Asia Cup- 2022 | ಅಫಘಾನಿಸ್ತಾನ ತಂಡಕ್ಕೆ 8 ವಿಕೆಟ್‌ ಭರ್ಜರಿ ಜಯ, ಏಷ್ಯಾ ಕಪ್‌ನಲ್ಲಿ ಶುಭಾರಂಭ - Vistara News

ಕ್ರಿಕೆಟ್

Asia Cup- 2022 | ಅಫಘಾನಿಸ್ತಾನ ತಂಡಕ್ಕೆ 8 ವಿಕೆಟ್‌ ಭರ್ಜರಿ ಜಯ, ಏಷ್ಯಾ ಕಪ್‌ನಲ್ಲಿ ಶುಭಾರಂಭ

Asia Cup- 2022 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫಘಾನಿಸ್ತಾನ ತಂಡ ಶ್ರೀಲಂಕಾ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

VISTARANEWS.COM


on

asia cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ : ಏಷ್ಯಾ ಕಪ್‌ನ (Asia Cup- 2022) ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅಫಘಾನಿಸ್ತಾನ ತಂಡ ೮ ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಬೌಲಿಂಗ್‌ ಹಾಗೂ ಬ್ಯಾಟಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಆಫ್ಘನ್‌ ತಂಡ ಸುಲಭ ಜಯದೊಂದಿಗೆ ಹಾಲಿ ಆವೃತ್ತಿಯಲ್ಲಿ ಶುಭಾರಂಭ ಮಾಡಿತು.

ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಅಫಘಾನಿಸ್ತಾನ ತಂಡ ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತು. ಅಂತೆಯೇ ಬ್ಯಾಟಿಂಗ್‌ಗೆ ಆಹ್ವಾನ ಪಡೆದ ಲಂಕಾ ತಂಡ ಪೇಲವ ಬ್ಯಾಟಿಂಗ್‌ ಪ್ರದರ್ಶಿಸಿ ೧೯.೪ ಓವರ್‌ಗಳಲ್ಲಿ ೧೦೫ ರನ್‌ಗಳಿಗೆ ಆಲ್‌ಔಟ್‌ ಆಯಿತು. ಸಣ್ಣ ಮೊತ್ತದ ಗುರಿ ಬೆನ್ನಟ್ಟಿದ ಅಫಘಾನಿಸ್ತಾನ ತಂಡ ಕೇವಲ ೧೦.೧ ಓವರ್‌ಗಳಲ್ಲಿ ೨ ವಿಕೆಟ್‌ ನಷ್ಟಕ್ಕೆ ೧೦೬ ರನ್‌ ಬಾರಿಸಿ ಗೆಲುವು ಸಾಧಿಸಿತು.

ಗುರಿ ಬೆನ್ನಟ್ಟಿದ ಅಫಘಾನಿಸ್ತಾನ ತಂಡದ ಪರ ಆರಂಭಿಕ ಬ್ಯಾಟರ್‌ ಹಜರುತುಲ್ಲಾ ಝಝೈ ಅಜೇಯ ೩೭ ರನ್‌ ಬಾರಿಸಿದರೆ, ಮತ್ತೊಬ್ಬ ಆರಂಭಿಕ ಆಟಗಾ ರಹಮನುಲ್ಲಾ ಗುರ್ಬಜ್‌ ೧೮ ಎಸೆತಗಳಲ್ಲಿ ಸ್ಫೋಟಕ ೪೦ ರನ್‌ ಬಾರಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ ೮೩ ರನ್‌ ಬಾರಿಸಿ ಗೆಲುವು ಸುಲಭವಾಗಿಸಿದರು. ಬಳಿಕ ಇಬ್ರಾಹಿಂ ಜದ್ರಾನ್‌ ೧೫ ರನ್‌ ಗಳಿಸಿದರೆ, ಜನ್‌ಬುಲ್ಲಾ ಜದ್ರಾನ್‌ ೨ ರನ್‌ ಬಾರಿಗೆ ಗೆಲುವಿನ ಕೇಕೆ ಹಾಕಿದರು.

