ಟ್ರಿನಿಡಾಡ್: ಟಿ20 ವಿಶ್ಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಭಾರತೀಯ ಕಾಲಮಾನದಂತೆ ನಾಳೆ ಟರೂಬದಲ್ಲಿ ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಅಫಘಾನಿಸ್ಥಾನ(AFG vs SA Semi Final) ಮುಖಾಮುಖೀ ಆಗಲಿವೆ. ಇದೇ ದಿನ ರಾತ್ರಿ ಗಯಾನಾದ ಪ್ರೊವಿಡೆನ್ಸ್‌ನಲ್ಲಿ ನಡೆಯುವ ಮೊತ್ತೊಂದು ಸೆಮಿ ಪಂದ್ಯದಲ್ಲಿ ಭಾರತ ಮತ್ತು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ಸವಾಲನ್ನು ಎದುರಿಸಲಿದೆ.
ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಪಂದ್ಯ ಜೂನ್ 26(ಇಂದು) ನಡೆಯುವ ಸ್ಪರ್ಧೆಯಾಗಿದೆ. ವಿಂಡೀಸ್ನಲ್ಲಿ ಇದು ರಾತ್ರಿ ಪಂದ್ಯವಾದರೆ ಭಾರತೀಯ ಕಾಲಮಾನದಂತೆ ಗುರುವಾರ ಬೆಳಗ್ಗೆ ಪ್ರಸಾರಗೊಳ್ಳಲಿದೆ. ಈ ಪಂದ್ಯಕ್ಕೆ ಮಳೆ ಬಂದರೂ ಕೂಡ ಮೀಸಲು ದಿನವಿದೆ.
ಹಾಲಿ ಟಿ20 ವಿಶ್ವಕಪ್(T20 World Cup 2024) ಕ್ರಿಕೆಟ್ ಪಂದ್ಯಾವಳಿಯಲ್ಲಿ ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳಿಗೆ ಸೊಕ್ಕಡಗಿಸಿ ಕನಸಿನ ಓಟ ಬೆಳೆಸಿರುವ ಅಫಘಾನಿಸ್ತಾನ(AFG vs SA) ಸೆಮಿಫೈನಲ್ನಲ್ಲಿಯೂ ಗೆಲುವು ಸಾಧಿಸುವ ಇರಾದೆಯಲ್ಲಿದೆ. ಅತ್ತ ಕೂಟದ ಅಜೇಯ ತಂಡವಾದ ದಕ್ಷಿಣ ಆಫ್ರಿಕಾದ (South Africa vs Afghanistan Semi Final 1) ಮೊದಲ ಬಾರಿಗೆ ಫೈನಲ್ ಪ್ರವೇಶಿಸಿ ಚಾಂಪಿಯನ್ ಪಟ್ಟ ಅಲಂಕರಸಿ ಚೋಕರ್ಸ್ ಹಣೆಪಟ್ಟಿಯನ್ನು ಅಳಿಸಿ ಹಾಕುವ ಪಣತೊಟ್ಟಿದೆ. ಹೀಗಾಗಿ ಈ ಪಂದ್ಯವನ್ನು ಜಿದ್ದಾಜಿದ್ದಿನ ಪಂದ್ಯ ಎಂದಉ ನಿರೀಕ್ಷೆ ಮಾಡಬಹುದು.
ಇತ್ತಂಡಗಳಿಗೂ ಇದೆ ಅದೃಷ್ಟದ ಬಲ
ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳಿಗೂ ಕೂಡ ಅದೃಷ್ಟ ಕೈ ಹಿಡಿದಿದೆ. ಲೀಗ್ ಹಂತದಲ್ಲಿ ಸೋಲುವ ಪಂದ್ಯಗಳನ್ನು ಗೆದ್ದು ಸೂಪರ್-8 ಹಂತಕ್ಕೇರಿತ್ತು. ಪ್ರತಿ ಐಸಿಸಿ ಟೂರ್ನಿಯಲ್ಲಿ ಗೆಲ್ಲುವ ಪಂದ್ಯಗಳನ್ನು ಸೋಲುವ ಮತ್ತು ಮಳೆಯಿಂದ ಹೊನ್ನಡೆ ಅನುಭವಿಸಿ ಚೋಕರ್ಸ್ ಎನಿಸಿಕೊಳ್ಳುತ್ತಿದ್ದ ದಕ್ಷಿಣ ಆಫ್ರಿಕಾದ ನಸೀಬು ಈ ಬಾರಿ ಬದಲಾದಂತಿದೆ. ಲೀಗ್ ಹಂತದಲ್ಲಿ ಬಾಂಗ್ಲಾ ವಿರುದ್ಧ 1 ರನ್ ಅಂತರದಿಂದ ಗೆದ್ದದ್ದು, ಸೂಪರ್-8 ಪಂದ್ಯದಲ್ಲಿ ವಿಂಡೀಸ್ ಎದುರು ಮಳೆ ಪೀಡಿತ ಪಂದ್ಯವನ್ನು ಜಯಿಸಿದ್ದು ನೋಡುವಾಗ ಹರಿಣ ಪಡೆ ಈ ಬಾರಿ ಚೋಕರ್ಸ್ ಹಣೆಪಟ್ಟಿಯನ್ನು ಕಳಚಿಕೊಳ್ಳುವ ಸಾಧ್ಯತೆಯೊಂದು ಕಂಡಿಬಂದಿದೆ.
