ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ತವರಿನ ಟಿ೨೦ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮ ಸೋತಿದ್ದು, ಎದುರಾಳಿ ತಂಡದ ನಾಯಕ ಆರೋನ್ ಫಿಂಚ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಚಂಡಿಗಢದ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ಮಂಗಳವಾರ (ಸೆಪ್ಟೆಂಬರ್ ೨೦) ನಡೆಯುತ್ತಿದ್ದು, ಅಸ್ಟ್ರೇಲಿಯಾ ತಂಡದ ಪರ ಟಿಮ್ ಡೇವಿಡ್ ಪದಾರ್ಪಣೆ ಮಾಡಿದ್ದಾರೆ. ಭಾರತ ತಂಡದಲ್ಲಿ ದಿನೇಶ್ ಕಾರ್ತಿಕ್ ಅವರು ವಿಕೆಟ್‌ಕೀಪಿಂಗ್ ಜವಾಬ್ದಾರಿ ವಹಿಸಿಕೊಂಡಿದ್ದರೆ ಬಲಗೈ ವೇಗಿ ಉಮೇಶ್ ಯಾದವ್ ಅವರೂ ಆಡುವ ೧೧ರ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ಭಾರತ: ರೋಹಿತ್ ಶರ್ಮ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್‌ಪ್ರಿತ್ ಬುಮ್ರಾ ಮತ್ತು ಉಮೇಶ್ ಯಾದವ್.
ಆಸ್ಟ್ರೇಲಿಯಾ : ಆರೋನ್ ಫಿಂಚ್, ಕೆಮೆರಾನ್ ಗ್ರೀನ್, ಸ್ಟ್ರೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಪ್ಯಾಟ್ ಕಮಿನ್ಸ್, ನಥಾನ್ ಎಲ್ಲಿಸ್, ಆಡಂ ಜಂಪಾ, ಜೋಶ್ ಹೇಜಲ್‌ವುಡ್.