IPL -2023 | ಪಂಜಾಬ್ ಕಿಂಗ್ಸ್‌ ತಂಡದಲ್ಲಿ ಅನಿಲ್‌ ಕುಂಬ್ಳೆ ಸ್ಥಾನಕ್ಕೆ ಬಂದರು ಹೊಸ ಹೆಡ್‌ ಕೋಚ್‌ - Vistara News

ಕ್ರಿಕೆಟ್

IPL -2023 | ಪಂಜಾಬ್ ಕಿಂಗ್ಸ್‌ ತಂಡದಲ್ಲಿ ಅನಿಲ್‌ ಕುಂಬ್ಳೆ ಸ್ಥಾನಕ್ಕೆ ಬಂದರು ಹೊಸ ಹೆಡ್‌ ಕೋಚ್‌

ಮುಂದಿನ ಆವೃತ್ತಿಯ ಐಪಿಎಲ್‌ಗೆ (IPL -2023) ಪಂಜಾಬ್‌ ಕಿಂಗ್ಸ್‌ ತಂಡದ ಹೆಡ್‌ ಕೋಚ್‌ ಅಗಿ ಆಸ್ಟ್ರೇಲಿಯಾದ ಕ್ರಿಕೆಟಿಗ ಟ್ರೆವರ್‌ ಬೇಲಿಸ್‌ ಆಯ್ಕೆಯಾಗಿದ್ದಾರೆ.

VISTARANEWS.COM


on

IPL- 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಹಾಲಿ : ಐಪಿಎಲ್‌ ಮುಂದಿನ ಆವೃತ್ತಿಗೆ ಪಂಜಾಬ್‌ ಕಿಂಗ್ಸ್‌ ತಂಡದ ಹೆಡ್ ಕೋಚ್‌ ಆಗಿ ಟ್ರೆವರ್‌ ಬೇಲಿಸ್‌ ನೇಮಕಗೊಂಡಿದ್ದಾರೆ. ಅನಿಲ್‌ ಕುಂಬ್ಳೆ ಅವರ ಗುತ್ತಿಗೆ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಹೊಸ ತರಬೇತುದಾರರನ್ನು ಫ್ರಾಂಚೈಸಿ ಘೋಷಣೆ ಮಾಡಿದೆ.

“ಪಂಜಾಬ್‌ ಕಿಂಗ್ಸ್‌ ತಂಡದ ಹೆಡ್‌ ಕೋಚ್‌ ಅಗಿ ನೇಮಕಗೊಂಡಿರುವುದಕ್ಕೆ ಹೆಮ್ಮೆಯಿದೆ. ಪ್ರತಿಭಾನ್ವಿತ ಆಟಗಾರರನ್ನು ಹೊಂದಿರುವ ತಂಡದಲ್ಲಿ ದೊಡ್ಡ ಮಟ್ಟದ ಯಶಸ್ಸು ಸಾಧಿಸಲು ಪಯತ್ನಿಸಲಾಗುವುದು,” ಎಂದು ಟ್ರೆವರ್‌ ತಮ್ಮ ಆಯ್ಕೆ ಕುರಿತು ಪ್ರತಿಕ್ರಿಯಿಸಿದ್ದಾರೆ.

ಟ್ರೆವರ್‌ ಬೇಲಿಸ್‌ ಅನುಭವಿ ಕೋಚ್‌ ಆಗಿದ್ದು ೨೦೧೯ರ ಏಕ ದಿನ ವಿಶ್ವ ಕಪ್‌ ಗೆದ್ದ ಇಂಗ್ಲೆಂಡ್ ತಂಡದ ಹೆಡ್‌ ಕೋಚ್‌ ಆಗಿದ್ದರು. ಅಂತೆಯೇ ೨೦೧೨ ಹಾಗೂ ೨೦೧೪ರಲ್ಲಿ ಐಪಿಎಲ್‌ ಗೆದ್ದ ಕೋಲ್ಕೊತಾ ನೈಟ್‌ ರೈಡರ್ಸ್‌ ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದರು. ಅದೂ ಅಲ್ಲದೆ, ಅವರ ತರಬೇತಿಯಲ್ಲಿ ಪಳಗಿದ್ದ ಸಿಡ್ನಿ ಸಿಕ್ಸರ್ ತಂಡವೂ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು.