ಲಂಕಾ ಬ್ಯಾಟಿಂಗ್‌ ಫೇಲ್‌

ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ ತಂಡದ ಆರಂಭಿಕ ಬ್ಯಾಟರ್‌ಗಳು ವೈಫಲ್ಯ ಎದುರಿಸಿದರು. ೫ ರನ್‌ಗಳಿಗೆ ೩ ವಿಕೆಟ್‌ ಕಳೆದುಕೊಂಡಿತು. ಬಳಿಕ ಭಾನುಕಾ ರಾಜಪಕ್ಸ (೩೮) ಹಾಗೂ ಧನುಷ್ಕಾ ಗುಣತಿಲಕ (೧೭) ತಂಡವನ್ನು ಕಾಪಾಡುವ ಯತ್ನ ಮಾಡಿದರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಚಾಮಿಕಾ ಕರುಣಾರತ್ನೆ (೩೧) ರನ್‌ ಬಾರಿಸುವ ಮೂಲಕ ೬೯ ರನ್‌ಗಳಿಗೆ 8 ವಿಕೆಟ್‌ ಕಳೆದುಕೊಂಡಿದ್ದ ಲಂಕಾ ತಂಡದ ಮರ್ಯಾದೆ ಕಾಪಾಡಿದರು. ಅಫಘಾನಿಸ್ತಾನ ತಂಡದ ಬೌಲಿಂಗ್‌ ವಿಭಾಗದಲ್ಲಿ ಫಜಲಾಖ್‌ ಫಾರೂಕಿ ೩ ವಿಕೆಟ್‌ ಕಬಳಿಸಿದರೆ, ಮುಜೀಬ್‌ ಉರ್‌ ರಹಮಾನ್‌ ಹಾಗೂ ಮೊಹಮ್ಮದ್‌ ನಬಿ ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿದರು.

ಸ್ಕೋರ್‌ ವಿವರ

ಶ್ರೀಲಂಕಾ: ೧೯.೪ ಓವರ್‌ಗಳಲ್ಲಿ ೧೦೫ (ಭಾನುಕಾ ರಾಜಪಕ್ಸ ೩೮, ಚಾಮಿಕಾ ಕರುಣಾರತ್ನೆ ೩೧, ಫಜಲಾಖ್‌ ಫಾರೂಕಿ ೩ ಮುಜೀಬ್‌ ಉರ್‌ ರಹ್ಮಾನ್‌ ೨೪ಕ್ಕೆ೨, ಮೊಹಮ್ಮದ್‌ ಶಮಿ ೧೪ ರನ್‌ಗಳಿಗೆ ೨).

ಅಫಘಾನಿಸ್ತಾನ: ೧೦.೧ ಓವರ್‌ಗಳಲ್ಲಿ ೨ ವಿಕೆಟ್‌ಗೆ ೧೦೬ (ಹಜರತುಲ್ಲಾ ಝಝೈ ೩೭, ರಹಮನುಲ್ಲಾ ಗುರ್ಬಜ್‌ ೪೦, ಇಬ್ರಾಹಿಂ ಜದ್ರಾನ್‌ ೧೫; ವಾನಿಂದು ಹಸರಂಗ ೧೯ ರನ್‌ಗಳಿಗೆ ೧).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Viral Video: ಅಭಿಮಾನಿಯ ಮಾತಿನಿಂದ ಸಿಟ್ಟುಗೊಂಡ ರೌಫ್​ ಏಕಾಏಕಿ ಆತನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಅವರ ಪತ್ನಿ ಮತ್ತು ಮ್ಯಾನೇಜರ್​ಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Viral Video
Koo

ಫ್ಲೋರಿಡಾ: ಪಾಕಿಸ್ತಾನ ತಂಡದ ವೇಗದ ಬೌಲರ್ ಹ್ಯಾರಿಸ್ ರೌಫ್(Haris Rauf) ಅವರು ಫ್ಲೋರಿಡಾದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲು ಮುಂದಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(Viral Video)​ ಆಗಿದೆ. ಹಲ್ಲೆಗೆ ಮುಂದಾದ ಹ್ಯಾರಿಸ್ ರೌಫ್(Angry Haris Rauf) ಅವರನ್ನು ಅವರ ಪತ್ನಿ ತಡೆದು ನಿಲ್ಲಿಸಿದ್ದನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.

ಈಗಾಗಲೇ ಟಿ20 ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದಿರುವ ಪಾಕಿಸ್ತಾನ ತಂಡದ ಆಟಗಾರರು ಫ್ಲೋರಿಡಾದಲ್ಲಿ ಕೆಲ ದಿನಗಳ ಕಾಲ ಎಂಜಾಯ್​ ಮಾಡಲಿದ್ದಾರೆ. ಹ್ಯಾರಿಸ್ ರೌಫ್ ಕೂಡ ತಮ್ಮ ಪತ್ನಿ ಜತೆ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಕಾಲ ಕಳೆಯುತ್ತಿದ್ದಾರೆ. ಇದೇ ವೇಳೆ ತಾವು ತಂಗಿದ್ದ ಹೋಟೆಲ್​ಗೆ ಹೋಗುತ್ತಿದ್ದಾಗ ಅಭಿಮಾನಿಯೊಬ್ಬ ನಿಮ್ಮ ಜತೆಗೊಂದು ಫೋಟೊ ಬೇಕಿತ್ತು ಎಂದು ಕೇಳಿದ್ದಾನೆ. ಈ ವೇಳೆ ರೌಫ್​, ನೀನು ಭಾರತೀಯನಾಗಿರಬೇಕು ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಅಭಿಮಾನಿ ನಾನು ಕೂಡ ಪಾಕಿಸ್ತಾನ ಮೂಲದವನೇ ಎಂದು ಹೇಳಿ ಬಳಿಕ ಏನೋ ಹೇಳಿದ್ದಾನೆ.

