Babar vs Kohli: ವಿರಾಟ್​ ಕೊಹ್ಲಿಯ ವಿಶ್ವದಾಖಲೆ ಮುರಿದ ಬಾಬರ್​ ಅಜಂ - Vistara News

ಕ್ರಿಕೆಟ್

Babar vs Kohli: ವಿರಾಟ್​ ಕೊಹ್ಲಿಯ ವಿಶ್ವದಾಖಲೆ ಮುರಿದ ಬಾಬರ್​ ಅಜಂ

ಬಾಬರ್​ ಅಜಂ ಅವರು ಏಕದಿನ ಇತಿಹಾಸದಲ್ಲಿ ಅತಿ ವೇಗವಾಗಿ 2000 ರನ್ ಪೂರೈಸಿದ ಮೊದಲ ನಾಯಕ ಎಂಬ ದಾಖಲೆಯನ್ನು ಬರೆದಿದ್ದಾರೆ.

VISTARANEWS.COM


on

Pakistani cricketer Babar Azam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಹೋರ್​: ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(Babar Azam) ಅವರು ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ವಿರಾಟ್​ ಕೊಹ್ಲಿಯ(Virat Kohli) ವಿಶ್ವ ದಾಖಲೆಯೊಂದನ್ನು ಮುರಿಸಿದ್ದಾರೆ. ಬುಧವಾರ ನಡೆದ ಬಾಂಗ್ಲಾದೇಶ ವಿರುದ್ಧದ ಏಷ್ಯಾಕಪ್​ನ ಸೂಪರ್​-4(Asia Cup Super 4) ಪಂದ್ಯದಲ್ಲಿ ಬಾಬರ್​ ಅವರು ಕೊಹ್ಲಿಯ ದಾಖಲೆಯನ್ನು ಮುರಿದರು.

ಲಾಹೋರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ನಾಯಕ ಶಕಿಬ್‌ ಅಲ್‌ ಹಸನ್‌ ಮತ್ತ ಮುಶ್ಫಿಕರ್‌ ರಹೀಂ ಅವರ ಅರ್ಧಶತಕದ ನೆರವಿನಿಂದ 193ರನ್​ಗೆ ಆಲೌಟ್​ ಆಯಿತು. ಸುಲಭ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ಇಮಾಮ್‌ ಉಲ್‌ ಹಕ್‌ ಮತ್ತು ಮೊಹಮ್ಮದ್‌ ರಿಜ್ವಾನ್‌ ಅವರ ಭರ್ಜರಿ ಆಟದಿಂದಾಗಿ 39.3 ಓವರ್‌ಗಳಲ್ಲಿ 3 ವಿಕೆಟಿಗೆ 194 ರನ್‌ ಪೇರಿಸಿ ಜಯಭೇರಿ ಬಾರಿಸಿತು.

ವಿಶ್ವ ದಾಖಲೆ ಪತನ

ಚೇಸಿಂಗ್​ ವೇಳೆ ಬಾಬರ್​ ಅಜಂ 17 ರನ್​ ಗಳಿಸಿದ ವೇಳೆ ವಿರಾಟ್ ಕೊಹ್ಲಿ(Babar vs Kohli) ಅವರ ವಿಶ್ವ ದಾಖಲೆಯನ್ನು ಮುರಿದರು. ಏಕದಿನ ಇತಿಹಾಸದಲ್ಲಿ ಅತಿ ವೇಗವಾಗಿ 2000 ರನ್ ಪೂರೈಸಿದ ಮೊದಲ ನಾಯಕ ಎಂಬ ದಾಖಲೆಯನ್ನು ಬರೆದರು. ಈ ಹಿಂದಿ ಕೊಹ್ಲಿ ಅವರು 36 ಇನ್ನಿಂಗ್ಸ್‌ಗಳಲ್ಲಿ ಈ ವಿಶ್ವದಾಖಲೆ ಬರೆದಿದ್ದರು. ಆದರೆ ಈಗ ಬಾಬರ್​ ಕೇವಲ 31 ಇನ್ನಿಂಗ್ಸ್​ನಲ್ಲಿ ಈ ಮೈಲುಗಲ್ಲು ತಲುಪಿ ಕೊಹ್ಲಿಯ ದಾಖಲೆಯನ್ನು ಮೀರಿ ನಿಂತರು.

