Site icon Vistara News

AFG vs BAN: ಕಾಬುಲ್​ನಲ್ಲಿ ಆಫ್ಘನ್ನರ ಮುಗಿಲು ಮುಟ್ಟಿದ ಸಂಭ್ರಮಾಚರಣೆ; ಗುಂಪು ಚದುರಿಸಲು ಜಲಫಿರಂಗಿ ಪ್ರಯೋಗ

AFG vs BAN

AFG vs BAN : Public Celebrations Upon Afghanistan's Qualification to the Semi Finals

ಕಾಬುಲ್​: ಬಾಂಗ್ಲಾದೇಶ ವಿರುದ್ಧ ಮಂಗಳವಾರ ನಡೆದ ಟಿ20 ವಿಶ್ವಕಪ್​(T20 World Cup 2024) ಟೂರ್ನಿಯ ಸೂಪರ್​-8 ಪಂದ್ಯದಲ್ಲಿ ಅಫಘಾನಿಸ್ತಾನ(AFG vs BAN) ತಂಡ ರೋಚಕ 8 ರನ್​ಗಳ ಗೆಲುವು ಸಾಧಿಸಿ ಸೆಮಿಫೈನಲ್​ ಪ್ರವೇಶಿಸಿತು. ತಂಡ ಗೆಲುವು ಸಾಧಿಸುತ್ತಿದ್ದಂತೆ ಕಾಬುಲ್​ನಲ್ಲಿ(Celebrations in Kabul) ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಜನ ಸಾಗರವೇ ರಸ್ತೆಗಿಳಿದು ಪಟಾಕಿ, ಬಣ್ಣದೋಕುಳಿಯೊಂದಿಗೆ ಬೀದಿಗಳಲ್ಲಿ ಯುವಕ-ಯುವತಿಯರು ಕುಣಿದಾಡುತ್ತಾ ಸಂಭ್ರಮಿಸಿದರು. ಜನರ ಗುಂಪನ್ನು ಚದುರಿಸಲು ಪೊಲೀಸರು ಕೊನೆಗೆ ಜಲಫಿರಂಗಿ ಪ್ರಯೋಗ ಮಾಡಿದ ಘಟನೆಯೂ ಸಂಭವಿಸಿದೆ. ಇದರ ವಿಡಿಯೊಗಳು ವೈರಲ್​ ಆಗಿವೆ.

ಮಳೆಯಿಂದ ಅಡಚಣೆಯಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ರಹಮಾನುಲ್ಲಾ ಗುರ್ಬಾಜ್(43) ಅವರ ಏಕಾಂಗಿ ಬ್ಯಾಟಿಂಗ್​ ಹೋರಾಟದ ನೆರವಿನಿಂದ 5 ವಿಕೆಟ್​ಗೆ 115 ರನ್​ ಬಾರಿಸಿತು. ಬಾಂಗ್ಲಾ ಬ್ಯಾಟಿಂಗ್​ ಸರದಿಯ ವೇಳೆ ಹಲವು ಬಾರಿ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಅಂತಿಮವಾಗಿ ಒಂದು ಓವರ್​ ಕಡಿತಗೊಳಿಸಿ 19 ಓವರ್​ಗೆ 114 ರನ್​ ಗೆಲುವಿನ ಗುರಿ ನೀಡಲಾಯಿತು. ಈ ಮೊತ್ತವನ್ನು ಬಾಂಗ್ಲಾ ಒಂದು ಹಂತದವರೆಗೆ ಯಶಸ್ವಿಯಾಗಿ ಬೆನ್ನಟ್ಟಿಕೊಂಡು ಬಂದರೂ ಕೂಡ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 17.5 ಓವರ್​ನಲ್ಲಿ 105 ರನ್​ಗೆ ಸರ್ವಪತನ ಕಂಡಿತು.