ಅಭಿಮಾನಿಯ ಮಾತಿನಿಂದ ಸಿಟ್ಟುಗೊಂಡ ರೌಫ್​ ಏಕಾಏಕಿ ಆತನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಪತ್ನಿ ರೌಫ್​ ಅವರನ್ನು ಹಿಡಿದು ನಿಲ್ಲಿಸುವ ಪ್ರಯತ್ನ ಪಟ್ಟರೂ ಕೂಡ ರೌಫ್​ ತಪ್ಪಿಸಿಕೊಂಡು ಹಲ್ಲೆಗೆ ಮುಂದಾದರು. ತಕ್ಷಣ ರೌಫ್​ ಅವರ ಮ್ಯಾನೇಜರ್​ ಹಾಗು ಕೆಲ ಸಿಬ್ಬಂದಿಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಪತ್ನಿ ಕೂಡ ಅವರ ಕೈಗಳನ್ನು ಹಿಡಿದು ಹಲ್ಲೆ ಮಾಡದಂತೆ ಮನವಿ ಮಾಡುತ್ತಲೇ ಅವರನ್ನು ಸಮಾಧಾನ ಪಡೆಸಿದ್ದಾರೆ. ಈ ಎಲ್ಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ರೌಫ್​ ಅವರ ಈ ದರ್ಪವನ್ನು ಅನೇಕ ನೆಟ್ಟಿಗರು ಮತ್ತು ಪಾಕ್​ ಅಭಿಮಾನಿಗಳು ಖಂಡಿಸಿದ್ದಾರೆ. ಇದೇ ದರ್ಪವನ್ನು ಟಿ20 ವಿಶ್ವಕಪ್​ ಪಂದ್ಯದಲ್ಲಿ ತೋರಿಸುತ್ತಿದ್ದರೆ ನಿಮಗೆ ಈ ಗತಿ ಬರುತ್ತಿರಲಿಲ್ಲ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

ಪಾಕ್​ ಆಟಗಾರರ ವೇತನ ಕಡಿತ!


ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ(T20 World Cup 2024) ಕಳಪೆ ಪ್ರದರ್ಶನ ತೋರಿದ ಕಾರಣ ಆಟಗಾರರ ವಾರ್ಷಿಕ ಸಂಭಾವನೆಯಲ್ಲಿ ಕಡಿತ ಮಾಡಲು ಪಾಕ್​ ಕ್ರಿಕೆಟ್​ ಮಂಡಳಿ(PCB) ನಿರ್ಧರಿಸಿದೆ. ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಪಾಕ್​ ಕ್ರಿಕೆಟ್​ ಮಂಡಳಿ ಕೂಡ ಈ ವಿಚಾರವನ್ನು ಗಂಭಿರವಾಗಿ ಪರಿಗಣಿಸಿದ್ದು ಉನ್ನತ ಮಟ್ಟದ ಸಭೆ ನಡೆಸಿ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮರು ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪಾಕ್​ ತಂಡದ ವಿರುದ್ಧ ದೇಶದ್ರೋಹದ ಕೇಸ್‌


ನಿರಾಸದಾಯಕ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡದ ವಿರುದ್ಧ ಪಾಕ್‌ನ ಗುಜ್ರಾನ್ವಾಲಾ ನಗರದ ವಕೀಲರೊಬ್ಬರು ದೇಶದ್ರೋಹ ಕೇಸ್‌ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಕೇಸ್‌ನ ಬಗ್ಗೆ ಜೂನ್​ 21ಕ್ಕೆ ಮುನ್ನ ವರದಿ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ. ಪಾಕ್‌ ತಂಡದ ಕಳಪೆ ಪ್ರದರ್ಶನದಿಂದ ಹಣ ವ್ಯರ್ಥವಾಗುತ್ತಿದೆ ಮತ್ತು ರಾಷ್ಟ್ರದ ನಂಬಿಕೆಗೆ ದ್ರೋಹ ಉಂಟಾಗಿದೆ. ಆಟಗಾರರು ದೇಶದ ಬಗ್ಗೆ ಗೌರವಕ್ಕಿಂತ ಆರ್ಥಿಕ ಲಾಭಕ್ಕೆ ಆದ್ಯತೆ ನೀಡಿದ್ದಾರೆ ಎಂದು ಅರ್ಜಿದಾರ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಯಾಗಿದೆ.