ಬೇಲಿಸ್‌ ಅವರು ೨೦೨೦, ೨೦೨೧ರ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಹೆಡ್‌ ಕೋಚ್‌ ಆಗಿಯೂ ಕಾರ್ಯನಿರ್ವಹಿಸಿದ್ದರು. ಆದರೆ ಹೆಚ್ಚಿನ ಯಶಸ್ಸು ಗಳಿಸಿರಲಿಲ್ಲ. ಅತ್ತ ಅನಿಲ್‌ ಕುಂಬ್ಳೆ ಕೋಚಿಂಗ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡ ಸತತ ಮೂರು ಬಾರಿ ಪ್ಲೇ ಆಫ್‌ ಹಂತಕ್ಕೇರಲು ವಿಫಲಗೊಂಡಿತ್ತು.

ಇದನ್ನೂ ಓದಿ | Mumbai Indians | ಮುಂದಿನ ಆವೃತ್ತಿಯ ಐಪಿಎಲ್‌ಗೆ ಮುಂಬಯಿ ಇಂಡಿಯನ್ಸ್‌ ತಂಡಕ್ಕೆ ಬೌಷರ್‌ ಕೋಚ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

ICC Women’s T20 World Cup 2024: ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗೆ(ICC Women’s T20 World Cup 2024) ಶ್ರೀಲಂಕಾ(Sri Lanka Women’s T20) ಎರಡನೇ ಕ್ವಾಲಿಫೈಯರ್ ತಂಡವಾಗಿ ಅರ್ಹತೆ ಪಡೆದಿದೆ. ಎರಡನೇ ಸೆಮಿಫೈನಲ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ 15 ರನ್​ ಅಂತರದಿಂದ ಗೆಲುವು ಸಾಧಿಸಿ ಅರ್ಹತೆ ಪಡೆದುಕೊಂಡಿತು.

VISTARANEWS.COM


on

ICC Women’s T20 World Cup 2024
Koo

ದುಬೈ: ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿರುವ ಈ ವರ್ಷದ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗೆ(ICC Women’s T20 World Cup 2024) ಶ್ರೀಲಂಕಾ(Sri Lanka Women’s T20) ಎರಡನೇ ಕ್ವಾಲಿಫೈಯರ್ ತಂಡವಾಗಿ ಅರ್ಹತೆ ಪಡೆದಿದೆ. ಸ್ಕಾಟ್ಲೆಂಡ್‌ ಮೊದಲ ಕ್ವಾಲಿಫೈಯರ್ ತಂಡವಾಗಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಜತೆ ಶ್ರೀಲಂಕಾ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಎರಡನೇ ಸೆಮಿಫೈನಲ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ಕಣಕ್ಕಿಳಿದ್ದ ಲಂಕಾ ತಂಡ ಗೆಲುವು ಸಾಧಿಸುವ ಮೂಲಕ ಪ್ರಧಾನ ಸುತ್ತಿಗೆ ಅರ್ಹತೆ ಪಡೆದುಕೊಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಲಂಕಾ 6 ವಿಕೆಟ್​ಗೆ 149 ರನ್​ ಬಾರಿಸಿತು. ಈ ಮೊತ್ತವನ್ನು ದಿಟ್ಟವಾಗಿ ಒಂದು ಹಂತದ ವರೆಗೆ ಬೆನ್ನಟ್ಟಿಕೊಂಡು ಹೋದ ಯುಎಇ 7 ವಿಕೆಟ್​ಗೆ 134 ರನ್​ ಗಳಿಸಿ 15 ರನ್​ ಅಂತರದಿಂದ ಸೋಲೊಪ್ಪಿಕೊಂಡಿತು.

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. ಭಾನುವಾರ ಐಸಿಸಿ ಈ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದೆ. ಸೆಮಿಫೈನಲ್​ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್​ ಪಂದ್ಯ ಅಕ್ಟೋಬರ್​ 20 ರಂದು ಢಾಕಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್​ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್​ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿದೆ. ಮತ್ತೊಂದು ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಈ ಪಂದ್ಯ ಅಕ್ಟೋಬರ್​ 3 ರಂದು ನಡೆಯಲಿದೆ. ಎಲ್ಲಾ ಗುಂಪು ಪಂದ್ಯಗಳು ಸಿಲ್ಹೆಟ್‌ನಲ್ಲಿ ನಡೆಯಲಿದೆ. ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

Continue Reading

ಕ್ರೀಡೆ

Rohit Sharma: ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ರೋಹಿತ್​ ಶರ್ಮ!

