ಮೆಲ್ಬೋರ್ನ್: ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ(AUS VS SA) ತಂಡ ಇನ್ನಿಂಗ್ಸ್ ಹಾಗೂ 182 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿದೆ.
ಆಸ್ಟ್ರೇಲಿಯಾ ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 16 ವರ್ಷಗಳ ಸೋಲಿನ ಸರಣಿಯನ್ನು ಕೊನೆಗೊಳಿಸಿದೆ. ಆಸೀಸ್ 16 ವರ್ಷಗಳ ಹಿಂದೆ ಹರಿಣಗಳ ವಿರುದ್ಧ ಕೊನೆಯ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಬಳಿಕ ನಡೆದ ಎಲ್ಲ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಸೋಲು ಕಂಡಿತ್ತು. ಇದೀಗ ಸೋಲಿನ ಸರಪಳಿಯಿಂದ ಹೊರಬಂದಿದೆ.
ಮೆಲ್ಬೋರ್ನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 189 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟಿದ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 8 ವಿಕೆಟ್ನಷ್ಟಕ್ಕೆ 575 ರನ್‌ಗಳಿಸಿ ಡಿಕ್ಲೇರ್ ಮಾಡಿತು. ಈ ಮೂಲಕ 386 ರನ್‌ಗಳ ಮುನ್ನಡೆ ಸಾಧಿಸಿತು.
ದ್ವಿತೀಯ ಇನಿಂಗ್ಸ್ನಲ್ಲಿ 386 ರನ್‌ಗಳ ಗುರಿ ಬೆನ್ನಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 204 ರನ್‌ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಆಸ್ಟ್ರೇಲಿಯಾ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಡೇವಿಡ್ ವಾರ್ನರ್(200) ಅದ್ಭುತ ದ್ವಿಶತಕ ಬಾರಿಸಿದರೆ, ಅಲೆಕ್ಸ್ ಕ್ಯಾರಿ(111) ಶತಕ ಸಿಡಿಸಿ ಮಿಂಚಿದರು. ಆಸ್ಟ್ರೇಲಿಯಾ ಪರ ಕ್ಯಾಮರೂನ್ ಗ್ರೀನ್ 5 ಮತ್ತು ನಥಾನ್ ಲಿಯೋನ್ 4 ವಿಕೆಟ್ ಉರುಳಿಸಿದರು.
ಆಸ್ಟ್ರೇಲಿಯಾಗೆ ಈ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಟಿಕೆಟ್ ಕೂಡ ಖಚಿತವಾದಂತಾಗಿದೆ. ಅತ್ತ ಸೋಲು ಕಂಡ ದಕ್ಷಿಣ ಆಫ್ರಿಕಾಗೆ ಈ ರೇಸ್ನಿಂದ ಹೊರಬೀಳುವ ಸಂಕಟ ಎದುರಾಗಿದೆ.
ಸ್ಕೋರ್ ವಿವರ
ದಕ್ಷಿಣ ಆಫ್ರಿಕಾ: ಮೊದಲ ಇನಿಂಗ್ಸ್ 189, ದ್ವಿತೀಯ ಇನಿಂಗ್ಸ್ 204.
ಆಸ್ಟ್ರೇಲಿಯಾ: ಮೊದಲ ಇನಿಂಗ್ಸ್ 8 ವಿಕೆಟ್ಗೆ 575 ಡಿಕ್ಲೇರ್ (ಡೇವಿಡ್ ವಾರ್ನರ್ 200, ಅಲೆಕ್ಸ್ ಕ್ಯಾರಿ 111, ಸ್ಟೀವನ್ ಸ್ಮಿತ್ 85)
ಇದನ್ನೂ ಓದಿ | AUS VS SA | ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಕ್ಯಾಮೆರಮನ್ಗೆ ಗೇಟ್ ಪಾಸ್!