ಮುಂಬಯಿ: ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದ ಅರ್ಜುನ್ ತೆಂಡೂಲ್ಕರ್(Arjun Tendulkar) ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಆದರೆ ಅಕ್ಕ ಸಾರಾ ತೆಂಡೂಲ್ಕರ್ ತಮ್ಮನ ಸಾಧನೆಗೆ ವಿಭಿನ್ನವಾಗಿ ಶುಭ ಹಾರೈಸಿದ್ದಾರೆ.
ಮುಂಬೈ ತಂಡದ ಪರ ಅವಕಾಶ ಸಿಗದ ಕಾರಣ ಈ ಋತುವಿನ ರಣಜಿ ಕ್ರಿಕೆಟ್ ಟ್ರೋಫಿಯಲ್ಲಿ ಗೋವಾ ಪರ ಆಡಿದ ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ಪಂದ್ಯದಲ್ಲಿಯೇ ರಾಜಸ್ಥಾನ ವಿರುದ್ಧ 120 ರನ್ ಸಿಡಿಸಿ ಅಪ್ಪ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಸರಿಗಟ್ಟಿದರು. ಸಚಿನ್ 1988ರಲ್ಲಿ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಸಿಡಿಸಿದ್ದರು.
ಅರ್ಜುನ್ ಶತಕವನ್ನು ಕೊಂಡಾಡಿರುವ ಸಾರಾ ತೆಂಡೂಲ್ಕರ್, ನಿನ್ನ ಎಲ್ಲ ಶ್ರಮಕ್ಕೆ ಪ್ರತಿಫಲವಿದೆ. ತಾಳ್ಮೆಯೂ ನಿಧಾನವಾಗಿ ಫಲ ನೀಡುತ್ತಿದೆ. ಇದು ಆರಂಭ ಮಾತ್ರ. ನಾನು ನಿನ್ನ ಅಕ್ಕನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ” ಎಂದು ತನ್ನ ಇನ್ಸ್ರಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಚೊಚ್ಚಲ ಪಂದ್ಯದಲ್ಲಿ ಶತಕ ಬಾರಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಅರ್ಜುನ್ ತೆಂಡೂಲ್ಕರ್ ಮುಂದಿನ ಇನಿಂಗ್ಸ್ನಲ್ಲಿಯೂ ಉತ್ತಮ ಪ್ರದರ್ಶನ ತೋರಿದರೆ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾ ಪರ ಆಡುವ ಅವಕಾಶ ಸಿಗುವ ಸಾಧ್ಯತೆಯಿದೆ.
ಇದನ್ನೂ ಓದಿ | Arjun Tendulkar | ಅಪ್ಪನಂತೆ ಚೊಚ್ಚಲ ರಣಜಿ ಪಂದ್ಯದಲ್ಲೇ ಶತಕ ಸಿಡಿಸಿದ ಅರ್ಜುನ್ ತೆಂಡೂಲ್ಕರ್!