Continue Reading

ಕ್ರೀಡೆ

SA vs USA: ನಾಳೆ ಮೊದಲ ಸೂಪರ್​-8 ಪಂದ್ಯ; ಅಮೆರಿಕ ಸವಾಲಿಗೆ ಹರಿಣ ಪಡೆ ಸಿದ್ಧ

SA vs USA: ಅಮೆರಿಕ ಪರ ಕನ್ನಡಿಗ ನಾಸ್ತುಷ್‌ ಕೆಂಜಿಗೆ, 2010ರಲ್ಲಿ ಭಾರತ ಪರ 19 ವಿಶ್ವಕಪ್​ ಆಡಿದ್ದ ಎಡಗೈ ವೇಗದ ಬೌಲರ್ ಸೌರಭ್ ನೇತ್ರವಲ್ಕರ್, ಮೊನಾಂಕ್ ಪಟೇಲ್, ವಿಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಆರನ್ ಜೋನ್ಸ್ ಕೂಡ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ.

VISTARANEWS.COM


on

SA vs USA
Koo

ಆಂಟಿಗುವಾ: ಹಾಲಿ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಲೀಗ್​ ಹಂತದ ಪಂದ್ಯಗಳು ಮುಕ್ತಾಯ ಕಂಡಿದ್ದು ಇನ್ನು ಸೂಪರ್​-8 ಪಂದ್ಯಗಳು(T20 World Cup Super 8 Group) ಆರಂಭಗೊಳ್ಳಲಿದೆ. ನಾಳೆ(ಬುಧವಾರ) ನಡೆಯುವ ಮೊದಲ ಸೂಪರ್​-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(south africa) ಮತ್ತು ಆತಿಥೇಯ ಅಮೆರಿಕ(United States) ಅದೃಷ್ಠ(SA vs USA) ಪರೀಕ್ಷೆಗೆ ಇಳಿಯಲಿದೆ. ಇದು ಇತ್ತಂಡಗಳ ನಡುವಣ ಮೊದಲ ಕ್ರಿಕೆಟ್​ ಮುಖಾಮುಖಿಯೂ ಹೌದು.

ಹರಿಣ ಪಡೆ ಬಲಿಷ್ಠ ಆದರೆ…

ಲೀಗ್​ ಹಂತದಲ್ಲಿ ದಕ್ಷಿಣ ಆಫ್ರಿಕಾ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯ ಎನಿಸಿಕೊಂಡಿದ್ದರೂ ಕೂಡ ಅಮೆರಿಕವನ್ನು ಕಡೆಗಣಿಸುವಂತಿಲ್ಲ. ಬಲಿಷ್ಠ ಪಾಕಿಸ್ತಾನಕ್ಕೆ ನೀರು ಕುಡಿಸಿದ್ದು ಮತ್ತು ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದನ್ನು ಮರೆಯುವಂತಿಲ್ಲ. ಅಮೆರಿಕ ಕ್ರಿಕೆಟ್​ ಲೋಕಕ್ಕೆ ಹೊಸ ತಂಡವಾಗಿದ್ದರೂ ಕೂಡ ಆಟಗಾರರು ಮಾತ್ರ ಹೊಸಬರಲ್ಲ. ಭಾರತ, ಪಾಕಿಸ್ತಾನ, ನ್ಯೂಜಿಲ್ಯಾಂಡ್​ ತಂಡದ ಪರ ಆಡಿ ಈಗ ಅಮೆರಿಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಈ ಆಟಗಾರರಿಗೆ ಕ್ರಿಕೆಟ್​ ಹೊಸತಲ್ಲ. ಎಲ್ಲರು ಉತ್ಕೃಷ್ಟ ಮಟ್ಟದ ಆಟವನ್ನು ಆಡುವ ಸಾಮರ್ಥ್ಯ ಹೊಂದಿದ್ದಾರೆ.

ದಕ್ಷಿಣ ಆಫ್ರಿಕಾ ಆಡಿದ ಎಲ್ಲ ಲೀಗ್​ ಪಂದ್ಯಗಳಲ್ಲಿಯೂ ಪ್ರಯಾಸದ ಗೆಲುವು ಸಾಧಿಸಿತ್ತು. ಒಮ್ಮೆಯೂ 120 ಗಡಿ ದಾಟಿರಲಿಲ್ಲ. ಹಾಗಂತ ದಕ್ಷಿಣ ಆಫ್ರಿಕಾಗೆ ದೊಡ್ಡ ಮೊತ್ತ ಬಾರಿಸುವ ಸಾಮರ್ಥ ಇಲ್ಲವೆಂದಲ್ಲ. ಅದು ಆಡಿದ ಪಿಚ್ ನ್ಯೂಯರ್ಕ್​ನ ಅಪಾಯಕಾರಿ ನಾಸೌ ಕೌಂಟಿ ಸ್ಟೇಡಿಯಂನ ಪಿಚ್​ನಲ್ಲಿ. ಇಲ್ಲಿ ಹರಣಿ ಪಡೆ ಮಾತ್ರವಲ್ಲ ಆಡಿದ ಎಲ್ಲ ತಂಡಗಳು ಕೂಡ 120ಕ್ಕಿಂತ ಅಧಿಕ ಮೊತ್ತವನ್ನು ಬಾರಿಸಿಲ್ಲ. ಪಾಕ್​ ವಿರುದ್ಧ ಭಾರತ 119 ರನ್​ ಬಾರಿಸಿದ್ದೇ ಗರಿಷ್ಠ ಮೊತ್ತ. ಇದೀಗ ಸೂಪರ್​-8 ಪಂದ್ಯಗಳನ್ನು ವಿಂಡೀಸ್​ನಲ್ಲಿ ಆಡುತ್ತಿರುವ ಕಾರಣ ಮಾರ್ಕ್ರಮ್​ ಪಡೆ ದೊಡ್ಡ ಮೊತ್ತವನ್ನು ಪೇರಿಸುವ ಸಾಧ್ಯತೆ ಇದೆ.

