ಬರ್ಮಿಂಗ್‌ಹ್ಯಾಮ್: ಪ್ರತಿಷ್ಠಿತ ಆ್ಯಶಸ್ ಸರಣಿಯ(Ashes 2023) ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆಲುವಿನ ಸನಿಹಕ್ಕೆ ಬಂದು ನಿಂತಿದೆ. ಅಂತಿಮ ದಿನವಾದ ಮಂಗಳವಾರ ಪ್ಯಾಟ್ ಕಮಿನ್ಸ್ ಪಡೆ 174 ರನ್ ಗಳಿಸಿದರೆ ವಿಜಯ ಪತಾಕೆ ಹಾರಿಸಲಿದೆ. ಇದೇ ಪಂದ್ಯದ ನಾಲ್ಕನೇ ದಿನದಾಟದಲ್ಲಿ 46 ರನ್ ಸಿಡಿಸಿದ ಜೋ ರೂಟ್(Joe Root) ಅವರು ಸಚಿನ್(sachin tendulkar) ಮತ್ತು ಕೊಹ್ಲಿಯ(virat kohli) ದಾಖಲೆಯೊಂದನ್ನು ಮುರಿದಿದ್ದಾರೆ.
ಜೋ ರೂಟ್ ಈ ಪಂದ್ಯದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್(test records) ಜೀವನದಲ್ಲಿ ಮೊಟ್ಟ ಮೊದಲ ಬಾರಿ ಸ್ಟಂಪ್ ಔಟ್ ಆದರು. ಈ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರ ದಾಖಲೆ ಮುರಿಯುವ ಜತೆಗೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿಡಿ ವಿಲಿಯರ್ಸ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಮೊದಲ ಇನಿಂಗ್ಸ್‌ನಲ್ಲಿ ಅಜೇಯ ಶತಕ ಬಾರಿಸಿ ಮಿಂಚಿದ್ದ ರೂಟ್ ದ್ವಿತೀಯ ಇನಿಂಗ್ಸ್‌ನಲ್ಲಿ 46 ರನ್ ಗಳಿಸಿ ಸ್ಟಂಪ್ಔಟ್ ಆದರು. ಇದೇ ವೇಳೆ ಅವರು ವಿಶೇಷ ದಾಖಲೆಯೊಂದನ್ನು ಬರೆದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಪಂಪ್ ಔಟ್ ಆಗುವ ಮುನ್ನ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ಎರಡನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾದರು. ಜತೆಗೆ ಸಚಿನ್ ಮತ್ತು ಕೊಹ್ಲಿಯ ದಾಖಲೆಯನ್ನು ಮುರಿದರು. ಈ ಸಾಧಕರ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಮಾಜಿ ಆಟಗಾರ ಶಿವನಾರಯಣ್ ಚಂದ್ರಪಾಲ್ ಅಗ್ರ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ Ashes 2023 : ಮೊದಲ ಟೆಸ್ಟ್ನ ಗೆಲುವಿನ ಸನಿಹ ಆಸ್ಟ್ರೇಲಿಯಾ ತಂಡ
ಸ್ಟಂಪ್ ಆಗುವ ಮುನ್ನ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿ
1. ಶಿವನಾರಾಯಣ್ ಚಂದ್ರಪಾಲ್ (ವೆಸ್ಟ್ ಇಂಡೀಸ್), 11,414 ರನ್
2. ಜೋ ರೂಟ್ (ಇಂಗ್ಲೆಂಡ್), 11,168 ರನ್
3. ಗ್ರೇಮ್ ಸ್ಮಿತ್ (ದಕ್ಷಿಣ ಆಫ್ರಿಕಾ), 8,800 ರನ್
4. ವಿರಾಟ್ ಕೊಹ್ಲಿ (ಭಾರತ), 8,195 ರನ್
5. ಸಚಿನ್ ತೆಂಡೂಲ್ಕರ್ (ಭಾರತ), 7,419 ರನ್
ಕೊಹ್ಲಿ, ವಿಲಿಯರ್ಸ್ ದಾಖಲೆ ಸರಿಗಟ್ಟಿದ ರೂಟ್
ಎರಡು ಮಾದರಿಯ ಕ್ರಿಕೆಟ್‌ನಲ್ಲಿ 50ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್ ಗಳಿಸಿದ ಮೂರನೇ ಬ್ಯಾಟರ್ ಎಂಬ ಹಿರಿಮೆಗೂ ರೂಟ್ ಪಾತ್ರರಾಗಿದ್ದಾರೆ. ಆ ಮೂಲಕ ಎಬಿಡಿ ವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ರೂಟ್ ಸರಿಗಟ್ಟಿದ್ದಾರೆ.