ಕ್ರಿಕೆಟ್
Team India : ಮುಂಬೈಗೆ ಬಂದಿಳಿದ ಏಷ್ಯಾಕಪ್ ಚಾಂಪಿಯನ್ ಟೀಂ ಇಂಡಿಯಾ
ವೇಗದ ಬೌಲರ್ಗಳ ಸಾಹಸದಿಂದ ಟೀಮ್ ಇಂಡಿಯಾ (Team India) ಶ್ರೀಲಂಕಾ ತಂಡವನ್ನು ಮಣಿಸಿ ಏಷ್ಯಾ ಕಪ್ ಟ್ರೋಫಿಯನ್ನು ಗೆದ್ದುಕೊಂಡಿತು.
ಮುಂಬಯಿ: ಏಷ್ಯಾಕಪ್ 2023ರ ಚಾಂಪಿಯನ್ ಟೀಂ ಇಂಡಿಯಾ (Team India) ಸೋಮವಾರ ಮುಂಜಾನೆ ಮುಂಬೈಗೆ ಆಗಮಿಸಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಇತರರು ಇಂದು (ಸೆಪ್ಟೆಂಬರ್ 18) ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.
ಸೆಪ್ಟೆಂಬರ್ 22 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಏಷ್ಯನ್ ಚಾಂಪಿಯನ್ಸ್ ಆಟಗಾರರು ಈಗ ತಯಾರಿ ನಡೆಸಲಿದ್ದಾರೆ. ಅದ್ಭುತ ವೇಗದ ಬೌಲಿಂಗ್ ಪ್ರದರ್ಶನದ ನಂತರ ಟೀಮ್ ಇಂಡಿಯಾ ಏಷ್ಯಾ ಕಪ್ ಗೆದ್ದಿತು. ಫೈನಲ್ನಲ್ಲಿ ಶ್ರೀಲಂಕಾದ ಅಗ್ರ ಕ್ರಮಾಂಕದ ಬ್ಯಾಟಿಂಗ್ ವಿಭಾಗಕ್ಕೆ ಕಾಡಿದ ಮೊಹಮ್ಮದ್ ಸಿರಾಜ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.
ಶ್ರೀಲಂಕಾ 15.2 ಓವರ್ಗಳಲ್ಇ 50 ರನ್ಗಳನ್ನು ಬಾರಿಸಿತು ಇದು ಭಾರತದ ವಿರುದ್ಧ ಅವರ ಸಾರ್ವಕಾಲಿಕ ಎರಡನೇ ಕನಿಷ್ಠ ಮೊತ್ತ. ಒಂದು ತಂಡವು ಔಟ್ ಆದ ಒಟ್ಟು ಓವರ್ಗಳ ಸಂಖ್ಯೆಗೆ ಸಂಬಂಧಿಸಿದಂತೆ, ಇದು ಪೂರ್ಣಗೊಂಡ ಐದನೇ ಅತಿ ಸಂಕ್ಷಿಪ್ತ ಇನ್ನಿಂಗ್ಸ್ ಆಗಿದೆ.
ಸಣ್ಣ ಗುರಿಯನ್ನು ಪಡೆದ ಭಾರತ 37 ಎಸೆತಗಳಲ್ಲಿ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಇನಿಂಗ್ಸ್ನಲ್ಲಿ ಇನ್ನೂ ಇರುವ ಚೆಂಡುಗಳ ಪ್ರಮಾಣವನ್ನು ಗಮನಿಸಿದರೆ, ಇದು ಭಾರತದ ಅತಿದೊಡ್ಡ ಗೆಲುವು ಮತ್ತು ಶ್ರೀಲಂಕಾದ ಅತಿದೊಡ್ಡ ಸೋಲು. ಈ ಗೆಲುವಿನೊಂದಿಗೆ ಭಾರತ ದಾಖಲೆಯ ಎಂಟನೇ ಬಾರಿಗೆ ಏಷ್ಯಾಕಪ್ ಗೆದ್ದಿತು ಮತ್ತು ಒಟ್ಟಾರೆಯಾಗಿ ಅತ್ಯಂತ ಯಶಸ್ವಿ ತಂಡ ಎಂಬ ಪ್ರಶಸ್ತಿಯನ್ನು ಉಳಿಸಿಕೊಂಡಿತು.
ಇದನ್ನೂ ಓದಿ : Asia Cup 2023 : ಏಷ್ಯಾಕಪ್ ಗೆದ್ದ ರೋಹಿತ್ ಶರ್ಮಾ ಬಳಗಕ್ಕೆ ಪ್ರಧಾನಿ ಮೋದಿ ಅಭಿನಂದನೆ, ಏನಂದ್ರು ಅವರು?
ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಮುಂತಾದವರು ಮುಂಬೈ ಬಂದರಿನಿಂದ ಹೊರಬಂದು ತಮ್ಮ ಕಾರುಗಳಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು.