ಇದೇ ಟೂರ್ನಿಯ ನೇಪಾಳ ವಿರುದ್ಧದ ಮೊದಲ ಪಂದ್ಯದಲ್ಲಿಯೂ ಬಾಬರ್​ ಅವರು ಕೊಹ್ಲಿಯ ದಾಖಲೆಯನ್ನು ಮುರಿದ್ದಿದ್ದರು. ನಾಯಕನಾಗಿ ಏಷ್ಯಾಕಪ್​ನಲ್ಲಿ ವೈಯಕ್ತಿಕ ಗರಿಷ್ಠ ಮೊತ್ತ ದಾಖಲಿಸಿದ ಸಾಧಕರ ಪಟ್ಟಿಯಲ್ಲಿ ಬಾಬರ್​ ಟೀಮ್​ ಇಂಡಿಯಾದ ಆಟಗಾರ ವಿರಾಟ್​ ಕೊಹ್ಲಿ ದಾಖಲೆಯನ್ನು ಹಿಂದಿಕ್ಕಿದ್ದರು. ಧೋನಿ ಅನುಪಸ್ಥಿತಿಯಲ್ಲಿ 2014ರ ಏಷ್ಯಾ ಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಕೊಹ್ಲಿ, ಬಾಂಗ್ಲಾ ವಿರುದ್ಧ 136 ರನ್ ಬಾರಿಸಿದ್ದರು. ಇದು ಈ ವರೆಗಿನ ದಾಖಲೆಯಲಾಗಿತ್ತು. ಆದರೆ ಬಾಬರ್​ ನೇಪಾಳ ವಿರುದ್ಧ 151 ರನ್​ ಬಾರಿಸಿದ ವೇಳೆ ಕೊಹ್ಲಿ ದಾಖಲೆ ಮುರಿದ್ದರು.

ಅತ್ಯಧಿಕ ವೈಯಕ್ತಿಕ ರನ್​ ದಾಖಲೆ ಕೊಹ್ಲಿ ಹೆಸರಿನಲ್ಲಿದೆ

ಏಷ್ಯಾಕಪ್​ ಟೂರ್ನಿಯಲ್ಲಿ ಪಂದ್ಯವೊಂದರಲ್ಲಿ ಅತ್ಯಧಿಕ ವೈಯಕ್ತಿಕ ರನ್​ ಗಳಿಸಿದ ದಾಖಲೆ ವಿರಾಟ್​ ಕೊಹ್ಲಿ ಹೆಸರಿನಲ್ಲಿದೆ. ಸಾರಸ್ಯವೆಂದರೆ ಕಿಂಗ್​ ಕೊಹ್ಲಿ 2012ರಲ್ಲಿ ಪಾಕಿಸ್ತಾನ ವಿರುದ್ಧವೇ 183ರನ್​ ಬಾರಿಸಿದ್ದರು. ಈ ಸಾಧನೆಯ ಪಟ್ಟಿಯಲ್ಲಿ ಬಾಬರ್​ಗೆ(151) ದ್ವಿತೀಯ ಸ್ಥಾನ. ಮೂರನೇ ಸ್ಥಾನ ಯೂನಿಸ್​ ಖಾನ್​(144), ನಾಲ್ಕನೇ ಸ್ಥಾನ ಬಾಂಗ್ಲಾದ ಮುಸ್ಫಿಕರ್​ ರಹಿಂ(144) ಪಡೆದಿದ್ದಾರೆ.

ಇದನ್ನೂ ಓದಿ IND vs PAK: ಪಾಕ್​ ವಿರುದ್ಧ ಕಣಕ್ಕಿಳಿಯಲಿದ್ದಾರೆ ರಾಹುಲ್​; ಕೊಲಂಬೋದಲ್ಲಿ ಬ್ಯಾಟಿಂಗ್​ ಅಭ್ಯಾಸ

ಮತ್ತೆ ಭಾರತ ಪಾಕ್​ ಪಂದ್ಯ

ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಏಷ್ಯಾಕಪ್​ನ(Asia Cup 2023) ಮೊದಲ ಪಂದ್ಯ ಮಳೆಯಿಂದ ರದ್ದಾದ ಕಾರಣ ಈ ಪಂದ್ಯವನ್ನು ಕಣ್ತುಂಬಿಕೊಳ್ಳಲಾಗದ ಬೇಸರದಲ್ಲಿದ್ದ ಉಭಯ ದೇಶಗಳ ಅಭಿಮಾನಿಗಳಿಗೆ ಈ ಬಾರಿ ನಿರಾಸೆಯಾಗದು. ಇತ್ತಂಡಗಳ ಮಧ್ಯೆ ಮತ್ತೊಂದು ಪಂದ್ಯ ನಡೆಯಲಿದೆ. ಸೆಪ್ಟೆಂಬರ್​ 10ರಂದು ನಡೆಯುವ ಸೂಪರ್​-4 ಸುತ್ತಿನ (Pakistan vs India Super Fours Match)ಪಂದ್ಯದಲ್ಲಿ ಸೆಣಸಾಡಲಿದೆ. ಈ ಪಂದ್ಯಕ್ಕೆ ಮಳೆ ಸಾಧ್ಯತೆ ಕಡಿಮೆ ಇರುವ ಕಾರಣ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

IND vs ZIM: ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್(VVS Laxman)​ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜುಲೈ 6 ರಿಂದ ಆರಂಭಗೊಳ್ಳಲಿದೆ.

