ಮುಂಬಯಿ: ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಅಜಿಂಕ್ಯ ರಹಾನೆ(Ajinkya Rahane) ಅವರು ಕೌಂಟಿ ಕ್ರಿಕೆಟ್ನತ್ತ ಮಖಮಾಡಿದ್ದಾರೆ. ಭಾರತ ತಂಡದಲ್ಲಿ ಅವಕಾಶ ಸಿಗದ ಕಾರಣ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಇಂಗ್ಲಿಷ್ ಕೌಂಟಿ ಲೀಸೆಸ್ಟರ್‌ಶೈರ್(Leicestershire) ತಂಡದ ಪರ ಆಡಲು ಸಿದ್ಧವಾಗಿದ್ದಾರೆ. ಈ ವಿಚಾರವನ್ನು ಕ್ಲಬ್ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಸದ್ಯ ಸಾಗುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನ(County Championship) ಕೊನೆಯ ಐದು ಪಂದ್ಯಗಳಲ್ಲಿ ರಹಾನೆ ಬ್ಯಾಟ್ ಬೀಸಲಿದ್ದಾರೆ.
36ರ ಹರೆಯದ ರಹಾನೆ ಅವರು ವಿಯಾನ್ ಮುಲ್ಡರ್ ಅವರ ಸ್ಥಾನಕ್ಕೆ ಲೀಸೆಸ್ಟರ್‌ಶೈರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮುಲ್ಡರ್ ಅವರು ಮುಂದಿನ ಆಗಸ್ಟ್ ವೇಳೆ ದಕ್ಷಿಣ ಆಫ್ರಿಕಾ ತಂಡದ ಪರ ವೆಸ್ಟ್‌ಇಂಡೀಸ್‌ಗೆ ಪ್ರಯಾಣಿಸಲಿದ್ದಾರೆ. ಹೀಗಾಗಿ ಈ ಸ್ಥಾನದಲ್ಲಿ ರಹಾನೆ ಆಡಲಿದ್ದಾರೆ. ವಿಶ್ವದ ಹಲವು ಕ್ರಿಕೆಟ್ ಆಟಗಾರರು ಕೂಡ ತಮ್ಮ ಕ್ರಿಕೆಟ್ ಪ್ರದರ್ಶನ ಕುಂಠಿತಗೊಂಡಾಗ ಕೌಂಟಿ ಆಡಿ ಮತ್ತೆ ಫಾರ್ಮ್ ಕಂಡುಕೊಂಡಿದ್ದಾರೆ.
ರಹಾನೆ ಭಾರತ ಪರ 85 ಟೆಸ್ಟ್ ಪಂದ್ಯಗಳನ್ನಾಡಿ 5077 ರನ್ ಬಾರಿಸಿದ್ದಾರೆ. 12 ಶತಕ ಬಾರಿಸಿದ್ದಾರೆ. 2016ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 188 ರನ್ ಪೇರಿಸಿರುವುದು ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್ ಆಗಿದೆ. ಈ ಹಿಂದೆ ಆಸ್ಟ್ರೇಲಿಯ ನೆಲದಲ್ಲಿ ಭಾರತ 36 ರನ್ಗೆ ಕುಸಿದು ಮುಖಭಂಗ ಅನುಭವಿಸಿದ್ದ ಸಂದರ್ಭದಲ್ಲಿ ಹಂಗಾಮಿಯಾಗಿ ತಂಡದ ನಾಯಕತ್ವ ವಹಿಸಿದ ರಹಾನೆ ಮುಂದಿನ ಪಂದ್ಯದಲ್ಲಿ ಶತಕ ಬಾರಿಸಿ ತಂಡವನ್ನು ಗೆಲುವಿನ ಹಾದಿಗೆ ತಂದು ಬಳಿಕ ಐತಿಹಾಸಿಕ ಸರಣಿ ಗೆಲುವು ತಂದಿತ್ತ ಖ್ಯಾತಿಯನ್ನು ಹೊಂದಿದ್ದಾರೆ. ರಹಾನೆ ಭಾರತ ಪರ ಕೊನೆಯ ಟೆಸ್ಟ್ ಪಂದ್ಯ ಆಡಿದ್ದು 2023ರ ವಿಂಡೀಸ್ ಪ್ರವಾಸದಲ್ಲಿ ಇದಾದ ಬಳಿಕ ಅವರಿಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ.