Rohit Sharma: ರೋಹಿತ್​ ಶರ್ಮ ಈ ಬಾರಿಯ ಐಪಿಎಲ್​ನಲ್ಲಿ ಅಷ್ಟಾಗಿ ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿಲ್ಲ. ಆಡಿದ 11 ಇನಿಂಗ್ಸ್​ಗಳಿಂದ ಕೇವಲ 326 ರನ್​ ಮಾತ್ರ ಗಳಿಸಿದ್ದಾರೆ. ಅವರ ಈ ಬ್ಯಾಟಿಂಗ್​ ವೈಫಲ್ಯಕ್ಕೆ ನಾಯಕತ್ವ ಬದಲಾವಣೆಯೂ ಕೂಡ ಕಾರಣವಾಗಿರಬಹುದು

VISTARANEWS.COM


on

Rohit Sharma
Koo

ಮುಂಬಯಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಟಿ20 ವಿಶ್ವಕಪ್​ಗೆ ಮುನ್ನೆಚ್ಚರಿಕಾ ಕ್ರಮವಾಗಿ ಬೆನ್ನು ನೋವಿನಿಂದ ಬಳಲುತ್ತಿರುವ ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಅವರು ಇನ್ನುಳಿದ ಮೂರು ಐಪಿಎಲ್​(IPL 2024) ಪಂದ್ಯಗಳಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಇಂದು ನಡೆಯುವ ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad) ಎದುರಿನ ಪಂದ್ಯದಲ್ಲಿಯೂ ರೋಹಿತ್​ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಕಳೆದ ಕೆಕೆಆರ್​ ವಿರುದ್ಧದ ಪಂದ್ಯದ ವೇಳೆ ರೋಹಿತ್​ಗೆ ಸಣ್ಣ ಮಟ್ಟಿನ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆ ಪಂದ್ಯದಲ್ಲಿ ಕೇವಲ ಇಂಪ್ಯಾಕ್ಟ್‌ ಆಟಗಾರನಾಗಿ ಬ್ಯಾಟಿಂಗ್​ ಮಾತ್ರ ಮಾಡಿದ್ದರು. ಫೀಲ್ಡಿಂಗ್​ ಮಾಡಿರಲಿಲ್ಲ. ರೋಹಿತ್‌ ಗಾಯದ ಬಗ್ಗೆ ಪಂದ್ಯ ಮುಕ್ತಾಯದ ಬಳಿಕ ತಂಡದ ಹಿರಿಯ ಸ್ಪಿನ್ನರ್‌ ಚಾವ್ಲಾ ಮಾಹಿತಿ ನೀಡಿದ್ದರು. ಬೆನ್ನು ನೋವು ಸಣ್ಣ ಪ್ರಮಾಣದ್ದಾಗಿದ್ದು ಯಾವುದೇ ಆತಂಕ ಪಡಬೇಕಿಲ್ಲ ಎಂದಿದ್ದರು.