VISTARANEWS.COM


on

IND vs ZIM
Koo

ಹರಾರೆ: ಆತಿಥೇಯ ಜಿಂಬಾಬ್ವೆ(IND vs ZIM) ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನಾಡಲು ಭಾರತ ತಂಡ ಹರಾರೆಗೆ(Team India touchdown in Zimbabwe) ತಲುಪಿದೆ. ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್(VVS Laxman)​ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜುಲೈ 6 ರಿಂದ ಆರಂಭಗೊಳ್ಳಲಿದೆ.

ಬುಧವಾರ (ಜುಲೈ 3) ಜಿಂಬಾಬ್ವೆಗೆ ಬಂದಿಳಿದ ಟೀಮ್​ ಇಂಡಿಯಾಕ್ಕೆ ಆತ್ಮೀಯ ಸ್ವಾಗತ ಕೋರಲಾಯಿತು. ಜಿಂಬಾಬ್ವೆ ಕ್ರಿಕೆಟ್ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಣ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವುದನ್ನು ನೋಡಬಹುದು ಮತ್ತು ಇತರ ಬೆಂಬಲ ಸಿಬ್ಬಂದಿಯೊಂದಿಗೆ 15 ಸದಸ್ಯರ ತಂಡ ಕೂಡ ಜತೆಗಿತ್ತು. ಗುರುವಾರದಿಂದ ಆಟಗಾರರು ಅಭ್ಯಾಸ ಆರಂಭಿಸಲಿದ್ದಾರೆ.

ಚಂಡಮಾರುತದಿಂದ ಬಾರ್ಬಡೋಸ್‌ನಲ್ಲಿ ಸಿಲುಕಿರುವ ಟಿ20 ವಿಶ್ವಕಪ್​ ತಂಡದ ಭಾಗವಾಗಿದ್ದ, ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಇನ್ನೂ ಕೂಡ ಭಾರತಕ್ಕೆ ಆಗಮಿಸದ ಕಾರಣ ಅವರ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ಬಿಸಿಸಿಐ ಮಂಗಳವಾರ ತಂಡಕ್ಕೆ ಸೇರ್ಪಡೆಗೊಳಿಸಿತ್ತು.

ಚೊಚ್ಚಕ ಕರೆ ಪಡೆದ ಹರ್ಷಿತ್ ರಾಣಾ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ಮೂಲಕ ಒಟ್ಟು 19 ವಿಕೆಟ್​ ಕಿತ್ತು ಮಿಂಚಿದ್ದರು. ಮಾಯಾಂಕ್​ ಅಗರ್ವಾಲ್​ ವಿಕೆಟ್​ ಕಿತ್ತು ದುರ್ವರ್ತನೆ ತೋರಿದ ಕಾರಣಕ್ಕೆ ದಂಡ ಮತ್ತು ಒಂದು ಪಂದ್ಯದ ನಿಷೇಧ ಶಿಕ್ಷೆ ಕೂಡ ಎದುರಿಸಿದ್ದರು.

ಇದನ್ನೂ ಓದಿ Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಿಯಾನ್ ಪರಾಗ್ 2024 ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಫಲಿತಾಂಶವಾಗಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಪಂದ್ಯಗಳನ್ನಾಡಲಿದ್ದಾರೆ. ಪರಾಗ್ ಅಸ್ಸಾಂ ನಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಮೊದಲ ಕ್ರೀಡಾಪಟುವಾಗಿದ್ದಾರೆ.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ವೇಳಾಪಟ್ಟಿ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading

ಕ್ರೀಡೆ

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Team India: ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

VISTARANEWS.COM


on

Team India
Koo

ಬಾರ್ಬಡೋಸ್​: ಟಿ20 ವಿಶ್ವ ಚಾಂಪಿಯನ್​ ಭಾರತ ತಂಡ(Team India) ಬಾರ್ಬಡೋಸ್​ನಿಂದ(Barbados) ತವರಿಗೆ ಪ್ರಯಾಣ ಬೆಳೆಸಿದೆ(Team India’s departure). ಈ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬುಧವಾರ ಖಚಿತಪಡಿಸಿದೆ. ಟಿ20 ವಿಶ್ವಕಪ್​ ಟ್ರೋಫಿಯ ವಿಡಿಯೊ ಹಾಕಿ ನಾವು ಮರಳುತ್ತಿದ್ದೇವೆ ಎಂದು ಬರೆದುಕೊಂಡಿದೆ. ಬುಧವಾರ ಬಾರ್ಬಡೋಸ್​ನಿಂದ ಹೊರಡಿರುವ ಟೀಮ್​ ಇಂಡಿಯಾ ಗುರುವಾರ ಬೆಳಗ್ಗೆ ನವದೆಹಲಿಗೆ ತಲುಪಲಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು.

