ಕರಾಚಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಸೈಯದ್ ಮೊಹ್ಸಿನ್ ರಜಾ ನಖ್ವಿ(Syed Mohsin Naqvi) ಅವರನ್ನು ತಮ್ಮ ಹೊಸ ಅಧ್ಯಕ್ಷರನ್ನಾಗಿ ಘೋಷಿಸಿದ ಬೆನ್ನಲ್ಲೇ, ಬಾಬರ್ ಅಜಂ(Babar Azam) ಅವರನ್ನು ಮತ್ತೆ ತಂಡದ ನಾಯಕರನ್ನಾಗಿ ಮರು ನೇಮಕ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಭಾರತದ ಆತಿಥ್ಯದಲ್ಲಿ 2023ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿತ್ತು. ಬಾಬರ್ ನಾಯಕತ್ವದಲ್ಲಿ ಪಾಕಿಸ್ತಾನ ತಂಡ ಆಡಿದ 9 ಪಂದ್ಯಗಳ ಪೈಕಿ ಕೇವಲ 4 ಪಂದ್ಯಗಳನ್ನು ಮಾತ್ರ ಗೆಲುವು ಸಾಧಿಸಿ ಲೀಗ್ ಹಂತದಲ್ಲೇ ಹೊರಬಿದ್ದಿತ್ತು. ಇದರ ಬೆನ್ನಲ್ಲೇ ಬಾಬರ್ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದಿದ್ದರು.
ಆಗಿನ ಪಿಸಿಬಿ ಅಧ್ಯಕ್ಷ ಝಾಕಾ ಅಶ್ರಫ್(Zaka Ashraf) ಅವರು ಟೆಸ್ಟ್‌ನಲ್ಲಿ ತಂಡವನ್ನು ಮುನ್ನಡೆಸುವಂತೆ ಬಾಬರ್ಗೆ ಒತ್ತಾಯಿಸಿದ್ದರು. ಆದಾಗ್ಯೂ, 29 ವರ್ಷದ ಬಾಬರ್ ಇದಕ್ಕೆ ಒಪ್ಪದೆ ಎಲ್ಲ ಮಾದರಿಯ ನಾಯಕತ್ವಕ್ಕೆ ಗುಡ್ಬೈ ಹೇಳಿದ್ದರು. ಬಾಬರ್ ಕೆಳಗಿಳಿದ ಬಳಿಕ ಪಿಸಿಬಿ ಶಾನ್ ಮಸೂದ್ ಅವರನ್ನು ಟೆಸ್ಟ್ ನಾಯಕರನ್ನಾಗಿ ನೇಮಿಸಿದರೆ, ಶಾಹೀನ್ ಅಫ್ರಿದಿಗೆ ಟಿ20 ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಯಿತು. ಆದಾಗ್ಯೂ, ಏಕದಿನಕ್ಕೆ ನೂತನ ನಾಯಕನನ್ನು ಇನ್ನೂ ಹೆಸರಿಸಲಾಗಿಲ್ಲ.
ಶಾಹೀನ್ ಅಫ್ರಿದಿ(Shaheen Afridi) ಮತ್ತು ಶಾನ್ ಮಸೂದ್(Shan Masood) ಅವರ ನಾಯಕತ್ವದಲ್ಲಿ ಪಾಕಿಸ್ತಾನ ಆಡಿದ ಎಲ್ಲ ಸರಣಿಯಲ್ಲೂ ಹೀನಾಯವಾಗಿ ಸೋಲು ಕಾಣುತ್ತಿದೆ. ಇದೇ ಕಾರಣಕ್ಕೆ ಪಿಸಿಬಿ ನೂತನ ಅಧ್ಯಕ್ಷ ನಖ್ವಿ ಅವರು ಮತ್ತೆ ಬಾಬರ್ಗೆ ನಾಯಕ್ವ ನೀಡಲಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ. ಇನ್ನೊಂದು ಮೂಲಗಳ ಪ್ರಕಾರ ಬಾಬರ್ ನಾಯಕತ್ವ ವಹಿಸಿಕೊಳ್ಳುವ ಆಸಕ್ತಿ ತೋರುತ್ತಿಲ್ಲ ಎಂದು ವರದಿಯಾಗಿದೆ.
ಇದನ್ನೂ ಓದಿ ಬಾಬರ್ ಅಜಂ ಮೇಲೆ ಗಂಭೀರ ಆರೋಪ ಹೊರಿಸಿದ ಇಫ್ತಿಕರ್ ಅಹ್ಮದ್
Babar Azam will become the captain of Pakistan team once again, as per Qadir Khawaja 👀
— Farid Khan (@_FaridKhan) February 6, 2024
What about Shan Masood and Shaheen Afridi now? 😮 pic.twitter.com/qmWYJi1k7B
ಬಾಬರ್ ನಾಯಕತ್ವದ ಸಾಧನೆ
ಬಾಬರ್ ಅಜಮ್ ಪಾಕಿಸ್ತಾನದ ನಾಯಕನಾಗಿ 133 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 78 ಪಂದ್ಯಗಳು ಗೆದ್ದರೆ, 43 ಪಂದ್ಯಗಳಲ್ಲಿ ಸೋತಿದ್ದಾರೆ. ಒಂದು ಟೈ ಮತ್ತು ನಾಲ್ಕು ಪಂದ್ಯ ಡ್ರಾಗೊಂಡಿದೆ. ಏಕದಿನ ವಿಶ್ವಕಪ್ ಟೂರ್ನಿ ಹೊರತುಪಡಿಸಿ ಉಳಿದ ಎಲ್ಲ ಸರಣಿಯಲ್ಲೂ ಬಾಬರ್ ಸಾರಥ್ಯದಲ್ಲಿ ತಂಡ ಉತ್ತಮ ಪ್ರದರ್ಶನ ತೋರಿತ್ತು. ಇದೀಗ ನೆಲ ಕಚ್ಚಿರುವ ಪಾಕ್ ತಂಡವನ್ನು ಗೆಲುವಿನ ಟ್ರ್ಯಾಕ್ಗೆ ಮರಳಿ ತರುವ ನಿಟ್ಟಿನಲ್ಲಿ ಮತ್ತೆ ಬಾಬರ್ಗೆ ನಾಯಕನ ಪಟ್ಟ ಕಟ್ಟಲು ಪಿಸಿಬಿ ಮುಂದಾಗಿದೆ. ಇದೇ ವರ್ಷ ಟಿ20 ವಿಶ್ವಕಪ್ ಕೂಡ ನಡೆಯಲಿದೆ.