ಶ್ರೇಯಾಂಕದಲ್ಲಿ ಪ್ರಗತಿ
ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಎಂಟನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಶ್ರೀಲಂಕಾ ವಿರುದ್ಧ ಫೈನಲ್ ಪಂದ್ಯವನ್ನು ಆಡಿದ ಭಾರತವು ಪಂದ್ಯವನ್ನು ಹತ್ತು ವಿಕೆಟ್ಗಳಿಂದ ಸಮಗ್ರವಾಗಿ ಗೆದ್ದಿತು. ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಎದುರಾಳಿಯ ಬ್ಯಾಟಿಂಗ್ ಘಟಕವನ್ನು ಸಂಪೂರ್ಣವಾಗಿ ಕುಸಿಯುವಂತೆ ಮಾಡಿದರು. ಪಂದ್ಯಾವಳಿಯುದ್ದಕ್ಕೂ ತಂಡದ ಅದ್ಭುತ ಪ್ರದರ್ಶನದ ನಂತರ, ಟೀಮ್ ಇಂಡಿಯಾ ಏಕದಿನ ಶ್ರೇಯಾಂಕದಲ್ಲಿ ಲಾಭವನ್ನು ಪಡೆಯಿತು.
114 ರೇಟಿಂಗ್ನೊಂದಿಗೆ ಮೂರನೇ ಸ್ಥಾನದಲ್ಲಿದ್ದ ಭಾರತ ತಂಡವು ಎರಡನೇ ಸ್ಥಾನಕ್ಕೆ ಜಿಗಿದು ತಮ್ಮ ರೇಟಿಂಗ್ ಅನ್ನು ಏಕೈಕ ಅಂಕದೊಂದಿಗೆ (115) ಸುಧಾರಿಸಿಕೊಂಡಿತು. ಏತನ್ಮಧ್ಯೆ, ಪಂದ್ಯಾವಳಿಯ ಸೂಪರ್ 4 ಹಂತಗಳಲ್ಲಿ ಕೊನೆಯ ಸ್ಥಾನಕ್ಕೆ ಶರಣಾದ ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವು ತಮ್ಮ ಅಗ್ರ ಸ್ಥಾನವನ್ನು ಮರಳಿ ಪಡೆಯಿತು. ಆದಾಗ್ಯೂ, ಈ ರೇಟಿಂಗ್ ಭಾನುವಾರ ಮುಕ್ತಾಯಗೊಂಡ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾದ 3-2 ಅಂತರದಿಂದ ಸರಣಿ ಸೋಲಿನಿಂದಾಗಿ ಸಾಂಪ್ರದಾಯಿಕ ಎದುರಾಳಿಗಳಿಗೆ ಮೊದಲೆರಡು ಸ್ಥಾನ ಲಭಿಸಿದೆ.
ಕ್ರಿಕೆಟ್
ICC World Cup: ಪಾಕಿಸ್ತಾನ ತಂಡಕ್ಕೆ ವೀಸಾ ಸಮಸ್ಯೆ; ಭಾರತ ಪ್ರಯಾಣ ವಿಳಂಬ
ಭಾರತಕ್ಕೆ ಪ್ರಯಾಣಿಸಲು ವೀಸಾಗಳನ್ನು(visa) ಪಡೆಯಲು ವಿಳಂಬವಾದ ಕಾರಣ ಪಾಕ್ ತಂಡದ ದುಬೈ ಭೇಟಿ ರದ್ದುಗೊಂಡಿದೆ ಎಂದು ವರದಿಯಾಗಿದೆ.
ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್(ICC World Cup) ಆರಂಭಕ್ಕೂ ಮುನ್ನವೇ ಪಾಕಿಸ್ತಾನ(Pakistan’s World Cup 2023) ತಂಡಕ್ಕೆ ಹಿನ್ನಡೆಯಾಗಿದೆ. ಭಾರತಕ್ಕೆ ಪ್ರಯಾಣಿಸಲು ವೀಸಾಗಳನ್ನು(visa) ಪಡೆಯಲು ವಿಳಂಬವಾದ ಕಾರಣ ಪಾಕ್ ತಂಡದ ದುಬೈ ಭೇಟಿ ರದ್ದುಗೊಂಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ತಂಡ ವಿಶ್ವಕಪ್ ಪಂದ್ಯಗಳನ್ನು ಆಡುವ ಮುನ್ನ ದುಬೈನಲ್ಲಿ ಪೂರ್ವ ತಯಾರಿ ನಡೆಸುವ ಯೋಜನೆಯಲ್ಲಿತ್ತು. ಆದರೆ ವೀಸಾ ಸಮಸ್ಯೆಯಿಂದ ಈ ಯೋಜನೆಗೆ ಅಡ್ಡಿಯುಂಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಭಾರತ ಪ್ರಯಾಣ ವಿಳಂಬವಾಗಿದೆ ಎಂದು ವರದಿಯಾಗಿದೆ.
