ಭೋಪಾಲ್(ಮಧ್ಯಪ್ರದೇಶ): ಇಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ(Khelo India) ಯೂತ್ ಗೇಮ್ಸ್‌ನಲ್ಲಿ ನಟ ಆರ್ ಮಾಧವನ್(R. Madhavan) ಅವರ ಪುತ್ರ ವೇದಾಂತ್ ಮಾಧವನ್(vedaant madhavan) ಚಿನ್ನದ ಪದಕ್ಕೆ ಕೊರಳೊಡ್ಡಿದ್ದಾರೆ. 200 ಮೀಟರ್ ಫ್ರೀಸ್ಟೈಲ್ ಈಜು ಸ್ಪರ್ಧೆಯಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.
ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ವೇದಾಂತ್ ಮಾಧವನ್, ‘ಖೇಲೋ ಇಂಡಿಯಾ ನನ್ನ ಮೆಚ್ಚಿನ ಸ್ಪರ್ಧೆಗಳಲ್ಲಿ ಒಂದಾಗಿದೆ. ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನದ ಪದಕ ತಂದುಕೊಡಬೇಕು ಎಂಬುದು ನನ್ನ ಕನಸು. ಇದಕ್ಕಾಗಿ ಶ್ರಮಿಸುತ್ತಿದ್ದೇನೆ’ ಎಂದರು.
2022ರಲ್ಲಿ ಡೆನ್ಮಾರ್ಕ್‌ನ ಕೋಪನ್ ಹೇಗನ್‌ನಲ್ಲಿ ನಡೆದ ಡ್ಯಾನಿಶ್ ಓಪನ್ ಈಜುಕೂಟದಲ್ಲಿ 800 ಮೀಟರ್ಸ್ ಹಾಗೂ 1500 ಮೀಟರ್ಸ್ ಫ್ರೀಸ್ಟೈಲ್ ವಿಭಾಗದಲ್ಲಿ ಸ್ಪರ್ಧಿಸಿದ್ದ ವೇದಾಂತ್ ಮಾಧವನ್ ವೈಯಕ್ತಿಕ ಶ್ರೇಷ್ಠ ಸಾಧನೆಯೊಂದಿಗೆ ಚಿನ್ನ ಮತ್ತು ಬೆಳ್ಳಿ ಪದಕ ಜಯಿಸಿದ್ದರು. 800 ಮೀಟರ್ಸ್ ಗುರಿಯನ್ನು 8 ನಿಮಿಷ 17.28 ಸೆಕೆಂಡ್‌ಗಳಲ್ಲಿ ತಲುಪಿ ವಿಶೇಷ ದಾಖಲೆ ಬರೆದಿದ್ದರು.
ಇದನ್ನೂ ಓದಿ Sania Mirza: ಅಬುಧಾಬಿ ಓಪನ್; ಮೊದಲ ಸುತ್ತಿನಲ್ಲೇ ಸೋಲು ಕಂಡ ಸಾನಿಯಾ ಮಿರ್ಜಾ ಜೋಡಿ
ಕಳೆದ ವರ್ಷ ಒಡಿಶಾದಲ್ಲಿ ನಡೆದಿದ್ದ 48ನೇ ಜೂನಿಯರ್ ರಾಷ್ಟ್ರೀಯ ಅಕ್ವಾಟಿಕ್ ಚಾಂಪಿಯನ್ಶಿಪ್ನಲ್ಲಿ 1500 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ದಾಖಲೆ ಬರೆಯುವುದರ jತೆಗೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದರು. ಕೇವಲ 16:01.73 ಸೆಕೆಂಡ್ನಲ್ಲಿ ಗುರಿ ತಲುಪಿ ಇತಿಹಾಸ ಸೃಷ್ಟಿಸಿದ್ದರು. ಸದ್ಯ ಈಜಿನಲ್ಲಿ ಅಮೋಘ ಸಾಧನೆ ಮಾಡುತ್ತಿರುವ ಅವರು ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದರೂ ಅಚ್ಚರಿಯಿಲ್ಲ.