ಇದನ್ನೂ ಓದಿ IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್ ಪ್ರವೇಶಿಸಲಿ ಭಾರತ
ಸಿಡಿಯಬೇಕಿದೆ ಮಾರ್ಕ್ರಮ್, ಕ್ಲಾಸೆನ್, ಮಿಲ್ಲರ್
ದಕ್ಷಿಣ ಆಫ್ರಿಕಾ ಪರ ಡಿ ಕಾಕ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್ ಇದುವರೆಗೂ ನಿರೀಕ್ಷತ ಬ್ಯಾಟಿಂಗ್ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್ ಮತ್ತು ಫೀಲ್ಡಿಂಗ್ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ, ಸೆಮಿಫೈನಲ್ನಲ್ಲಿಯೂ ಇದೇ ರೀತಿಯಲ್ಲಿ ಪಂದ್ಯವನ್ನು ಗೆಲ್ಲಬಹುದೆಂದು ಯೋಚಿಸಿ ಕುಳಿತರೆ ಸೋಲು ಎದುರಾಗುವುದು ಖಚಿತ ಎನ್ನಲಡ್ಡಿಯಿಲ್ಲ. ಏಕೆಂದರೆ, ಅಫಘಾನಿಸ್ತಾನ 100 ರನ್ ಬಾರಿಸಿದರೂ ಕೂಡ ಇದನ್ನು ಹಿಡಿದು ನಿಲ್ಲಿಸುವ ತಾಕತ್ತು ಈ ತಂಡದ ಬೌಲರ್ಗಳಿಗಿದೆ. ಸ್ಪಿನ್, ಸ್ಪೀಡ್ ಎರಡೂ ವಿಭಾಗದಲ್ಲಿಯೂ ವೈವಿಧ್ಯಮಯವಾಗಿದೆ. ಬ್ಯಾಟಿಂಗ್ನಲ್ಲಿ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಪ್ರತಿ ಪಂದ್ಯದಲ್ಲಿಯೂ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮಧ್ಯಮ ವೇಗಿ ನವೀನ್ ಉಲ್ ಹಕ್ ಕೂಡ ಘಾತಕ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.
ಬಲಾಬಲ
ಅಫಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೂ ಟಿ20 ಕ್ರಿಕೆಟ್ನಲ್ಲಿ 2 ಬಾರಿ ಮುಖಾಮುಖಿಯಾಗಿವೆ. ಈ ಎರಡೂ ಪಂದ್ಯಗಳನ್ನು ಕೂಡ ದಕ್ಷಿಣ ಆಫ್ರಿಕಾವೇ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹರಿಣ ಪಡೆಯೇ ಬಲಿಷ್ಠವಾಗಿ ಗೋಚರಿಸಿದೆ. ಆದರೂ ಕೂಡ ಅಪಾಯಕಾರಿ ಆಫ್ಘನ್ ಸವಾಲನ್ನು ಹಗುರವಾಗಿ ಕಾಣಬಾರದು. ಏಕೆಂದರೆ ಹೊಡಿ ಬಡಿ ಆಟವಾದ ಟಿ20 ಕ್ರಿಕೆಟ್ನಲ್ಲಿ ಕೊನೆಯ ಎಸೆತದಲ್ಲಿಯೂ ಪಂದ್ಯದ ಫಲಿತಾಂಶ ಬದಲಾದ ನಿದರ್ಶನವಿದೆ.