ಕೇಪ್ಟೌನ್: ದಕ್ಷಿಣ ಆಫ್ರಿಕಾ(IND vs SA) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ಇದೀಗ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ವೇಗದ ಬೌಲರ್ ಅವೇಶ್ ಖಾನ್(avesh khan) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮೊಹಮ್ಮದ್ ಶಮಿ ಅವರ ಸ್ಥಾನಕ್ಕೆ ಅವೇಶ್ರನ್ನು ಆಯ್ಕೆ ಮಾಡಲಾಗಿದೆ.
ಶಮಿ ಅವರು ಪಾದದ ನೋವಿನ ಕಾರಣದಿಂದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದರು. ಆದರೆ ಅವರ ಸ್ಥಾನಕ್ಕೆ ಯಾವುದೇ ಬದಲಿ ಬೌಲರ್ ಆಯ್ಕೆ ಮಾಡಿರಲಿಲ್ಲ. ಇದೀಗ ಮೊದಲ ಪಂದ್ಯದಲ್ಲಿ ಬೌಲಿಂಗ್ ಕೊರತೆಯಿಂದಾಗಿ ಸೋಲು ಕಂಡ ಕಾರಣ ದ್ವಿತೀಯ ಪಂದ್ಯದಲ್ಲಿ ಬಲಿಷ್ಠ ಬೌಲಿಂಗ್ ದಾಳಿ ಸಂಘಟಿಸಲು ಮುಂದಾಗಿರುವ ಟೀಮ್ ಇಂಡಿಯಾ ಹೆಚ್ಚುವರಿಯಾಗಿ ಅವೇಶ್ ಖಾನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ.
ಬೌಲಿಂಗ್ ಆಲ್ರೌಂಡರ್ ಆಗಿರುವ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ಸೇರಿ ಬೌಲಿಂಗ್ನಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದರು. ಹೀಗಾಗಿ ಅವರನ್ನು ದ್ವಿತೀಯ ಪಂದ್ಯದಲ್ಲಿ ಆಡುವ ಬಳಗದಿಂದ ಕೈಬಿಟ್ಟು ಅವರ ಸ್ಥಾನಕ್ಕೆ ಅವೇಶ್ ಖಾನ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ದ್ವಿತೀಯ ಟೆಸ್ಟ್ ಪಂದ್ಯ ಜನವರಿ 3ರಿಂದ ಕೇಪ್ಟೌನ್ನಲ್ಲಿ ಆರಂಭಗೊಳ್ಳಲಿದೆ. ಭಾರತ ಗೆದ್ದರೆ ಸರಣಿ ಡ್ರಾಗೊಳ್ಳಲಿದೆ.
ಇದನ್ನೂ INDW vs AUSW: ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಸೋಲು ಕಂಡ ಭಾರತ ಮಹಿಳಾ ತಂಡ
🚨 NEWS 🚨
— BCCI (@BCCI) December 29, 2023
Avesh Khan added to India’s squad for 2nd Test.
Details 🔽 #TeamIndia | #SAvINDhttps://t.co/EsNGJAo8Vl
ಮಧ್ಯ ಪ್ರೇಶದ ಬೌಲರ್ ಆಗಿರುವ ಅವೇಶ್ ಖಾನ್ ಈಗಾಗಲೇ ಭಾರತ ಏಕದಿನ ಮತ್ತು ಟಿ20 ತಂಡಗಳಲ್ಲಿ ಆಡಿದ್ದಾರೆ. ಟೆಸ್ಟ್ನಲ್ಲಿ ಇದು ಚೊಚ್ಚಲ ಕರೆಯಾಗಿದೆ. ಅವೇಶ್ ಈ ತಿಂಗಳ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳನ್ನು ಆಡಿ ಆರು ವಿಕೆಟ್‌ಗಳನ್ನು ಪಡೆದಿದ್ದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 38 ಪಂದ್ಯಗಳಲ್ಲಿ 149 ವಿಕೆಟ್‌ಗಳನ್ನು ಕಿತ್ತಿದ್ದಾರೆ. ಏಳು ಬಾರಿ ಐದು ವಿಕೆಟ್ ಕಿತ್ತ ದಾಖಲೆ ಇದೆ.
ದ್ವಿತೀಯ ಟೆಸ್ಟ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಕೆ.ಎಸ್ ಭರತ್, ಅಭಿಮನ್ಯು ಈಶ್ವರನ್, ಅವೇಶ್ ಖಾನ್.