ಇದನ್ನೂ ಓದಿ IND vs WI: ಜಿಂಕೆಯಂತೆ ಜಿಗಿದು ಕ್ಯಾಚ್ ಪಡೆದ ಅಜಿಂಕ್ಯ; ವಿಡಿಯೊ ವೈರಲ್
ಕೌಂಟಿಯಲ್ಲಿ ಉತ್ತಮ ಪ್ರದರ್ಶನ ತೋರಿದರೆ, ಮುಂಬರುವ ಬಾಂಗ್ಲಾದೇಶ ವಿರುದ್ಧದ ತವರಿನ ಟೆಸ್ಟ್ ಸರಣಿಯಲ್ಲಿ ರಹಾನೆ ತಂಡಕ್ಕೆ ಆಯ್ಕೆಯಾಗಬಹುದು. ಭಾರತ ಮತ್ತು ಬಾಂಗ್ಲಾ ನಡುವಣ ಟೆಸ್ಟ್ ಸರಣಿ ಸೆಪ್ಟೆಂಬರ್ನಲ್ಲಿ ನಡೆಯಲಿದೆ. 2 ಪಂದ್ಯಗಳ ಟೆಸ್ಟ್ ಸರಣಿ ಇದಾಗಿದೆ.
ಕೊಹ್ಲಿ ಕ್ಲಾಸ್ ಪ್ಲೇಯರ್ ಎಂದ ನಾಯಕ ರೋಹಿತ್
ಪ್ರೊವಿಡೆನ್ಸ್: ಈ ಬಾರಿಯ ಐಪಿಎಲ್‌ನಲ್ಲಿ ರನ್ ಪ್ರವಾಹ ಹರಿಸಿದ ವಿರಾಟ್ ಕೊಹ್ಲಿ(Virat Kohli) ಅವರು ಹಾಲಿ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿನ್ನೂ(T20 World Cup 2024) ಗುಣಮಟ್ಟದ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಸಹಜವಾಗಿಯೇ ಇದು ಅಗ್ರ ಕ್ರಮಾಂಕದ ಮೇಲೆ ಒತ್ತಡ ತರುತ್ತಿದೆ. ಇಂಗ್ಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿಯೂ ಕೊಹ್ಲಿ ಒಂದಂಕಿಗೆ ಸೀಮಿತರಾಗಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಆದರೆ, ತಂಡದ ನಾಯಕ ರೋಹಿತ್ ಶರ್ಮ(Rohit Sharma) ಅವರು ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ.
ಪಂದ್ಯದ ಬಳಿಕ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರೋಹಿತ್, ಖಂಡಿತವಾಗಿಯೂ ವಿರಾಟ್ ಓರ್ವ ಕ್ಲಾಸ್ ಪ್ಲೇಯರ್, ಅವರೊಬ್ಬ ಬಿಗ್ ಮ್ಯಾಚ್ ಪ್ಲೇಯರ್. ಪ್ರತಿಯೊಬ್ಬ ಆಟಗಾರನು ತನ್ನ ವೃತ್ತಿಜೀವನದಲ್ಲಿ ಏರಿಳಿತ ಕಾಣುವುದು ಸಹಜ. ಆದರೆ, ಕೊಹ್ಲಿ ವಿಷಯದಲ್ಲಿ ಫಾರ್ಮ್ ದೊಡ್ಡ ವಿಷಯವಲ್ಲ. ಅವರು ಫೈನಲ್ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ನನಗೆ ನಂಬಿಕೆ ಇದೆ ಫೈನಲ್ನಲ್ಲಿ ಅವರು ಶ್ರೇಷ್ಠ ಬ್ಯಾಟಿಂಗ್ ತೋರುವ ಮೂಲಕ ಎಲ್ಲ ಟೀಕೆಗಳಿಗೂ ಬ್ಯಾಟ್ನಿಂದಲೇ ಉತ್ತರಿಸಲಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿಗೆ ಬೆಂಬಲ ಸೂಚಿಸಿದರು.