ಲೀಗ್​ ಹಂತದ ಪಂದ್ಯದಲ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಿದ್ದ ಕ್ವಿಂಟನ್​ ಡಿ ಕಾಕ್​, ನಾಯಕ ಐಡೆನ್​ ಮಾರ್ಕ್ರಮ್,​ ರೀಜಾ ಹೆಂಡ್ರಿಕ್ಸ್ ಸೂಪರ್​-8 ಪಂದ್ಯದಲ್ಲಾದರೂ ನಿರೀಕ್ಷಿತ ಬ್ಯಾಟಿಂಗ್​ ನಡೆಸುವ ಅನಿವಾರ್ಯತೆ ಇದೆ. ಮಧ್ಯಮ ಕ್ರಮಾಂಕದಲ್ಲಿ ಡೇವಿಡ್​ ಮಿಲ್ಲರ್​ ಮತ್ತು ಹೆನ್ರಿಚ್​ ಕ್ಲಾಸೆನ್​ ಸಿಡಿದು ನಿಂತು ಪಂದ್ಯದ ಗತಿಯನ್ನು ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ರಬಾಡ, ಜಾನ್ಸೆನ್​, ಮಹಾರಾಜ್​, ನೋರ್ಜೆ ಅವರನ್ನೊಳಗೊಂಡ ಬೌಲಿಂಗ್​ ವಿಭಾಗ ಘಾತಕವಾಗಿದೆ.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಅಮೆರಿಕ ಪರ ಕನ್ನಡಿಗ ನಾಸ್ತುಷ್‌ ಕೆಂಜಿಗೆ, 2010ರಲ್ಲಿ ಭಾರತ ಪರ 19 ವಿಶ್ವಕಪ್​ ಆಡಿದ್ದ ಎಡಗೈ ವೇಗದ ಬೌಲರ್ ಸೌರಭ್ ನೇತ್ರವಲ್ಕರ್, ಮೊನಾಂಕ್ ಪಟೇಲ್, ವಿಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಆರನ್ ಜೋನ್ಸ್ ಕೂಡ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ವಿಂಡೀಸ್​ ಪಿಚ್​ನಲ್ಲಿ ಆಡಿದ ಅನುಭವ ಅಷ್ಟಾಗಿ ಇರದ ಕಾರಣ ನಾಳಿನ ಪಂದ್ಯದಲ್ಲಿ ಹೇಗೆ ಪ್ರದರ್ಶನ ತೋರಬಹುದು ಎನ್ನುವ ಪ್ರಶ್ನೆಯೂ ಉದ್ಭವಿಸಿದೆ.

ಸಂಭಾವ್ಯ ತಂಡ


ಅಮೆರಿಕ: ಸ್ಟೀವನ್ ಟೇಲರ್, ಮೊನಾಂಕ್ ಪಟೇಲ್ (ನಾಯಕ), ಆಂಡ್ರೀಸ್ ಗೌಸ್, ಆರನ್ ಜೋನ್ಸ್, ನಿತೀಶ್ ಕುಮಾರ್, ಕೋರಿ ಆಂಡರ್ಸನ್, ಹರ್ಮೀತ್ ಸಿಂಗ್, ಜಸ್ದೀಪ್ ಸಿಂಗ್, ನಾಸ್ತುಷ್‌ ಕೆಂಜಿಗೆ, ಸೌರಭ್ ನೇತ್ರವಲ್ಕರ್, ಅಲಿ ಖಾನ್.

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೀ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಆನ್ರಿಚ್ ನೋರ್ಜೆ, ಒಟ್ನೀಲ್ ಬಾರ್ಟ್‌ಮನ್.

Continue Reading

ಕ್ರೀಡೆ

Gautam Gambhir: ಅಮೀತ್​ ಶಾ ಭೇಟಿಯಾದ ಗೌತಮ್‌ ಗಂಭೀರ್‌; ಕೋಚ್​ ಆಗುವುದು ಖಚಿತ ಎಂದ ನೆಟ್ಟಿಗರು

Gautam Gambhir: 2019ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ದೆಹಲಿ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಗಂಭೀರ್‌, ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. ಕೋಚ್​ ಆಗುವ ಉದ್ದೇಶದಿಂದಲೇ ಗಂಭೀರ್​ ಈ ನಿರ್ಧಾರ ಕೈಗೊಂಡದ್ದು ಎಂಬ ಮಾತುಗಳು ಕೂಡ ಕೇಳಿ ಬಂದಿದೆ.