ರೋಹಿತ್​ ಶರ್ಮ ಈ ಬಾರಿಯ ಐಪಿಎಲ್​ನಲ್ಲಿ ಅಷ್ಟಾಗಿ ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿಲ್ಲ. ಆಡಿದ 11 ಇನಿಂಗ್ಸ್​ಗಳಿಂದ ಕೇವಲ 326 ರನ್​ ಮಾತ್ರ ಗಳಿಸಿದ್ದಾರೆ. ಅವರ ಈ ಬ್ಯಾಟಿಂಗ್​ ವೈಫಲ್ಯಕ್ಕೆ ನಾಯಕತ್ವ ಬದಲಾವಣೆಯೂ ಕೂಡ ಕಾರಣವಾಗಿರಬಹುದು. 5 ಬಾರಿ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದರೂ ಏಕಾಏಕಿ ತಂಡದ ನಾಯಕತ್ವದಿಂದ ಕೆಳಗಿಳಿಸಿದ ಅಸಮಾಧಾನವೂ ಇರಬಹುದು. ಮುಂದಿನ ಆವೃತ್ತಿಯಲ್ಲಿ ಮುಂಬೈ ತೊರೆದು ಬೇರೆ ತಂಡದ ಪರ ಆಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ಇಂದು ನಡೆಯುವ ಪಂದ್ಯದಲ್ಲಿ ಮುಂಬೈ ಸಂಘಟಿತ ಪ್ರದರ್ಶನ ತೋರದೇ ಹೋದಲ್ಲಿ ಈ ಪಂದ್ಯದಲ್ಲಿಯೂ ಸೋಲು ಕಟ್ಟಿಟ್ಟ ಬುತ್ತಿ ಎನ್ನಲಡ್ಡಿಯಿಲ್ಲ. ನೂತನ ನಾಯಕ ಹಾರ್ದಿಕ್​ ಪಾಂಡ್ಯ, ಸೂರ್ಯಕುಮಾರ್​ ಯಾದವ್​, ಇಶಾನ್​ ಕಿಶನ್​, ಟಿಮ್​ ಡೇವಿಡ್​ ಹೀಗೆ ಘಟಾನುಘಟಿ ಆಟಗಾರರು ಪ್ರತಿ ಪಂದ್ಯದಲ್ಲಿಯೂ ಘೋರ ವೈಫಲ್ಯ ಎದುರಿಸುತ್ತಿದ್ದಾರೆ. ಬೌಲಿಂಗ್​ನಲ್ಲಿ ಜಸ್​ಪ್ರೀತ್​ ಬುಮ್ರಾ ಹೊರತುಪಡಿಸಿದ ಉಳಿದೆಲ್ಲರು ಲೆಕ್ಕಭರ್ತಿಗೆ ಆಡಿದಂತೆ ಆಡುತ್ತಿದ್ದಾರೆ.

ಇದನ್ನೂ ಓದಿ IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

ಯಾರೂ ಕೂಡ ತಂಡಕ್ಕಾಗಿ ಹಾಗೂ ಉತ್ಸಾಹ ಭರಿತವಾಗಿ ಆಡುತ್ತಿಲ್ಲ. 11 ಪಂದ್ಯಗಳಿಂದ ಕೇವಲ 3 ಗೆಲುವು ಸಾಧಿಸಿ 6 ಅಂಕದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಕಳೆದ 16 ಆವೃತ್ತಿಯ ಐಪಿಎಲ್​ ಟೂರ್ನಿಯನ್ನು ನೋಡುವುದಾದರೆ ಮುಂಬೈ ಈ ಸ್ಥಿತಿ ತಲುಪಿದ್ದು ಇದೇ ಮೊದಲು.

ಸನ್​ರೈಸರ್ಸ್​ ಹೈದರಾಬಾದ್​ಗೆ ಇದು ಮಹತ್ವದ ಪಂದ್ಯ. ಸದ್ಯ 12 ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದೆ. ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅಗತ್ಯ. ಕಮಿನ್ಸ್​ ಪಡೆ ಕಳೆದ ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಹೀಗಾಗಿ ತಂಡಕ್ಕೆ ಲಕ್​ ಕೂಡ ಇದೆ. ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

T20 World Cup 2024: ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿದ್ದು ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯಗಳಿಗೆ ಭಯೋತ್ಪಾದಕ ದಾಳಿಯ ಎಚ್ಚರಿಕೆ ಬಂದಿರುವುದಾಗಿ ವರದಿಯಾಗಿದೆ.

VISTARANEWS.COM


on

T20 World Cup 2024
Koo

ಬಾರ್ಬಡಾಸ್​: ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್​ ಪಂದ್ಯಾವಳಿಗೆ(T20 World Cup 2024) ಪಾಕಿಸ್ತಾನದ ಉಗ್ರರಿಂದ ದಾಳಿಯ ಬೆದರಿಕೆಯೊಂದು(Terror Threat to T20 World Cup) ಬಂದಿರುವುದಾಗಿ ವರದಿಯಾಗಿದೆ. ಕೆರಿಬಿಯನ್ ದ್ವೀಪಗಳ ಮಾಧ್ಯಮ ವರದಿಗಳ ಪ್ರಕಾರ ಟೂರ್ನಿಯ ಮೊದಲ ಪಂದ್ಯ ನಡೆಯುವ ಪ್ರದೇಶದಲ್ಲಿ ಭಯೋತ್ಪಾದಕ ಎಚ್ಚರಿಕೆಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದೆ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಈ ಬೆದರಿಕೆ ಉತ್ತರ ಪಾಕಿಸ್ತಾನದಿಂದ ಬಂದಿದೆ ಎಂದು ತಿಳಿಸಿದೆ.

ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿವೆ, ಇದರಲ್ಲಿ ಅಫ್ಘಾನಿಸ್ತಾನ-ಪಾಕಿಸ್ತಾನ ಉಗ್ರರ ಅಡಗು ತಾಣಗಳಿಂದ ವೀಡಿಯೊ ಸಂದೇಶಗಳ ಮೂಲಕ ಹಲವಾರು ದೇಶಗಳಲ್ಲಿ ದಾಳಿ ನಡೆಸುವ ಮತ್ತು ಈ ಉಗ್ರ ಸಂಚಿನಲ್ಲಿ ಬೆಂಬಲ ನೀಡಲು ಒತ್ತಾಯಿಸಿರುವುದಾಗಿ ಕ್ರಿಕ್‌ಬಜ್‌ ತನ್ನ​ ವರದಿಯಲ್ಲಿ ತಿಳಿಸಿದೆ.

“ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ ಮತ್ತು ನಾವು ಸಮಗ್ರ ಮತ್ತು ದೃಢವಾದ ಭದ್ರತಾ ಯೋಜನೆಯನ್ನು ಹೊಂದಿದ್ದೇವೆ ಎಂದು ನಾವು ಎಲ್ಲ ಪಾಲುದಾರರಿಗೆ ಭರವಸೆ ನೀಡಲು ಬಯಸುತ್ತೇವೆ” ಎಂದು ವೆಸ್ಟ್​ ಇಂಡೀಸ್​ ಕ್ರಿಕೆಟ್​ ಬೋರ್ಡ್​ ಅಧ್ಯಕ್ಷ ಜಾನಿ ಗ್ರೇವ್ಸ್ ಹೇಳಿದರು.

“ನಾವು ಆತಿಥೇಯ ದೇಶಗಳು ಮತ್ತು ನಗರಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇವೆ ಮತ್ತು ನಮ್ಮ ದೇಶದಲ್ಲಿ ನಿಗದಿಯಾದ ಪಂದ್ಯಾವಳಿಗೆ ಯಾವುದೇ ಅಪಾಯವಾಗದಂತೆ ಸೂಕ್ತವಾದ ಯೋಜನೆಗಳು ಜಾರಿಯಲ್ಲಿವೆ” ಎಂದು ಗ್ರೇವ್ಸ್ ಹೇಳಿರುವುದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ. ವೆಸ್ಟ್ ಇಂಡೀಸ್‌ನಲ್ಲಿ ಆಂಟಿಗುವಾ ಬಾರ್ಬುಡಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟ್ರಿನಿಡಾಡ್ ಮತ್ತು ಟೊಬಾಗೊ ಸೇರಿದಂತೆ ಆರು ಸ್ಥಳಗಳಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಕ್ರೀಡೆ

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Sunil Narine: ಬಿರುಸಿನ ಬ್ಯಾಟಿಂಗ್​ ನಡೆಸಿದ ನರೈನ್​ ಕೇವಲ 39 ಎಸೆತಗಳಿಂದ 6 ಬೌಂಡರಿ ಮತ್ತು 7 ಸೊಗಸಾದ ಸಿಕ್ಸರ್ ಸಿಡಿಸಿ 81 ರನ್​ ಚಚ್ಚಿದರು. ಈ 7 ಸಿಕ್ಸರ್​ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು.