17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದ ಭಾರತ

ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ ಕೊಹ್ಲಿ

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

Continue Reading

ಕ್ರೀಡೆ

Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

Suryakumar Yadav Catch: ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸೂರ್ಯಕುಮಾರ್​ ಕ್ಯಾಚ್​ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

VISTARANEWS.COM


on

Suryakumar Yadav Catch
Koo

ಲಂಡನ್​: ಟಿ20 ವಿಶ್ವಕಪ್(T20 World Cup 2024)​ ಟೂರ್ನಿ ಮುಕ್ತಾಯ ಕಂಡಿದ್ದರೂ ಕೂಡ ಫೈನಲ್​ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್(Suryakumar Yadav Catch)​ ಅವರು ಹಿಡಿದ ಕ್ಯಾಚ್​ ಬಗೆಗಿನ ಚರ್ಚೆಗಳು ಮುಗಿದಂತೆ ಕಾಣುತ್ತಿಲ್ಲ. ಬೌಂಡರಿ ಲೈನ್​ಗೆ ಬಳಸುವ ಕುಶನ್ ಹಿಂದಕ್ಕೆ ತಳ್ಳಲಾಗಿತ್ತು. ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು, ಸೂರ್ಯಕುಮಾರ್(Suryakumar Yadav) ಅವರು ಬೌಂಡರಿ ಗೆರೆಯನ್ನು ತುಳಿದಿದ್ದಾರೆ ಎನ್ನಲಾದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಇದೀಗ ಭಾರತ ಗೆದ್ದಿರುವ ಟಿ20 ವಿಶ್ವಕಪ್ ವಾಪಸ್ ಕೊಡಬೇಕಾ? ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29, ಶನಿವಾರ ರಾತ್ರಿ ನಡೆದಿದ್ದ ಅತ್ಯಂತ ರೋಚಕ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಟೀಮ್​ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ ಅಂತರದ ಗೆಲುವು ಸಾಧಿಸಿ 13 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರವನ್ನು ನೀಗಿಸಿತ್ತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತು.

ಇದನ್ನೂ ಓದಿ Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

ಕ್ಯಾಚ್​ನ ವಿಡಿಯೊವನ್ನು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದ ದಕ್ಷಿಣ ಆಫ್ರಿಕಾದ ನೆಟ್ಟಿಗರು, ಅಂಪೈರ್​ಗಳು ಈ ವಿಡಿಯೊವನ್ನು ಸೂಕ್ಷವಾಗಿ ಗಮನಿಸುವ ಅಗತ್ಯವಿದೆ. ಸೂರ್ಯಕುಮಾರ್​ ಅವರ ಕಾಲುಗಳು ಬೌಂಡರಿ ಲೈನ್​ಗ ಕೆಳ ಭಾಗದ ಪಟ್ಟಿಗೆ ತಾಗಿರುವುದು ಕಂಡು ಬಂದಿದೆ. ಹೀಗಾಗಿ ಇದು ಔಟ್​ ಅಲ್ಲ ಸಿಕ್ಸ್​ ಎಂದು ಆಕ್ರೋಶ ಹೊರಹಾಕಿದ್ದರು. ಇದಾದ ಬಳಿಕ ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಒಂದು ವೇಳೆ ಕುಶನ್ ನಿಗದಿತ ಸ್ಥಳದಲ್ಲಿ ಇದ್ದರೆ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸುತ್ತಿತ್ತು ಎಂದು ಹಲವರು ವಾದಿಸುತ್ತಿದ್ದಾರೆ. ಇದಕ್ಕೆ ಇದೀಗ ಸ್ಪಷ್ಟನೆಯೊಂದು ಸಿಕ್ಕಿದೆ.

ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸೂರ್ಯಕುಮಾರ್​ ಕ್ಯಾಚ್​ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

Continue Reading

ಕ್ರೀಡೆ

Hardik Pandya: ಬಹುಮಾನ ಮೊತ್ತವನ್ನು ತಾಯಿಯ ಖಾತೆಗೆ ಹಾಕುವಂತೆ ಬಿಸಿಸಿಐಗೆ ಮನವಿ ಮಾಡಿದ ಹಾರ್ದಿಕ್​ ಪಾಂಡ್ಯ; ಕಾರಣವೇನು?