VISTARANEWS.COM


on

Gautam Gambhir
Koo

ನವದೆಹಲಿ: ಟೀಮ್​ ಇಂಡಿಯಾದ ಮಾಜಿ ಆಟಗಾರ ಗೌತಮ್‌ ಗಂಭೀರ್‌(Gautam Gambhir) ಅವರು ಭಾರತ ತಂಡ ಮುಂದಿನ ಕೋಚ್​ ಆಗಲಿದ್ದಾರೆ(gautam gambhir team india coach) ಎಂದು ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಗಂಭೀರ್​ ಅವರು ಕೇಂದ್ರ ಗೃಹ ಮಂತ್ರಿ ಅಮೀತ್​ ಶಾ(Amit Shah) ಅವರನ್ನು ಭೇಟಿಯಾಗಿದ್ದಾರೆ. ಇವರಿಬ್ಬರ ಭೇಟಿಯ ಫೋಟೊ ಕಂಡು ನೆಟ್ಟಿಗರು ಗಂಭೀರ್​ ಕೋಚ್​ ಆಗುವುದು ಖಚಿತ ಎಂದಿದ್ದಾರೆ.

ಗಂಭೀರ್​ ಅವರು ಅಮಿತ್‌ ಶಾ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಅಭಿನಂಧನೆ ಸಲ್ಲಿಸಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ದೆಹಲಿ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಗಂಭೀರ್‌, ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. ಕೋಚ್​ ಆಗುವ ಉದ್ದೇಶದಿಂದಲೇ ಗಂಭೀರ್​ ಈ ನಿರ್ಧಾರ ಕೈಗೊಂಡದ್ದು ಎಂಬ ಮಾತುಗಳು ಕೂಡ ಕೇಳಿ ಬಂದಿದೆ.

2 ದಿನಗಳ ಹಿಂದಷ್ಟೇ ಬಿಸಿಸಿಐ ಕೂಡ ಗಂಭೀರ್​ ಅವರನ್ನು ಕೋಚ್ ಆಗಿ ನೇಮಕ ಮಾಡಿಕೊಳ್ಳಲು ಅಂತಿಮ ನಿರ್ಧಾರ ಕೈಗೊಂಡಿದ್ದು, ಇದೇ ತಿಂಗಳಾತ್ಯಂದಲ್ಲಿ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಇದೀಗ ಅಮಿತ್‌ ಶಾ ಅವರನ್ನು ಗಂಭೀರ್‌ ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಅಮಿತ್​ ಶಾ ಅವರ ಮಗನಾಗಿದ್ದಾರೆ.

ಇದನ್ನೂ ಓದಿ Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

‘ಲೋಕಸಭಾ ಚುನಾವಣಾ ಯಶಸ್ಸಿಗೆ ಅಭಿನಂದಿಸುವ ಸಲುವಾಗಿ ನಾನು ಸನ್ಮಾನ್ಯ ಅಮಿತ್ ಶಾ ಅವರನ್ನು ಭೇಟಿಮಾಡಿ ಅವರನ್ನು ಅಭಿನಂದಿಸಿದೆ. ಗೃಹ ಸಚಿವರಾಗಿ ಅವರ ನಾಯಕತ್ವವು ನಮ್ಮ ರಾಷ್ಟ್ರದ ಭದ್ರತೆ ಮತ್ತು ಸ್ಥಿರತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂಬ ನಂಬಿಕೆ ನನಗಿದೆ’ ಎಂದು ಗಂಭೀರ್​ ಟ್ವೀಟ್​ ಮಾಡಿದ್ದಾರೆ.

ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಅವರೇ ಕೋಚ್​ ಆಗುವುದು ಖಚಿತ ಎನ್ನುತ್ತಿದೆ ಮೂಲಗಳು. ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ದ್ರಾವಿಡ್ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕವೇ ಕೋಚ್​ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಆದರೆ, ಬಿಸಿಸಿಐ ಟಿ20 ವಿಶ್ವಕಪ್​ ತನಕ ಅವರನ್ನು ಮುಂದುವರಿಯುವಂತೆ ಒತ್ತಾಯ ಮಾಡಿತ್ತು. ಹೀಗಾಗಿ ದ್ರಾವಿಡ್​ ಟಿ20 ವಿಶ್ವಕಪ್ ತನಕ ಈ ಹುದ್ದೆಯಲ್ಲಿ ಮುಂದುವರಿದರು.