VISTARANEWS.COM


on

Sunil Narine
Koo

ಲಕ್ನೋ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿರುವ ಕೆಕೆಆರ್(Kolkata Knight Riders)​ ತಂಡದ ಎಡಗೈ ಆಟಗಾರ ಸುನೀಲ್​ ನರೈನ್(Sunil Narine)​ ಲಕ್ನೋ(Lucknow Super Giants) ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 7 ಸಿಕ್ಸರ್​ ಬಾರಿಸುವ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಭಾನುವಾರ ರಾತ್ರಿ ನಡೆದ ಐಪಿಎಲ್​ನ 54ನೇ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ ನರೈನ್​ ಕೇವಲ 39 ಎಸೆತಗಳಿಂದ 6 ಬೌಂಡರಿ ಮತ್ತು 7 ಸೊಗಸಾದ ಸಿಕ್ಸರ್ ಸಿಡಿಸಿ 81 ರನ್​ ಚಚ್ಚಿದರು. ಈ 7 ಸಿಕ್ಸರ್​ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು. ಇದಕ್ಕೂ ಮುನ್ನ ಸನ್​ರೈಸರ್ಸ್​ ಹೈದರಾಬಾದ್​ ತಂಡದ ಹೆನ್ರಿಚ್​ ಕ್ಲಾಸೆನ್​(31 ಸಿಕ್ಸರ್​) ಅಗ್ರಸ್ಥಾನದಲ್ಲಿದ್ದರು. ಇದೀಗ ನರೈನ್​ 32 ಸಿಕ್ಸರ್​ಗಳೊಂದಿಗೆ ಕ್ಲಾಸೆನ್​ ಅವರನ್ನು ಹಿಂದಿಕ್ಕಿದ್ದಾರೆ.

​ಇಂದು ನಡೆಯುವ ಪಂದ್ಯದಲ್ಲಿ ಹೈದರಾಬಾದ್​ ತಂಡ ಮುಂಬೈ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಕ್ಲಾಸೆನ್​ 2 ಸಿಕ್ಸರ್​ ಸಿಡಿಸಿದರೆ ಮತ್ತೆ ತಮ್ಮ ಅಗ್ರಸ್ಥಾನವನ್ನು ವಶಪಡಿಸಿಕೊಳ್ಳಲಿದ್ದಾರೆ. ಸದ್ಯ ನರೈನ್​ ಮತ್ತು ಕ್ಲಾಸೆನ್​ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ. 28 ಸಿಕ್ಸರ್​ ಬಾರಿಸಿರುವ ಅಭಿಷೇಕ್​ ಶರ್ಮ ಮೂರನೇ ಸ್ಥಾನದಲ್ಲಿದ್ದಾರೆ. ಶಿವಂ ದುಬೆ(26 ಸಿಕ್ಸರ್​) ನಾಲ್ಕನೇ ಸ್ಥಾನಿಯಾಗಿದ್ದಾರೆ.

ಇದನ್ನೂ ಓದಿ IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

ಅಗ್ರಸ್ಥಾನಕ್ಕೆ ಜಿಗಿದ ಕೆಕೆಆರ್​


ಇದೇ ಮೊದಲ ಬಾರಿಗೆ ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ದಾಖಲಾದ ಬೃಹತ್​ ಮೊತ್ತದ ಮೇಲಾಟದಲ್ಲಿ ಕೆಕೆಆರ್​ ತಂಡ ಲಕ್ನೋ ವಿರುದ್ಧ 98 ರನ್​ಗಳ ಬೃಹತ್​ ಜಯ ಸಾಧಿಸಿತು. ಜತೆಗೆ ಅಂಕಪಟ್ಟಿಯಲ್ಲಿ ರಾಜಸ್ಥಾನ್​ ರಾಯಲ್ಸ್​ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿತು. ಈ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ತುತ್ತಾಯಿತು.

Continue Reading
Advertisement
Viral News
ವೈರಲ್ ನ್ಯೂಸ್13 mins ago

Viral News: ಅವಳಿ-ತ್ರಿವಳಿ ಅಲ್ಲ.. ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

Kanyakumari Tour
ಪ್ರವಾಸ13 mins ago

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

Cauvery Theatre bengaluru another single screen close
ಸಿನಿಮಾ23 mins ago

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Bomb Threat
ದೇಶ28 mins ago

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Lok Sabha Elections-2024
Lok Sabha Election 202435 mins ago

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ICC Women’s T20 World Cup 2024
ಕ್ರೀಡೆ35 mins ago

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

Road Accident
ಕ್ರೈಂ37 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Prajwal Revanna Case HD Revanna asks NO to sign voluntary statement in kidnapping case
ಕ್ರೈಂ39 mins ago

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Crude Bomb
ದೇಶ48 mins ago

Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

Shine Shetty follows diet and fitness
ಕಿರುತೆರೆ58 mins ago

Shine Shetty: ಸಖತ್‌ ಫಿಟ್‌ ಆದ ‘ಬಿಗ್ ಬಾಸ್‌’ ವಿನ್ನರ್ ಶೈನ್ ಶೆಟ್ಟಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ17 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ19 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ19 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