ಟ್ರಿನಿಡಾಡ್: ಟಿ20 ವಿಶ್ವಕಪ್ ಟೂರ್ನಿಯ(t20 world cup 2024) ಅಭ್ಯಾಸ ಪಂದ್ಯಗಳು(T20 WC Warm-Up Game) ಆರಂಭಗೊಂಡಿದೆ. ನಮೀಬಿಯಾ(AUS vs NAM) ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪರ ಕೋಚ್ ಮತ್ತು ಆಯ್ಕೆಗಾರರ ಮಂಡಳಿ ಮುಖ್ಯಸ್ಥರು(Australian Coaching Staff) ಫೀಲ್ಡಿಂಗ್ ನಡೆಸಿದ ಪ್ರಸಂಗ ನಡೆದಿದೆ. ಈ ವಿಡಿಯೊ ವೈರಲ್ ಆಗಿದೆ. ಪಂದ್ಯದಲ್ಲಿ ಆಸೀಸ್ ತಂಡ 7 ವಿಕೆಟ್ಗಳ ಗೆಲುವು ಸಾಧಿಸಿತು.
ಐಪಿಎಲ್ ಆಡಿ ಬಂದಿದ್ದ ತಂಡದ ಪ್ರಧಾನ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್, ಟ್ರಾವಿಸ್ ಹೆಡ್, ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ವಿಶ್ರಾಂತಿ ಸಮಯ ಬಯಸಿದ ಕಾರಣ ಆಸ್ಟ್ರೇಲಿಯಾ ತಂಡದಲ್ಲಿ ಆಟಗಾರರ ಕೊರತೆ ಎದುರಾಯಿತು. ಹೀಗಾಗಿ ಕೋಚ್ ಮತ್ತು ಆಯ್ಕೆಗಾರರ ಮಂಡಳಿ ಮುಖ್ಯಸ್ಥರು ಫೀಲ್ಡಿಂಗ್ ನಡೆಸಿದರು.
ಆಸೀಸ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ- ಮಾಜಿ ನಾಯಕ ಜಾರ್ಜ್ ಬೈಲಿ, ಮುಖ್ಯ ಕೋಚ್ ಆ್ಯಂಡ್ರ್ಯೂ ಮೆಕ್ ಡೊನಾಲ್ಡ್, ಫೀಲ್ಡಿಂಗ್ ಕೋಚ್ ಆಂಡ್ರೆ ಬೊರೊವೆಕ್ ಮತ್ತು ಬ್ಯಾಟಿಂಗ್ ಕೋಚ್ ಬ್ರಾಡ್ ಹಾಡ್ಜ್ ಸಂಪೂರ್ಣ 20 ಓವರ್ಗಳ ಕಾಲ ಫೀಲ್ಡಿಂಗ್ ಮಾಡಿದ್ದಾರೆ. ಅಭ್ಯಾಸ ಪಂದ್ಯಕ್ಕೆ ಯಾವುದೇ ನಿಯಮ ಇಲ್ಲದ ಕಾರಣ ಇವರೆಲ್ಲ ಫೀಲ್ಡಿಂಗ್ ಮಾಡಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ನಮೀಬಿಯಾ ನಿಗದಿತ 20 ಓವರ್ಳಲ್ಲಿ 9 ವಿಕೆಟ್ಗೆ 119 ರನ್ ಬಾರಿಸಿತು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 10 ಓವರ್ಗೆ 3 ವಿಕೆಟ್ ಕಳೆದುಕೊಂಡು 123 ರನ್ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಡೇವಿಡ್ ವಾರ್ನರ್ ಅಜೇಯ 54ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ನಾಯಕ ಮಿಚೆಲ್ ಮಾರ್ಷ್ 18 ರನ್ ಗಳಿಸಿ ವಿಫಲರಾದರು. ಆಸೀಸ್ ಬೌಲಿಂಗ್ನಲ್ಲಿ ಸ್ಪಿನ್ನರ್ ಆ್ಯಡಂ ಜಂಪಾ ಮೂರು ವಿಕೆಟ್ ಕಿತ್ತರೆ, ಹ್ಯಾಝಲ್ವುಡ್ 2 ವಿಕೆಟ್ ಪಡೆದರು.
ವಿಶ್ವಕಪ್ ಲೀಗ್ ಪಂದ್ಯಗಳು ಜೂನ್ 1ರಿಂದ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ.
ಇದನ್ನೂ ಓದಿ T20 World Cup : ಭಾರತ- ಪಾಕ್ ಪಂದ್ಯ ಐಸಿಸ್ ಉಗ್ರರಿಂದ ಬಾಂಬ್ ಬೆದರಿಕೆ
ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್, ಟಿಮ್ ಡೇವಿಡ್ ಅವರನ್ನು ಬ್ಯಾಟಿಂಗ್ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ತಂಡದ ಸ್ಟಾರ್ ಆಲ್ರೌಂಡರ್ಗಳಾಗಿದ್ದಾರೆ. ಸ್ಪಿನ್ಸ್ ಬೌಲರ್ಗಳಾಗಿ ಆ್ಯಡಂ ಝಂಪಾ ಮತ್ತು ಆ್ಯಶ್ಟನ್ ಅಗರ್ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್