ಕೋಲ್ಕೊತಾ: ವಿಶ್ವಕಪ್‌ನ ನತದೃಷ್ಟ ತಂಡ, ಚೋಕರ್ಸ್ ಹೀಗೆ ಹಲವು ಹಣೆಪಟ್ಟಿಯನ್ನು ಹೊತ್ತುಕೊಂಡಿರುವ ದಕ್ಷಿಣ ಆಫ್ರಿಕಾ(AUS vs SA) ಗುರುವಾರ ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ. ಲೀಗ್ ಹಂತದ ಪ್ರದರ್ಶನವನ್ನು ನೋಡುವಾಗ ಹರಿಣಗಳು ಈ ಬಾರಿ ಚೋಕರ್ಸ್ ಹಣೆಪಟ್ಟಿಯನ್ನು ಕಳಚಿಕೊಳ್ಳವ ಸೂಚನೆ ನೀಡಿದ್ದಾರೆ.
ನಂಬಿಕೆ ಇಡುವಂತಿಲ್ಲ
ದಕ್ಷಿಣ ಆಫ್ರಿಕಾ ತಂಡ ಪ್ರತಿ ವಿಶ್ವಕಪ್ ಟೂರ್ನಿಯಲ್ಲೂ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ ಪ್ರವೇಶ ಪಡೆಯುತ್ತದೆ. ಆದರೆ ಸೆಮಿ ಪಂದ್ಯದಲ್ಲಿ ಮಾತ್ರ ಅದೃಷ್ಟವೋ ಅಲ್ಲ ಶಾಪವೋ ಗೊತ್ತಿಲ್ಲ ಎಲ್ಲ ವಿಶ್ವ ದರ್ಜೆಯ ಆಟಗಾರು ಘೋರ ವೈಫಲ್ ಕಾಣುತ್ತಾರೆ. ಯಾರೋಬ್ಬರು ಕೂಡ ತಮ್ಮ ಆಟವನ್ನು ಪ್ರದರ್ಶಿಸಲಾಗದ ಸಂಕಟಕ್ಕೆ ಸಿಲುಕುತ್ತಾರೆ. ಹೀಗಾಗಿ ತಂಡದ ಮೇಲೆ ಹೆಚ್ಚಿನ ನಂಬಿಕೆ ಇಡುವಂತಿಲ್ಲ.
ವಿಶ್ವಕಪ್ ಮುಖಾಮುಖಿ
ಇತ್ತಂಡಗಳು ವಿಶ್ವಕಪ್ನಲ್ಲಿ ಒಟ್ಟು 6 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಆಸ್ಟ್ರೇಲಿಯಾ ಮೂರು ಪಂದ್ಯಗಳನ್ನು ಗೆದ್ದರೆ, ದಕ್ಷಿಣ ಆಫ್ರಿಕಾ 2 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಟೈಗೊಂಡಿದೆ. ಇತ್ತಂಡಗಳು ಮೊದಲ ಬಾರಿಗೆ ವಿಶ್ವಕಪ್ನಲ್ಲಿ ಮುಖಾಮುಖಿಯಾದದ್ದು 1992ರ ವಿಶ್ವಕಪ್ನಲ್ಲಿ. ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ 9 ವಿಕೆಟ್ಗಳಿಂದ ಗೆದ್ದು ಬೀಗಿತ್ತು. ಇದಾದ ಬಳಿಕ ದಕ್ಷಿಣ ಆಫ್ರಿಕಾಗೆ ಗೆಲುವು ಒಲಿದದ್ದು 2019ರಲ್ಲಿ. ಲಂಡನ್ನಲ್ಲಿ ನಡೆದ ಪಂದ್ಯದಲ್ಲಿ ಡು ಪ್ಲಿಸ್ ನಾಯಕತ್ವದಲ್ಲಿ 10 ರನ್ಗಳ ಗೆಲುವು ಸಾಧಿಸಿತ್ತು.
ಪಿಚ್ ರಿಪೋರ್ಟ್
ಈಡನ್ ಗಾರ್ಡನ್ಸ್‌ನ(Eden Gardens) ಪಿಚ್ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬನಿ ಸಮಸ್ಯೆ ಕಾಡಲಿದೆ. ಇದು ಬೌಲರ್ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರೆ ಉತ್ತಮ.
ಇದನ್ನೂ ಓದಿ IND vs NZ: ಸಚಿನ್,ರೋಹಿತ್ ದಾಖಲೆ ಮುರಿಯಲಿದ್ದಾರಾ ಕೊಹ್ಲಿ,ರಚಿನ್?
ಸಂಭಾವ್ಯ ತಂಡ
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಸ್ಸಿ ವಾನ್ ಡರ್ ಡುಸೆನ್, ಐಡೆನ್ ಮಾರ್ಕ್ರಮ್, ಟೆಂಬ ಬವುಮಾ, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್ಗಿಡಿ, ಜೆರಾಲ್ಡ್ ಕೋಟ್ಜಿ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹ್ಯಾಜಲ್‌ವುಡ್.