Continue Reading

ಕ್ರೀಡೆ

WI vs AFG: ಒಂದೇ ಓವರ್​ನಲ್ಲಿ 36 ರನ್​ ಗಳಿಸಿ ಯುವರಾಜ್​ ಸಿಂಗ್​ ದಾಖಲೆ ಸರಿಗಟ್ಟಿದ ನಿಕೋಲಸ್​ ಪೂರನ್​

WI vs AFG: 36 ರನ್​ ಕಲೆಹಾಕುವ ಮೂಲಕ ಪೂರನ್​ ಅವರು ಒಂದೇ ಓವರ್​ನಲ್ಲಿ 36 ರನ್​ ಬಾರಿಸಿದ ಯುವರಾಜ್​ ಮತ್ತು ಕೈರನ್​ ಪೊಲಾರ್ಡ್​ ಅವರನ್ನೊಳಗೊಂಡ ಎಲೈಟ್​ ಪಟ್ಟಿಗೆ ಸೇರ್ಪಡೆಗೊಂಡರು.

VISTARANEWS.COM


on

WI vs AFG
Koo

ಸೈಂಟ್ ಲೂಸಿಯಾ: ಮಂಗಳವಾರ ನಡೆದ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಅಂತಿಮ ಲೀಗ್​ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡ ಅಫಘಾನಿಸ್ತಾನ(WI vs AFG) ವಿರುದ್ಧ 104 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ವಿಂಡೀಸ್​ನ ಎಡಗೈ ಬ್ಯಾಟರ್​ ನಿಕೋಲಸ್​ ಪೂರನ್​(Nicholas Pooran) ಒಂದೇ ಓವರ್​ನಲ್ಲಿ 36 ರನ್​(36 runs in an over) ಬಾರಿಸುವ ಮೂಲಕ ಯುವರಾಜ್​ ಸಿಂಗ್(Yuvraj Singh)​ ಮತ್ತು ಕೈರನ್ ಪೊಲಾರ್ಡ್​ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಪೂರನ್​ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಗಮನ ಸೆಳೆದರು. ಅಜ್ಮತುಲ್ಲಾ ಒಮರ್ಜಾಯ್(Azmatullah Omarzai) ಅವರ ದ್ವಿತೀಯ ಓವರ್​ನಲ್ಲಿ ಸಿಡಿದು ನಿಂತ ಪೂರನ್​ ಮೂರು ಸಿಕ್ಸರ್​ ಮತ್ತು ಮೂರು ಬೌಂಡರಿ ಬಾರಿಸಿ ಒಟ್ಟು 36 ರನ್​ ಕಲೆಹಾಕಿದರು. 2 ನೋಬಾಲ್​ ಮತ್ತು ಒಂದು ವೈಡ್​ 4 ಕೂಡ ಈ ಓವರ್​ನಲ್ಲಿ ದಾಖಲಾಯಿತು. 36 ರನ್​ ಕಲೆಹಾಕುವ ಮೂಲಕ ಪೂರನ್​ ಅವರು ಒಂದೇ ಓವರ್​ನಲ್ಲಿ 36 ರನ್​ ಬಾರಿಸಿದ ಯುವರಾಜ್​ ಮತ್ತು ಕೈರನ್​ ಪೊಲಾರ್ಡ್​ ಅವರನ್ನೊಳಗೊಂಡ ಎಲೈಟ್​ ಪಟ್ಟಿಗೆ ಸೇರ್ಪಡೆಗೊಂಡರು.

ಇದನ್ನೂ ಓದಿ Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

ಯುವರಾಜ್​ ಸಿಂಗ್​ ಅವರು 2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್​ ಟೂರ್ನಿಯ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಸುವರ್ಟ್​ ಬ್ರಾಡ್​ ಅವರ ಓವರ್​ನಲ್ಲಿ ಸತತ 6 ಸಿಕ್ಸರ್​ ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದರು. ವಿಂಡೀಸ್​ನ ಆಟಗಾರನೇ ಆಗಿರುವ ಕೈರನ್​ ಪೊಲಾರ್ಡ್​ 2021ರಲ್ಲಿ ಶ್ರೀಲಂಕಾದ ಅಕಿಲ್​ ಧನಂಜಯ ಅವರ ಓವರ್​ನಲ್ಲಿ 36 ರನ್​ ಬಾರಿಸಿದ್ದರು.

ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಪೂರನ್​ 53 ಎಸೆತಗಳಿಂದ 89 ರನ್​ ಬಾರಿಸಿ ರನೌಟ್​ ಆಗುವ ಮೂಲಕ ಕೇವಲ 2 ರನ್​ ಅಂತರದಿಂದ ಶತಕ ವಂಚಿತರಾದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ಬರೋಬ್ಬರಿ 8 ಸಿಕ್ಸರ್​ ಮತ್ತು 6 ಬೌಂಡರಿ ಸಿಡಿಯಿತು. ಸಾರಸ್ಯವೆಂದರೆ 36 ರನ್​ ಚಚ್ಚಿಸಿಕೊಂಡ ಒಮರ್ಜಾಯ್ ಅವರೇ ಪೂರನ್​ ಅವರನ್ನು ರನೌಟ್​ ಮಾಡಿದ್ದು.