ಪಾಕಿಸ್ತಾನ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಹೈದರಾಬಾದ್ನಲ್ಲಿ ಸೆಪ್ಟೆಂಬರ್ 29 ರಂದು ಕಿವೀಸ್ ವಿರುದ್ಧ ಆಡಲಿದೆ. ಕ್ರಿಕ್ಇನ್ಫೋ ವರದಿಯ ಪ್ರಕಾರ, ಪಾಕಿಸ್ತಾನ ತಂಡವು ಈ ಪಂದ್ಯಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರದ ಆರಂಭದಲ್ಲಿ ದುಬೈಗೆ ಪ್ರಯಾಣಿಸಬೇಕಿತ್ತು. ಆದರೆ ವೀಸಾ ಪಡೆಯುವ ಪ್ರಕ್ರಿಯೆಯಲ್ಲಿ ವಿಫಲವಾದ ಕಾರಣ ಪಾಕ್ ತಂಡದ ದುಬೈ ಪ್ರವಾಸ ಮೊಟಕುಗೊಂಡಿದೆ.
ಸದ್ಯದ ಮಾಹಿತಿ ಪ್ರಕಾರ ಪಾಕಿಸ್ತಾನ ತಂಡ ಬುಧವಾರ ಮುಂಜಾನೆ ಲಾಹೋರ್ನಿಂದ ದೆಹಲಿಗೆ ಆಗಮಿಸಿ ಆ ಬಳಿಕ ಹೈದಾರಾಬಾದ್ಗೆ ಪ್ರಯಾಣಿಸಲಿದೆ ಎಂದು ವರದಿಯಾಗಿದೆ. ಏಷ್ಯಾಕಪ್ ನಡೆಯುತ್ತಿದ್ದ ವೇಳೆಯೇ ಪಾಕ್ ಕ್ರಿಕೆಟ್ ಮಂಡಳಿ ವೀಸಾ ಪಡೆಯಲು ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಕೆಲ ಸೂಕ್ತ ದಾಖಲೆ ಒದಗಿಸುವಲ್ಲಿ ವಿಫಲವಾದ ಕಾರಣ ವಿಳಂಬವಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ ICC World Cup 2023: ಭಾರತ ಬಿಟ್ಟು ವಿಶ್ವಕಪ್ ಗೆಲ್ಲುವ ತಂಡ ಹೆಸರಿಸಿದ ಗಂಭೀರ್
ಪಾಕ್ ತಂಡಕ್ಕೆ ಮಾತ್ರ ಸಮಸ್ಯೆ
ರಾಜತಾಂತ್ರಿಕವಾಗಿಯೂ ಭಾರತ ಮತ್ತು ಪಾಕ್ ಸಂಬಂಧ ಮೊದಲಿನಿಂದಲೇ ಸರಿಯಿಲ್ಲ. ಹೀಗಾಗಿ ಉಭಯ ದೇಶಗಳ ಪ್ರಯಾಣಕ್ಕೆ ವೀಸಾ ಪಡೆಯಲು ಕೂಡ ಹಲವು ನಿರ್ಭಂದ ಮತ್ತು ಅನೇಕ ಪ್ರಕ್ರಿಯೆಗಳು ಕೂಡ ಇವೆ. ಈಗಾಗಲೇ ಭಾರತದಲ್ಲಿ ವಿಶ್ವಕಪ್ ಆಡಲಿರುವ 10 ತಂಡಗಳ ಪೈಕಿ 9 ದೇಶಗಳಿಗೆ ವೀಸಾ ಲಭಿಸಿದೆ. ಆದರೆ ಪಾಕ್ ತಂಡಕ್ಕೆ ಮಾತ್ರ ವೀಸಾ ಸಿಗಬೇಕಿದೆ.
ಪ್ರೇಕ್ಷಕರಿಲ್ಲದೆ ಪಂದ್ಯ
ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ನಡುವಣ ಅಭ್ಯಾಸ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ಇದಕ್ಕೆ ಕಾರಣ ಇಲ್ಲಿ ಧಾರ್ಮಿಕ ಹಬ್ಬಗಳ ಹಿನ್ನೆಲೆಯಲ್ಲಿ ಪ್ರವಾಸಿ ತಂಡಗಳಿಗೆ ಸಂಪೂರ್ಣ ಭದ್ರತೆಯನ್ನು ಒದಗಿಸಲು ಹೈದರಾಬಾದ್ ಪೊಲೀಸರು ಹಿಂದೇಟು ಹಾಕಿರುವುದು. ಈಗಾಗಲೇ ಈ ವಿಚಾರವನ್ನು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ಗೆ ಇಲ್ಲಿನ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಹೀಗಾಗಿ ಈ ಪಂದ್ಯ ಖಾಲಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಾಕಿಸ್ತಾನ ತಂಡ ಅಕ್ಟೋಬರ್ 6ರಂದು ನೆದರ್ಲೆಂಡ್ಸ್ ವಿರುದ್ಧ ಆಡುವ ಮೂಲಕ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈಗಾಗಲೇ ಪಾಕ್ ಈ ಮಹತ್ವದ ಟೂರ್ನಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಬಾಬರ್ ಅಜಂ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಟಾರ್ ಯುವ ವೇಗಿ ನಸೀಮ್ ಶಾ ಅವರು ಏಷ್ಯಾಕಪ್ನಲ್ಲಿ ಗಾಯಗೊಂಡ ಕಾರಣ ಈ ಟೂರ್ನಿಯಿಂದ ಹೊರಬಿದ್ದಾರೆ.
