ್ತೇನೆ ಎಂದು ಸುಕೇಶ್ ಪತ್ರದಲ್ಲಿ ತಿಳಿಸಿದ್ದಾನೆ.

ನನ್ನ ಆತಿಥ್ಯ ಉದ್ಯಮವು ಚೆನ್ನೈ, ಗೋವಾ, ದುಬೈ ಮತ್ತು ಬಾರ್ಸಿಲೋನಾದಲ್ಲಿ ಹೊಟೇಲ್ ರೂಪದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಈ ಎಲ್ಲಾ ವಿವರಗಳನ್ನು ನಾನು ದಾಖಲೆ ಸಮೇತ ನೀಡುವೆ. ಮಧ್ಯಮ ವರ್ಗದ ಕುಟುಂಬದ ಹುಡುಗನೊಬ್ಬ ಋಷಿಕೊಂಡ ಅರಮನೆಯಂತಹ ಪ್ರತಿಷ್ಠಿತ ಆಸ್ತಿಯನ್ನು ಪಡೆಯುವ ಹಂತಕ್ಕೆ ಬೆಳೆದಿದ್ದಾನೆ. ನನ್ನ ವಿರುದ್ಧದ ಆರೋಪಗಳು ಸಾಬೀತಾಗಿಲ್ಲ. ಹೀಗಾಗಿ ಅರಮನೆಯನ್ನು ಖರೀದಿಸಲು ಅಥವಾ ಬಾಡಿಗೆಗೆ ನೀಡಲು ನನಗೆ ಅವಕಾಶವನ್ನು ನೀಡುವುದರಿಂದ ಅಲ್ಲಿರುವ ಎಲ್ಲಾ ಯುವಕರಿಗೆ ಇದು ಸ್ಫೂರ್ತಿಯಾತ್ತದೆ. ಯಾಕೆಂದರೆ ಜಗತ್ತು ನಿಮ್ಮ ಯಶಸ್ಸಿಗೆ ವಿರುದ್ಧವಾಗಿದ್ದರೂ ಯಾವುದೂ ಅಸಾಧ್ಯವಲ್ಲ ಎಂದು ಸುಕೇಶ್ ಪತ್ರದಲ್ಲಿ ವಿವರಿಸಿದ್ದಾನೆ.

ಆರೋಪವೇನು?

ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ ಅವರು ಈ ಮೊದಲು ಮೂರು ನಗರಗಳನ್ನು ರಾಜಧಾನಿ ಎಂದು ಘೋಷಿಸಿದ್ದರು. ವಿಶಾಖಪಟ್ಟಣಂ ಅಥವಾ ವೈಜಾಗ್‌ ಅನ್ನೇ ಈ ಮೊದಲು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಲಾಗಿತ್ತು. ಹಾಗಾಗಿ, ಇಲ್ಲಿ ಪತ್ನಿಯ ಆಸೆಯಂತೆಯೇ ಜಗನ್‌ ಮೋಹನ್‌ ರೆಡ್ಡಿ ಅವರು ಐಷಾರಾಮಿ ಬಂಗಲೆ ಕಟ್ಟಿಸಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.

ಇದನ್ನೂ ಓದಿ: Actor Darshan: ದರ್ಶನ್‌ ತುಂಬ ಮುಗ್ದ, ತಾಯಿ ಕಣ್ಣೀರು ಹಾಕೊಂಡು ಮಗನನ್ನು ಬೆಳಸಬೇಕು ಎಂದಿದ್ರು ಎಂದ ಲಹರಿ ವೇಲು!

ಋಷಿಕೊಂಡ ಹಿಲ್ಸ್‌ ಪ್ರವಾಸಿ ತಾಣವಾಗಿತ್ತು. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ, 9.88 ಎಕರೆ ಜಾಗದಲ್ಲಿ ಜಗನ್‌ ಮೋಹನ್‌ ರೆಡ್ಡಿ ಅವರು ಬಂಗಲೆ ನಿರ್ಮಿಸಿದ್ದಾರೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಬಾತ್‌ ಟಬ್‌ ನಿರ್ಮಿಸಿದ್ದಾರೆ. ಹತ್ತಾರು ಐಷಾರಾಮಿ ಕೋಣೆಗಳು, ಸೌಕರ್ಯಗಳು ಬಂಗಲೆಯಲ್ಲಿವೆ. ಇದನ್ನೇ ಪಾರ್ಟಿ ಕಚೇರಿ ಮಾಡುವುದು ಜಗನ್‌ ಮೋಹನ್‌ ರೆಡ್ಡಿ ಅವರ ಉದ್ದೇಶವಾಗಿತ್ತು ಎಂದು ಆರೋಪಿಸಲಾಗಿದೆ.

Continue Reading
Advertisement
Swamji Murder
ಪ್ರಮುಖ ಸುದ್ದಿ15 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ21 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್38 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ45 mins ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Job Alert
ಉದ್ಯೋಗ52 mins ago

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ITMS Corridor
Latest59 mins ago

Mysore News in Kannada: ಬೆಂಗಳೂರು-ಮೈಸೂರು ಸಂಚಾರ ನಿಯಂತ್ರಣ ಜು.1ರಿಂದ ಸಂಪೂರ್ಣ ಹೈಟೆಕ್‌

DCM D K Shivakumar statement about new advertising policy
ಕರ್ನಾಟಕ1 hour ago

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

2nd Puc Exam 3
ಶಿಕ್ಷಣ1 hour ago

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

Actor darshan Satish Reddy On Darshan Case
ರಾಜಕೀಯ1 hour ago

Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

govt employees
ಕರ್ನಾಟಕ1 hour ago

Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