ನವದೆಹಲಿ: ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿರುವ ವೇಗಿ ಮೊಹಮ್ಮದ್ ಶಮಿ(Mohammed Shami), ಸೂರ್ಯಕುಮಾರ್ ಯಾದವ್(Suryakumar Yadav) ಮತ್ತು ರಿಷಭ್ ಪಂತ್(Rishabh Pant) ಅವರನ್ನು ಆದಷ್ಟು ಬೇಗ ಗುಣಮುಖರಾಗಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೊಸ ನಿರ್ಧಾರ ಕೈಗೊಂಡಿದೆ.
ಈ ಮೂವರು ಆಟಗಾರರಿಗೆ ವಿದೇಶದಲ್ಲಿ ವಿಶೇಷ ಚಿಕಿತ್ಸೆ ನೀಡಲು ಬಿಸಿಸಿಐ ನಿರ್ಧರಿಸಿದೆ. ಈಗಾಗಲೇ ಸೂರ್ಯಕುಮಾರ್ ಯಾದವ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿರುವ ಬಿಸಿಸಿಐ ಮುಂದಿನ ವಾರ ಮೊಹಮ್ಮದ್ ಶಮಿ ಮತ್ತು ರಿಷಭ್ ಪಂತ್ ಅವರನ್ನು ಕೂಡ ವಿದೇಶಕ್ಕೆ ಕಳುಹಿಸಲು ನಿರ್ಧಾರ ಮಾಡಿದೆ.
ವಿಶ್ವಕಪ್ ಟೂರ್ನಿಯ ವೇಳೆ ಪಾದದ ಗಾಯಕ್ಕೆ ಒಳಗಾಗಿದ್ದರು ಕೂಡ ಮೊಹಮ್ಮದ್ ಶಮಿ ದೇಶಕ್ಕಾಗಿ ಪಂದ್ಯವನ್ನು ಆಡಿದ್ದರು. ಆದರೆ ದಕ್ಷಿಣ ಆಫ್ರಿಕಾ ಟೆಸ್ಟ್ನಿಂದ ಹೊರಗುಳಿದಿದ್ದರು. ಇಂಗ್ಲೆಂಡ್ ಟೆಸ್ಟ್ ಸರಣಿಯ 2 ಪಂದ್ಯಗಳಿಗೆ ಪ್ರಕಟಿಸಿದ ತಂಡದಲ್ಲಿ ಶಮಿ ಅವಕಾಶ ಪಡೆದಿಲ್ಲ. ಮೂರನೇ ಪಂದ್ಯಕ್ಕೆ ಆಯ್ಕೆಯಾಗಬಹುದೆಂದು ಹೇಳಲಾಗಿತ್ತು. ಆದರೆ ಅವರು ಸಂಪೂರ್ಣವಾಗಿ ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಪ್ರಸ್ತುತ, ಶಮಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಮುಂದಿನ ವಾರ ಶಮಿ ತಜ್ಞ ವೈದ್ಯರನ್ನು ಸಂಪರ್ಕಿಸಲು ಶಮಿ ಲಂಡನ್‌ಗೆ ತೆರಳಲಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಶಮಿ ಕೇವಲ 7 ಪಂದ್ಯಗಳನ್ನು ಆಡಿ 24 ವಿಕೆಟ್‌ಗಳನ್ನು ಕಬಳಿಸಿ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಕಿತ್ತ ಬೌಲರ್ ಎನಿಸಿಕೊಂಡಿದ್ದರು. ಎರಡು ಬಾರಿ ಐದು ವಿಕೆಟ್‌ಗಳು ಮತ್ತು ಒಂದು ಬಾರಿ ಏಳು ವಿಕೆಟ್ ಕಿತ್ತ ಸಾಧನೆ ಮಾಡಿದ್ದರು. ಶಮಿಯ ಘಾತಕ ಬೌಲಿಂಗ್ ಮುಂದೆ ಎದುರಾಳಿ ತಂಡದ ಬ್ಯಾಟರ್ಗಳು ರನ್ ಗಳಿಸಲು ಪರದಾಟ ನಡೆಸಿದ್ದರು. ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಬರೋಬ್ಬರಿ 7 ವಿಕೆಟ್ ಉರುಳಿಸಿದ್ದರು.
ಇದನ್ನೂ ಓದಿ India vs England, 1st Test: ಕೋಚ್ ದ್ರಾವಿಡ್ ಮಾರ್ಗದರ್ಶನದಲ್ಲಿ ಅಭ್ಯಾಸ ಆರಂಭಿಸಿದ ಟೀಮ್ ಇಂಡಿಯಾ
ರಿಷಭ್ ಪಂತ್ ಅವರನ್ನು ಕೂಡ ಬಿಸಿಸಿಐ ಶೀಘ್ರದಲ್ಲೇ ಲಂಡನ್‌ಗೆ ಕಳುಹಿಸಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ. 2022ರ ಡಿಸೆಂಬರ್ 30ರಂದು(rishabh pant accident date) ರಿಷಭ್ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅರ್ಪಆತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು. ಬಹುತೇಕ ಚೇತರಿಕೆ ಕಂಡಿರುವ ಅವರ ಫಿಟ್ನೆಸ್ ಮೇಲೆ ಬಿಸಿಸಿಐ ವೈದ್ಯಕಿಯ ತಂಡ ನಿಗಾ ಇರಿಸಿದೆ. ಪಂತ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳ ಬೇಕಾದರ ದೇಶೀಯ ಕ್ರಿಕೆಟ್ನಲ್ಲಿ ಆಡಿ ತಮ್ಮ ಫಿಟ್ಸೆನ್ ಸಾಬೀತುಪಡಿಸಬೇಕಿದೆ.
ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ ಸೂರ್ಯಕುಮಾರ್ ಯಾದವ್ ಚೇತರಿಕೆಗೆ ಕನಿಷ್ಠ 9 ವಾರಗಳ ಅಗತ್ಯವಿದೆ ಎನ್ನಲಾಗಿದೆ. ಐಪಿಎಲ್ ವೇಳೆಗೆ ಅವರು ಮತ್ತೆ ಕ್ರಿಕೆಟ್ ಕಮ್ಬ್ಯಾಕ್ ಮಾಡುವ ಸಾಧ್ಯತೆ ಇದೆ. ಆದರೆ ಟಿ20 ವಿಶ್ವಕಪ್ ಕೂಡ ಇರುವುದರಿಂದ ಅವರಿಗೆ ಬಿಸಿಸಿಐ ಪೂರ್ಣ ಪ್ರಮಾಣದಲ್ಲಿ ಐಪಿಎಲ್ ಆಡಲು ಅನುಮತಿ ನೀಡುವುದು ಕೂಡ ಅನುಮಾನ ಎನ್ನಲಾಗಿದೆ.