ಪಾಕಿಸ್ತಾನ ತಂಡ
ಬಾಬರ್ ಅಜಂ (ನಾಯಕ), ಶದಾಬ್ ಖಾನ್ (ಉಪ ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕಾರ್ ಅಹ್ಮದ್, ಅಘಾ ಸಲ್ಮಾನ್, ಸೌದ್ ಶಕೀಲ್, ಮೊಹಮ್ಮದ್ ನವಾಜ್, ಶಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ, ಉಸಾಮ ಮಿರ್, ಮೊಹಮ್ಮದ್ ವಸೀಂ. ಮೀಸಲು ಆಟಗಾರು: ಅಬ್ರಾರ್ ಅಹ್ಮದ್, ಜಮಾನ್ ಖಾನ್ ಹಾಗೂ ಮೊಹಮ್ಮದ್ ಹ್ಯಾರಿಸ್.
ಕ್ರಿಕೆಟ್
Varanasi Stadium: ವಾರಾಣಸಿ ಕ್ರಿಕೆಟ್ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ
Varanasi Stadium: ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿ ನಿರ್ಮಿಸಿರುವ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದನ್ನು ಶಿವನಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗುತ್ತಿದ್ದು, ಸ್ಟೇಡಿಯಂನ ವೈಶಿಷ್ಟ್ಯ ಇಲ್ಲಿದೆ.
ವಾರಾಣಸಿ: ವಿಶ್ವನಾಥನ ಸನ್ನಿಧಿಯಾಗಿರುವ ವಾರಾಣಸಿಯಲ್ಲಿ ಭವ್ಯ ಹಾಗೂ ಅತ್ಯಾಧುನಿಕ ಸೌಲಭ್ಯಗಳುಳ್ಳ ಕ್ರಿಕೆಟ್ ಸ್ಟೇಡಿಯಂ (Varanasi Stadium) ನಿರ್ಮಿಸಲಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ದೇವರ ನಗರಿ ಎಂದೇ ಖ್ಯಾತಿಯಾಗಿರುವ ವಾರಾಣಸಿಯ ಕ್ರೀಡಾಂಗಣವೂ ಶಿವನಿಂದ ಸ್ಫೂರ್ತಿಗೊಂಡು ನಿರ್ಮಿಸಲಾಗುತ್ತಿದೆ. ಕ್ರೀಡಾಂಗಣದ ಪ್ರತಿಯೊಂದು ವಿಭಾಗದಲ್ಲೂ ಶಿವನ ಛಾಯೆ ಇದೆ. ಹಾಗಾಗಿ, ವಾರಾಣಸಿ ಕ್ರೀಡಾಂಗಣವು ವಿಶೇಷವಾಗಿದೆ. ಇದರ ಎಲ್ಲ ವೈಶಿಷ್ಟ್ಯಗಳು, ಶಿವನ ಛಾಯೆ ಸೇರಿ ಹಲವು ಮಾಹಿತಿ ಇಲ್ಲಿದೆ.
ತ್ರಿಶೂಲ, ಡಮರು, ಶಿವತಾಂಡವ
ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣದ ವಿನ್ಯಾಸವು ಶಿವನಿಂದ ಸ್ಫೂರ್ತಿಗೊಂಡಿದೆ. ಕ್ರೀಡಾಂಗಣದ ಮುಂಭಾಗದಲ್ಲಿ ನಿರ್ಮಿಸಲಿರುವ ಮಾಧ್ಯಮ ಕೇಂದ್ರ (Media Centre) ಶಿವನ ಕೈಯಲ್ಲಿರುವ ಡಮರುಗದಂತೆ ಇರಲಿದೆ.
ಅಷ್ಟೇ ಅಲ್ಲ, ಸ್ಟೇಡಿಯಂ ಚಾವಣಿಯು ಚಂದ್ರನ ಆಕಾರದಲ್ಲಿ, ಪ್ರವೇಶ ದ್ವಾರವು ಬಿಲ್ವಪತ್ರೆ ಹಾಗೂ ಹೊನಲು ಬೆಳಕಿನ ಪಂದ್ಯದ ವೇಳೆ ಝಳಪಿಸುವ ಫ್ಲಡ್‌ಲೈಟ್ ತ್ರಿಶೂಲದ ಆಕಾರದಲ್ಲಿ ಇರಲಿವೆ. ಹಾಗಾಗಿ, ಇಡೀ ಸ್ಟೇಡಿಯಂ ಶಿವನಿಂದ ಸ್ಫೂರ್ತಿಗೊಂಡಂತೆ ನಿರ್ಮಾಣವಾಗಲಿದೆ.
