ಇಂದೋರ್: ವೈಯಕ್ತಿಕ ಕಾರಣ ನೀಡಿ ಅಫಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಿಂದ ಹೊರಗುಳಿದಿದ್ದ ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ(virat kohli) ಮತ್ತೆ ಭಾರತ ತಂಡ ಸೇರಿದ್ದಾರೆ. ಇಂದೋರ್ನಲ್ಲಿ ನಡೆಯಲಿರುವ ದ್ವಿತೀಯ ಟಿ20 ಪಂದ್ಯದಲ್ಲಿ(India vs Afghanistan, 2nd T20I) ಅವರು ಕಣಕ್ಕಿಳಿಯಲಿದ್ದಾರೆ.
ವಿರಾಟ್ ಕೊಹ್ಲಿ ಆಗಮನದಿಂದ ತಂಡದ ಆಡುವ ಬಳಗದಲ್ಲಿ ಬದಲಾವಣೆ ಖಚಿತ. ಕೊಹ್ಲಿ ಕ್ರಮಾಂಕದಲ್ಲಿ ಮೊದಲ ಪಂದ್ಯ ಆಡಿದ್ದ ತಿಲಕ್ ವರ್ಮ ಅವರನ್ನು ದ್ವಿತೀಯ ಪಂದ್ಯದಿಂದ ಕೈಬಿಡಲಾಗುತ್ತದೆ. ಬೌಲಿಂಗ್ ವಿಭಾಗದಲ್ಲಿಯೂ ಕೆಲ ಮಹತ್ವದ ಬದಲಾವಣೆ ನಿರೀಕ್ಷೆ ಮಾಡಲಾಗಿದೆ. ಮೊದಲ ಪಂದ್ಯದಲ್ಲಿ ದುಬಾರಿಯಾಗಿ ಕಂಡುಬಂದ ರವಿ ಬಿಷ್ಣೋಯಿ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಹೊರಗಿರಿಸಿ ಅವರ ಬದಲು ಕುಲ್ದೀಪ್ ಮತ್ತು ಅವೇಶ್ ಖಾನ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಉಳಿದಂತೆ ಯಾವುದೇ ಬದಲಾವಣೆ ಸಂಭವಿಸುದು ಅನುಮಾನ.
ಒಂದುವರೆ ವರ್ಷದ ಬಳಿಕ ಟಿ20 ಆಡಲಿರುವ ಕೊಹ್ಲಿ
ವಿರಾಟ್ ಕೊಹ್ಲಿ ಅವರು ಭಾರತ ಪರ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡದೆ 14 ತಿಂಗಳುಗಳು ಕಳೆದಿವೆ. ಕೊಹ್ಲಿ ಕೊನೆಯ ಬಾರಿ ಭಾರತ ಪರ ಟಿ20 ಆಡಿದ್ದು. 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ. ಇಂಗ್ಲೆಂಡ್ ಎದುರು ನಡೆದಿದ್ದ ಸೆಮಿ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. ಇದಾದ ಬಳಿಕ ಕೊಹ್ಲಿ ಭಾರತದ ಪರ ಆಡಿಲ್ಲ.
ಇದನ್ನೂ ಓದಿ Viral Video: ಟೋಲ್ ಗೇಟ್ನಲ್ಲಿ ಕೆಲಸ ಆರಂಭಿಸಿದರೇ ಮೊಹಮ್ಮದ್ ಶಮಿ?; ವಿಡಿಯೊ ವೈರಲ್
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮ, ರಿಂಕು ಸಿಂಗ್, ಜಿತೇಶ್ ಶರ್ಮ, ಸಂಜು ಸ್ಯಾಮ್ಸನ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಆವೇಶ್ ಖಾನ್, ಮುಕೇಶ್ ಕುಮಾರ್.
ಮೊದಲ ಪಂದ್ಯದಲ್ಲಿ 6 ವಿಕೆಟ್ ಜಯ
ಬುಧವಾರ ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಮ್ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಪ್ರವಾಸಿ ತಂಡ 5 ವಿಕೆಟ್ಗೆ 158 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ತಂಡ ಇನ್ನೂ 15 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ನಷ್ಟಕ್ಕೆ 159 ರನ್ ಬಾರಿಸಿ 6 ವಿಕೆಟ್ಗಳ ಅಂತರದ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.
ವಿಶ್ವಕಪ್ನಲ್ಲಿ ಶ್ರೇಷ್ಠ ಬ್ಯಾಟಿಂಗ್
ಕಳೆದ ವರ್ಷ ನಡೆದ ಕದಿನ ವಿಶ್ವಕಪ್ನಲ್ಲಿ ಬ್ಯಾಟಿಂಗ್ ವಿರಾಟ ದರ್ಶನ ತೋರಿದ್ದ ಕೊಹ್ಲಿ ಟೂರ್ನಿಯ ಟಾಪ್ ಸ್ಕೋರರ್ ಆಗಿ ಹೊರಮೊಮ್ಮಿದ್ದರು. ಅಲ್ಲದೆ ತಮ್ಮ ಹೆಸರಿಗೆ ನಾನಾ ದಾಖಲೆಗಳನ್ನು ಕೂಡ ಬರೆದಿದ್ದರು. ಆಡಿದ 11 ಪಂದ್ಯಗಳಲ್ಲಿ 765 ರನ್ ಬಾರಿಸಿದ್ದರು. ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ 117 ರನ್ ಗಳಿಸಿದ ಕೊಹ್ಲಿ, ಸಚಿನ್ ಅವರ ಏಕದಿನ ಕ್ರಿಕೆಟ್ನ ಸಾರ್ವಕಾಲಿಕ ಶತಕದ ದಾಖಲೆ ಮುರಿದು 50ನೇ ಸೆಂಚುರಿ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.