ನವ ದೆಹಲಿ : ಏಷ್ಯಾ ಕಪ್ನಲ್ಲಿ ಪಾಲ್ಗೊಳ್ಳುವುದಕ್ಕೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂಬ ವಿಚಾರ ದಿನದಿಂದ ದಿನಕ್ಕೆ ವಿವಾದ ರೂಪವಾಗಿ ಬೆಳೆಯುತ್ತಿದೆ. ಅದರಲ್ಲೂ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ದಿನಕ್ಕೊಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದೀಗ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಮಾತನಾಡಿದ್ದು, ಇವೆಲ್ಲವನ್ನೂ ಸರಿಪಡಿಸಬೇಕಾದ ಐಸಿಸಿಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದೆ ಮಂಡಿಯೂರಿ ನಿಂತಿದೆ ಎಂದು ಹೇಳಿದ್ದಾರೆ.
ಭಾರತ ತಂಡ ಏಷ್ಯಾ ಕಪ್ನಲ್ಲಿ ಪಾಲ್ಗೊಳ್ಳುವುದಕ್ಕೆ ಪಾಕಿಸ್ತಾನಕ್ಕೆ ಬರುವುದೊ ಗೊತ್ತಿಲ್ಲ. ಅವರು ಬರದೇ ಹೋದರೆ ನಾವು ಏಕ ದಿನ ವಿಶ್ವ ಕಪ್ ಬಹಿಷ್ಕಾರ ಮಾಡುತ್ತೇವೋ ಎಂಬುದರ ಅರಿವಿಲ್ಲ. ಆದರೆ, ಈ ವಿಚಾರದ ಬಗ್ಗೆ ಸ್ಪಷ್ಟ ನಿರ್ಧಾರವೊಂದನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಸಮಾ ಟಿವಿ ಜತೆ ಮಾತನಾಡಿದ ಅವರು ಹೇಳಿದ್ದಾರೆ.
ಇಂಥ ಸಂದಿಗ್ಧ ಪರಿಸ್ಥಿತಿಗಳು ಎದುರಾದಾಗ ಐಸಿಸಿ ಸ್ಪಷ್ಟ ನಿರ್ಧಾರವೊಂದನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ, ಬಿಸಿಸಿಐ ದುಡ್ಡಿನ ಬಲದ ಮುಂದೆ ಐಸಿಸಿ ಮಂಡಿಯೂರುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : Asia Cup 2023 : ಏಷ್ಯಾ ಕಪ್ ಕ್ರಿಕೆಟ್ ಪಾಕಿಸ್ತಾನದಲ್ಲಿ ನಡೆಯದಂತೆ ನೋಡಿಕೊಂಡ ಜಯ್ ಶಾ!
ಭಾರತ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಅವರು ಏಷ್ಯಾ ಕಪ್ ವಿಚಾರವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅಫ್ರಿದಿ ಮಾತನಾಡಿದ್ದಾರೆ.