ಸ್ಟೇಡಿಯಂನಲ್ಲಿ ಏನೆಲ್ಲ ಇರಲಿದೆ?
ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಕ್ರಿಕೆಟ್ ಸ್ಟೇಡಿಯಂ ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣವಾಗಿದೆ. ಇದರಲ್ಲಿ 30 ಸಾವಿರ ಪ್ರೇಕ್ಷಕರು ಕುಳಿತು ಪಂದ್ಯವನ್ನು ವೀಕ್ಷಿಸಬಹುದಾಗಿದೆ. ರಾಜಾತಲಾಬ್ ಪ್ರದೇಶದ ರಿಂಗ್ ರೋಡ್ ಬಳಿ ಇದನ್ನು ನಿರ್ಮಿಸಲಾಗಿದ್ದು, ಏಳು ಪಿಚ್‌ಗಳು ಇರಲಿವೆ.
ಪಂದ್ಯದ ವೇಳೆ ಮಳೆ ಬಂದರೆ ಕ್ಷಿಪ್ರವಾಗಿ ನೀರು ಹೀರಿಕೊಳ್ಳುವ, ಅತ್ಯಾಧುನಿಕ ಸೌಕರ್ಯಗಳುಳ್ಳ ಡ್ರೆಸ್ಸಿಂಗ್ ರೂಮ್‌ಗಳು, ಮೂರು ಪ್ರಾಕ್ಟೀಸ್ ಪಿಚ್‌ಗಳು ಸೇರಿ ಹಲವು ಸೌಲಭ್ಯಗಳಿವೆ. 2025ರ ಡಿಸೆಂಬರ್‌ನಲ್ಲಿ ಕ್ರೀಡಾಂಗಣಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ICC World Cup: ಶೀಘ್ರದಲ್ಲೇ ಚಿನ್ನಸ್ವಾಮಿ ಸ್ಟೇಡಿಯಂಗೆ ಹೈಟೆಕ್ ಸ್ಪರ್ಶ
ಕಾಶಿ ವಿಶ್ವನಾಥನ ಊರಿನಲ್ಲಿ ನಿರ್ಮಾಣವಾಗುತ್ತಿರುವ ಕ್ರಿಕೆಟ್ ಸ್ಟೇಡಿಯಂಗೆ ಸುಮಾರು 451 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರವು 121 ಕೋಟಿ ರೂ. ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 330 ಕೋಟಿ ರೂ. ವಿನಿಯೋಗಿಸಲಿದೆ.
ಕ್ರಿಕೆಟ್
MS Dhoni: ತಂಡಕ್ಕಾಗಿ ಧೋನಿ ಬ್ಯಾಟಿಂಗ್ ‘ತ್ಯಾಗ’ ಮಾಡಿಲ್ಲ; ಮಾಜಿ ಬೌಲರ್ ಶಾಕಿಂಗ್ ಹೇಳಿಕೆ
MS Dhoni: ಭಾರತ ಕ್ರಿಕೆಟ್ ತಂಡಕ್ಕಾಗಿ ಮಹೇಂದ್ರ ಸಿಂಗ್ ಧೋನಿ ದೊಡ್ಡ ತ್ಯಾಗ ಮಾಡಿದ್ದಾರೆ. ಅವರು ಬ್ಯಾಟಿಂಗ್ ಕ್ರಮಾಂಕವನ್ನೇ ಬಿಟ್ಟುಕೊಟ್ಟಿದ್ದಾರೆ ಎಂದು ಗೌತಮ್ ಗಂಭೀರ್ ಹೇಳಿದ್ದರು. ಇದಕ್ಕೆ ಮಾಜಿ ವೇಗಿ ಎಸ್. ಶ್ರೀಶಾಂತ್ ಪ್ರತಿಕ್ರಿಯಿಸಿದ್ದಾರೆ.