ಪಂದ್ಯ ಗೆದ್ದ ವಿಂಡೀಸ್​


ಈಗಾಗಲೇ ಸೂಪರ್​-8 ಹಂತಕ್ಕೇರಿರುವ ವಿಂಡೀಸ್​ ಮತ್ತು ಅಫಘಾನಿಸ್ತಾನಕ್ಕೆ ಈ ಪಂದ್ಯ ಕೇವಲ ಅಭ್ಯಾಸಕ್ಕೆ ಸೀಮಿತವಾದ ಪಂದ್ಯವಾಗಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ವೆಸ್ಟ್​ ಇಂಡೀಸ್ ನಿಗದಿತ 20 ಓವರ್​ಗಳಲ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ 5 ವಿಕೆಟ್​ಗೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಕಂಡು ದಂಗಾದ ಅಫಘಾನಿಸ್ತಾನ ಆರಂಭದಿಂದಲೇ ವಿಕೆಟ್​ ಕಳೆದುಕೊಂಡು 114 ರನ್​ಗೆ ಸರ್ವಪತನ ಕಂಡು ಹೀನಾಯ ಸೋಲು ಕಂಡಿತು. ವಿಂಡೀಸ್​ ಪರ ಒಬೆಡ್ ಮೆಕಾಯ್(3), ಅಕಿಲ್​ ಹೊಸೈನ್​ ಮತ್ತು ಗುಡಾಕೇಶ್ ಮೋತಿ ತಲಾ 2 ವಿಕೆಟ್​ ಕಿತ್ತರು.

Continue Reading
Advertisement
Bomb threat
ದೇಶ54 mins ago

Bomb Threat: ಮುಂಬೈನ 50ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬಾಂಬ್‌ ದಾಳಿ ಬೆದರಿಕೆ; ಎಲ್ಲೆಡೆ ಕಟ್ಟೆಚ್ಚರ

Drowned in Water boy who went swimming drowned and died
ಬೀದರ್‌1 hour ago

Drowned in Water: ಡ್ಯಾಮ್ ನೀರಿನಲ್ಲಿ ಈಜಲು ಹೋದ ಬಾಲಕ ಮುಳುಗಿ ಸಾವು!

Jagan Mohan Reddy
ದೇಶ1 hour ago

Jagan Mohan Reddy: ಸರ್ಕಾರದ 500 ಕೋಟಿ ರೂ.ನಲ್ಲಿ ಜಗನ್‌ ಅರಮನೆ ನಿರ್ಮಾಣ? ಟಿಡಿಪಿ ಸ್ಫೋಟಕ ಆರೋಪ

PM Surya Ghar Yojana Comprehensive Review Meeting by Union Minister Pralhad Joshi
ಕರ್ನಾಟಕ1 hour ago

Pralhad Joshi: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ ಸೂರ್ಯ ಘರ್: ಜೋಶಿ

Sonakshi Sinha
ಬಾಲಿವುಡ್2 hours ago

Sonakshi Sinha: ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ; ತಾಯಿ, ಸಹೋದರನೂ ಮದುವೆಗೆ ಹೋಗಲ್ಲ?

Construction of International Cricket Stadium at Shira MLA T B Jayachandra KSCA team inspection
ಕರ್ನಾಟಕ3 hours ago

Shira News: ಶಿರಾದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ; ಶಾಸಕ ಜಯಚಂದ್ರ ಪರಿಶೀಲನೆ

Malayali actress Honey Rose starring Rachel movie Teaser release
ಕರ್ನಾಟಕ3 hours ago

Rachel Movie: ಮಲಯಾಳಿ ನಟಿ ಹನಿ ರೋಸ್ ನಾಯಕಿಯಾಗಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ರಿಲೀಸ್‌

IPS Officer
ದೇಶ3 hours ago

IPS Officer: ಕ್ಯಾನ್ಸರ್‌ನಿಂದ ಪತ್ನಿ ಸಾವಿನ ಸುದ್ದಿ ತಿಳಿದ ಕೆಲವೇ ನಿಮಿಷದಲ್ಲಿ ಐಪಿಎಸ್‌ ಅಧಿಕಾರಿ ಆತ್ಮಹತ್ಯೆ!

Sambhavami Yuge Yuge movie release on June 21
ಕರ್ನಾಟಕ3 hours ago

Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

Kodi Mutt Swamiji
ಪ್ರಮುಖ ಸುದ್ದಿ3 hours ago

Kodi Mutt Swamiji: ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು, ರಾಜ್ಯದಲ್ಲಿ ಅತಿವೃಷ್ಟಿ: ಕೋಡಿಮಠ ಶ್ರೀ ಭವಿಷ್ಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