ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿಯು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು (BJP Candidates List) ಶನಿವಾರ ಬಿಡುಗಡೆ ಮಾಡಿತ್ತು. 195 ಅಭ್ಯರ್ಥಿಗಳಲ್ಲಿ ಹೊಸ ಮುಖಗಳಿಗೆ, ಯುವಕರಿಗೆ, ಮಹಿಳೆಯರಿಗೆ ಆದ್ಯತೆ ನೀಡಿದೆ. ಇದರಲ್ಲಿ ಅವಳಿ ಪ್ಯಾರಾ ಒಲಿಂಪಿಕ್ ಪದಕ ವಿಜೇತ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಜಜಾರಿಯಾ(Devendra Jhajharia) ಅವರಿಗೂ ಟಿಕೆಟ್ ನೀಡಲಾಗಿದೆ.
ದೇವೇಂದ್ರ ಜಜಾರಿಯಾ ಅವರು ರಾಜಸ್ಥಾನದ ಚುರು(Churu) ಕ್ಷೇತ್ರದಿಂದ ಈ ಬಾರಿ ಲೋಕಸಭೆ ಚುನಾವಣೆಗೆ ಕಣಕ್ಕಿಳಿಯಲಿದ್ದಾರೆ. 2016ರ ರಿಯೋ ಪ್ಯಾರಾ ಲಿಂಪಿಕ್ಸ್‌ನಲ್ಲಿ ದಿವ್ಯಾಂಗ ಕ್ರೀಡಾಪಟು, ಜಾವೆಲಿನ್ ತಾರೆ ದೇವೇಂದ್ರ ಜಜಾರಿಯಾ ಚಿನ್ನ ಜಯಿಸಿದ್ದರು. 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದರು.
VIDEO | Lok Sabha Elections 2024: Here's what BJP's Devendra Jhajharia (@DevJhajharia) said after the announcement of his candidature from Rajasthan’s Churu in the party's first list of 195 candidates.
— Press Trust of India (@PTI_News) March 3, 2024
"First of all, I would like to thank PM Modi. It’s the first time that a… pic.twitter.com/j4cZlTh2Oe
ಕಣಕ್ಕಿಳಿದಿರುವ ಗಣ್ಯರು
ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಖನೌ, ಸ್ಮೃತಿ ಇರಾನಿ ಅವರು ಅಮೇಥಿಯಿಂದ, ಕಿರಣ್ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವಿಯ, ಕೇರಳದ ಪಥಣಂತಿಟ್ಟದಿಂದ ಎ.ಕೆ. ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ, ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ತಿರುವನಂತಪುರಂನಿಂದ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್ ಸಿಂಗ್ ಚೌಹಾಣ್ ಅವರು ಕಣಕ್ಕಿಳಿದಿದ್ದಾರೆ.
ಉತ್ತರ ಪ್ರದೇಶದ ಮಥುರಾದಿಂದ ಹೇಮಾಮಾಲಿನಿ, ಉನ್ನಾವೋದಿಂದ ಸಾಕ್ಷಿ ಮಹಾರಾಜ್, ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್ ಕುಮಾರ್, ಸಿಕಂದರಾಬಾದ್ ಜಿ. ಕಿಶನ್ ರೆಡ್ಡಿ ಅವರಿಗೂ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ವಿದಿಶಾದಿಂದ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ದೆಹಲಿ ಉತ್ತರ ಮನೋಜ್ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್ ನಾಯಕ್ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
Names of 195 BJP leaders released by the party in its first list of candidates for Lok Sabha elections pic.twitter.com/vQS0l1coZl
— ANI (@ANI) March 2, 2024
ಸುಷ್ಮಾ ಸ್ವರಾಜ್ ಪುತ್ರಿಗೆ ಟಿಕೆಟ್
ಬಿಜೆಪಿಯು ಈ ಬಾರಿ ಹಲವು ಬದಲಾವಣೆ ಮಾಡಿದೆ. ಅದರಲ್ಲೂ, ನವದೆಹಲಿ ಕ್ಷೇತ್ರದ ಸಂಸದೆ, ಸಚಿವೆಯೂ ಆಗಿರುವ ಮೀನಾಕ್ಷಿ ಲೇಖಿ ಅವರನ್ನು ಕೈಬಿಡಲಾಗಿದೆ. ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ ಬನ್ಸೂರಿ ಸ್ವರಾಜ್ ಅವರಿಗೆ ಸ್ಪರ್ಧಿಸಲಿದ್ದಾರೆ. ಇನ್ನು ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಕೈಬಿಡಲಾಗಿದ್ದು, ಅಲೋಕ್ ಶರ್ಮಾ ಅವರಿಗೆ ಟಿಕೆಟ್ ಘೋಷಿಸಲಾಗಿದೆ.