ತಿರುವನಂತಪುರಂ: “ಭಾರತೀಯ ಕ್ರಿಕೆಟ್ ತಂಡದ (Indian Cricket Team) ಗೆಲುವಿಗಾಗಿ ಮಹೇಂದ್ರ ಸಿಂಗ್ ಧೋನಿಯು (MS Dhoni) ಬ್ಯಾಟಿಂಗ್ ಕ್ರಮಾಂಕವನ್ನು ತ್ಯಾಗ ಮಾಡಿದ್ದಾರೆ” ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿಕೆಯನ್ನು ಮಾಜಿ ವೇಗಿ ಎಸ್. ಶ್ರೀಶಾಂತ್ (S Sreesanth) ಅಲ್ಲಗಳೆದಿದ್ದಾರೆ. ಅಲ್ಲದೆ, “ದೇಶದ ತಂಡಕ್ಕಾಗಿ ಧೋನಿ ಅವರು ತ್ಯಾಗ ಮಾಡಿಲ್ಲ” ಎಂದು ಕೂಡ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಖಂಡಿತವಾಗಿಯೂ ಭಾರತ ಕ್ರಿಕೆಟ್ ತಂಡವು ಎರಡು ವಿಶ್ವಕಪ್ ಗೆದ್ದ ಶ್ರೇಯಸ್ಸು ಮಹೇಂದ್ರ ಸಿಂಗ್ ಧೋನಿ ಅವರಿಗೆ ಸಲ್ಲಬೇಕು. ಕೆಲ ದಿನಗಳ ಹಿಂದಷ್ಟೇ ಧೋನಿಯು ಮೂರನೇ ಕ್ರಮಾಂಕದಲ್ಲಿ ಆಡಿದ್ದರೆ ಇನ್ನಷ್ಟು ರನ್ ಗಳಿಸಬಹುದಿತ್ತು. ಅವರು ತಂಡಕ್ಕಾಗಿ ಬ್ಯಾಟಿಂಗ್ ಕ್ರಮಾಂಕವನ್ನು ತ್ಯಾಗ ಮಾಡಿದರು ಎಂದಿದ್ದಾರೆ. ಆದರೆ, ಧೋನಿ ಯಾವಾಗಲೂ ಕೊನೆಯ ಕ್ರಮಾಂಕದಲ್ಲಿ ಆಡಿ ತಂಡಕ್ಕೆ ಗೆಲುವು ತಂದುಕೊಡಲು ಯೋಚಿಸುತ್ತಿದ್ದರು. ಕೊನೆಯ ಕ್ರಮಾಂಕದಲ್ಲಿ ಆಡುವುದೇ ಧೋನಿಯ ಶಕ್ತಿಯಾಗಿತ್ತು. ಹಾಗಾಗಿ, ಅವರು ಬ್ಯಾಟಿಂಗ್ ಕ್ರಮಾಂಕ ತ್ಯಾಗ ಮಾಡಿದ್ದಾರೆ ಎಂದು ಅನಿಸುವುದಿಲ್ಲ” ಎಂಬುದಾಗಿ ಶ್ರೀಶಾಂತ್ ತಿಳಿಸಿದ್ದಾರೆ.
He didn't sacrifice position: Sreesanth on Gambhir's remark on MSD
— Sushreeta Edu (@sushreetaedu) September 22, 2023
Reacting to Gautam Gambhir's statement that MS Dhoni would have scored more runs had he batted at number three, ex-India pacer S Sreesanth said, "Dhoni didn't sacrifice his batting position." "Dhoni worked out a… pic.twitter.com/KNxT1B3jEC
“ಮಹೇಂದ್ರ ಸಿಂಗ್ ಧೋನಿ ಅವರಿಗೆ ತಂಡದ ಪ್ರತಿಯೊಬ್ಬ ಆಟಗಾರರ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಗೊತ್ತಿತ್ತು. ಹಾಗಾಗಿ, ಅವರು ಯಾರನ್ನು ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಸಬೇಕು ಎಂಬುದು ಗೊತ್ತಿತ್ತು. ಅವರಿಗೆ ತಮ್ಮ ಸಾಮರ್ಥ್ಯದ ಬಗ್ಗೆಯೂ ಅರಿವಿತ್ತು. ಹಾಗಾಗಿ, ಅವರು ಕೆಳ ಕ್ರಮಾಂಕದಲ್ಲಿ ಆಟವಾಡಿದರು. ಆ ಮೂಲಕ ಅವರು ತಂಡವನ್ನು ಗೆಲುವಿನ ದಡ ಸೇರಿಸಿದರು” ಎಂದು ಶ್ರೀಸಾಂತ್ ಹೇಳಿದರು.
ಇದನ್ನೂ ಓದಿ: MS Dhoni : ಇದೆಂಥಾ ಅಚ್ಚರಿ; ಅಪರೂಪಕ್ಕೆ ಧೋನಿಯನ್ನು ಹೊಗಳಿದ ಗೌತಮ್ ಗಂಭೀರ್!
ಗೌತಮ್ ಗಂಭೀರ್ ಹೇಳಿದ್ದೇನು?
