ನ್ಯೂಯಾರ್ಕ್: ಕಳೆದ ಭಾನುವಾರ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(T20 World Cup) ಪಂದ್ಯದ ವೇಳೆ ವಿರಾಟ್ ಕೊಹ್ಲಿಯ ಪತ್ನಿ ಅನುಷ್ಕಾ ಶರ್ಮಾ(Anushka Sharma) ತಾಳ್ಮೆ ಕಳೆದುಕೊಂಡು(Anushka Sharma Loses Her Cool) ವ್ಯಕ್ತಿಯೊಬ್ಬರಿಗೆ ಬೈದಿರುವ ವಿಡಿಯೊವೊಂದು ವೈರಲ್ ಆಗಿದೆ. ಗ್ಯಾಲರಿಯಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಅನುಷ್ಕಾ ಒಬ್ಬ ವ್ಯಕ್ತಿಯೊಂದಿಗೆ ಕೋಪದಿಂದ ಮಾತನಾಡುತ್ತಿರುವುದು ಈ ವಿಡಿಯೊದಲ್ಲಿ ಕಂಡುಬಂದಿದೆ. ಯಾವ ಕಾರಣಕ್ಕೆ ಅನುಷ್ಕಾ ತಾಳ್ಮೆ ಕಳೆದುಕೊಳ್ಳಲು ಕಾರಣ ಏನೆಂಬುದು ತಿಳಿದಿಲ್ಲ.
ವಿರಾಟ್ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಅನುಷ್ಕಾ ಅವರು ಪ್ರತಿ ಪಂದ್ಯದ ವೇಳೆ ಕಾಣಿಸಿಕೊಳ್ಳುತ್ತಾರೆ. ಕೊಹ್ಲಿ ಶತಕ ಬಾರಿಸಿದಾಗ, ಉತ್ತಮ ಫೀಲ್ಡಿಂಗ್ ಮಾಡಿದಾಗ ಗ್ಯಾಲರಿಯಲ್ಲಿ ಎದು ನಿಂತು ಚಪ್ಪಾಳೆ ತಟ್ಟುತ್ತಾ ಬೆಂಬಲ ಸೂಚಿಸುತ್ತಿರುತ್ತಾರೆ. ಹಿಂದೆ ಅನೇಕ ಬಾರಿ ಅನುಷ್ಕಾ ಮೈದಾನದಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್ ಆಗಿತ್ತು.
ಕಳೆದ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ (Australia) ವಿರುದ್ಧ ಸೋತ ಬೇಸರದಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಂಡತಿ ಇರುವ ಸ್ಟ್ಯಾಂಡ್‌ನತ್ತ ಹೋದಾಗ ಅನುಷ್ಕಾ ಶರ್ಮಾ ವಿರಾಟ್ ಅವರನ್ನು ತಬ್ಬಿಕೊಂಡು ಸಮಾಧಾನ ಮಾಡಿದ್ದರು. ಈ ಫೋಟೊ ವೈರಲ್ ಆಗಿತ್ತು.
ಇದನ್ನೂ ಓದಿ Virat Kohli: ಟಿ20 ವಿಶ್ವಕಪ್ನಲ್ಲಿ ಮೊದಲ ಗೋಲ್ಡನ್ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್ ಕೊಹ್ಲಿ
ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.
“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.