Hardik Pandya: ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಹಾಗೂ ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಡಿವೋರ್ಸ್ ಸುದ್ದಿಗಳ ಬೆನ್ನಲ್ಲೇ ಇದೀಗ ಮತ್ತೆ ಹಾರ್ದಿಕ್ ಪಾಂಡ್ಯ ಮೀಮ್ಸ್ ಹರಿದಾಡುತ್ತಿದೆ. ಬಿಸಿಸಿಐ ಘೋಷಿಸಿರುವ ಬಹುಮಾನ ಮೊತ್ತವನ್ನೂ ತಾಯಿ ಖಾತೆಗೆ ಹಾಕಿಬಿಡಿ ಅನ್ನೋ ಮೀಮ್ಸ್ ಭಾರಿ ವೈರಲ್ ಆಗುತ್ತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಬಗ್ಗೆ ಮೀಮ್ಸ್​ಗಳು ವೈರಲ್​ ಆಗಲು ಕೂಡ ಒಂದು ಕಾರಣವಿದೆ. ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ಅವರು ಪತ್ನಿ ನತಾಶಾಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿತ್ತು. ಈ ವೇಳೆ ಪಾಂಡ್ಯ ತಾವು ತಮ್ಮ ಆಸ್ತಿಗಳನ್ನೆಲ್ಲ ತಾಯಿಯ ಹೆಸರಿನಲ್ಲಿ ಮಾಡಿಟ್ಟಿರುವುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದ ವಿಡಿಯೊ ವೈರಲ್​ ಆಗಿತ್ತು.

ಆ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದ ಪಾಂಡ್ಯ “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಇದೇ ಕಾರಣದಿಂದ ಇದೀಗ ನೆಟ್ಟಿಗರು ವಿಶ್ವಕಪ್​ ಗೆದ್ದ ಬಹುಮಾನ ಮೊತ್ತ ಮತ್ತು ಬಿಸಿಸಿಐ ನೀಡಿದ ಮೊತ್ತವನ್ನು ಪಾಂಡ್ಯ ಅವರು ದಯಮಾಡಿ ಇದನ್ನು ನನ್ನ ತಾಯಿಯ ಖಾತೆಗೆ ಹಾಲಿ ಎಂದು ಹೇಳುವ ರೀತಿಯಲ್ಲಿ ಮೀಮ್ಸ್​ಗಳನ್ನು ಮಾಡಿ ಹರಿಬಿಟ್ಟಿದ್ದಾರೆ.

ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲುವ ಭೀತಿಯಲ್ಲಿದ್ದ ಭಾರತ ತಂಡವನ್ನು ಕಾಪಾಡಿದ್ದೇ ಪಾಂಡ್ಯ. ಅಪಾಯಕಾರಿ ಹೆನ್ರಿಚ್​ ಕ್ಲಾಸೆನ್​ ವಿಕೆಟ್​ ಕೀಳದೇ ಹೋಗಿದ್ದರೆ ಭಾರತದ ಕಪ್​ ಆಸೆ ಮತ್ತೆ ನಿರಾಸೆಯಾಗುತ್ತಿತ್ತು.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading
Advertisement
Anant-Radhika Wedding
ದೇಶ3 mins ago

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Prajwal Devaraj cancel birthday darshan main reason
ಸಿನಿಮಾ5 mins ago

Prajwal Devaraj: ಪ್ರಜ್ವಲ್ ದೇವರಾಜ್ ಬರ್ತ್‌ಡೇ ಸೆಲೆಬ್ರೇಷನ್‌ ಕ್ಯಾನ್ಸಲ್‌; ದರ್ಶನ್‌ ಕಾರಣ?

IND vs ZIM
ಕ್ರೀಡೆ14 mins ago

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

Medal Biteing
ಕ್ರೀಡೆ21 mins ago

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Tharun Sudhir sonal monteiro marriage update
ಸ್ಯಾಂಡಲ್ ವುಡ್32 mins ago

Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

Stock Market
ವಾಣಿಜ್ಯ55 mins ago

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

bangalore murder case
ಕ್ರೈಂ1 hour ago

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Team India
ಕ್ರೀಡೆ1 hour ago

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Actor Darshan V Manohar About Darshan
ಸ್ಯಾಂಡಲ್ ವುಡ್1 hour ago

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Nitin Gadkari
ದೇಶ2 hours ago

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