“ನಾಯಕತ್ವದ ಜವಾಬ್ದಾರಿಯಿಂದಾಗಿ ಧೋನಿಗೆ ಬ್ಯಾಟರ್ ಆಗಿ ಸಾಧಿಸಬಹುದಾದದ್ದನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಬಹಳಷ್ಟು ಬಾರಿ ನಾಯಕನಾಗಿ ನೀವು ತಂಡವನ್ನು ಮೊದಲ ಸ್ಥಾನದಲ್ಲಿರಿಸಬೇಕಾಗುತ್ತದೆ. ಎಂಎಸ್ ಧೋನಿ ನಾಯಕನಾಗದಿದ್ದರೆ ಅವರು 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದಿತ್ತು. ಅವರು ಹಲವಾರು ಏಕದಿನ ದಾಖಲೆಗಳನ್ನು ಮುರಿಯಬಹುದಾಗಿತ್ತು ಎಂಬುದು ನನಗೆ ಖಾತ್ರಿಯಿದೆ. ಅವರು ಸಾಕಷ್ಟು ಟ್ರೋಫಿಗಳನ್ನು ಗೆದ್ದಿದ್ದಾರೆ ಆದರೆ ವೈಯಕ್ತಿಕವಾಗಿ ಅವರು ಟ್ರೋಫಿಗಳಿಗಾಗಿ ತಮ್ಮ ಅಂತಾರಾಷ್ಟ್ರೀಯ ರನ್ಗಳನ್ನು, ಬ್ಯಾಟಿಂಗ್ ಕ್ರಮಾಂಕವನ್ನು ತ್ಯಾಗ ಮಾಡಿದ್ದಾರೆ” ಎಂದು ಗಂಭೀರ್ ಸ್ಟಾರ್ ಸ್ಪೋರ್ಟ್ಸ್ನಲ್ಲಿ ಹೇಳಿದ್ದರು.
ಧೋನಿಯ ನಾಯಕತ್ವದ ಜವಾಬ್ದಾರಿಗಳನ್ನು ವಹಿಸಿಕೊಳ್ಳದೇ ಹೋಗಿದ್ದರೆ ಹಲವಾರು ವೈಯಕ್ತಿಕ ದಾಖಲೆ ಮಾಡಬಹುದಾಗಿತ್ತು. ಅವರ ಜವಾಬ್ದಾರಿಗಳು ವೈಯಕ್ತಿಕ ಬ್ಯಾಟಿಂಗ್ ಸಾಧನೆಗಳನ್ನು ಮರೆ ಮಾಡಿವೆ ಎಂದು ಗಂಭೀರ್ ಹೇಳಿದ್ದರು. ಧೋನಿ ನಾಯಕತ್ವದಲ್ಲಿರದಿದ್ದರೆ ಅವರು ಹಲವಾರು ಏಕದಿನ ದಾಖಲೆಗಳನ್ನು ಸೃಷ್ಟಿಸಬಹುದಾಗಿತ್ತು ಎಂದಿದ್ದರು. ಯಾವಾಗಲೂ ಮಹೇಂದ್ರ ಸಿಂಗ್ ಧೋನಿ ಅವರನ್ನು ಟೀಕಿಸುತ್ತಿದ್ದ ಗೌತಮ್ ಗಂಭೀರ್, ಅಚ್ಚರಿ ಎಂಬಂತೆ ಹೊಗಳಿದ್ದರು.
ಕ್ರಿಕೆಟ್
ind vs aus : 21ನೇ ಶತಮಾನದಲ್ಲಿ ಭಾರತ ಕ್ರಿಕೆಟ್ ತಂಡದ ವಿಶೇಷ ದಾಖಲೆ, ಮೊಹಾಲಿ ಕ್ರೀಡಾಂಗಣವೇ ಸಾಕ್ಷಿ
ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ (ind vs aus) ಪಂದ್ಯದಲ್ಲಿ ಟೀಂ ಇಂಡಿಯಾ 21ನೇ ಶತಮಾನದಲ್ಲಿ ಮೂಲಕ ಮೊದಲ ಗೆಲುವು ದಾಖಲಿಸಿದೆ.
ಮೊಹಾಲಿ : ಆಸ್ಟ್ರೇಲಿಯಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ (ind vs aus) ಮೊದಲ ಪಂದ್ಯದಲ್ಲಿ ಭಾರತ ಜಯ ಸಾಧಿಸಿದೆ. ಇದು 21ನೇ ಶತಮಾನದಲ್ಲಿ ಟೀಂ ಇಂಡಿಯಾಗೆ ಮೊಹಾಲಿ ಸ್ಟೇಡಿಯಮ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಲಭಿಸಿದ ಮೊದಲ ಗೆಲವು. ಕಳೆದ 27 ವರ್ಷಗಳಿಂದ ಭಾರತ ತಂಡ ಈ ಸ್ಟೇಡಿಯಮ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದಿರಲಿಲ್ಲ. ಪ್ರತಿ ಬಾರಿಯೂ ಆಸೀಸ್ ತಂಡಕ್ಕೆ ಜಯ ದೊರಕುತ್ತಿತ್ತು. ಹಂಗಾಮಿ ನಾಯಕ ಕೆ. ಎಲ್ ರಾಹುಲ್ ನೇತೃತ್ವದಲ್ಲಿ ಭಾರತ ತಂಡ ಹೊಸ ಸಾಧನೆ ಮಾಡಿ.