ರಸೆಯುದ್ದಕ್ಕೂ ನೆರದಿದ್ದ ಜನರನ್ನು ಚದುರಿಸಲು ಇಲ್ಲಿನ ಪೊಲೀಸರು ಹರ ಸಾಹಸ ಪಟ್ಟ ಘಟನೆಯೂ ನಡೆಯಿತು. ಕೆಲವು ಕಡೆ ಪೊಲೀಸರು ಲಘು ಲಾಠಿ ಚಾರ್ಜ್​ ಮತ್ತು ಜಲಫಿರಂಗಿ ಪ್ರಯೋಗ ಪ್ರಯೋಗ ನಡೆಸಿದರು. ಈ ಫೋಟೊಗಳು ವೈರಲ್​ ಆಗಿವೆ. ಅಫಘಾನಿಸ್ತಾನ ಜೂನ್​ 26ರಂದು(ನಾಳೆ) ನಡೆಯುವ ಸೆಮಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಡಲಿವೆ. ಗೆದ್ದರೆ ಚೊಚ್ಚಲ ಬಾರಿಗೆ ಫೈನಲ್​ ಪ್ರವೇಶಿಸಿದ ಸಾಧನೆ ಜತೆಗೆ ಕಪ್​ ಗೆದ್ದಷ್ಟೇ ಸಂಭ್ರಮ ಆಚರಿಸಲಿದೆ.

ಅಫಘಾನಿಸ್ತಾನ ಪರ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಹೊರತುಪಡಿಸಿ ಉಳಿದ ಯಾವ ಬ್ಯಾಟರ್​ಗಳು ಕೂಡ ನಿರೀಕ್ಷಿತ ಬ್ಯಾಟಿಂಗ್​ ನಡೆಸುವಲ್ಲಿ ಯಶಸ್ಸು ಕಾಣಲಿಲ್ಲ. ಇಬ್ರಾಹಿಂ ಜದ್ರಾನ್(18),ಅಜ್ಮತುಲ್ಲಾ(10), ನಬಿ(1) ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ರಹಮಾನುಲ್ಲಾ ಗುರ್ಬಾಜ್ 3 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 43 ರನ್​ ಬಾರಿಸಿದರು. ಇವರ ಈ ಬ್ಯಾಟಿಂಗ್​ ಹೋರಾಟದಿಂದ ತಂಡ 100ರ ಗಡಿ ದಾಟಿತು.  ಬೌಲಿಂಗ್​ನಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ ರಶೀದ್​ ಖಾನ್​ 4 ಓವರ್​ಗೆ 23 ರನ್​ ವೆಚ್ಚದಲ್ಲಿ 4 ವಿಕೆಟ್​ ಕಿತ್ತು ಮಿಂಚಿದರು. ಇವರಿಗೆ ಮಧ್ಯಮ ವೇಗಿ ನವೀನ್​ ಉಲ್​ ಹಕ್​ ಉತ್ತಮ ಸಾಥ್​ ನೀಡಿ 4 ವಿಕೆಟ್​ ಉರುಳಿಸಿದರು. ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಇದನ್ನೂ ಓದಿ AFG vs BAN: ಆಫ್ಘನ್​ ತಂಡದ ಐತಿಹಾಸಿಕ ಸಾಧನೆಯನ್ನು ಕೊಂಡಾಡಿದ ಸಚಿನ್​ ತೆಂಡೂಲ್ಕರ್​

ಸಚಿನ್​ ಮೆಚ್ಚುಗೆ

ಐತಿಹಾಸಿಕ ಸಾಧನೆ ಮಾಡಿರುವ ಅಫಘಾನಿಸ್ತಾನ(Afghanistan vs Bangladesh) ತಂಡಕ್ಕೆ ಕ್ರಿಕೆಟ್​ ದೇವರು, ಸಚಿನ್​ ತೆಂಡೂಲ್ಕರ್(Sachin Tendulkar)​ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್​ ಎಕ್ಸ್​ನಲ್ಲಿ ಅಫಘಾನಿಸ್ತಾನ ತಂಡದ ಸಾಧನೆಯನ್ನು ಕೊಂಡಾಡಿದ ಸಚಿನ್​, ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ ಗೆಲುವು ನಿಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪಕ್ಕೆ ಸಾಕ್ಷಿಯಾಗಿದೆ. ನಿಮ್ಮ ಪ್ರಗತಿಯ ಬಗ್ಗೆ ತುಂಬಾ ಹೆಮ್ಮೆ ಇದೆ. ಹೀಗೇ ಮುಂದುವರಿಯಿರಿ ಎಂದು ಶುಭ ಹಾರೈಸಿದ್ದಾರೆ.

Exit mobile version