ಬ್ರಿಸ್ಬೇನ್ : ವೇಗದ ಬೌಲರ್ ಮೊಹಮ್ಮದ್ ಶಮಿ ವಿಶ್ವ ಕಪ್ ಆಡಲಿರುವ ಭಾರತ ತಂಡ ಸೇರಿಕೊಂಡ ಬೆನ್ನಲ್ಲೇ, ಭಾರತದ ಮತ್ತೊಬ್ಬ ವೇಗಿ ಮೊಹಮ್ಮದ್ ಸಿರಾಜ್ ಕೂಡ ಆಸ್ಟ್ರೇಲಿಯಾ ತಲುಪಿದ್ದಾರೆ. ಅಲ್ಲಿ ಅವರು ಟೀಮ್ ಇಂಡಿಯಾದ ಮೀಸಲು ಬೌಲರ್ ಆಗಿ ಉಳಿಯಲಿದ್ದು, ನೆಟ್ ಬೌಲರ್ ಆಗಿಯೂ ಸೇವೆ ಸಲ್ಲಿಸಲಿದ್ದಾರೆ.
ಜಸ್‌ಪ್ರಿತ್ ಬುಮ್ರಾ ಅವರ ಅಲಭ್ಯತೆಯ ಹಿನ್ನೆಲೆಯಲ್ಲಿ ಮೊಹಮ್ಮದ್ ಶಮಿ ೧೫ ಸದಸ್ಯರನ್ನು ಒಳಗೊಂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಅದಕ್ಕಿಂತ ಮೊದಲು ಅವರು ತಂಡದ ಮೀಸಲು ಬೌಲರ್ ಆಗಿದ್ದರು. ಅವರು ತಂಡ ಸೇರುತ್ತಿದ್ದಂತೆ ಮೊಹಮ್ಮದ್ ಸಿರಾಜ್‌ಗೆ ಮೀಸಲು ಬೌಲರ್ ಸ್ಥಾನ ಲಭಿಸಿತು.
ಮೊಹಮ್ಮದ್ ಸಿರಾಜ್ ಅವರು ತವರಿನಲ್ಲಿ ಕೆಲವು ವಾರಗಳ ಹಿಂದೆ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಆಡಿದ್ದರು. ಅದು ಮುಗಿಸಿ ವಿಶ್ರಾಂತಿ ಪಡೆದುಕೊಂಡ ಅವರೀಗ ಟೀಮ್ ಇಂಡಿಯಾ ಸೇರಿಕೊಂಡಿದ್ದಾರೆ.
ತಂಡ : ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್.
ಇದನ್ನೂ ಓದಿ | T20 World Cup | ವಿಶ್ವ ಕಪ್ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಟೀಮ್ ಇಂಡಿಯಾ ಆಟಗಾರು ಯಾರು?