ಮೊಹಮ್ಮದ್ ಶಮಿ ಅವರ ಐದು ವಿಕೆಟ್ ಸಾಧನೆಯ ನಂತರ, ಇಬ್ಬರು ಯುವ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್, ಹಂಗಾಮಿ ನಾಯಕ ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಸೇರಿದಂತೆ ನಾಲ್ವರು ಭಾರತೀಯ ಬ್ಯಾಟರ್ಗಳ ಅರ್ಧಶತಕಗಳ ಸಹಾಯದಿಂದ ಈ ಜಯ ಹಾಗೂ ದಾಖಲೆ ಮಾಡಲು ಸಾಧ್ಯವಾಯಿತು. ಸರಣಿಯಲ್ಲೂ 1-0 ಮುನ್ನಡೆ ಪಡೆಯಿತು.
277 ರನ್ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಪರ ಶುಬ್ಮನ್ ಗಿಲ್ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮವಾಘಿ ಇನ್ನಿಂಗ್ಸ್ ಆರಂಭಿಸಿದರು. ಮೊದಲ 10 ಓವರ್ ಗಳಲ್ಲಿ ಭಾರತ 66/0 ಸ್ಕೋರ್ ಮಾಡಿತ್ತು. ಅವರು ಸ್ಟ್ರೈಕ್ ಅನ್ನು ಮುಂದುವರಿಸಿದರು. ಮೊದಲು ಗಿಲ್ ಅರ್ಧಶತಕ ಗಳಿಸಿದರು ಹಾಗೂ ಬಳಿಕ ಗಾಯಕ್ವಾಡ್ ತಮ್ಮ ಅರ್ಧ ಶತಕವನ್ನು ಬಾರಿಸಿದರು.
ಗಿಲ್ ಮತ್ತು ಗಾಯಕ್ವಾಡ್ ಇಬ್ಬರೂ ಆಸ್ಟ್ರೇಲಿಯಾದಿಂದ ಪಂದ್ಯವನ್ನು ಕಸಿದುಕೊಳ್ಳುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಂದುಕೊಳ್ಳುತ್ತಿದ್ದ ವೇಳೆ ಪ್ರವಾಸಿ ತಂಡ ಕೇವಲ ಒಂಬತ್ತು ರನ್ಗಳ ಅಂತರದಲ್ಲಿ ಮೂರು ವಿಕೆಟ್ಗಳನ್ನು ಉರುಳಿಸದಿರು. ಗಿಲ್ ಮತ್ತು ಗಾಯಕ್ವಾಡ್ ಇಬ್ಬರನ್ನೂ ಆಡಮ್ ಜಂಪಾ ಎಸೆತಕ್ಕೆ ಔಟಾದರು. ಶ್ರೇಯಸ್ ಅಯ್ಯರ್ ಅಗ್ಗವಾಗಿ ರನ್ ಔಟ್ ಆದರು. ಇಶಾನ್ ಸ್ವಲ್ಪ ಹೊತ್ತು ಆಡಿದರೆ ರಾಹುಲ್ ಮತ್ತು ಸೂರ್ಯ 80 ರನ್ ಗಳ ಜೊತೆಯಾಟವನ್ನು ಆಡಿದರು.
ರಾಹುಲ್ ಸಿಕ್ಸರ್ನೊಂದಿಗೆ ಪಂದ್ಯವನ್ನು ಮುಗಿಸಿದರು, ಭಾರತವು ಎಂಟು ಎಸೆತಗಳು ಬಾಕಿ ಇರುವಾಗ ಗುರಿಯನ್ನು ಬೆನ್ನಟ್ಟಿತು. ಈ ಗೆಲುವಿನೊಂದಿಗೆ ಭಾರತ ನಂ.1 ತಂಡ ಎನಿಸಿಕೊಂಡಿದೆ.
ಇದಕ್ಕೂ ಮುನ್ನ ಮೊಹಮ್ಮದ್ ಶಮಿ ಅವರು ತಂಡಕ್ಕೆ ನೆರವಾದರು. ಮೊದಲ ಓವರ್ನಲ್ಲಿಯೇ ಮಿಚೆಲ್ ಮಾರ್ಷ್ ಅವರನ್ನು ಔಟ್ ಮಾಡಿದರು ಮತ್ತು ಸ್ಟೀವ್ ಸ್ಮಿತ್ ಅವರ ದೊಡ್ಡ ವಿಕೆಟ್ ಪಡೆಯಲು ಮತ್ತೆ ಮರಳಿದರು. ಶಮಿ ಇನ್ನೂ ಮೂರು ವಿಕೆಟ್ಗಳನ್ನು ಪಡೆದರು,
-
ಪ್ರಮುಖ ಸುದ್ದಿ20 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್23 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ21 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಕರ್ನಾಟಕ16 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
-
ಉಡುಪಿ19 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ
-
ಕ್ರೈಂ21 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ದೇಶ19 hours ago
Chandrayaan 3: ನಿದ್ದೆಯಿಂದ ಎಚ್ಚರವಾಗಲು ಒಲ್ಲೆ ಎನ್ನುತ್ತಿರುವ ಲ್ಯಾಂಡರ್, ಪ್ರಜ್ಞಾನ್! ನಾಳೆ ಮತ್ತೆ ಇಸ್ರೋ ಪ್ರಯತ್ನ