ರಾಜ್ಕೋಟ್: ಇಲ್ಲಿನ ಎಸ್ಸಿ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಭಾರತ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ (ind vs Aus) ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಐದು ಬದಲಾವಣೆಗಳನ್ನು ಮಾಡಿವೆ.
ಕಳೆದ ಪಂದ್ಯದಲ್ಲಿ ಸಿಕ್ಸರ್ಗಳ ಮಳೆ ಸುರಿಸಿದ್ದ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಕೇವಲ ಒಂದು ಬೌಂಡರಿಗೆ ಸೀಮಿತರಾಗಿ ವಿಕೆಟ್ ಕೈಚೆಲ್ಲಿದರು. ಅವರ ಗಳಿಕೆ 8 ರನ್. ಎದುರಿಸಿದ್ದು 7 ಎಸೆತ.
ಅಯ್ಯರ್ ಮತ್ತು ಜಡೇಜಾ ವಿಕೆಟ್ ಆಧಾರದ ಮೇಲೆ ಭಾರತ ತಂಡದ ಗೆಲುವುನ ಭವಿಷ್ಯ ಅಡಗಿದೆ.
233 ರನ್ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡ
ಉತ್ತಮವಾಗಿ ಆಡುತ್ತಿದ್ದ ಭಾರತ ಈಗ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
7 ಓವರ್ಗೆ ವಿಕೆಟ್ ನಷ್ಟವಿಲ್ಲದೆ 50 ರನ್ ಗಡಿ ದಾಟಿದ ಭಾರತ