Site icon Vistara News

Virat And Anushka: ಶತಕ ವಂಚಿತ ಕೊಹ್ಲಿಗೆ ಆತ್ಮವಿಶ್ವಾಸ ತುಂಬಿದ ಪತ್ನಿ ಅನುಷ್ಕಾ ಶರ್ಮ

anushka sharma and virat kohli

ಧರ್ಮಶಾಲಾ: ನ್ಯೂಜಿಲ್ಯಾಂಡ್(India vs NZ World Cup Match)​ ವಿರುದ್ಧ ಭಾನುವಾರ ನಡೆದ ವಿಶ್ವಕಪ್​ ಲೀಗ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ಕೇವಲ 5 ರನ್​ ಹಿನ್ನಡೆಯಲ್ಲಿ ಶತಕ ಬಾರಿಸುವ ಅವಕಾಶವನ್ನು ಕಳೆದುಕೊಂಡರು. ಒಂದೊಮ್ಮೆ ಅವರು ಶತಕ ಬಾರಿಸುತ್ತಿದ್ದರೆ ಸಚಿನ್​ ತೆಂಡೂಲ್ಕರ್​ ಅವರ ಏಕದಿನ ಕ್ರಿಕೆಟ್​ನ ಸಾರ್ವಕಾಲಿಕ 49 ಶತಕದ ದಾಖಲೆಯನ್ನು ಸರಿಗಟ್ಟುತ್ತಿದ್ದರು. ಶತಕ ವಂಚಿತರಾದರೂ ಪತಿಯ ಆಟಕ್ಕೆ ಪತ್ನಿ ಅನುಷ್ಕಾ ಶರ್ಮ(Anushka Sharma) ಮೆಚ್ಚುಗೆ ಸೂಚಿಸಿ ಆತ್ಮವಿಶ್ವಾಸ ಕುಗ್ಗದಂತೆ ಮಾಡಿದ್ದಾರೆ. ಅನುಷ್ಕಾ ಅವರ ಮೆಚ್ಚುಗೆಯ ಪೋಸ್ಟ್​ ವೈರಲ್​ ಆಗಿದೆ.

ಕಿವೀಸ್​ ನೀಡಿದ 274 ರನ್​ಗಳ ಗುರಿ ಬೆನ್ನಟ್ಟುವ ವೇಳೆ ಕೊಹ್ಲಿ ಉತ್ತಮ ಬ್ಯಾಟಿಂಗ್​ ನಡೆಸಿದರು. ಇನ್ನೇನು ಶತಕ ಬಾರಿಸಿ ಸಚಿನ್​ ಅವರ ದಾಖಲೆಯನ್ನು ಸರಿಗಟ್ಟುತ್ತಾರೆ ಎನ್ನುವಷ್ಟರಲ್ಲಿ 95 ರನ್​ಗೆ ವಿಕೆಟ್​ ಕೈಚೆಲ್ಲಿದರು. ಮ್ಯಾಟ್ ಹೆನ್ರಿ ಅವರ ಎಸೆತದಲ್ಲಿ ಸಿಕ್ಸರ್ ಬಾರಿಸಲು ಯತ್ನಿಸಿದ ಕೊಹ್ಲಿ ಲಾಂಗ್​ ಆನ್​ನಲ್ಲಿದ್ದ ಗ್ಲೆನ್ ಫಿಲಿಪ್ಸ್ ಅವರ ಕೈಗೆ ಕ್ಯಾಚ್ ನೀಡಿ ವಿಕೆಟ್ ಕಳೆದುಕೊಂಡರು.

ಶತಕ ತಪ್ಪಿಸಿಕೊಂಡಿದ್ದರೂ, ಅನುಷ್ಕಾ ಶರ್ಮಾ ಕೊಹ್ಲಿ ಬಗ್ಗೆ ಹೆಮ್ಮೆಪಟ್ಟಿದ್ದಾರೆ. ಕೊಹ್ಲಿ ಬ್ಯಾಟಿಂಗ್​ನ ಫೋಟೊ ಮತ್ತು ವೀಡಿಯೊವನ್ನು ಸಾಮಾಜಿಕ ಜಾಲತಾಣವಾದ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿ “ನಿಮ್ಮ ಬಗ್ಗೆ ಯಾವಾಗಲೂ ಹೆಮ್ಮೆಯಿದೆ” ಎಂದು ಹೃದಯದ ಲವ್​ ಎಮೋಜಿಯನ್ನು ಹಾಕಿದ್ದಾರೆ. ಇನ್ನೊಂದು ಪೋಸ್ಟ್​ನಲ್ಲಿ ನಿಮ್ಮ ಚೇಸಿಂಗ್​ ಚಂಡಮಾರುತದಂತೆ ಇರುತ್ತದೆ ಎಂದು ಮೆಚ್ಚುಗೆ ಸೂಚಿಸಿ ಶತಕ ಕಳೆದುಕೊಂಡ ಬೇಸರದಿಂದ ಹೊರಬರುವಂತೆ ಮಾಡಿದ್ದಾರೆ.

ಇದನ್ನೂ ಓದಿ IND vs NZ: 2 ಕ್ಯಾಚ್​ ಹಿಡಿದು ದಾಖಲೆ ಬರೆದ ಕಿಂಗ್​ ಕೊಹ್ಲಿ; ದಿಗ್ಗಜ ಆಟಗಾರನ ದಾಖಲೆ ಉಡೀಸ್​

ಅನುಷ್ಕಾ ಶರ್ಮ ಪೋಸ್ಟ್​

ದ್ವಿತೀಯ ಮಗುವಿನ ನಿರೀಕ್ಷೆಯಲ್ಲಿ ವಿರುಷ್ಕಾ ದಂಪತಿ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರ ಡಿ11ರಂದು ವಿವಾಹವಾಗಿದ್ದರು. 2021ರ ಜನವರಿಯಲ್ಲಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಮಗುವಿಗೆ ವಾಮಿಕಾ ಎಂದು ಹೆಸರಿಡಲಾಗಿದೆ. ಇದೀಗ ಅನುಷ್ಕಾ ಗರ್ಭಿಣಿಯಾಗಿದ್ದು ದ್ವಿತೀಯ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅನುಷ್ಕಾ ಮುಂಬೈಯ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ ಎನ್ನಲಾಗಿದೆ. ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ತಕ್ಷಣ ವಿರಾಟ್​ ಅವರ ಅಭಿಮಾನಿಗಳು ಪ್ರಿನ್ಸ್​ ಕಿಂಗ್​ ಕೊಹ್ಲಿ ನೋಡಲು ಕಾತರವಾಗಿದ್ದೇವೆ ಎಂದು ಕಮೆಂಟ್​ ಮಾಡಲಾರಂಭಿಸಿದ್ದಾರೆ.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

Exit mobile version