ನಾಗ್ಪುರ: ಕನ್ನಡಿಗ ಹಾಗೂ ಭಾರತ ತಂಡದ ಆರಂಭಿಕ ಬ್ಯಾಟರ್ ಕೆ. ಎಲ್ ರಾಹುಲ್ (Kl Rahul) ಟೆಸ್ಟ್ ಮಾದರಿಯಲ್ಲಿ ರನ್ ಬರ ಎದುರಿಸುತ್ತಿದ್ದಾರೆ. ಕಳೆದ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಪಂದ್ಯದ ನಾಲ್ಕು ಇನಿಂಗ್ಸ್ಗಳಲ್ಲಿ ಕ್ರಮವಾಗಿ 22, 23 10 ಹಾಗೂ 2 ರನ್ ಮಾತ್ರ ಬಾರಿಸಿದ್ದರು. ಆದಾಗ್ಯೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್ನಲ್ಲಿರುವ ಶುಭ್ಮನ್ ಗಿಲ್ ಅವರನ್ನು ಹಿಂದಿಕ್ಕಿ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದರು. ಈ ಬಗ್ಗೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರಿಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಾಗಿತ್ತು. ಅದಕ್ಕೆ ಉತ್ತರಿಸಿದ ಅವರು, ಕುಹಕದ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ ಎಂದು ಹೇಳಿದ್ದಾರೆ.
ಶುಭ್ಮನ್ ಗಿಲ್ಲ ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಕೆ. ಎಲ್ ರಾಹುಲ್ ಬ್ಯಾಟ್ನಿಂದ ರನ್ಗಳು ಬರುತ್ತಿಲ್ಲ. ಆದರೂ ಅವರು ತಂಡಕ್ಕೆ ಆಯ್ಕೆಯಾಗಿರುವುದು ಅದೃಷ್ಟದ ಮೇಲೆಯೇ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ರಾಥೋಡ್, ಇಂಥ ಪ್ರಶ್ನೆಗಳಿಗೆ ನಾನು ಉತ್ತರ ಕೊಡುವುದಕ್ಕೆ ಸಾಧ್ಯವಿಲ್ಲ. ಆದರೆ, ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ ರಾಹುಲ್ 2 ಶತಕಗಳನ್ನು ಬಾರಿಸಿದ್ದಾರೆ. ಅದೇ ರೀತಿ ಎರಡು ಅರ್ಧ ಶತಕಗಳನ್ನು ಕೂಡ ಬಾರಿಸಿದ್ದಾರೆ ಎಂಬುದಾಗಿ ಅವರು ಹೇಳಿದರು.
ಇದನ್ನೂ ಓದಿ : INDvsAUS 2023 : ರೋಹಿತ್ ಶತಕ, ಜಡೇಜಾ, ಅಕ್ಷರ್ ಅರ್ಧ ಶತಕ; ಮೊದಲ ಇನಿಂಗ್ಸ್ನಲ್ಲಿ 7 ವಿಕೆಟ್ಗೆ 321 ರನ್ ಬಾರಿಸಿದ ಭಾರತ
ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೇಲುಗೈ ಸಾಧಿಸಿದೆ. ಪ್ರವಾಸಿ ತಂಡವನ್ನು 177 ರನ್ಗಳಿಗೆ ಕಟ್ಟಿ ಹಾಕಿದ ಭಾರತ ತಂಡ ಮೊದಲ ಇನಿಂಗ್ಸ್ನಲ್ಲಿ ಏಳು ವಿಕೆಟ್ ನಷ್ಟಕ್ಕೆ 312 ರನ್ ಬಾರಿಸಿದೆ.